Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಚೆಫನ್ಯ 3:12 - ಕನ್ನಡ ಸತ್ಯವೇದವು J.V. (BSI)

12 ದೀನದರಿದ್ರಜನವನ್ನು ನಿನ್ನಲ್ಲಿ ಉಳಿಸುವೆನು; ಅವರು ಯೆಹೋವನ ನಾಮವನ್ನು ಆಶ್ರಯಿಸಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ದೀನದರಿದ್ರ ಜನರನ್ನು ನಿನ್ನಲ್ಲಿ ಉಳಿಸುವೆನು; ಅವರು ಯೆಹೋವನ ನಾಮವನ್ನು ಆಶ್ರಯಿಸಿಕೊಳ್ಳುವರು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ದೀನರೂ ನಮ್ರರೂ ಆದ ಜನರನ್ನು ನಿನ್ನಲ್ಲಿ ಉಳಿಸುವೆನು. ಅವರು ಪ್ರಭುವಿನ ನಾಮದಲ್ಲಿ ಭಯಭಕ್ತಿಯಿಂದಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ನನ್ನ ಪಟ್ಟಣದೊಳಗೆ ಬರೇ ದೀನದರಿದ್ರರೇ ವಾಸಮಾಡುವರು. ಅವರು ಯೆಹೋವನ ಹೆಸರಿನಲ್ಲಿ ಭರವಸೆ ಇಡುವವರಾಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಆದರೆ ನಿನ್ನ ಮಧ್ಯದಲ್ಲಿ ಸೌಮ್ಯರನ್ನೂ ದೀನರನ್ನೂ ಉಳಿಸುವೆನು. ಇವರು ಯೆಹೋವ ದೇವರ ಹೆಸರಿನಲ್ಲಿ ನಂಬಿಕೆ ಇಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಚೆಫನ್ಯ 3:12
24 ತಿಳಿವುಗಳ ಹೋಲಿಕೆ  

ಹೀಗಿರಲು ಪರಜನಾಂಗದ ರಾಯಭಾರಿಗಳಿಗೆ ಏನುತ್ತರ ಕೊಡಬೇಕಂದರೆ ಯೆಹೋವನು ಚೀಯೋನನ್ನು ಸ್ಥಾಪಿಸಿದ್ದಾನೆ, ಆತನ ಜನರಲ್ಲಿನ ದೀನದರಿದ್ರರು ಅದನ್ನೇ ಆಶ್ರಯಿಸಿಕೊಳ್ಳುವರು ಎಂಬದೇ.


ಯೆಹೋವನು ಒಳ್ಳೆಯವನು; ಇಕ್ಕಟ್ಟಿನ ದಿನದಲ್ಲಿ ಆಶ್ರಯದುರ್ಗವಾಗಿದ್ದಾನೆ; ತನ್ನ ಮರೆಹೊಕ್ಕವರನ್ನು ಬಲ್ಲನು.


ಆತ್ಮದಲ್ಲಿ ಬಡವರಾಗಿರುವವರು ಧನ್ಯರು; ಪರಲೋಕರಾಜ್ಯವು ಅವರದು.


ನಿಮ್ಮೊಳಗೆ ಯಾವನು ಯೆಹೋವನಲ್ಲಿ ಭಯಭಕ್ತಿಯಿಟ್ಟು ಆತನ ಸೇವಕನ ಮಾತನ್ನು ಕೇಳುವನು? ಕತ್ತಲಲ್ಲಿ ನಡೆಯುತ್ತಾ ಬೆಳಕಿಲ್ಲದವನು ಯೆಹೋವನ ನಾಮದಲ್ಲಿ ಭರವಸವಿಟ್ಟು ತನ್ನ ದೇವರನ್ನು ಆಧಾರಮಾಡಿಕೊಳ್ಳಲಿ.


ನನ್ನ ಪ್ರಿಯ ಸಹೋದರರೇ, ಕೇಳಿರಿ, ದೇವರು ಲೌಕಿಕ ವಿಷಯದಲ್ಲಿ ಬಡವರಾಗಿರುವವರನ್ನು ಆದುಕೊಂಡು ಅವರು ನಂಬಿಕೆಯಲ್ಲಿ ಐಶ್ವರ್ಯವಂತರಾಗಿಯೂ ತನ್ನನ್ನು ಪ್ರೀತಿಸುವವರಿಗೆ ತಾನು ವಾಗ್ದಾನಮಾಡಿದ ರಾಜ್ಯಕ್ಕೆ ಬಾಧ್ಯರಾಗಿಯೂ ಇರಬೇಕೆಂದು ನೇವಿುಸಲಿಲ್ಲವೋ?


ಆತನನ್ನು ಸತ್ತವರೊಳಗಿಂದ ಎಬ್ಬಿಸಿ ಆತನಿಗೆ ಪ್ರಭಾವವನ್ನು ಕೊಟ್ಟ ದೇವರಲ್ಲಿ ನೀವು ಆತನ ಮೂಲಕ ನಂಬಿಕೆಯಿಟ್ಟವರಾದಿರಷ್ಟೆ. ಹೀಗಿರಲಾಗಿ ನಿಮ್ಮ ನಂಬಿಕೆಯೂ ನಿರೀಕ್ಷೆಯೂ ದೇವರಲ್ಲಿಯೇ ನೆಲೆಗೊಂಡವೆ.


ಮತ್ತೊಂದು ಸ್ಥಳದಲ್ಲಿ ಯೆಶಾಯನು ಹೇಳುವದೇನಂದರೆ - ಇಷಯನ ಅಂಕುರದವನು ಅಂದರೆ ಜನಾಂಗಗಳನ್ನು ಆಳತಕ್ಕವನು ಬರುತ್ತಾನೆ; ಜನಾಂಗಗಳು ಆತನನ್ನು ನಿರೀಕ್ಷಿಸುತ್ತಿರುವರು.


ಅನ್ಯಜನರು ಈತನ ಹೆಸರನ್ನು ಕೇಳಿ ನಿರೀಕ್ಷೆಯಿಂದಿರುವರು.


ಆಗಲೇ ಮುರಿದುಹೋಯಿತು; ಇದರಿಂದ ಆ ದೀನವಾದ ಮಂದೆಯಲ್ಲಿ ನನ್ನನ್ನು ಲಕ್ಷಿಸುತ್ತಿದ್ದ ಕುರಿಗಳು ಇದು ಯೆಹೋವನ ನುಡಿ ಎಂದು ತಿಳುಕೊಂಡವು.


ಯೆಹೋವನು ಸಹಾಯಕನಾಗಿ ಅವರನ್ನು ತಪ್ಪಿಸಿಬಿಡುವನು; ಅವರು ಆತನ ಆಶ್ರಿತರಾದ್ದರಿಂದ ದುಷ್ಟರ ಕೈಯಿಂದ ತಪ್ಪಿಸಿ ರಕ್ಷಿಸುವನು.


[ನನ್ನ ಜನರಲ್ಲಿ] ಬಡತನದ ಹಿರಿಯ ಮಕ್ಕಳಿಗೂ ಪೋಷಣೆಯಾಗುವದು, ದಿಕ್ಕಿಲ್ಲದವರೂ ನಿರ್ಭಯವಾಗಿ ಮಲಗಿಕೊಳ್ಳುವರು; ನಿಮ್ಮ ಸಂತಾನವನ್ನೋ ಕ್ಷಾಮದಿಂದ ಸಾಯಿಸುವೆನು, ನಿಮ್ಮಲ್ಲಿ ಉಳಿದವರನ್ನು [ಆ ಸರ್ಪವೇ] ಕೊಲ್ಲುವದು.


ಆಗ ನಾನು ದೀನಾವಸ್ಥೆಯಲ್ಲಿದ್ದ ಆ ಕೊಯ್ಗುರಿಗಳ ಮಂದೆಯನ್ನು ಮೇಯಿಸಿದೆನು. ಎರಡು ಕೋಲುಗಳನ್ನು ತೆಗೆದುಕೊಂಡು ಒಂದಕ್ಕೆ ಕನಿಕರವೆಂತಲೂ ಇನ್ನೊಂದಕ್ಕೆ ಒಗ್ಗಟ್ಟೆಂತಲೂ ಹೆಸರಿಟ್ಟು ಅವುಗಳಿಂದ ಮಂದೆಯನ್ನು ಮೇಯಿಸಿದೆನು.


ಆದರೂ ನಮ್ಮ ದೇವರಾದ ಯೆಹೋವನು ಒಂದು ಕ್ಷಣ ನಮಗೆ ಪ್ರಸನ್ನನಾಗಿ ನಮ್ಮಲ್ಲಿ ಸ್ವಲ್ಪ ಜನರನ್ನು ರಕ್ಷಣೆಗಾಗಿ ಉಳಿಸಿ ತನ್ನ ಪರಿಶುದ್ಧಸ್ಥಳದಲ್ಲಿ ಮೊಳೆಯಂತೆ ನಮ್ಮನ್ನು ನೆಲೆಗೊಳಿಸಿ ನಮ್ಮ ಕಣ್ಣುಗಳನ್ನು ಕಳೆಗೊಳಿಸಿ ನಮ್ಮ ದಾಸತ್ವದಲ್ಲಿ ನಮಗೆ ಸ್ವಲ್ಪಮಟ್ಟಿಗೆ ಉಜ್ಜೀವವನ್ನು ಅನುಗ್ರಹಿಸಿದ್ದಾನೆ.


ಆಗ ದೇಶದಲ್ಲಿ ಹತ್ತನೆಯ ಒಂದು ಭಾಗ ಉಳಿದಿದ್ದರೂ ಅದೂ ಕೂಡಾ ನಾಶವಾಗುವದು; ಏಲಾ ಅಲ್ಲೋನ್ ಮರಗಳನ್ನೂ ಕಡಿದ ಮೇಲೆ ಅವುಗಳ ಬುಡವು ನಿಲ್ಲುವ ಹಾಗೆ ದೇವಕುಲವು ಮೋಟುಬುಡವಾಗಿ ನಿಲ್ಲುವದು ಅಂದನು.


ದೀನರು ಯೆಹೋವನಲ್ಲಿ ಹೆಚ್ಚುಹೆಚ್ಚಾಗಿ ಆನಂದಿಸುವರು, ಬಡವರು ಇಸ್ರಾಯೇಲ್ಯರ ಸದಮಲಸ್ವಾವಿುಯಲ್ಲಿ ಉಲ್ಲಾಸಿಸುವರು.


ಯಾವನು ಯೆಹೋವನಲ್ಲಿ ನಂಬಿಕೆಯಿಟ್ಟಿದ್ದಾನೋ ಯಾವನಿಗೆ ಯೆಹೋವನು ಭರವಸವಾಗಿದ್ದಾನೋ ಅವನು ಧನ್ಯನು.


ಆ ದಿನಗಳಲ್ಲಿ, ಆ ಕಾಲದಲ್ಲಿ ಇಸ್ರಾಯೇಲಿನ ಅಧರ್ಮವನ್ನು ಎಲ್ಲಿ ಹುಡುಕಿದರೂ ಇರುವದೇ ಇಲ್ಲ; ಯೆಹೂದದ ಪಾಪವನ್ನು ಎಲ್ಲಿ ತಡಕಿದರೂ ಸಿಕ್ಕುವದೇ ಇಲ್ಲ; ನಾನು ಉಳಿಸುವ ಜನಶೇಷವನ್ನು ಕ್ಷವಿುಸುವೆನಲ್ಲವೆ. ಇದು ಯೆಹೋವನ ನುಡಿ.


ಆದರೂ ನಾನು ಜನಶೇಷವನ್ನು ಉಳಿಸುವೆನು; ಹೇಗಂದರೆ ನೀವು ಅನ್ಯದೇಶಗಳಿಗೆ ಚದರಿಹೋಗುವಾಗ ನಿಮ್ಮಲ್ಲಿ ಕೆಲವರು ಆ ಜನಾಂಗಗಳ ಮಧ್ಯೆ ಕತ್ತಿಗೆ ತಪ್ಪಿಸಿಕೊಳ್ಳುವರು.


ಅವರ ಕತ್ತಿಯು ಅಶ್ಶೂರ ದೇಶವನ್ನು ತಿಂದುಬಿಡುವದು, ನಿಮ್ರೋದ್ ಸೀಮೆಯ ಪ್ರವೇಶಸ್ಥಾನಗಳು ಅವರ ಖಡ್ಗಕ್ಕೆ ತುತ್ತಾಗುವವು; ಅಶ್ಶೂರ್ಯರು ನಮ್ಮ ದೇಶದಲ್ಲಿ ನುಗ್ಗಿ ನಮ್ಮ ಪ್ರಾಂತವನ್ನು ತುಳಿದುಹಾಕುವಾಗ [ಆ ಸಮಾಧಾನಪ್ರದನು] ನಮ್ಮನ್ನು ಅವರ ಕೈಯೊಳಗಿಂದ ಉದ್ಧರಿಸುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು