Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಚೆಫನ್ಯ 1:16 - ಕನ್ನಡ ಸತ್ಯವೇದವು J.V. (BSI)

16 ಕೋಟೆಗಳನ್ನೂ ದೊಡ್ಡ ಕೊತ್ತಲಗಳನ್ನೂ ಹಿಡಿಯಲು ಆರ್ಭಟಿಸಿ ಕೊಂಬೂದುವ ದಿನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಕೋಟೆಗಳನ್ನೂ, ದೊಡ್ಡ ಕೊತ್ತಲುಗಳನ್ನೂ ಹಿಡಿಯಲು, ಆರ್ಭಟಿಸಿ ಕೊಂಬೂದುವ ದಿನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಕೋಟೆಕೊತ್ತಲಗಳನ್ನು, ಘನಗೋಪುರಗಳನ್ನು ಆಕ್ರಮಿಸಲು ಯುದ್ಧಕಹಳೆಯು ಮೊಳಗುವ ದಿನ, ಯುದ್ಧಘೋಷಣೆಗಳನ್ನು ಆರ್ಭಟಿಸುವ ದಿನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಅದು ಒಂದು ಯುದ್ಧದ ದಿವಸದಂತಿರುವುದು; ಎಲ್ಲೆಲ್ಲೂ ಕೊಂಬು, ತುತ್ತೂರಿಗಳ ಧ್ವನಿಗಳನ್ನು ಜನರು ಬುರುಜು, ಕೊತ್ತಲಗಳಿಂದ ಕೇಳಿಸಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಕೋಟೆಯುಳ್ಳ ಪಟ್ಟಣಗಳಿಗೆ ವಿರೋಧವಾಗಿಯೂ ಉನ್ನತವಾದ ಗೋಪುರಗಳಿಗೆ ವಿರೋಧವಾಗಿಯೂ ತುತೂರಿ ಆರ್ಭಟಗಳ ದಿವಸವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಚೆಫನ್ಯ 1:16
17 ತಿಳಿವುಗಳ ಹೋಲಿಕೆ  

ಊರಲ್ಲಿ ಕೊಂಬೂದಿದರೆ ಜನರು ಅಂಜರೋ? ಯೆಹೋವನಿಂದಲ್ಲದೆ ಊರಿಗೆ ವಿಪತ್ತು ಸಂಭವಿಸುವದೋ?


ಬಾಯಿಗೆ ತುತೂರಿಯನ್ನು ಹಿಡಿ. ನನ್ನ ಜನರು ನನ್ನ ಒಡಂಬಡಿಕೆಯನ್ನು ಮೀರಿ ನನ್ನ ಧರ್ಮವಿಧಿಗಳಿಗೆ ದ್ರೋಹಮಾಡಿದ್ದರಿಂದ ಶತ್ರುವು ಹದ್ದಿನ ಹಾಗೆ ಯೆಹೋವನಾದ ನನ್ನ ನಿವಾಸದ ಮೇಲೆ ಬರುತ್ತಾನೆ.


ಅರಮನೆಯು ಬಿಕೋ ಎನ್ನುವದು, ಗಿಜಿಗುಟ್ಟುವ ಪಟ್ಟಣವು ನಿರ್ಜನವಾಗುವದು, ಓಫೆಲ್ ಗುಡ್ಡವೂ ಕೋವರವೂ ಯಾವಾಗಲೂ ಗುಹೆಗಳಾಗಿಯೂ ಕಾಡುಕತ್ತೆಗಳಿಗೆ ಉಲ್ಲಾಸಕರವಾಗಿಯೂ ದನಕುರಿಗಳಿಗೆ ಕಾವಲಾಗಿಯೂ ಇರುವವು.


ಆತನು ನಿಂತುಕೊಳ್ಳಲು ಭೂವಿುಯು ಕಂಪಿಸುತ್ತದೆ; ದೃಷ್ಟಿಸಲು ಜನಾಂಗಗಳು ಬೆದರುತ್ತವೆ; ಪುರಾತನ ಪರ್ವತಗಳು ಸೀಳಿಹೋಗುತ್ತವೆ; ಸನಾತನ ಗಿರಿಗಳು ಕುಸಿದುಬೀಳುತ್ತವೆ; ಆತನ ಆಗಮನವು ಅನಾದಿಯಿಂದ ಹೀಗೆಯೇ ಇರುವದು.


ಗಿಬ್ಯದಲ್ಲಿ ತುತೂರಿಯನ್ನೂದಿರಿ, ರಾಮದಲ್ಲಿ ಕೊಂಬು ಕೂಗಲಿ, ಬೇತಾವೆನಿನಲ್ಲಿ ಆರ್ಭಟಿಸಿರಿ,


ವೈರಿಯ ಕುದುರೆಗಳ ಬುಸುಗಾಟವು ದಾನಿನಿಂದ ಕೇಳಬರುತ್ತದೆ; ತುರಂಗಗಳ ಕೆನೆತದ ಶಬ್ದಕ್ಕೆ ದೇಶವೆಲ್ಲಾ ಕಂಪಿಸುತ್ತದೆ; ಶತ್ರುಗಳು ಬಂದರು, ಸೀಮೆಯನ್ನೂ ಅದರಲ್ಲಿರುವ ಸಮಸ್ತವನ್ನೂ ಪಟ್ಟಣವನ್ನೂ ಪಟ್ಟಣದ ನಿವಾಸಿಗಳನ್ನೂ ನುಂಗಿಬಿಟ್ಟರು.


ಬೆನ್ಯಾಮೀನ್ ಕುಲದವರೇ, ಯೆರೂಸಲೇವಿುನೊಳಗಿಂದ ವಲಸೆ ಹೋಗಿರಿ, ತೆಕೋವದಲ್ಲಿ ಕೊಂಬನ್ನೂದಿರಿ, ಬೇತ್‍ಹಕ್ಕೆರೆವಿುನಲ್ಲಿ ಧ್ವಜವನ್ನೆತ್ತಿರಿ; ಏಕಂದರೆ ಅತಿನಾಶಕವಾದ ವಿಪತ್ತು ಬಡಗಲಿಂದ ತಲೆದೋರುತ್ತಿದೆ.


ಕುರುಡರಂತೆ ಗೋಡೆಯನ್ನು ತಡವರಿಸುತ್ತೇವೆ, ಹೌದು, ಕಣ್ಣಿಲ್ಲದವರ ಹಾಗೆ ತಡವಾಡುತ್ತೇವೆ, ಮಧ್ಯಾಹ್ನದಲ್ಲಿ ಸಂಜೆಯಂತೆ ಎಡವುತ್ತೇವೆ, ಪುಷ್ಟರ ನಡುವೆ ಸತ್ತವರ ಹಾಗಿದ್ದೇವೆ.


ನಿಮ್ಮ ದೇವರಾದ ಯೆಹೋವನು ನಿಮಗೆ ಕೊಟ್ಟಿರುವ ದೇಶದ ಎಲ್ಲಾ ಪಟ್ಟಣಗಳಿಗೂ ಅವರು ಮುತ್ತಿಗೆಹಾಕಿ ನೀವು ನಂಬಿಕೊಂಡಿದ್ದ ಎತ್ತರವಾದ ಕೊತ್ತಲುಗಳುಳ್ಳ ಗೋಡೆಗಳನ್ನು ಕೆಡವಿಬಿಡುವರು.


ಆ ದಿನದಲ್ಲಿ ದೊಡ್ಡ ಕೊಂಬನ್ನೂದಲು ಅಶ್ಶೂರ ದೇಶದಲ್ಲಿ ಹಾಳಾದವರೂ ಐಗುಪ್ತ ಸೀಮೆಯಲ್ಲಿನ ದೇಶಭ್ರಷ್ಟರಾದವರೂ ಬಂದು ಪರಿಶುದ್ಧಪರ್ವತದ ಯೆರೂಸಲೇವಿುನಲ್ಲಿ ಯೆಹೋವನ ಮುಂದೆ ಅಡ್ಡಬೀಳುವರು.


ಚೀಯೋನಿನಲ್ಲಿ ಕೊಂಬೂದಿರಿ, ನನ್ನ ಪರಿಶುದ್ಧಪರ್ವತದಲ್ಲಿ ದನಿಗೈಯಿರಿ; ಸಮಸ್ತ ದೇಶನಿವಾಸಿಗಳು ನಡುಗಲಿ; ಯೆಹೋವನ ದಿನವು ಬರುತ್ತಲಿದೆ, ಸಮೀಪಿಸಿತು;


ಕೂಡಲೆ ಜನರ ಆರ್ಭಟವೂ ಕೊಂಬುಗಳ ಧ್ವನಿಯೂ ಉಂಟಾದವು. ಜನರು ಕೊಂಬಿನ ಧ್ವನಿಯನ್ನು ಕೇಳಿ ಮಹತ್ತರವಾಗಿ ಆರ್ಭಟಿಸಲು ಪಟ್ಟಣದ ಗೋಡೆಯು ತಾನೇ ಬಿದ್ದುಹೋಯಿತು. ಪ್ರತಿಯೊಬ್ಬನೂ ನೆಟ್ಟಗೆ ಪಟ್ಟಣದಲ್ಲಿ ನುಗ್ಗಿ ಹೋದನು. ಅದು ಅವರಿಗೆ ಸ್ವಾಧೀನವಾಯಿತು.


ದೇಶನಿವಾಸಿಯೇ, ನಿನ್ನ ಗತಿ ಆಯಿತು. ಸಮಯ ಬಂತು, ದಿನ ಹತ್ತರಿಸಿತು; ಬೆಟ್ಟಗಳ ಮೇಲೆ ಕೇಳಿಸುವ ಧ್ವನಿಯು ಉತ್ಸಾಹ ಧ್ವನಿಯಲ್ಲ, ಕಳಕಳವೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು