Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಚೆಫನ್ಯ 1:2 - ಕನ್ನಡ ಸತ್ಯವೇದವು J.V. (BSI)

2 ಯೆಹೋವನು ಇಂತೆನ್ನುತ್ತಾನೆ - ನಾನು ಭೂಮಂಡಲದಿಂದ ಸಮಸ್ತವನ್ನು ಅಳಿಸಿಬಿಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಯೆಹೋವನು ಇಂತೆನ್ನುತ್ತಾನೆ, “ನಾನು ಭೂಮಂಡಲದಿಂದ ಸಮಸ್ತವನ್ನು ಅಳಿಸಿಬಿಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಸರ್ವೇಶ್ವರ ಇಂತೆಂದರು - “ನಾನು ಭೂಮಂಡಲದ ಮೇಲೆ ಏನೂ ಇಲ್ಲದಂತೆ ಸಮಸ್ತವನ್ನು ಅಳಿಸಿಬಿಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಯೆಹೋವನು ಹೇಳುವುದೇನೆಂದರೆ, “ಭೂಲೋಕದಲ್ಲಿರುವದೆಲ್ಲವನ್ನು ನಾನು ನಾಶಮಾಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಯೆಹೋವ ದೇವರು ಹೇಳುವುದೇನೆಂದರೆ, “ನಾನು ದೇಶದೊಳಗಿಂದ ಎಲ್ಲವುಗಳನ್ನು ಸಂಪೂರ್ಣವಾಗಿ ನಾಶಮಾಡುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಚೆಫನ್ಯ 1:2
13 ತಿಳಿವುಗಳ ಹೋಲಿಕೆ  

ಆದರೆ [ಅಷ್ಟರೊಳಗೆ] ಈ ದೇಶವು ತನ್ನ ನಿವಾಸಿಗಳ ನಿವಿುತ್ತ, ಅವರ ದುಷ್ಕೃತ್ಯಗಳಿಗೆ ಫಲವಾಗಿ ಹಾಳುಬಿದ್ದಿರುವದು.


ಅಲ್ಲದೆ ಯೆಹೂದದ ಅರಸನಾದ ಯೆಹೋಯಾಕೀಮನ ವಿಷಯದಲ್ಲಿ ಹೀಗೆ ಬರೆಯಿಸು - ಯೆಹೋವನು ಇಂತೆನ್ನುತ್ತಾನೆ - ಬಾಬೆಲಿನ ಅರಸನು ಬಂದು ಈ ದೇಶವನ್ನು ಜನಪಶುಗಳಿಲ್ಲದಂತೆ ಹಾಳುಮಾಡುವದು ಖಂಡಿತ ಎಂದು ಈ ಸುರಳಿಯನ್ನು ಬರೆಯಿಸಿದ್ದೇಕೆ ಎಂಬದಾಗಿ ನೀನು ಆಕ್ಷೇಪಿಸಿ ಅದನ್ನು ಸುಟ್ಟುಬಿಟ್ಟಿಯಲ್ಲ;


ಯೆಹೋವನು ಇಂತೆನ್ನುತ್ತಾನೆ - ಇಗೋ, ನಾನು ಅಪ್ಪಣೆಕೊಟ್ಟು ಆ ಶತ್ರುಗಳು ಈ ಪಟ್ಟಣಕ್ಕೆ ಹಿಂದಿರುಗುವಂತೆ ಮಾಡುವೆನು; ಅವರು ಅದಕ್ಕೆ ವಿರುದ್ಧವಾಗಿ ಯುದ್ಧಮಾಡಿ ಅದನ್ನು ಆಕ್ರವಿುಸಿ ಬೆಂಕಿಯಿಂದ ಸುಟ್ಟುಬಿಡುವರು; ಮತ್ತು ನಾನು ಯೆಹೂದದ ಪಟ್ಟಣಗಳನ್ನು ಜನವಿಲ್ಲದ ಬೀಳುಭೂವಿುಯನ್ನಾಗಿ ಮಾಡುವೆನು.


ಅದಕ್ಕೆ ನಾನು - ಕರ್ತನೇ, ಇದು ಎಂದಿನ ತನಕ? ಎಂದು ಕೇಳಲು ಆತನು - ಯೆಹೋವನು ಜನರನ್ನು ದೂರ ತೊಲಗಿಸಿ


ಈ ಪ್ರಕಾರ ಯೆಹೋವನು ಯೆರೆಮೀಯನ ಮುಖಾಂತರ ಹೇಳಿಸಿದ ಮಾತು ನೆರವೇರಿ ದೇಶವು ತನ್ನ ಸಬ್ಬತ್‍ಕಾಲವನ್ನು ಅನುಭವಿಸುವದಕ್ಕೆ ಮಾರ್ಗವಾಯಿತು. ದೇಶವು ಎಪ್ಪತ್ತು ವರುಷ ಹಾಳುಬಿದ್ದು ಆ ಕಾಲದಲ್ಲೆಲ್ಲಾ ವಿಶ್ರಾಂತಿಯನ್ನು ಅನುಭವಿಸುತ್ತಿತ್ತು.


ಮತ್ತು ಯೆಹೋವನು - ನಾನು ಸೃಷ್ಟಿಸಿದ ಮನುಷ್ಯ ಜಾತಿಯನ್ನು ಭೂವಿುಯ ಮೇಲಿನಿಂದ ಅಳಿಸಿಬಿಡುವೆನು; ಅದನ್ನು ಉಂಟುಮಾಡಿದ್ದಕ್ಕೆ ನನ್ನಲ್ಲಿ ಪಶ್ಚಾತ್ತಾಪ ಹುಟ್ಟಿತು; ಮನುಷ್ಯರೊಂದಿಗೆ ಸಕಲಮೃಗ ಕ್ರಿವಿುಪಕ್ಷಿಗಳನ್ನೂ ಅಳಿಸಿ ಬಿಡುವೆನು ಅಂದುಕೊಂಡನು.


ಹೀಗಿರಲು ಕರ್ತನಾದ ಯೆಹೋವನ ಈ ಮಾತನ್ನು ಕೇಳಿರಿ - ಆಹಾ, ನನ್ನ ಕೋಪವೆಂಬ ರೋಷಾಗ್ನಿಯು ಈ ಸ್ಥಳದಲ್ಲಿ ಸುರಿಯಲ್ಪಡುವದು; ಮನುಷ್ಯರ ಮೇಲೆಯೂ ಪಶುಗಳ ಮೇಲೆಯೂ ಕಾಡುಮರಗಳ ಮೇಲೆಯೂ ಭೂವಿುಯ ಬೆಳೆಯ ಮೇಲೆಯೂ ಅದನ್ನು ಸುರಿಯುವೆನು; ಆರದೆ ದಹಿಸುವದು.


ಅರಾಮ್ಯರ ಸೈನ್ಯದಿಂದ ಬಂದು ಗುಂಪು ಚಿಕ್ಕದಾಗಿದ್ದರೂ ಯೆಹೂದ್ಯರು ತಮ್ಮ ಪಿತೃಗಳ ದೇವರಾದ ಯೆಹೋವನನ್ನು ಬಿಟ್ಟುಬಿಟ್ಟದ್ದರಿಂದ ಮಹಾಸೈನ್ಯವಾಗಿದ್ದ ಅವರನ್ನು ಆತನು ಅರಾಮ್ಯರ ಕೈಯಲ್ಲಿ ಬೀಳುವಂತೆ ಮಾಡಿ ಯೆಹೋವಾಷನನ್ನು ಇವರ ಮುಖಾಂತರ ಶಿಕ್ಷಿಸಿದನು.


ಯೆಹೋವನು ತನ್ನ ಸಂಕಲ್ಪವನ್ನು ಸಿದ್ಧಿಗೆ ತಂದು ತಾನು ಪುರಾತನಕಾಲದಲ್ಲಿ ನುಡಿದ ಮಾತನ್ನು ಈಡೇರಿಸಿದ್ದಾನೆ; ಆತನು ಕರುಣಿಸದೆ [ನಿನ್ನನ್ನು] ಕೆಡವಿ ನಿನ್ನ ವೈರಿಗಳಿಗೆ ಆನಂದವಾಗುವಂತೆ ಮಾಡಿ ನಿನ್ನ ವಿರೋಧಿಗಳ ಕೊಂಬನ್ನು ಎತ್ತಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು