ಚೆಫನ್ಯ 1:17 - ಕನ್ನಡ ಸತ್ಯವೇದವು J.V. (BSI)17 ಯೆಹೋವನಾದ ನನಗೆ ಜನರು ಪಾಪಮಾಡಿದ ಕಾರಣ ಕುರುಡರಂತೆ ನಡೆಯುವ ಹಾಗೆ ಅವರನ್ನು ಸಂಕಟಪಡಿಸುವೆನು; ಅವರ ರಕ್ತವು ದೂಳಿನಂತೆ ಚೆಲ್ಲಿಹೋಗುವದು, ಅವರ ಮಾಂಸವು ಮಲದ ಹಾಗೆ ಬಿದ್ದಿರುವದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಯೆಹೋವನಾದ ನನಗೆ ಜನರು ಪಾಪಮಾಡಿದ ಕಾರಣ ಕುರುಡರಂತೆ ನಡೆಯುವ ಹಾಗೆ ಅವರನ್ನು ಸಂಕಟಪಡಿಸುವೆನು; ಅವರ ರಕ್ತವು ಧೂಳಿನಂತೆ ಚೆಲ್ಲಿ ಹೋಗುವುದು, ಅವರ ಮಾಂಸವು ಮಲದ ಹಾಗೆ ಬಿದ್ದಿರುವುದು! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಸರ್ವೇಶ್ವರ ಇಂತೆನ್ನುತ್ತಾರೆ, “ಮಾನವರ ಮೇಲೆ ಕಷ್ಟ - ಸಂಕಷ್ಟಗಳನ್ನು ಬರಮಾಡುವೆನು; ಅವರು ಕುರುಡರಂತೆ ತಡಕಾಡುವರು. ಏಕೆಂದರೆ ಅವರು ನನಗೆ ವಿರೋಧವಾಗಿ ಪಾಪಮಾಡಿದ್ದಾರೆ; ಅವರ ರಕ್ತವನ್ನು ನೀರಿನಂತೆ ಚೆಲ್ಲಲಾಗುವುದು; ಅವರ ಹೆಣಗಳನ್ನು ಕಸದಂತೆ ಕೊಳೆಯಲು ಬಿಡಲಾಗುವುದು.” ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಯೆಹೋವನು ಹೇಳುವುದೇನೆಂದರೆ, “ಜನರ ಜೀವನವನ್ನು ನಾನು ಬಹು ಕಷ್ಟಕರವಾಗಿ ಮಾಡುವೆನು. ಅವರು ಕುರುಡರಂತೆ ಅತ್ತಿತ್ತ ತೊಳಲಾಡುವರು. ತಾವು ಎಲ್ಲಿಗೆ ಹೋಗುತ್ತಿದ್ದಾರೆಂದು ಅವರಿಗೆ ತಿಳಿಯದು. ಯಾಕೆಂದರೆ ಯೆಹೋವನಿಗೆ ವಿರುದ್ಧವಾಗಿ ಪಾಪ ಮಾಡಿದ್ದಾರೆ. ಅನೇಕ ಮಂದಿ ಕೊಲ್ಲಲ್ಪಡುವರು. ಅವರ ರಕ್ತವು ಭೂಮಿಗೆ ಸುರಿಯಲ್ಪಡುವುದು. ಅವರ ಹೆಣಗಳು ಮಲದ ಹಾಗೆ ನೆಲದಲ್ಲಿ ಬೀಳುವವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 “ನಾನು ಮನುಷ್ಯರ ಮೇಲೆ ಇಕ್ಕಟ್ಟು ತರಿಸುವೆನು. ಅವರು ಕುರುಡರ ಹಾಗೆ ತಡಕುವರು. ಏಕೆಂದರೆ ಯೆಹೋವ ದೇವರಿಗೆ ವಿರೋಧವಾಗಿ ಪಾಪಮಾಡಿದ್ದಾರೆ. ಅವರ ರಕ್ತವು ಧೂಳಿನಂತೆಯೂ ಅವರ ಮಾಂಸವು ಗೊಬ್ಬರದಂತೆಯೂ ಸುರಿದಿರುವುದು. ಅಧ್ಯಾಯವನ್ನು ನೋಡಿ |