ಚೆಫನ್ಯ 2:3 - ಕನ್ನಡ ಸತ್ಯವೇದವು J.V. (BSI)3 ಯೆಹೋವನ ನಿಯಮವನ್ನು ಕೈಕೊಂಡ ಲೋಕದ ದೀನರೇ, ನೀವೆಲ್ಲರೂ ಯೆಹೋವನನ್ನು ಆಶ್ರಯಿಸಿರಿ, ಸದ್ಧರ್ಮವನ್ನು ಅಭ್ಯಾಸಿಸಿರಿ, ದೈನ್ಯವನ್ನು ಹೊಂದಿಕೊಳ್ಳಿರಿ; ಯೆಹೋವನ ಸಿಟ್ಟಿನ ದಿನದಲ್ಲಿ ಒಂದು ವೇಳೆ ಮರೆಯಾಗುವಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಯೆಹೋವನ ನಿಯಮವನ್ನು ಕೈಕೊಂಡು ನಡೆಯುವ ಲೋಕದ ದೀನರೇ, ನೀವೆಲ್ಲರೂ ಯೆಹೋವನ ನೀತಿಯನ್ನು ಅನುಸರಿಸಿರಿ, ಧರ್ಮವನ್ನು ಅಭ್ಯಾಸಿಸಿರಿ, ನಮ್ರತೆಯನ್ನು ಹೊಂದಿಕೊಳ್ಳಿರಿ; ಬಹುಶಃ ಯೆಹೋವನ ಸಿಟ್ಟಿನ ದಿನದಲ್ಲಿ ನೀವು ಮರೆಯಾಗುವಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ನಾಡಿನ ದೀನ ಜನರೇ, ಸರ್ವೇಶ್ವರನ ಆಜ್ಞೆಯನ್ನು ಕೈಗೊಂಡು ನಡೆಯುವವರೇ, ನೀವೆಲ್ಲರೂ ಸ್ವಾಮಿಯ ಕಡೆಗೆ ತಿರುಗಿಕೊಳ್ಳಿ. ಒಳ್ಳೆಯದನ್ನು ಮಾಡಿರಿ, ಸ್ವಾಮಿಯ ಮುಂದೆ ನಿಮ್ಮನ್ನೇ ತಗ್ಗಿಸಿಕೊಳ್ಳಿ; ಸರ್ವೇಶ್ವರಸ್ವಾಮಿಯ ಆ ಸಿಟ್ಟಿನ ದಿನದಂದು ಬಹುಶಃ ನೀವು ಸುರಕ್ಷಿತರಾಗುವಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ದೀನರೇ, ಯೆಹೋವನ ಬಳಿಗೆ ಬನ್ನಿರಿ. ಆತನ ನಿಯಮಗಳಿಗೆ ಒಳಗಾಗಿರಿ, ಒಳ್ಳೇದನ್ನು ಮಾಡಿರಿ, ದೀನರಾಗಿರಿ. ಯೆಹೋವನು ತನ್ನ ಕೋಪಾಗ್ನಿಯನ್ನು ಪ್ರದರ್ಶಿಸುವ ದಿವಸದಲ್ಲಿ ನೀವು ರಕ್ಷಿಸಲ್ಪಡಬಹುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ದೇಶದ ದೀನರೇ, ಅವರ ಆಜ್ಞೆಗಳನ್ನು ಕೈಕೊಂಡು ನಡೆಯುವವರೆಲ್ಲರೇ ಯೆಹೋವ ದೇವರನ್ನು ಹುಡುಕಿರಿ. ನೀತಿಯನ್ನು ಹುಡುಕಿರಿ, ವಿನಯವನ್ನು ಹುಡುಕಿರಿ. ಒಂದು ವೇಳೆ ಯೆಹೋವ ದೇವರ ಕೋಪದ ದಿವಸದಲ್ಲಿ ಆಶ್ರಯ ಹೊಂದುವಿರಿ. ಅಧ್ಯಾಯವನ್ನು ನೋಡಿ |