Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಗಲಾತ್ಯದವರಿಗೆ 6:13 - ಕನ್ನಡ ಸತ್ಯವೇದವು J.V. (BSI)

13 ಸುನ್ನತಿಮಾಡಿಸಿಕೊಳ್ಳುವ ತಾವಾದರೂ ಧರ್ಮಶಾಸ್ತ್ರವನ್ನು ಕೈಕೊಂಡು ನಡೆಯುವದಿಲ್ಲ. ಅವರು ನಿಮ್ಮ ಶರೀರದ ವಿಷಯದಲ್ಲಿ ಹೆಚ್ಚಳಪಡುವದಕ್ಕಾಗಿ ನಿಮಗೆ ಸುನ್ನತಿಯಾಗಬೇಕೆಂದು ಅಪೇಕ್ಷಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಸುನ್ನತಿ ಮಾಡಿಸಿಕೊಂಡವರೇ ಧರ್ಮಶಾಸ್ತ್ರವನ್ನು ಕೈಕೊಂಡು ನಡೆಯುತ್ತಿಲ್ಲವಲ್ಲಾ. ಅವರು ನಿಮ್ಮ ಶರೀರದ ವಿಷಯದಲ್ಲಿ ಹೆಚ್ಚಳಪಡುವುದಕ್ಕಾಗಿ ನಿಮಗೆ ಸುನ್ನತಿಯಾಗಬೇಕೆಂದು ಅಪೇಕ್ಷಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಸುನ್ನತಿಮಾಡಿಸಿಕೊಳ್ಳುವ ತಾವಾದರೂ ಧರ್ಮಶಾಸ್ತ್ರವನ್ನು ಅನುಸರಿಸಿ ನಡೆಯುವುದಿಲ್ಲ. ಆದರೆ ನಿಮ್ಮ ದೈಹಿಕ ಸುನ್ನತಿಯಿಂದ, ಅವರು ಹೆಚ್ಚಳಿಕೆ ಗಳಿಸುವುದಕ್ಕಾಗಿ ನಿಮಗೆ ಸುನ್ನತಿಯಾಗಬೇಕೆಂದು ಬಯಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಸುನ್ನತಿ ಮಾಡಿಸಿಕೊಂಡಿರುವ ಅವರೇ ಧರ್ಮಶಾಸ್ತ್ರಕ್ಕೆ ವಿಧೇಯರಾಗುತ್ತಿಲ್ಲ. ಆದರೆ ನಿಮಗೂ ಸುನ್ನತಿ ಮಾಡಿಸಿ ಅದರ ಬಗ್ಗೆ ಹೆಚ್ಚಳಪಡಬೇಕೆಂಬುದೇ ಅವರ ಆಸೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಸುನ್ನತಿ ಮಾಡಿಸಿಕೊಳ್ಳುವ ತಾವಾದರೋ ನಿಯಮವನ್ನು ಕೈಗೊಂಡು ನಡೆಯುವುದಿಲ್ಲ. ಆದರೆ ಅವರು ನಿಮ್ಮ ಶರೀರದ ಸುನ್ನತಿಯಿಂದ ಹೆಚ್ಚಳಪಡುವಂತೆ ನಿಮಗೆ ಸುನ್ನತಿಯಾಗಬೇಕೆಂದು ಅಪೇಕ್ಷಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ಸುನ್ನತ್ ಕರುನ್ ಘೆತಲೆ ಸೈತ್ ಖಾಯ್ದ್ಯಾಕ್ ಖಾಯ್ಲ್ ಹೊವ್ನ್ ಚಲಿನ್ಯಾತ್; ತೆನಿ ತುಮಿ ಸುನ್ನತ್ ಕರುನ್ ಘೆವ್ಚೆ ಮನ್ತ್ಯಾತ್, ಹ್ಯಾ ಶಾರಿರಿಕ್ ರಿತಿಕ್ ತುಮಿ ತುಮ್ಕಾಚ್ ಒಪ್ಸುನ್ ದಿಲ್ಲ್ಯಾ ವೈನಾ ಅಪ್ನಾಚೆ ಮೊಟೆಪಾನ್ ದಾಕ್ವುನ್ ಘೆವ್ ಸಾಟ್ನಿ ತೆನಿ ತಸೆ ಕರುಕ್ ಲಾಗ್ಲಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಗಲಾತ್ಯದವರಿಗೆ 6:13
11 ತಿಳಿವುಗಳ ಹೋಲಿಕೆ  

ನಿಜವಾದ ಸುನ್ನತಿಯವರು ಯಾರಂದರೆ - ದೇವರಾತ್ಮನಿಂದ ಪ್ರೇರಿತರಾಗಿ ಆರಾಧಿಸುವವರೂ ಕ್ರಿಸ್ತ ಯೇಸುವಿನಲ್ಲಿ ಹರ್ಷಗೊಳ್ಳುವವರೂ ಶರೀರಸಂಬಂಧವಾದವುಗಳಲ್ಲಿ ಭರವಸವಿಲ್ಲದವರೂ ಆಗಿರುವ ನಾವೇ.


ನೀವು ಹಿಗ್ಗುವದು ಒಳ್ಳೇದಲ್ಲ. ಸ್ವಲ್ಪ ಹುಳಿ ಕಲಸಿದರೆ ಕಣಿಕವೆಲ್ಲಾ ಹುಳಿಯಾಗುತ್ತದೆಂಬದು ನಿಮಗೆ ತಿಳಿಯದೋ?


ಸ್ವಾತಂತ್ರ್ಯ ಕೊಡುತ್ತೇವೆಂದು ಅವರಿಗೆ ವಾಗ್ದಾನಮಾಡುತ್ತಾರೆ, ಆದರೆ ತಾವೇ ಕೆಟ್ಟತನದ ದಾಸತ್ವದೊಳಗಿದ್ದಾರೆ. ಒಬ್ಬನು ಯಾವದಕ್ಕೆ ಸೋತು ಹೋಗಿರುವನೋ ಅದರ ದಾಸತ್ವದೊಳಗಿರುವನಷ್ಟೆ.


ಅನೇಕರು ಲೋಕಸಂಬಂಧವಾದ ಕಾರ್ಯಗಳಲ್ಲಿ ಹೊಗಳಿಕೊಳ್ಳುವದರಿಂದ ನಾನೂ ಹೊಗಳಿಕೊಳ್ಳುತ್ತೇನೆ.


ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನೀವು ಒಬ್ಬನನ್ನು ನಿಮ್ಮ ಮತದಲ್ಲಿ ಸೇರಿಸಿಕೊಳ್ಳುವದಕ್ಕಾಗಿ ಭೂವಿುಯನ್ನೂ ಸಮುದ್ರವನ್ನೂ ಸುತ್ತಿಕೊಂಡು ಬರುತ್ತೀರಿ; ಅವನು ಸೇರಿದ ಮೇಲೆ ಅವನನ್ನು ನಿಮಗಿಂತ ಎರಡರಷ್ಟಾಗಿ ನರಕ ಪಾತ್ರನಾಗಮಾಡುತ್ತೀರಿ.


ಆದದರಿಂದ ಅವರು ನಿಮಗೆ ಏನೇನು ಹೇಳುತ್ತಾರೋ ಅದನ್ನೆಲ್ಲಾ ಮಾಡಿರಿ, ಕಾಪಾಡಿಕೊಳ್ಳಿರಿ; ಆದರೆ ಅವರ ನಡತೆಯ ಪ್ರಕಾರ ನಡೆಯಬೇಡಿರಿ; ಅವರು ಹೇಳುತ್ತಾರೇ ಹೊರತು ನಡೆಯುವದಿಲ್ಲ.


ಆದಕಾರಣ ಮನುಷ್ಯಮಾತ್ರದವರ ವಿಷಯದಲ್ಲಿ ಯಾರೂ ಹಿಗ್ಗದಿರಲಿ. ಯಾಕಂದರೆ ಸಮಸ್ತವೂ ನಿಮ್ಮದು;


ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನೀವು ಮರುಗ ಸೋಪು ಜೀರಿಗೆಗಳಲ್ಲಿ ಹತ್ತರಲ್ಲೊಂದು ಪಾಲುಕೊಡುತ್ತೀರಿ ಸರಿ, ಆದರೆ ಧರ್ಮಶಾಸ್ತ್ರದಲ್ಲಿ ಗೌರವವಾದದ್ದನ್ನು, ಅಂದರೆ ನ್ಯಾಯವನ್ನೂ ಕರುಣೆಯನ್ನೂ ನಂಬಿಕೆಯನ್ನೂ ಬಿಟ್ಟುಬಿಟ್ಟಿರಿ. ಇವುಗಳನ್ನು ಮಾಡಬೇಕಾಗಿತ್ತು; ಅವುಗಳನ್ನೂ ಬಿಡಬಾರದು.


ಆದರೆ ಹೊಸ ದ್ರಾಕ್ಷಾರಸವನ್ನು ಹೊಸ ಬುದ್ದಲಿಗಳಲ್ಲಿ ಹಾಕಿಡತಕ್ಕದ್ದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು