Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಚೆಫನ್ಯ 2:5 - ಕನ್ನಡ ಸತ್ಯವೇದವು J.V. (BSI)

5 ಅಯ್ಯೋ, ಕರಾವಳಿಯಲ್ಲಿ ವಾಸಿಸುವ ಕೆರೇತ್ಯ ಜನಾಂಗವೇ, ನಿನ್ನ ಗತಿಯನ್ನು ಏನು ಹೇಳಲಿ! ಕಾನಾನೇ, ಫಿಲಿಷ್ಟಿಯ ದೇಶವೇ, ಯೆಹೋವನ ನುಡಿಯು ನಿನಗೆ ವಿರುದ್ಧವಾಗಿದೆ; ನಿನ್ನಲ್ಲಿ ನಿವಾಸಿಯೇ ನಿಲ್ಲದಂತೆ ನಿನ್ನನ್ನು ನಾಶಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಅಯ್ಯೋ, ಕರಾವಳಿಯಲ್ಲಿ ವಾಸಿಸುವ ಕೆರೇತ್ಯ ಜನಾಂಗವೇ, ನಿನ್ನ ಗತಿಯನ್ನು ಏನು ಹೇಳಲಿ! ಕಾನಾನೇ, ಫಿಲಿಷ್ಟಿಯ ದೇಶವೇ, ಯೆಹೋವನ ನುಡಿಯು ನಿನಗೆ ವಿರುದ್ಧವಾಗಿದೆ; ನಿನ್ನಲ್ಲಿ ವಾಸಿಸುವ ಜನರೇ ನಿಲ್ಲದಂತೆ ನಿನ್ನನ್ನು ನಾಶಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಕರಾವಳಿಯಲ್ಲಿ ವಾಸಿಸುವ ಕೆರೇತ್ಯ ಜನರೇ, ನಿಮಗೆ ಧಿಕ್ಕಾರ! ಫಿಲಿಷ್ಟಿಯರ ನಾಡಾದ ಕಾನಾನೇ, ನಿನಗೆ ಧಿಕ್ಕಾರ! ಸರ್ವೇಶ್ವರನ ನ್ಯಾಯತೀರ್ಪು ನಿನಗೆ ವಿರುದ್ಧವಾಗಿದೆ; ನಿನ್ನಲ್ಲಿ ಯಾರೂ ಉಳಿಯದಂತೆ ಅಳಿಸಿಬಿಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಫಿಲಿಷ್ಟಿಯ ಜನರೇ, ಕರಾವಳಿ ಪ್ರದೇಶದಲ್ಲಿ ವಾಸಿಸುವ ಜನರೇ, ಯೆಹೋವನಿಂದ ಬಂದ ಸಂದೇಶ ನಿಮಗಾಗಿಯೇ. ಕಾನಾನ್ ದೇಶವೇ, ಪಾಲೆಸ್ತೀನ್ ದೇಶವೇ, ನೀವು ನಾಶಗೊಳ್ಳುವಿರಿ. ನಿಮ್ಮಲ್ಲಿ ಯಾರೂ ವಾಸಿಸರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಅಯ್ಯೋ, ಕರಾವಳಿಯಲ್ಲಿ ವಾಸಿಸುವ ಕೆರೇತ್ಯ ಜನಾಂಗವೇ, ನಿನ್ನ ಗತಿಯನ್ನು ಏನು ಹೇಳಲಿ! ಕಾನಾನೇ, ಫಿಲಿಷ್ಟಿಯ ದೇಶವೇ, ಯೆಹೋವ ದೇವರ ವಾಕ್ಯವು ನಿನಗೆ ವಿರುದ್ಧವಾಗಿದೆ, “ನಿನ್ನಲ್ಲಿ ನಿವಾಸಿಯೇ ನಿಲ್ಲದಂತೆ ನಿನ್ನನ್ನು ನಾಶಮಾಡುವೆನು,” ಎಂದು ಅವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಚೆಫನ್ಯ 2:5
14 ತಿಳಿವುಗಳ ಹೋಲಿಕೆ  

ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಇಗೋ, ನಾನು ಫಿಲಿಷ್ಟಿಯರ ಮೇಲೆ ಕೈಯೆತ್ತುವೆನು; ಕೆರೇತಿಯರನ್ನು ಕತ್ತರಿಸಿಬಿಟ್ಟು ಸಮುದ್ರತೀರದಲ್ಲಿನ ಜನಶೇಷವನ್ನು ನಿಶ್ಶೇಷಮಾಡುವೆನು;


ಖಡ್ಗವು ವಿಶ್ರಾಂತಿಗೊಳ್ಳುವದು ಹೇಗೆ? ಅಷ್ಕೆಲೋನಿನ ಮತ್ತು ಕರಾವಳಿಯ ವಿಷಯವಾಗಿ ಯೆಹೋವನು ಅದಕ್ಕೆ ಅಪ್ಪಣೆಕೊಟ್ಟನಲ್ಲಾ; ಅಲ್ಲಿಗೇ ಅದನ್ನು ನೇವಿುಸಿದ್ದಾನೆ.


ಇಸ್ರಾಯೇಲ್ಯರೇ, ಯೆಹೋವನು ನಿಮಗೆ ವಿರುದ್ಧವಾಗಿ, ಅಂದರೆ ತಾನು ಐಗುಪ್ತದೇಶದೊಳಗಿಂದ ಪಾರುಮಾಡಿದ ಪೂರ್ಣಕುಲಕ್ಕೆ ವಿರುದ್ಧವಾಗಿ ನುಡಿದಿರುವ ಈ ಮಾತನ್ನು ಕೇಳಿರಿ -


ಇವನು ತಮ್ಮನ್ನೇ ಕುರಿತು ಈ ಸಾಮ್ಯವನ್ನು ಹೇಳಿದನು ಎಂದು ಅವರು ತಿಳುಕೊಂಡು ಆತನನ್ನು ಹಿಡಿಯುವದಕ್ಕೆ ಸಂದರ್ಭನೋಡುತ್ತಿದ್ದರು. ಆದರೆ ಜನರಿಗೆ ಭಯಪಟ್ಟು ಆತನನ್ನು ಬಿಟ್ಟುಹೋದರು.


ಆದರೆ ನನ್ನ ಸೇವಕರಾದ ಪ್ರವಾದಿಗಳಿಗೆ ಆಜ್ಞಾಪಿಸಿದ ನನ್ನ ವಾಕ್ಯಗಳೂ ವಿಧಿಗಳೂ ನಿಮ್ಮ ಪಿತೃಗಳನ್ನು ಹಿಂದಟ್ಟಿ ಹಿಡಿದು ನಿತ್ಯವಾಗಿವೆಯಷ್ಟೆ; ಅವರು ತಿರುಗಿಕೊಂಡು - ಸೇನಾಧೀಶ್ವರ ಯೆಹೋವನು ನಮ್ಮ ದುರ್ಮಾರ್ಗ ದುಷ್ಕೃತ್ಯಗಳಿಗೆ ತಕ್ಕ ಹಾಗೆ ನಮಗೆ ಏನು ಮಾಡಬೇಕೆಂದು ಸಂಕಲ್ಪಿಸಿದನೋ ಅದನ್ನು ನಮಗೆ ಮಾಡಿದ್ದಾನಲ್ಲಾ ಅಂದುಕೊಂಡರು.


[ಯೆಹೋವನು ಇಂತೆನ್ನುತ್ತಾನೆ - ] ನಾನು ಜನಾಂಗಗಳನ್ನು ಧ್ವಂಸಪಡಿಸಿದ್ದೇನೆ, ಅವುಗಳ ಕೊತ್ತಲಗಳು ಪಾಳುಬಿದ್ದವು, ಅವುಗಳ ಬೀದಿಗಳನ್ನು ಹಾಳುಮಾಡಿದ್ದೇನೆ, ಯಾರೂ ಹಾದುಹೋಗರು; ಅವುಗಳ ಪಟ್ಟಣಗಳು ನಾಶವಾದವು, ಜನರೇ ಇಲ್ಲ, ನಿರ್ನಿವಾಸವಾಗಿವೆ.


ಇಸ್ರಾಯೇಲ್ ವಂಶದವರೇ, ನಾನು ನಿಮ್ಮ ವಿಷಯದಲ್ಲಿ ಶೋಕಗೀತವಾಗಿ ಎತ್ತುವ ಈ ಮಾತನ್ನು ಕೇಳಿರಿ -


[ನನ್ನ ಜನರಲ್ಲಿ] ಬಡತನದ ಹಿರಿಯ ಮಕ್ಕಳಿಗೂ ಪೋಷಣೆಯಾಗುವದು, ದಿಕ್ಕಿಲ್ಲದವರೂ ನಿರ್ಭಯವಾಗಿ ಮಲಗಿಕೊಳ್ಳುವರು; ನಿಮ್ಮ ಸಂತಾನವನ್ನೋ ಕ್ಷಾಮದಿಂದ ಸಾಯಿಸುವೆನು, ನಿಮ್ಮಲ್ಲಿ ಉಳಿದವರನ್ನು [ಆ ಸರ್ಪವೇ] ಕೊಲ್ಲುವದು.


ಐದು ಮಂದಿ ಫಿಲಿಷ್ಟಿಯ ಪ್ರಭುಗಳು, ಸರ್ವ ಕಾನಾನ್ಯರು, ಚೀದೋನ್ಯರು, ಲೆಬನೋನ್ ಪರ್ವತಾವಳಿಯಲ್ಲಿ ಬಾಳ್‍ಹೆರ್ಮೊನ್ ಬೆಟ್ಟದಿಂದ ಹಮಾತಿನ ದಾರಿಯವರೆಗೆ ವಾಸವಾಗಿರುವ ಹಿವ್ವಿಯರು ಇವರೇ.


ನಾವು ಕೆರೇತ್ಯರೂ ಯೆಹೂದ್ಯರೂ ಕಾಲೇಬ್ಯರೂ ಇರುವ ದಕ್ಷಿಣಪ್ರಾಂತವನ್ನು ಸೂರೆಮಾಡಿ ಚಿಕ್ಲಗ್ ಊರನ್ನು ಸುಟ್ಟುಬಿಟ್ಟು ಬಂದೆವು ಎಂದು ಉತ್ತರಕೊಟ್ಟನು.


ಎಲೈ, ಎಲ್ಲಾ ಫಿಲಿಷ್ಟಿಯರೇ, ನಿಮ್ಮನ್ನು ಹೊಡೆದ ಕೋಲು ಮುರಿದುಹೋಯಿತೆಂದು ಉಲ್ಲಾಸಗೊಳ್ಳದಿರಿ; ಹಾವಿನ ಬೀಜದಿಂದ ಮಹಾ ನಾಗವುಂಟಾಗುವದು, ಆ ಬೀಜದ ಸಂತತಿಯು ಹಾರುವ ಅಗ್ನಿಮಯಸರ್ಪವೇ.


ಒರಳ ಕೇರಿಯವರೇ, ಕಿರಚಿರಿ, ಎಲ್ಲಾ ಸಾಹುಕಾರರು ಹಾಳಾದರು, ಹೊರೆಬೆಳ್ಳಿಯವರೆಲ್ಲರು ನಾಶವಾದರು.


ಅವು ಯಾವವಂದರೆ - ಐಗುಪ್ತದ ಈಚೆಯಲ್ಲಿರುವ ಶೀಹೋರ್ ಹಳ್ಳ ಮೊದಲುಗೊಂಡು ಕಾನಾನ್ಯರಿಗೆ ಸೇರಿದ್ದ ಉತ್ತರ ಮೇರೆಯಾದ ಎಕ್ರೋನಿನವರೆಗಿದ್ದು ಗಾಜಾ, ಅಷ್ಡೋದ್, ಅಷ್ಕೆಲೋನ್, ಗತೂರು, ಎಕ್ರೋನ್ ಎಂಬ ಪಟ್ಟಣಗಳ ಐದು ಮಂದಿ ಫಿಲಿಷ್ಟಿಯ ಪ್ರಭುಗಳ ಸ್ವಾಧೀನದಲ್ಲಿದ್ದಂಥ ಫಿಲಿಷ್ಟಿಯ ಪ್ರಾಂತ್ಯವು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು