ಚೆಫನ್ಯ 2:2 - ಕನ್ನಡ ಸತ್ಯವೇದವು J.V. (BSI)2 ಕಾಲವು ಹೊಟ್ಟಿನಂತೆ ಹಾರಿಹೋಗುತ್ತದಲ್ಲಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಆ ಕಾಲವು ಹೊಟ್ಟಿನಂತೆ ಹಾರಿಹೋಗುತ್ತದಲ್ಲಾ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಕಾಲವು ಹೊಟ್ಟಿನಂತೆ ಹಾರಿಹೋಗುವ ಮೊದಲು, ಸರ್ವೇಶ್ವರಸ್ವಾಮಿಯ ಉಗ್ರಕೋಪವು ನಿಮ್ಮ ಮೇಲೆ ಎರಗುವ ಮುಂಚೆ, ಅವರ ಸಿಟ್ಟಿನ ದಿನ ನಿಮ್ಮನ್ನು ಮುಟ್ಟುವುದಕ್ಕೆ ಮುನ್ನ ಸೇರ ಬನ್ನಿ, ಕೂಡಿ ಬನ್ನಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ನೀವು ಒಣಗಿ, ಸತ್ತ ಹೂವಿನೋಪಾದಿಯಾಗುವ ಮೊದಲೇ ನಿಮ್ಮ ಜೀವಿತವನ್ನು ಮಾರ್ಪಡಿಸಿರಿ. ಬಿಸಿಲೇರಿದಾಗ ಹೂವು ಬಾಡಿಹೋಗಿ ಒಣಗುತ್ತದೆ. ಅದೇ ಪ್ರಕಾರ ಯೆಹೋವನು ತನ್ನ ಕೋಪವನ್ನು ಪ್ರದರ್ಶಿಸುವಾಗ ನೀವು ಹಾಗೆ ಆಗುವಿರಿ. ಆದ್ದರಿಂದ ಯೆಹೋವನ ಕೋಪದ ದಿನವು ನಿಮ್ಮ ಮೇಲೆ ಬರುವುದಕ್ಕಿಂತ ಮೊದಲೇ ನಿಮ್ಮ ಜೀವಿತವನ್ನು ಬದಲಾಯಿಸಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ತೀರ್ಪು ಕಾರ್ಯಗತಗೊಳ್ಳುವ ಮುಂಚೆ ಮತ್ತು ಆ ದಿನವು ಗಾಳಿ ಬೀಸಿದ ಹೊಟ್ಟಿನಂತೆ ಹಾರಿಹೋಗುವುದಕ್ಕಿಂತ ಮುಂಚೆ ಯೆಹೋವ ದೇವರ ಉಗ್ರಕೋಪವು ನಿಮ್ಮ ಮೇಲೆ ಬರುವ ಮುಂಚೆ, ಯೆಹೋವ ದೇವರ ಕೋಪದ ದಿನವು ನಿಮ್ಮ ಮೇಲೆ ಬರುವ ಮುಂಚೆ, ಅಧ್ಯಾಯವನ್ನು ನೋಡಿ |
ಯೆಹೋವನು ಇಂತೆನ್ನುತ್ತಾನೆ - ಹೀಗಿರಲು ನನ್ನನ್ನು ಕಾದುಕೊಂಡಿರ್ರಿ, ನಾನು ಬೇಟೆಹಿಡಿಯಲಿಕ್ಕೆ ಏಳುವ ದಿನವನ್ನು ಎದುರುನೋಡಿರಿ; ಜನಾಂಗರಾಜ್ಯಗಳ ಮೇಲೆ ನನ್ನ ರೌದ್ರವನ್ನು, ಹೌದು, ನನ್ನ ಉಗ್ರಕೋಪವನ್ನೆಲ್ಲಾ ಹೊಯ್ದುಬಿಡುವದಕ್ಕಾಗಿ ಆ ಜನಾಂಗಗಳನ್ನು ಸೇರಿಸಿ ಆ ರಾಜ್ಯಗಳನ್ನು ಕೂಡಿಸಬೇಕೆಂದು ತೀರ್ಮಾನಿಸಿಕೊಂಡಿದ್ದೇನೆ; ಲೋಕವೆಲ್ಲಾ ನನ್ನ ರೋಷಾಗ್ನಿಗೆ ತುತ್ತಾಗುವದಷ್ಟೆ.