Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಚೆಫನ್ಯ 2:4 - ಕನ್ನಡ ಸತ್ಯವೇದವು J.V. (BSI)

4 ಗಾಜ ನಿರ್ಜನವಾಗುವದು, ಅಷ್ಕೆಲೋನ್ ಹಾಳಾಗುವದು, ಅಷ್ಡೋದನ್ನು ಮಧ್ಯಾಹ್ನದಲ್ಲಿ ಓಡಿಸಿಬಿಡುವರು, ಎಕ್ರೋನ್ ನಿರ್ಮೂಲವಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಗಾಜ ಪಟ್ಟಣ ನಿರ್ಜನವಾಗುವುದು, ಅಷ್ಕೆಲೋನ್ ಹಾಳಾಗುವುದು, ಅಷ್ಡೋದ್ ನಿವಾಸಿಗಳನ್ನು ನಡು ಮಧ್ಯಾಹ್ನದಲ್ಲಿ ಆಕ್ರಮಿಸಿ ಓಡಿಸಿಬಿಡುವರು, ಎಕ್ರೋನ್ ನಗರ ನಿರ್ಮೂಲವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಗಾಜಾಪಟ್ಟಣ ನಿರ್ಜನವಾಗುವುದು, ಅಷ್ಕೆಲೋನ್ ಹಾಳಾಗುವುದು; ಅಷ್ಡೋದಿನ ನಿವಾಸಿಗಳನ್ನು ನಡುಮಧ್ಯಾಹ್ನದಲ್ಲೆ ಅಟ್ಟಿಸಿಬಿಡಲಾಗುವುದು; ಎಕ್ರೋನಿನ ಜನರನ್ನು ನಿರ್ಮೂಲಮಾಡಲಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಗಾಜದಲ್ಲಿ ಯಾರೂ ಉಳಿಯರು. ಅಷ್ಕೆಲೋನ್ ನಾಶವಾಗುವದು. ಮಧ್ಯಾಹ್ನದೊಳಗಾಗಿ ಅಷ್ಡೋದನ್ನು ಬಿಟ್ಟು ಹೋಗುವಂತೆ ಬಲವಂತ ಮಾಡಲಾಗುವುದು. ಎಕ್ರೋನ್ ನಿರ್ಜನವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಗಾಜವು ಕೈಬಿಡಲಾಗುವುದು; ಅಷ್ಕೆಲೋನ್ ಹಾಳಾಗುವುದು; ಅಷ್ಡೋದನ್ನು ಮಧ್ಯಾಹ್ನದಲ್ಲಿ ಖಾಲಿಮಾಡುವರು, ಎಕ್ರೋನ್ ಕಿತ್ತೆಸೆಯಲಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಚೆಫನ್ಯ 2:4
9 ತಿಳಿವುಗಳ ಹೋಲಿಕೆ  

ಅವನ ಎಲ್ಲಾ ಜನರು, ಬಗೆಬಗೆಯ ಎಲ್ಲಾ ವಿದೇಶೀಯರು, ಊಚ್ ದೇಶದ ಎಲ್ಲಾ ಅರಸರು, ಫಿಲಿಷ್ಟಿಯ ದೇಶದ ಎಲ್ಲಾ ಅರಸರು, ಅಷ್ಕೆಲೋನ್,


ಅವರ ವಿಧವೆಯರು ನನ್ನ ಭಾಗಕ್ಕೆ ಸಮುದ್ರದ ಉಸುಬಿಗಿಂತ ಹೆಚ್ಚಾಗಿರುವರು; ಯುವಕರ ತಾಯಿಗಳ ಮೇಲೆ ಕೊಳ್ಳೆಹೊಡೆಯುವವನನ್ನು ಮಧ್ಯಾಹ್ನದಲ್ಲೇ ಬರಮಾಡುವೆನು; ಅವರ ಮೇಲೆ ಕಳವಳವನ್ನೂ ದಿಗಿಲನ್ನೂ ತಟ್ಟನೆ ಬೀಳಿಸುವೆನು.


[ಇವರು] - ಚೀಯೋನಿಗೆ ವಿರುದ್ಧವಾಗಿ ಸನ್ನದ್ಧರಾಗಿರಿ; ಏಳಿರಿ, ಮಧ್ಯಾಹ್ನಕ್ಕೆ ಅದರ ಮೇಲೆ ನುಗ್ಗುವ! ಅಯ್ಯೋ, ಇದೇನು! ನಮಗೆ ಹೊತ್ತು ತಿರುಗಿತಲ್ಲಾ, ಸಂಜೆಯ ನೆರಳುಗಳು ಉದ್ದವಾದವು.


ಕತ್ತಲೆಯಲ್ಲಿ ಸಂಚರಿಸುವ ವಿಪತ್ತಿಗೂ ಹಾನಿಕರವಾದ ಮಧ್ಯಾಹ್ನದ ಕೇಡಿಗೂ ಅಂಜ ಕಾರಣವಿಲ್ಲ.


ಎಲೈ, ಎಲ್ಲಾ ಫಿಲಿಷ್ಟಿಯರೇ, ನಿಮ್ಮನ್ನು ಹೊಡೆದ ಕೋಲು ಮುರಿದುಹೋಯಿತೆಂದು ಉಲ್ಲಾಸಗೊಳ್ಳದಿರಿ; ಹಾವಿನ ಬೀಜದಿಂದ ಮಹಾ ನಾಗವುಂಟಾಗುವದು, ಆ ಬೀಜದ ಸಂತತಿಯು ಹಾರುವ ಅಗ್ನಿಮಯಸರ್ಪವೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು