ಚೆಫನ್ಯ 3:11 - ಕನ್ನಡ ಸತ್ಯವೇದವು J.V. (BSI)11 ನೀನು ನನಗೆ ಮಾಡಿದ ನಾನಾ ದುಷ್ಕೃತ್ಯಗಳು ಮುಂದಿನ ಆ ಕಾಲದಲ್ಲಿ ನಿನಗೆ ನಾಚಿಕೆಗೀಡಾಗವು; ಆಗ ಅತಿಗರ್ವದಿಂದ ಮೆರೆಯುವವರನ್ನು ನಿನ್ನೊಳಗಿಂದ ತೊಲಗಿಸಿಬಿಡುವೆನು; ಅಂದಿನಿಂದ ನನ್ನ ಪವಿತ್ರಪರ್ವತದಲ್ಲಿ ಗರ್ವಪಡದೆ ಇರುವಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 “ನೀನು ನನಗೆ ಮಾಡಿದ ನಾನಾ ದುಷ್ಕೃತ್ಯಗಳು ಮುಂದಿನ ಆ ಕಾಲದಲ್ಲಿ ನಿನಗೆ ನಾಚಿಕೆಗೆ ಈಡಾಗುವವು; ಆಗ ತಮ್ಮ ಅತಿಗರ್ವದಿಂದ ಮೆರೆಯುವವರನ್ನು ನಿನ್ನೊಳಗಿಂದ ತೊಲಗಿಸಿಬಿಡುವೆನು; ಅಂದಿನಿಂದ ನನ್ನ ಪವಿತ್ರಪರ್ವತದಲ್ಲಿ ಗರ್ವಪಡದೆ ಇರುವಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ನೀನು ನನಗೆ ಎದುರಾಗಿ ದಂಗೆಯೆದ್ದು ಮಾಡಿದ ನಾನಾ ದುಷ್ಕೃತ್ಯಗಳಿಗಾಗಿ ಆ ದಿನದಂದು ನೀನು ನಾಚಿಕೆಪಡುವ ಅವಶ್ಯಕತೆ ಇರುವುದಿಲ್ಲ. ಏಕೆಂದರೆ ಅತಿ ಗರ್ವದಿಂದ ಮೆರೆಯುವವರನ್ನು ನಿನ್ನ ಮಧ್ಯೆಯಿಂದ ತೊಲಗಿಸಿಬಿಡುವೆನು. ಅಂದಿನಿಂದ ನನ್ನ ಪವಿತ್ರ ಪರ್ವತದ ಮೇಲೆ ನೀನು ಗರ್ವಪಡದೆ ಬಾಳುವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 “ಆಗ ಜೆರುಸಲೇಮೇ, ನಿನ್ನ ಜನರು ನನಗೆ ವಿರುದ್ಧವಾಗಿ ಮಾಡಿದ ದುಷ್ಕೃತ್ಯಗಳಿಗಾಗಿ ನೀನು ನಾಚಿಕೆಪಡುವುದಿಲ್ಲ. ಯಾಕೆಂದರೆ ನಾನು ಆ ದುಷ್ಟ ಜನರನ್ನೆಲ್ಲಾ ನಿರ್ಮೂಲ ಮಾಡುವೆನು. ಅಹಂಕಾರ ತುಂಬಿದ ಜನರನ್ನು ನಾನು ತೆಗೆದುಬಿಡುವೆನು. ನನ್ನ ಪವಿತ್ರ ಪರ್ವತದಲ್ಲಿ ಗರ್ವವುಳ್ಳವರು ಯಾರೂ ಇರುವದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಆ ದಿವಸದಲ್ಲಿ ನೀನು ನನಗೆ ವಿರೋಧವಾಗಿ ಮಾಡಿದ ದುಷ್ಕೃತ್ಯಗಳಿಗಾಗಿ ನಾಚಿಕೆಗೆ ಗುರಿಯಾಗುವುದಿಲ್ಲ; ಏಕೆಂದರೆ ಆಗ ಗರ್ವದಿಂದ ಹೊಗಳಿಕೊಳ್ಳುವವರನ್ನು ನಿನ್ನ ಮಧ್ಯದೊಳಗಿಂದ ತೆಗೆದುಹಾಕುವೆನು. ನನ್ನ ಪರಿಶುದ್ಧ ಪರ್ವತದಲ್ಲಿ ಇನ್ನು ಮೇಲೆ ನೀನು ಗರ್ವಪಡದೇ ಬಾಳುವೆ. ಅಧ್ಯಾಯವನ್ನು ನೋಡಿ |