Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಗಲಾತ್ಯದವರಿಗೆ 5:24 - ಕನ್ನಡ ಸತ್ಯವೇದವು J.V. (BSI)

24 ಕ್ರಿಸ್ತ ಯೇಸುವಿನವರು ತಮ್ಮ ಶರೀರಭಾವವನ್ನು ಅದರ ವಿಷಯಾಭಿಲಾಷೆ ಸ್ವೇಚ್ಫಾಭಿಲಾಷೆ ಸಹಿತ ಶಿಲುಬೆಗೆ ಹಾಕಿದವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಕ್ರಿಸ್ತ ಯೇಸುವಿನಲ್ಲಿರುವವರು ತಮ್ಮ ಶರೀರಭಾವವನ್ನು ಅದರ ವಿಷಯಾಭಿಲಾಷೆ, ಸ್ವೇಚ್ಛಾಭಿಲಾಷೆಗಳ ಸಹಿತವಾಗಿ ಶಿಲುಬೆಗೆ ಹಾಕಿದವರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಕ್ರಿಸ್ತಯೇಸುವಿಗೆ ಸೇರಿದ ಎಲ್ಲರೂ ತಮ್ಮ ದೈಹಿಕ ವ್ಯಾಮೋಹವನ್ನು ಅದರ ಆಶಾಪಾಶಗಳ ಹಾಗೂ ದುರಿಚ್ಛೆಗಳ ಸಮೇತ ಶಿಲುಬೆಗೆ ಜಡಿದುಬಿಟ್ಟಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಕ್ರಿಸ್ತ ಯೇಸುವಿನವರು ತಮ್ಮ ಶರೀರಭಾವವನ್ನು ಶಿಲುಬೆಗೇರಿಸಿದ್ದಾರೆ. ಅವರು ತಮ್ಮ ಹಳೆಯ ಸ್ವಾರ್ಥಪರವಾದ ಅಭಿಲಾಷೆಗಳನ್ನು ಮತ್ತು ತಾವು ಮಾಡಬೇಕೆಂದಿದ್ದ ಕೆಟ್ಟಕಾರ್ಯಗಳನ್ನು ಬಿಟ್ಟುಕೊಟ್ಟವರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಕ್ರಿಸ್ತ ಯೇಸುವಿನವರು ತಮ್ಮ ಮಾಂಸಭಾವವನ್ನೂ ಅದರ ಆಶೆ ಹಾಗೂ ಅಪೇಕ್ಷೆಗಳ ಸಹಿತವಾಗಿ ಶಿಲುಬೆಗೆ ಹಾಕಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

24 ಜೆ ಕೊನ್ ಕ್ರಿಸ್ತ್ ಜೆಜುಕ್ ಸಮಂದ್ ಪಡಲ್ಲೆ ಹಾತ್, ತೆನಿ ಅಪ್ನಾಚ್ಯಾ ಮಾನುಸ್ಪಾನಾಚ್ಯಾ ಸ್ವಬಾವಾಕ್ ತೆಚ್ಯಾ ಸಗ್ಳ್ಯಾ ಇಚ್ಛ್ಯಾ ಅನಿ ಆಶಾಚ್ಯಾ ವಾಂಗ್ಡಾ ಮರ್‍ನಾಕ್ ಒಪ್ಸುನ್ ದಿಲ್ಯಾನಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಗಲಾತ್ಯದವರಿಗೆ 5:24
20 ತಿಳಿವುಗಳ ಹೋಲಿಕೆ  

ಪಾಪಾಧೀನಸ್ವಭಾವವು ನಾಶವಾಗಿ ನಾವು ಇನ್ನೂ ಪಾಪದ ವಶದಲ್ಲಿರದಂತೆ ನಮ್ಮ ಪೂರ್ವಸ್ವಭಾವವು ಕ್ರಿಸ್ತನ ಕೂಡ ಶಿಲುಬೆಗೆ ಹಾಕಲ್ಪಟ್ಟಿತೆಂದು ತಿಳಿದಿದ್ದೇವೆ.


ದೇಹದ ಆಶೆಗಳನ್ನು ಪೂರೈಸುವದಕ್ಕಾಗಿ ಚಿಂತಿಸದೆ ಕರ್ತನಾದ ಯೇಸು ಕ್ರಿಸ್ತನನ್ನು ಧರಿಸಿಕೊಳ್ಳಿರಿ.


ನೀವು ಶರೀರಭಾವವನ್ನು ಅನುಸರಿಸಿ ಬದುಕಿದರೆ ಸಾಯುವದು ನಿಶ್ಚಯ; ನೀವು ಪವಿತ್ರಾತ್ಮನಿಂದ ದೇಹದ ದುರಭ್ಯಾಸಗಳನ್ನು ನಾಶ ಮಾಡುವದಾದರೆ ಜೀವಿಸುವಿರಿ.


ನೀವಾದರೋ, ನಿಮ್ಮಲ್ಲಿ ದೇವರ ಆತ್ಮನು ವಾಸವಾಗಿರುವದಾದರೆ ಶರೀರ ಭಾವಾಧೀನರಲ್ಲ, ದೇವರಾತ್ಮನಿಗೆ ಅಧೀನರಾಗಿದ್ದೀರಿ. ಯಾವನಿಗಾದರೂ ಕ್ರಿಸ್ತನ ಆತ್ಮನು ಇಲ್ಲದಿದ್ದರೆ ಅವನು ಕ್ರಿಸ್ತನವನಲ್ಲ.


ನನಗಾದರೋ ನಮ್ಮ ಕರ್ತನಾದ ಯೇಸು ಕ್ರಿಸ್ತನ ಶಿಲುಬೆಯ ವಿಷಯದಲ್ಲಿ ಹೊರತು ಹೆಚ್ಚಳಪಡುವದು ಬೇಡವೇ ಬೇಡ. ಆತನ ಮೂಲಕ ಲೋಕವು ಶಿಲುಬೆಗೆ ಹಾಕಿಸಿಕೊಂಡು ನನ್ನ ಪಾಲಿಗೆ ಸತ್ತಿತು, ನಾನು ಶಿಲುಬೆಗೆ ಹಾಕಿಸಿಕೊಂಡು ಲೋಕದ ಪಾಲಿಗೆ ಸತ್ತೆನು.


ಪ್ರಿಯರೇ, ಪ್ರವಾಸಿಗಳೂ ಪರದೇಶಸ್ಥರೂ ಆಗಿರುವ ನೀವು ನಿಮ್ಮ ಆತ್ಮದ ಮೇಲೆ ಯುದ್ಧಮಾಡುವ ಶಾರೀರಿಕ ಅಭಿಲಾಷೆಗಳಿಗೆ ದೂರವಾಗಿರಬೇಕೆಂದು ನಿಮ್ಮನ್ನು ಎಚ್ಚರಿಸುತ್ತೇನೆ.


ನೀವಂತೂ ಕ್ರಿಸ್ತನವರು, ಕ್ರಿಸ್ತನು ದೇವರವನು.


ನೀವು ಮುಖದ ಮುಂದೆ ಇರುವಂಥದನ್ನು ನೋಡಿರಿ. ಯಾವನಾದರೂ ತನ್ನನ್ನು ಕ್ರಿಸ್ತನವನೆಂದು ನಂಬಿಕೊಂಡರೆ ಅವನು ತಿರಿಗಿ ಆಲೋಚನೆ ಮಾಡಿಕೊಂಡು ತಾನು ಹೇಗೆ ಕ್ರಿಸ್ತನವನೋ ಹಾಗೆ ನಾವೂ ಕ್ರಿಸ್ತನವರೆಂದು ತಿಳುಕೊಳ್ಳಲಿ.


ನೀವು ಕ್ರಿಸ್ತನವರಾಗಿದ್ದರೆ ಅಬ್ರಹಾಮನ ಸಂತತಿಯವರೂ ವಾಗ್ದಾನಕ್ಕನುಸಾರವಾಗಿ ಬಾಧ್ಯರೂ ಆಗಿದ್ದೀರಿ.


ಆದರೆ ಪ್ರತಿಯೊಬ್ಬನು ತನ್ನ ತನ್ನ ತರಗತಿಯಲ್ಲಿರುವನು. ಕ್ರಿಸ್ತನು ಪ್ರಥಮಫಲ; ತರುವಾಯ ಕ್ರಿಸ್ತನ ಪ್ರತ್ಯಕ್ಷತೆಯಲ್ಲಿ ಆತನವರು ಎದ್ದುಬರುವರು.


ಕಕ್ಷಭೇದ ಭಿನ್ನಮತ ಮತ್ಸರ ಕುಡಿಕತನ ದುಂದೌತಣ ಇಂಥವುಗಳೇ.


ಭೋಜನಪದಾರ್ಥಗಳು ಹೊಟ್ಟೆಗಾಗಿಯೂ ಹೊಟ್ಟೆಯು ಭೋಜನಪದಾರ್ಥಗಳಿಗಾಗಿಯೂ ಅವೆ; ದೇವರು ಇದನ್ನೂ ಅವುಗಳನ್ನೂ ಕೂಡ ತೆಗೆದುಹಾಕುವನು. ಆದರೂ ದೇಹವು ಹಾದರಕ್ಕೋಸ್ಕರ ಇರುವಂಥದಲ್ಲ, ಕರ್ತನಿಗೋಸ್ಕರವಾಗಿದೆ; ಕರ್ತನು ದೇಹಕ್ಕೋಸ್ಕರ ಇದ್ದಾನೆ.


ಕ್ರಿಸ್ತನೊಂದಿಗೆ ಶಿಲುಬೆಗೆ ಹಾಕಿಸಿಕೊಂಡವನಾಗಿದ್ದೇನೆ; ಇನ್ನು ಜೀವಿಸುವವನು ನಾನಲ್ಲ, ಕ್ರಿಸ್ತನು ನನ್ನಲ್ಲಿ ಜೀವಿಸುತ್ತಾನೆ; ಈಗ ಶರೀರದಲ್ಲಿರುವ ನಾನು ಜೀವಿಸುವದು ಹೇಗಂದರೆ ದೇವಕುಮಾರನ ಮೇಲಣ ನಂಬಿಕೆಯಲ್ಲಿಯೇ. ಆತನು ನನ್ನನ್ನು ಪ್ರೀತಿಸಿ ನನಗೋಸ್ಕರ ತನ್ನನ್ನು ಒಪ್ಪಿಸಿಬಿಟ್ಟನು.


ನೀವೆಲ್ಲರು ಕ್ರಿಸ್ತ ಯೇಸುವಿನಲ್ಲಿಟ್ಟಿರುವ ನಂಬಿಕೆಯ ಮೂಲಕ ದೇವರ ಪುತ್ರರಾಗಿದ್ದೀರಿ.


ನೀವೆಲ್ಲರು ಕ್ರಿಸ್ತ ಯೇಸುವಿನಲ್ಲಿ ಒಂದೇ ಆಗಿರುವದರಿಂದ ಯೆಹೂದ್ಯನು ಗ್ರೀಕನು ಎಂದೂ, ಆಳು ಒಡೆಯ ಎಂದೂ, ಗಂಡು ಹೆಣ್ಣು ಎಂದೂ ಭೇದವಿಲ್ಲ.


ಹೀಗಿರುವದರಿಂದ ಅನ್ಯಜನರಾಗಿರುವ ನಿಮ್ಮ ನಿವಿುತ್ತ ಕ್ರಿಸ್ತ ಯೇಸುವಿನ ಸೆರೆಯವನಾದ ಪೌಲನೆಂಬ ನಾನು ನಿಮಗೋಸ್ಕರ ಪ್ರಾರ್ಥಿಸುತ್ತೇನೆ.


ಅದು ಯಾವದಂದರೆ, ಅನ್ಯಜನರು ಸುವಾರ್ತೆಯ ಮೂಲಕ ಕ್ರಿಸ್ತ ಯೇಸುವಿನಲ್ಲಿರುವವರಾಗಿ ಯೆಹೂದ್ಯರೊಂದಿಗೆ ಬಾಧ್ಯರೂ ಒಂದೇ ದೇಹದೊಳಗಣ ಅಂಗಗಳೂ ಅಬ್ರಹಾಮನಿಗುಂಟಾದ ವಾಗ್ದಾನದಲ್ಲಿ ಪಾಲುಗಾರರೂ ಆಗಿದ್ದಾರೆಂಬದೇ.


ಆತನು ಎಲ್ಲಾ ದೊರೆತನಗಳಿಗೂ ಅಧಿಕಾರಿಗಳಿಗೂ ಶಿರಸ್ಸು. ನೀವು ಆತನಲ್ಲಿ ಸುನ್ನತಿಯನ್ನೂ ಹೊಂದಿದಿರಿ; ಈ ಸುನ್ನತಿಯು ಕೈಯಿಂದ ಮಾಡಿದ್ದಲ್ಲ, ಇದು ಪಾಪಾಧೀನಸ್ವಭಾವವನ್ನು ವಿಸರ್ಜಿಸುವದೇ; ಇದೇ ಕ್ರಿಸ್ತೀಯ ಸುನ್ನತಿ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು