Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಚೆಫನ್ಯ 3:10 - ಕನ್ನಡ ಸತ್ಯವೇದವು J.V. (BSI)

10 ಚದರಿಹೋಗಿರುವ ನನ್ನ ಜನರು, ನನ್ನ ಭಕ್ತರು, ಕೂಷಿನ ನದಿಗಳ ಆಚೆಯಿಂದಲೂ ನನಗೆ ಕಾಣಿಕೆಯನ್ನು ತಂದು ಸಮರ್ಪಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಚದರಿಹೋಗಿರುವ ನನ್ನ ಜನರು, ನನ್ನ ಭಕ್ತರು, ಕೂಷಿನ ನದಿಗಳ ಆಚೆಯಿಂದಲೂ ನನಗೆ ಕಾಣಿಕೆಯನ್ನು ತಂದು ಸಮರ್ಪಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಚದರಿಹೋಗಿರುವ ನನ್ನ ಜನರು, ನನ್ನ ಭಕ್ತಾದಿಗಳು, ಸುಡಾನಿನ ನದಿಗಳ ಆಚೆಯಿಂದಲೂ ನನಗೆ ಕಾಣಿಕೆಯನ್ನು ತಂದೊಪ್ಪಿಸುವರು.ಚದರಿಹೋಗಿರುವ ನನ್ನ ಜನರು, ನನ್ನ ಭಕ್ತಾದಿಗಳು, ಸುಡಾನಿನ ನದಿಗಳ ಆಚೆಯಿಂದಲೂ ನನಗೆ ಕಾಣಿಕೆಯನ್ನು ತಂದೊಪ್ಪಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಇಥಿಯೋಪ್ಯದಲ್ಲಿ ನದಿಯ ಆಚೆ ದಡದವರೆಗೂ ಜನರು ಬರುವರು. ನನ್ನಿಂದ ಚದರಿಹೋಗಿದ್ದ ಜನರು ನನ್ನ ಬಳಿಗೆ ಬರುವರು. ನನ್ನನ್ನು ಆರಾಧಿಸಲು ಬರುವವರು ನನಗೆ ಕಾಣಿಕೆಗಳನ್ನು ತರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಕೂಷಿನ ನದಿಗಳ ಆಚೆಯಿಂದ ನನ್ನ ಭಕ್ತರೂ ಚದರಿಹೋದ ನನ್ನ ಜನರೂ ನನಗೆ ಕಾಣಿಕೆಗಳನ್ನು ತರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಚೆಫನ್ಯ 3:10
17 ತಿಳಿವುಗಳ ಹೋಲಿಕೆ  

ಆ ದಿನದಲ್ಲಿ ಕರ್ತನು ತನ್ನ ಜನಶೇಷವನ್ನು ಬಿಡಿಸಿಕೊಳ್ಳುವದಕ್ಕೆ ಎರಡನೆಯ ಸಾರಿ ಕೈಹಾಕಿ ಅಶ್ಶೂರ, ಐಗುಪ್ತ, ಪತ್ರೋಸ್, ಕೂಷ್, ಏಲಾಮ್, ಶಿನಾರ್, ಹಮಾಥ್, ಸಮುದ್ರದ ಕರಾವಳಿ, ಈ ಸ್ಥಳಗಳಲ್ಲಿ ಉಳಿದವರನ್ನು ಬರಮಾಡಿಕೊಳ್ಳುವನು.


ಐಗುಪ್ತ ದೇಶದಿಂದ ರಾಯಭಾರಿಗಳು ಬರುವರು; ಕೂಷ್ ದೇಶದವರ ಕೈಗಳು ದೇವರಿಗೆ ಕಾಣಿಕೆಗಳನ್ನು ನೀಡಲಿಕ್ಕೆ ಅವಸರ ಪಡುವವು.


ಓಹೋ, ಕೂಷಿನ ನದಿಗಳ ಆಚೆಯಲ್ಲಿರುವ ಸೀಮೆ, ರೆಕ್ಕೆಗಳು ಪಟಪಟನೆ ಆಡುವ ನಾಡು, ರಾಯಭಾರಿಗಳನ್ನು ನೀರಿನ ಮೇಲೆ ಬೆಂಡಿನ ದೋಣಿಗಳಲ್ಲಿ ನದೀಮಾರ್ಗವಾಗಿ ಕಳುಹಿಸುವ ದೇಶ, ಹೌದು.


ಯೇಸು ಕ್ರಿಸ್ತನ ಅಪೊಸ್ತಲನಾದ ಪೇತ್ರನು ಪೊಂತ ಗಲಾತ್ಯ ಕಪ್ಪದೋಕ್ಯ ಆಸ್ಯ ಬಿಥೂನ್ಯ ಎಂಬ ಸೀಮೆಗಳಲ್ಲಿ ಚದರಿರುವಂಥ ಪ್ರವಾಸಿಗಳಾದ ದೇವಜನರಿಗೆ ಅಂದರೆ -


ಕೆಲವು ವರುಷಗಳಾದ ಮೇಲೆ ನಾನು ನನ್ನ ಸ್ವದೇಶದವರಿಗೆ ಧರ್ಮದ್ರವ್ಯಗಳನ್ನು ತರುವದಕ್ಕೂ ಕಾಣಿಕೆಗಳನ್ನು ಒಪ್ಪಿಸುವದಕ್ಕೂ ಬಂದೆನು.


ಅವನು ಎದ್ದು ಹೊರಟುಹೋದನು; ಹೋಗುತ್ತಿರುವಾಗ ಐಥಿಯೋಪ್ಯ ದೇಶದ ಒಬ್ಬ ಮನುಷ್ಯನನ್ನು ಕಂಡನು. ಅವನು ಕಂಚುಕಿಯೂ ಐಥಿಯೋಪ್ಯದವರ ರಾಣಿಯಾಗಿದ್ದ ಕಂದಾಕೆಯ ಕೈಕೆಳಗೆ ದೊಡ್ಡ ಅಧಿಕಾರಿಯೂ ಆಕೆಯ ಎಲ್ಲಾ ಖಜಾನೆಯ ಮೇಲ್ವಿಚಾರಕನೂ ಆಗಿದ್ದನು.


ಸೂರ್ಯನು ಮೂಡುವ ದಿಕ್ಕಿನಿಂದ ಮುಣುಗುವ ದಿಕ್ಕಿನವರೆಗೂ ನನ್ನ ನಾಮವು ಅನ್ಯಜನಾಂಗಗಳಲ್ಲಿ ಘನವಾಗಿದೆ; ಒಂದೊಂದು ಸ್ಥಳದಲ್ಲಿಯೂ ನನ್ನ ನಾಮಕ್ಕೆ ಧೂಪವನ್ನೂ ಶುದ್ಧನೈವೇದ್ಯವನ್ನೂ ಅರ್ಪಿಸುತ್ತಾರೆ; ಹೌದು, ಅನ್ಯಜನಾಂಗಗಳಲ್ಲಿಯೇ ನನ್ನ ನಾಮವು ಘನವಾಗಿದೆ; ಇದು ಸೇನಾಧೀಶ್ವರ ಯೆಹೋವನ ನುಡಿ.


ಆ ಕಾಲದಲ್ಲಿ ಉನ್ನತರಾದ ನುಣುಪಿನ ಮೈಯವರೂ ಸರ್ವದಾ ಭಯಂಕರರೂ ಮಹಾಬಲದಿಂದ [ಶತ್ರುಗಳನ್ನು] ತುಳಿಯುವವರೂ ನದಿಗಳಿಂದ ವಿಂಗಡವಾಗಿರುವ ದೇಶದ ನಿವಾಸಿಗಳೂ ಆದ ಜನಾಂಗದವರು ಸೇನಾಧೀಶ್ವರನಾದ ಯೆಹೋವನ ನಾಮಮಹತ್ತಿರುವ ಚೀಯೋನ್ ಪರ್ವತಕ್ಕೆ ಆತನಿಗೋಸ್ಕರ ಕಾಣಿಕೆಯನ್ನು ತರುವರು.


ಅದಕ್ಕೆ ಯೆಹೂದ್ಯರು - ಇವನು ನಮಗೆ ಸಿಕ್ಕದ ಹಾಗೆ ಎಲ್ಲಿ ಹೋಗಬೇಕೆಂದಿರುತ್ತಾನೆ? ಗ್ರೀಕರೊಳಗೆ ಚದರಿಕೊಂಡಿರುವ ನಮ್ಮವರ ಬಳಿಗೆ ಹೋಗಿ ಆ ಗ್ರೀಕರಿಗೆ ಉಪದೇಶ ಮಾಡಬೇಕೆಂದಿರುತ್ತಾನೋ?


ಅವನು ಜನಾಂಗಗಳಿಗೆ ಧ್ವಜವನ್ನೆತ್ತಿ ಇಸ್ರಾಯೇಲ್ಯರಲ್ಲಿ ಸೆರೆಗೆ ಒಯ್ಯಲ್ಪಟ್ಟವರನ್ನೂ ಯೆಹೂದದಿಂದ ಚದರಿದವರನ್ನೂ ಭೂವಿುಯ ಚತುರ್ದಿಕ್ಕುಗಳಿಂದಲೂ ಕೂಡಿಸಿಕೊಳ್ಳುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು