Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಚೆಫನ್ಯ 1:4 - ಕನ್ನಡ ಸತ್ಯವೇದವು J.V. (BSI)

4 ನಾನು ಯೆಹೂದದ ಮೇಲೂ ಯೆರೂಸಲೇವಿುನವರೆಲ್ಲರ ಮೇಲೂ ಕೈಯೆತ್ತಿ ಈ ಸ್ಥಳದಿಂದ ಬಾಳನ ಪೂಜೆಯನ್ನು ನಿಶ್ಶೇಷಗೊಳಿಸಿ ಕೆಮಾರ್ಯ ಮೊದಲಾದ ಪೂಜಾರಿಗಳನ್ನು ನಿರ್ನಾಮಮಾಡುವೆನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 “ನಾನು ಯೆಹೂದದ ಮೇಲೂ ಮತ್ತು ಯೆರೂಸಲೇಮಿನವರೆಲ್ಲರ ಮೇಲೂ ಕೈಯೆತ್ತಿ, ಈ ಸ್ಥಳದಿಂದ ಬಾಳನ ಪೂಜೆಯನ್ನು ನಿಶ್ಶೇಷಗೊಳಿಸಿ, ಕೆಮಾರ್ಯ ಮೊದಲಾದ ಪೂಜಾರಿಗಳನ್ನು ನಿರ್ನಾಮ ಮಾಡುವೆನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 “ಜುದೇಯ ನಾಡನ್ನೂ ಜೆರುಸಲೇಮಿನ ನಿವಾಸಿಗಳೆಲ್ಲರನ್ನೂ ಕೈಯೆತ್ತಿ ಸದೆಬಡಿಯುವೆನು; ಬಾಳನ ಪೂಜೆಪುರಸ್ಕಾರಗಳ ಗುರುತೂ ಅಲ್ಲಿ ಇಲ್ಲದಂತೆ ಮಾಡುವೆನು. ಅವನ ಪೂಜಾರಿಗಳನ್ನು ನಿರ್ನಾಮಗೊಳಿಸುವೆನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಯೆಹೋವನು ಹೀಗೆ ನುಡಿದನು: “ನಾನು ಯೆಹೂದವನ್ನೂ ಜೆರುಸಲೇಮಿನಲ್ಲಿ ವಾಸಿಸುವ ಜನರನ್ನೂ ದಂಡಿಸುವೆನು. ಬಾಳನ ಪೂಜೆಯ ಪ್ರತಿಯೊಂದು ಚಿಹ್ನೆಯನ್ನೂ ಅದನ್ನು ಪೂಜಿಸುವ ಪುರೋಹಿತರನ್ನೂ ಮತ್ತು ಯಾವ ಜನರು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 “ಯೆಹೂದದ ಮೇಲೆಯೂ ಯೆರೂಸಲೇಮಿನ ಎಲ್ಲಾ ನಿವಾಸಿಗಳ ಮೇಲೆಯೂ ನನ್ನ ಕೈಚಾಚುವೆನು. ಈ ಸ್ಥಳದಲ್ಲಿ ಬಾಳನ ಪೂಜೆಗಳನ್ನು ಮತ್ತು ಉಳಿದಿರುವ ವಿಗ್ರಹಾರಾಧಕ ಯಾಜಕರ ಹೆಸರುಗಳನ್ನು ತೆಗೆದುಬಿಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಚೆಫನ್ಯ 1:4
14 ತಿಳಿವುಗಳ ಹೋಲಿಕೆ  

ಸಮಾರ್ಯದ ನಿವಾಸಿಗಳು ಬೇತಾವೆನಿನ ಬಸವನ ವಿಷಯದಲ್ಲಿ ದಿಗಿಲುಪಡುವರು; ಅದರ ಭಕ್ತಜನರು ಅದಕ್ಕಾಗಿ ಎದೆಬಡಿದುಕೊಳ್ಳುವರು; ಅದರ ಮಹಿಮೆಯು ಅದರಿಂದ ತೊಲಗಿತಲ್ಲಾ ಎಂದು ಅದರ ಪೂಜಾರಿಗಳು ಅದಕ್ಕಾಗಿ ನಡುಗುವರು.


ನಿನ್ನ ಮೂರ್ತಿಗಳನ್ನೂ ಕಲ್ಲುಕಂಬಗಳನ್ನೂ ನಿನ್ನಲ್ಲಿ ನಿಲ್ಲದಂತೆ ಒಡೆದುಹಾಕುವೆನು, ನಿನ್ನ ಕೈ ರೂಪಿಸಿದ್ದನ್ನು ಇನ್ನು ಪೂಜಿಸದಿರುವಿ.


ಅವರ ಹೆಂಡತಿ, ಮನೆ, ಹೊಲಗದ್ದೆ ಇವೆಲ್ಲಾ ಅನ್ಯರ ಪಾಲಾಗುವವು; ದೇಶದ ನಿವಾಸಿಗಳ ಮೇಲೆ ಕೈಮಾಡುವೆನಷ್ಟೆ ಎಂದು ಯೆಹೋವನು ಹೇಳಿದ್ದಾನೆ.


ಇದಲ್ಲದೆ ಅವನು ಬಾಳ್‍ದೇವತೆಗಳ ಯಜ್ಞವೇದಿಗಳನ್ನು ತನ್ನೆದುರಿನಲ್ಲಿಯೇ ಹಾಳು ಮಾಡಿಸಿ ಅವುಗಳ ಮೇಲಿದ್ದ ಸೂರ್ಯಸ್ತಂಭಗಳನ್ನು ಕಡಿಸಿ ಅಶೇರಸ್ತಂಭ ಕೆತ್ತಿದ ಮತ್ತು ಎರಕದ ವಿಗ್ರಹ ಇವುಗಳನ್ನು ಒಡಿಸಿ ಪುಡಿಪುಡಿಮಾಡಿಸಿ ಅವುಗಳಿಗೆ ಯಜ್ಞವನ್ನರ್ಪಿಸಿದವರ ಸಮಾಧಿಗಳ ಮೇಲೆ ಆ ದೂಳನ್ನು ಚೆಲ್ಲಿಸಿದನು.


ನೂಲು ಮಟ್ಟಗೋಲು ಇವುಗಳಿಂದಲೋ ಎಂಬಂತೆ ಸಮಾರ್ಯವನ್ನೂ ಅಹಾಬನ ಮನೆಯನ್ನೂ ನೆಲಸಮಮಾಡಿಬಿಟ್ಟೆನಲ್ಲಾ; ಯೆರೂಸಲೇಮನ್ನೂ ಅವುಗಳಂತೆಯೇ ಮಾಡುವೆನು. ಒಬ್ಬನು ಪಾತ್ರೆಯನ್ನು ಒರಸಿ ಡಬ್ಬುಹಾಕುವ ಮೇರೆಗೆ ನಾನು ಯೆರೂಸಲೇಮನ್ನು ಒರಸಿ ಡಬ್ಬು ಹಾಕುವೆನು.


ನೀನು ನಿನ್ನ ಬಲಗೈಯನ್ನು ಚಾಚಿದಾಗ ಭೂವಿುಯು ಬಾಯ್ದೆರೆದು ಶತ್ರುಗಳನ್ನು ನುಂಗಿಬಿಟ್ಟಿತಲ್ಲಾ;


ಯೆಹೋವನ ಈ ಮಾತನ್ನು ಕೇಳು - ನೀನು ನನ್ನನ್ನು ಅಲ್ಲಗಳೆದು ಹಿಂದಿರುಗಿದ್ದೀ; ಆದಕಾರಣ ನಾನು ನಿನ್ನ ಮೇಲೆ ಕೈಯೆತ್ತಿ ನಿನ್ನನ್ನು ನಾಶಮಾಡುವೆನು; ಕ್ಷವಿುಸಿ ಕ್ಷವಿುಸಿ ಸಾಕಾಯಿತು.


ನಾನು ಅವರ ಮೇಲೆ ಕೈಯತ್ತಿ ಅವರು ವಾಸವಾಗಿರುವ ದೇಶವನ್ನೆಲ್ಲಾ ಅರಣ್ಯದಿಂದ ದಿಬ್ಲದವರೆಗೂ ಹಾಳುಪಾಳುಮಾಡುವೆನು; ನಾನೇ ಯೆಹೋವನು ಎಂದು ಅವರಿಗೆ ಗೊತ್ತಾಗುವದು.


ಇಗೋ, ನಾನು ನಿನ್ನ ಮೇಲೆ ಕೈಯೆತ್ತಿ ನಿನ್ನನ್ನು ಸೂರೆಗಾಗಿ ಮ್ಲೇಚ್ಫರಿಗೆ ವಶಪಡಿಸಿ ಜನಾಂಗಗಳೊಳಗಿಂದ ಕಿತ್ತುಬಿಟ್ಟು ದೇಶಗಳೊಳಗಿಂದ ನಿನ್ನ ಹೆಸರನ್ನು ಅಳಿಸಿ ನಿನ್ನನ್ನು ಹಾಳುಮಾಡುವೆನು; ಆಗ ನಾನೇ ಯೆಹೋವನು ಎಂದು ನಿನಗೆ ಗೊತ್ತಾಗುವದು,


ಯೆಹೋವನು ಅವರಿಗೆ ಭಯಂಕರವಾಗುವನು; ಲೋಕದ ದೇವರುಗಳನ್ನೆಲ್ಲಾ ಕ್ಷಯಿಸಿಬಿಡುವನು; ಸಮಸ್ತ ಜನರು, ಅಂದರೆ ಸಮುದ್ರ ಪ್ರಾಂತದ ನಿವಾಸಿಗಳಾದ ಸಕಲ ಜನಾಂಗಗಳವರು ತಮ್ಮ ತಮ್ಮ ಸ್ಥಳಗಳಲ್ಲೇ ಆತನನ್ನು ಆರಾಧಿಸುವರು.


ಯೆಹೋವನು ಬಡಗಲಿಗೆ ಕೈಚಾಚಿ ಅಶ್ಶೂರವನ್ನು ಧ್ವಂಸಪಡಿಸುವನು; ನಿನೆವೆಯನ್ನು ಹಾಳುಮಾಡಿ ಮರುಭೂವಿುಯಂತೆ ಒಣಗಿಸಿಬಿಡುವನು.


ಇದಲ್ಲದೆ ಯೆಹೂದ್ಯರ ಅರಸರು ದೇವಸ್ಥಾನದ ಮಾಳಿಗೆಯ ಮೇಲೆ ಆಹಾಜನ ಉಪ್ಪರಿಗೆಯ ಹತ್ತಿರ ಕಟ್ಟಿಸಿದ್ದ ಯಜ್ಞವೇದಿಗಳನ್ನೂ ಮನಸ್ಸೆಯು ಯೆಹೋವನ ಆಲಯದ ಎರಡು ಪ್ರಾಕಾರಗಳಲ್ಲಿ ಕಟ್ಟಿಸಿದ್ದ ಯಜ್ಞವೇದಿಗಳನ್ನೂ ಕೆಡವಿ ಪುಡಿಪುಡಿಮಾಡಿ ಅವುಗಳ ಧೂಳನ್ನು ಕಿದ್ರೋನ್‍ಹಳ್ಳದಲ್ಲಿ ಹಾಕಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು