Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಗಲಾತ್ಯದವರಿಗೆ 5:5 - ಕನ್ನಡ ಸತ್ಯವೇದವು J.V. (BSI)

5 ನಾವೋ ದೇವರಾತ್ಮನ ಮೂಲಕ ನಂಬಿಕೆಯಿಂದ ನೀತಿವಂತರಾಗುತ್ತೇವೆಂಬುವ ನಿರೀಕ್ಷೆ ಸಫಲವಾಗುವದೆಂದು ಎದುರುನೋಡುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನಾವಾದರೋ ದೇವರಾತ್ಮನ ಮೂಲಕ ನಂಬಿಕೆಯಿಂದ ನೀತಿವಂತರಾಗುತ್ತೇವೆಂಬುವ ನಿರೀಕ್ಷೆ ಸಫಲವಾಗುವುದೆಂದು ಎದುರುನೋಡುವವರಾಗಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ನಾವಾದರೋ ಪವಿತ್ರಾತ್ಮರ ಮುಖಾಂತರ ವಿಶ್ವಾಸದಿಂದ ದೇವರೊಂದಿಗೆ ಸತ್ಸಂಬಂಧವನ್ನು ಹೊಂದುತ್ತೇವೆಂಬ ನಿರೀಕ್ಷೆ ಉಳ್ಳವರಾಗಿದ್ದೇವೆ; ಈ ನಿರೀಕ್ಷೆ ಸಫಲವಾಗುವುದನ್ನು ಎದುರುನೋಡುತ್ತಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆದರೆ ನಾವು ನಂಬಿಕೆಯ ಮೂಲಕ ನೀತಿವಂತರಾಗಿದ್ದೇವೆ ಎಂಬ ನಿರೀಕ್ಷೆ ನಮಗುಂಟು. ದೇವರಾತ್ಮನ ಸಹಾಯದಿಂದ ಈ ನಿರೀಕ್ಷೆ ಸಫಲವಾಗುವುದೆಂದು ತವಕದಿಂದ ಎದುರುನೋಡುತ್ತಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ನಾವಾದರೋ ನಂಬಿಕೆಯಿಂದ ನೀತಿವಂತರಾಗುವ ನಮ್ಮ ನಿರೀಕ್ಷೆಯನ್ನು ದೇವರ ಆತ್ಮನ ಮೂಲಕ ಆತುರದಿಂದ ಎದುರುನೋಡುತ್ತಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ಅಮಿ ತರ್ ಬರೊಸೊ ಥವ್ನ್ ಘೆವ್ನ್ ಹಾಂವ್, ದೆವ್ ಅಮ್ಕಾ ತೆಚ್ಯಾ ವಾಂಗ್ಡಾ ನಿತಿವಂತ್ ಕರ್‍ತಾ ಮನುನ್; ಅನಿ ತೆಚ್ಯಾಸಾಟ್ನಿಚ್ ಅಮ್ಚ್ಯಾ ವಿಶ್ವಾಸಾ ವೈನಾ ದೆವಾಚೆ ಕಾಮ್ ಕರ್‍ತಲ್ಯಾ ಆತ್ಮ್ಯಾಚ್ಯಾ ಬಳಾನ್ ಅಮಿ ವಾಟ್ ರಾಕುನ್ಗೆತ್ ಹಾಂವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಗಲಾತ್ಯದವರಿಗೆ 5:5
17 ತಿಳಿವುಗಳ ಹೋಲಿಕೆ  

ನಾನು ಯೆಹೋವನನ್ನು ಎದುರುನೋಡುತ್ತೇನೆ; ನನ್ನ ಪ್ರಾಣವು ಆತನನ್ನು ಕಾದುಕೊಂಡಿದೆ; ಆತನ ನುಡಿಯನ್ನು ನಿರೀಕ್ಷಿಸಿಕೊಂಡಿದ್ದೇನೆ.


ಆತನು ಸತ್ತವರೊಳಗಿಂದ ಎಬ್ಬಿಸಿದಂಥ ಆಕಾಶದೊಳಗಿಂದ ಬರುವಂಥ ಆತನ ಕುಮಾರನನ್ನು ಎದುರುನೋಡುವವರಾದಿರೆಂತಲೂ ತಿಳಿಸುತ್ತಾರೆ. ಈ ಯೇಸುವು ಮುಂದೆ ಬರುವ ದೈವಕೋಪದಿಂದ ನಮ್ಮನ್ನು ತಪ್ಪಿಸುವಾತನು.


ನನ್ನ ಮನವೇ, ದೇವರನ್ನೇ ನಂಬಿ ಶಾಂತವಾಗಿರು. ನನ್ನ ನಿರೀಕ್ಷೆಯು ನೆರವೇರುವದು ಆತನಿಂದಲೇ.


ನೀತಿವಂತರಿಗೆ ದೊರಕುವ ಜಯಮಾಲೆಯು ಮುಂದೆ ನನಗೆ ಸಿದ್ಧವಾಗಿದೆ; ಅದನ್ನು ನೀತಿಯುಳ್ಳ ನ್ಯಾಯಾಧಿಪತಿಯಾಗಿರುವ ಕರ್ತನು ಆ ದಿನದಲ್ಲಿ ನನಗೆ ಕೊಡುವನು; ನನಗೆ ಮಾತ್ರವಲ್ಲದೆ ತನ್ನ ಪ್ರತ್ಯಕ್ಷತೆಯನ್ನು ಪ್ರೀತಿಸುವವರೆಲ್ಲರಿಗೂ ಕೊಡುವನು.


ಇದರಲ್ಲಿ ನನ್ನ ಉದ್ದೇಶವೇನಂದರೆ - ನಾನು ಕ್ರಿಸ್ತನನ್ನು ಸಂಪಾದಿಸಿಕೊಂಡು ನೇಮನಿಷ್ಠೆಗಳ ಫಲವಾಗಿರುವ ಸ್ವನೀತಿಯನ್ನಾಶ್ರಯಿಸದೆ ಕ್ರಿಸ್ತನನ್ನು ನಂಬುವದರಿಂದ ದೊರಕುವಂಥ ಅಂದರೆ ಕ್ರಿಸ್ತನ ಮೇಲಣ ನಂಬಿಕೆಯ ಆಧಾರದಿಂದ ದೇವರು ಕೊಡುವಂಥ ನೀತಿಯನ್ನೇ ಹೊಂದಿ ಕ್ರಿಸ್ತನಲ್ಲಿರುವವನಾಗಿ ಕಾಣಿಸಿಕೊಳ್ಳಬೇಕೆಂಬದೇ.


ಯೆಹೋವನೇ, ನಿನ್ನಿಂದುಂಟಾಗುವ ರಕ್ಷಣೆಯು ಯಾವಾಗ ಆಗುವದೋ ಎಂದು ನಿರೀಕ್ಷಿಸಿಕೊಂಡಿದ್ದೇನೆ.


ಹೀಗೆ ಪಾಪವು ಮರಣವನ್ನುಂಟುಮಾಡುತ್ತಾ ಅಧಿಕಾರವನ್ನು ನಡಿಸಿದ ಹಾಗೆಯೇ ದೇವರ ಕೃಪೆಯು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ನೀತಿಯನ್ನು ಕೊಟ್ಟು ನಿತ್ಯಜೀವವನ್ನುಂಟುಮಾಡುತ್ತಾ ಅಧಿಕಾರವನ್ನು ನಡಿಸುವದು.


[ಇಸ್ರಾಯೇಲೇ,] ನೀನು ನಿನ್ನ ದೇವರ ಸಹಾಯದಿಂದ ತಿರುಗಿಕೋ; ನೀತಿಪ್ರೀತಿಗಳನ್ನನುಸರಿಸಿ ನಿನ್ನ ದೇವರನ್ನು ಎಡೆಬಿಡದೆ ನಿರೀಕ್ಷಿಸಿಕೊಂಡಿರು.


ನಿನ್ನ ಸತ್ಯಾನುಸಾರವಾಗಿ ನನ್ನನ್ನು ನಡಿಸುತ್ತಾ ಉಪದೇಶಿಸು; ನೀನೇ ನನ್ನನ್ನು ರಕ್ಷಿಸುವ ದೇವರು; ಹಗಲೆಲ್ಲಾ ನಿನ್ನನ್ನೇ ನಿರೀಕ್ಷಿಸುವವನಾಗಿದ್ದೇನೆ.


ದೇವರ ಪ್ರೀತಿಯಲ್ಲಿಯೂ ಕ್ರಿಸ್ತನ ತಾಳ್ಮೆಯಲ್ಲಿಯೂ ಸೇರುವಂತೆ ಕರ್ತನೇ ನಿಮ್ಮನ್ನು ನಡಿಸಲಿ.


ಆತನ ಮೂಲಕ ನಾವೂ ನೀವೂ ಒಬ್ಬ ಆತ್ಮನನ್ನೇ ಹೊಂದಿದವರಾಗಿ ತಂದೆಯ ಬಳಿಗೆ ಪ್ರವೇಶಿಸುವದಕ್ಕೆ ಮಾರ್ಗವಾಯಿತು.


ವೃಥಾದ್ರೋಹಿಗಳಿಗೆ ಆಶಾಭಂಗವಾಗಬೇಕೇ ಹೊರತು ನಿನ್ನನ್ನು ನಿರೀಕ್ಷಿಸಿದವರಿಗೆ ಎಂದಿಗೂ ಆಗಬಾರದು.


ಹೀಗೆ ನೀವು ಯಾವ ಕೃಪಾವರದಲ್ಲಿಯೂ ಕೊರತೆಯಿಲ್ಲದವರಾಗಿ ನಮ್ಮ ಕರ್ತನಾದ ಯೇಸು ಕ್ರಿಸ್ತನ ಪ್ರತ್ಯಕ್ಷತೆಯನ್ನು ಎದುರುನೋಡುತ್ತಾ ಇದ್ದೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು