Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಗಲಾತ್ಯದವರಿಗೆ 6:15 - ಕನ್ನಡ ಸತ್ಯವೇದವು J.V. (BSI)

15 ಸುನ್ನತಿಯಾಗುವದರಲ್ಲಿ ಏನೂ ಇಲ್ಲ, ಸುನ್ನತಿಯಾಗದೆ ಇರುವದರಲ್ಲಿಯೂ ಏನೂ ಇಲ್ಲ; ಹೊಸ ಸೃಷ್ಟಿಯೇ ಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಸುನ್ನತಿ ಮಾಡಿಸಿಕೊಳ್ಳುವುದೋ ಅಥವಾ ಮಾಡಿಸಿಕೊಳ್ಳದಿರುವುದೋ ಏನು ಅಲ್ಲ, ಆದರೆ ಹೊಸ ಸೃಷ್ಟಿಯಾಗುವುದೇ ಪ್ರಮುಖವಾದುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಸುನ್ನತಿ ಮಾಡಿಸಿಕೊಳ್ಳುವುದೋ, ಮಾಡಿಸಿಕೊಳ್ಳದಿರುವುದೋ ಮಹತ್ತಾದುದಲ್ಲ. ಹೊಸ ಸೃಷ್ಟಿಯಾಗುವುದೇ ಮಹತ್ತರವಾದುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಒಬ್ಬನಿಗೆ ಸುನ್ನತಿಯಾಗಿದೆಯೋ ಸುನ್ನತಿಯಾಗಿಲ್ಲವೋ ಎಂಬುದು ಮುಖ್ಯವಲ್ಲ. ಆದರೆ ದೇವರಿಂದ ಹೊಸ ಸೃಷ್ಟಿಯಾಗಿರುವುದೇ ಮುಖ್ಯವಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಸುನ್ನತಿಯಾಗುವುದರಿಂದ ಇಲ್ಲವೆ, ಸುನ್ನತಿಯಾಗದೆ ಇರುವುದರಿಂದ ಏನೂ ಪ್ರಯೋಜನವಿಲ್ಲ. ಆದರೆ ಹೊಸ ಸೃಷ್ಟಿಯೇ ಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ಎಕ ಮಾನ್ಸಾಕ್ ಸುನ್ನತ್ ಹೊಲಾ ಕಾಯ್ ನಾ ಮನ್ತಲೆ ಮುಖ್ಯ ನ್ಹಯ್, ನ್ಹವ್ಯಾನ್ ರಚುನ್ ಹೊತೆಲೆ ಮೊಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಗಲಾತ್ಯದವರಿಗೆ 6:15
14 ತಿಳಿವುಗಳ ಹೋಲಿಕೆ  

ಹೀಗಿರಲಾಗಿ ಯಾವನಾದರೂ ಕ್ರಿಸ್ತನಲ್ಲಿದ್ದರೆ ಅವನು ನೂತನಸೃಷ್ಟಿಯಾದನು. ಇಗೋ, ಪೂರ್ವಸ್ಥಿತಿ ಹೋಗಿ ಎಲ್ಲಾ ನೂತನವಾಯಿತು.


ಆ ಸ್ವಭಾವವು ದೇವರ ಹೋಲಿಕೆಯ ಮೇರೆಗೆ ಸತ್ಯಾನುಗುಣವಾದ ನೀತಿಯುಳ್ಳದ್ದಾಗಿಯೂ ದೇವಭಯವುಳ್ಳದ್ದಾಗಿಯೂ ನಿರ್ಮಿಸಲ್ಪಟ್ಟಿದೆ.


ನಾವು ಆತನ ನಿರ್ಮಾಣ; ಸತ್ಕಾರ್ಯಗಳನ್ನು ಮಾಡುವದಕ್ಕಾಗಿಯೇ ಕ್ರಿಸ್ತ ಯೇಸುವಿನಲ್ಲಿ ಸೃಷ್ಟಿಸಲ್ಪಟ್ಟೆವು. ನಾವು ಸತ್ಕಾರ್ಯಗಳನ್ನು ನಡಿಸುವವರಾಗಿ ಬದುಕಬೇಕೆಂದು ದೇವರು ನಮ್ಮನ್ನು ಮೊದಲೇ ನೇವಿುಸಿದನು.


ಕ್ರಿಸ್ತ ಯೇಸುವಿನಲ್ಲಿರುವವರಿಗೆ ಸುನ್ನತಿಯಾದರೂ ಪ್ರಯೋಜನವಿಲ್ಲ, ಆಗದಿದ್ದರೂ ಪ್ರಯೋಜನವಿಲ್ಲ. ಪ್ರೀತಿಯಿಂದ ಕೆಲಸ ನಡಿಸುವ ನಂಬಿಕೆಯಿಂದಲೇ ಪ್ರಯೋಜನವಾಗಿದೆ.


ಸುನ್ನತಿಯಿದ್ದರೂ ಪ್ರಯೋಜನವಿಲ್ಲ, ಸುನ್ನತಿಯಿಲ್ಲದಿದ್ದರೂ ಪ್ರಯೋಜನವಿಲ್ಲ; ದೇವರ ಕಟ್ಟಳೆಗಳನ್ನು ಅನುಸರಿಸಿ ನಡೆಯುವದೇ ಪ್ರಯೋಜನವಾಗಿದೆ.


ಹೊರಗೆ ಮಾತ್ರ ಯೆಹೂದ್ಯನಾಗಿರುವವನು ಯೆಹೂದ್ಯನಲ್ಲ; ಮತ್ತು ಹೊರಗೆ ಶರೀರದಲ್ಲಿ ಮಾತ್ರ ಮಾಡಿರುವ ಸುನ್ನತಿಯು ಸುನ್ನತಿಯಲ್ಲ.


ಆದದರಿಂದ ಕ್ರಿಸ್ತ ಯೇಸುವಿನಲ್ಲಿ ಇರುವವರಿಗೆ ಅಪರಾಧನಿರ್ಣಯವು ಈಗ ಇಲ್ಲವೇ ಇಲ್ಲ.


ಆಗ ಸಿಂಹಾಸನದ ಮೇಲೆ ಕೂತಿದ್ದವನು - ಇಗೋ, ಎಲ್ಲವನ್ನು ಹೊಸದುಮಾಡುತ್ತೇನೆ ಅಂದನು. ಮತ್ತು ಒಬ್ಬನು ನನಗೆ - ಇದನ್ನು ಬರೆ; ಈ ಮಾತುಗಳು ನಂಬತಕ್ಕವುಗಳೂ ಸತ್ಯವಾದವುಗಳೂ ಆಗಿವೆ ಎಂದು ಹೇಳಿದನು.


ಹೀಗಿರಲಾಗಿ ಸುನ್ನತಿಯಿಲ್ಲದವನು ಧರ್ಮಶಾಸ್ತ್ರದ ನೇಮಗಳ ಪ್ರಕಾರ ನಡೆದರೆ ಸುನ್ನತಿಯಿಲ್ಲದವನಾಗಿದ್ದರೂ ಸುನ್ನತಿಯಿದ್ದವನಂತೆ ಎಣಿಸಲ್ಪಡುವದಿಲ್ಲವೇ?


ಹೀಗಿರಲಾಗಿ ನಾವು ದೀಕ್ಷಾಸ್ನಾನ ಮಾಡಿಸಿಕೊಂಡಾಗ ಆತನ ಮರಣದಲ್ಲಿ ಪಾಲುಗಾರರಾಗಿ ಆತನೊಂದಿಗೆ ಹೂಣಲ್ಪಟ್ಟೆವು. ಆದದರಿಂದ ಕ್ರಿಸ್ತನು ಸತ್ತು ತಂದೆಯ ಮಹಿಮೆಯಿಂದ ಜೀವಿತನಾಗಿ ಎಬ್ಬಿಸಲ್ಪಟ್ಟಂತೆಯೇ ನಾವು ಕೂಡ ಜೀವದಿಂದೆದ್ದು ಹೊಸಬರಾಗಿ ನಡಕೊಳ್ಳಬೇಕು.


ಆತನು ಸಮಾಧಾನಮಾಡುವವನಾಗಿ ಉಭಯರನ್ನೂ ತನ್ನಲ್ಲಿ ಒಬ್ಬ ನೂತನಪುರುಷನನ್ನಾಗಿ ನಿರ್ಮಿಸಿದ್ದಾನೆ;


ನಿಜವಾದ ಸುನ್ನತಿಯವರು ಯಾರಂದರೆ - ದೇವರಾತ್ಮನಿಂದ ಪ್ರೇರಿತರಾಗಿ ಆರಾಧಿಸುವವರೂ ಕ್ರಿಸ್ತ ಯೇಸುವಿನಲ್ಲಿ ಹರ್ಷಗೊಳ್ಳುವವರೂ ಶರೀರಸಂಬಂಧವಾದವುಗಳಲ್ಲಿ ಭರವಸವಿಲ್ಲದವರೂ ಆಗಿರುವ ನಾವೇ.


ಅಲ್ಲಿಂದ ಬಂದ ಜನರಿಗೆಲ್ಲಾ ಸುನ್ನತಿಯಾಗಿತ್ತು. ಐಗುಪ್ತವನ್ನು ಬಿಟ್ಟನಂತರ ಅರಣ್ಯ ಪ್ರಯಾಣದಲ್ಲಿ ಹುಟ್ಟಿದವರಿಗೆ ಸುನ್ನತಿಯಾಗಿರಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು