Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಚೆಫನ್ಯ 3:15 - ಕನ್ನಡ ಸತ್ಯವೇದವು J.V. (BSI)

15 ನಿನಗೆ ವಿಧಿಸಿದ ದಂಡನೆಗಳನ್ನು ಯೆಹೋವನು ತಪ್ಪಿಸಿದ್ದಾನೆ, ನಿನ್ನ ಶತ್ರುವನ್ನು ತಳ್ಳಿಬಿಟ್ಟಿದ್ದಾನೆ; ಇಸ್ರಾಯೇಲಿನ ಅರಸನಾದ ಯೆಹೋವನು ನಿನ್ನ ಮಧ್ಯದಲ್ಲಿದ್ದಾನೆ; ಇನ್ನು ಕೇಡಿಗೆ ಅಂಜದಿರುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ನಿನಗೆ ವಿಧಿಸಿದ ದಂಡನೆಯನ್ನು ಯೆಹೋವನು ತಪ್ಪಿಸಿದ್ದಾನೆ, ನಿನ್ನ ಶತ್ರುವನ್ನು ತಳ್ಳಿಬಿಟ್ಟಿದ್ದಾನೆ; ಇಸ್ರಾಯೇಲಿನ ಅರಸನಾದ ಯೆಹೋವನು ನಿನ್ನ ಮಧ್ಯದಲ್ಲಿದ್ದಾನೆ; ಇನ್ನು ಕೇಡಿಗೆ ಅಂಜದಿರುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ತಪ್ಪಿಸಿಹನು ಸರ್ವೇಶ ನಿನಗೆ ವಿಧಿಸಿರುವ ದಂಡನೆಗಳನು ತಳ್ಳಿ ಹೊರಗಟ್ಟಿಹನು ನಿನ್ನ ಶತ್ರುಗಳನು ಇಸ್ರಯೇಲಿನ ರಾಜನಾದ ಸರ್ವೇಶ ಇಹನು ನಿನ್ನ ಮಧ್ಯೆ ನೀನಿರುವೆ ಇನ್ನೆಂದಿಗೂ ಕೇಡಿಗಂಜದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಯಾಕೆಂದರೆ ನಿನ್ನ ಯೆಹೋವನು ನಿನ್ನ ಶಿಕ್ಷೆಯನ್ನು ನಿಲ್ಲಿಸಿದ್ದಾನೆ. ನಿನ್ನ ವೈರಿಗಳ ಬಲವಾದ ಬುರುಜುಗಳನ್ನು ನಾಶಮಾಡಿದ್ದಾನೆ. ಇಸ್ರೇಲಿನ ರಾಜನೇ, ನಿನ್ನ ದೇವರು ನಿನ್ನೊಂದಿಗಿದ್ದಾನೆ. ನಿನಗೆ ಕೆಟ್ಟದ್ದು ಸಂಭವಿಸುತ್ತದೆಂದು ನೀನು ಚಿಂತಿಸದಿರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಯೆಹೋವ ದೇವರು ನಿನ್ನ ಶಿಕ್ಷೆಗಳನ್ನು ದೂರಮಾಡಿ ನಿನ್ನ ಶತ್ರುವನ್ನು ತೆಗೆದುಹಾಕಿದ್ದಾರೆ. ಇಸ್ರಾಯೇಲಿನ ಅರಸನಾದ ಯೆಹೋವ ದೇವರು ನಿನ್ನ ಮಧ್ಯದಲ್ಲಿ ಇದ್ದಾರೆ. ಇನ್ನು ಮೇಲೆ ನಿನಗೆ ಯಾವ ಕೇಡಿನ ಭಯವಿರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಚೆಫನ್ಯ 3:15
48 ತಿಳಿವುಗಳ ಹೋಲಿಕೆ  

ನಿನ್ನ ಕರ್ತನೂ ತನ್ನ ಜನರ ಪಕ್ಷವಾಗಿ ವ್ಯಾಜ್ಯವಾಡುವ ನಿನ್ನ ದೇವರೂ ಆದ ಯೇಹೋವನು ಹೀಗನ್ನುತ್ತಾನೆ - ಇಗೋ, ಭ್ರಮಣಗೊಳಿಸುವ ಪಾನದ ಪಾತ್ರೆಯನ್ನು ಅಂದರೆ ನನ್ನ ರೋಷವು ತುಂಬಿರುವ ಬಟ್ಟಲನ್ನು ನಿನ್ನ ಕೈಯೊಳಗಿಂದ ತೆಗೆದುಹಾಕುವೆನು; ಅದನ್ನು ನೀನು ಇನ್ನು ಕುಡಿಯೆ;


ಇನ್ನೆಂದಿಗೂ ಅವರಿಗೆ ವಿಮುಖನಾಗೆನು; ಇಸ್ರಾಯೇಲ್ ವಂಶದ ಮೇಲೆ ನನ್ನ ಆತ್ಮವನ್ನು ಸುರಿಸಿದ್ದೇನಷ್ಟೆ; ಇದು ಕರ್ತನಾದ ಯೆಹೋವನ ನುಡಿ.


ಅದರ ಮಧ್ಯೆ ನೆಲೆಗೊಂಡಿರುವ ಯೆಹೋವನು ನ್ಯಾಯಸ್ವರೂಪನು; ಎಂದಿಗೂ ಅನ್ಯಾಯವನ್ನು ಮಾಡನು; ಬೆಳಬೆಳಿಗ್ಗೆ ತನ್ನ ನ್ಯಾಯವನ್ನು ತಪ್ಪದೆ ಪ್ರಕಾಶಗೊಳಿಸುವನು; ಅನ್ಯಾಯಗಾರನೋ ನಾಚಿಕೆಪಡನು.


ನಾನು ಅವರನ್ನು ಸ್ವದೇಶದಲ್ಲಿ ನೆಲೆಗೊಳಿಸುವೆನು; ಅವರಿಗೆ ನಾನು ದಯಪಾಲಿಸಿದ ಸೀಮೆಯೊಳಗಿಂದ ಇನ್ನು ಮುಂದೆ ಯಾರೂ ಅವರನ್ನೂ ಕಿತ್ತುಹಾಕರು; ಇದು ನಿನ್ನ ದೇವರಾದ ಯೆಹೋವನ ನುಡಿ.


ಅದಕ್ಕೆ ನತಾನಯೇಲನು - ಗುರುವೇ, ನೀನು ದೇವಕುಮಾರನು ಸರಿ; ನೀನೇ ಇಸ್ರಾಯೇಲಿನ ಅರಸನು ಅಂದನು.


ಅದರಲ್ಲಿ ಜನರು [ತುಂಬಾ] ವಾಸಿಸುವರು. ಇನ್ನು ಶಾಪವಿರದು; ಯೆರೂಸಲೇಮು ನೆಮ್ಮದಿಯಾಗಿ ನೆಲೆಗೊಂಡಿರುವದು.


ಆ ದಿನದಲ್ಲಿ ನಾನು ಯೆರೂಸಲೇಮನ್ನು ಸಮಸ್ತಜನಗಳಿಗೂ ಭಾರೀ ಬಂಡೆಯನ್ನಾಗಿ ಮಾಡುವೆನು; ಅದನ್ನೆತ್ತುವವರೆಲ್ಲರಿಗೂ ಕಡುಗಾಯವಾಗುವದು; ಲೋಕದ ಸಕಲ ರಾಜ್ಯಗಳು ಅದನ್ನೆತ್ತಿಹಾಕಲು ಕೂಡಿಬರುವವು.


ನಿನ್ನ ದೇಶದಲ್ಲಿ ಬಲಾತ್ಕಾರದ ಸುದ್ದಿಯೇ ಕಿವಿಗೆ ಬೀಳದು, ನಿನ್ನ ಪ್ರಾಂತಗಳೊಳಗೆ ಭಂಗನಾಶನಗಳ ವಾರ್ತೆಯೇ ಕೇಳಬರುವದಿಲ್ಲ; ಆಗ ದೇವರಕ್ಷಣೆಯು ನನ್ನ ಪೌಳಿಗೋಡೆಗಳು, ದೇವಸ್ತೋತ್ರವು ನನ್ನ ಬಾಗಿಲುಗಳು ಎಂದು ಅಂದುಕೊಳ್ಳುವಿ.


ಯೆಹೋವನು ನಮ್ಮ ನ್ಯಾಯಾಧಿಪತಿ, ಯೆಹೋವನು ನಮಗೆ ಧರ್ಮವಿಧಾಯಕ, ಯೆಹೋವನು ನಮ್ಮ ರಾಜ; ಆತನೇ ನಮ್ಮನ್ನು ರಕ್ಷಿಸುವನು.


ನಿನ್ನ ರೌದ್ರವನ್ನೆಲ್ಲಾ ತೊರೆದಿದ್ದೀ; ನಿನ್ನ ಉಗ್ರಕೋಪವನ್ನು ಬಿಟ್ಟಿದ್ದೀ.


ಅವನ ದೂತರೂ ಅವನೊಂದಿಗೆ ದೊಬ್ಬಲ್ಪಟ್ಟರು. ಆಗ ಪರಲೋಕದಲ್ಲಿ ಮಹಾ ಶಬ್ದವನ್ನು ಕೇಳಿದೆನು, ಅದು - ಈಗ ಜಯವೂ ಶಕ್ತಿಯೂ ರಾಜ್ಯವೂ ನಮ್ಮ ದೇವರಿಗೆ ಉಂಟಾಯಿತು; ಆತನು ಅಭಿಷೇಕಿಸಿದವನ ಅಧಿಕಾರವು ಈಗ ಸ್ಥಾಪಿತವಾಯಿತು; ಹಗಲಿರುಳು ನಮ್ಮ ಸಹೋದರರ ಮೇಲೆ ನಮ್ಮ ದೇವರ ಮುಂದೆ ದೂರು ಹೇಳಿದ ದೂರುಗಾರನು ದೊಬ್ಬಲ್ಪಟ್ಟಿದ್ದಾನೆ.


ಈ ಕಾರಣದಿಂದ ಅವರು ದೇವರ ಸಿಂಹಾಸನದ ಮುಂದೆ ಇದ್ದುಕೊಂಡು ಆತನ ಆಲಯದಲ್ಲಿ ಹಗಲಿರುಳು ಆತನ ಸೇವೆಮಾಡುತ್ತಾ ಇದ್ದಾರೆ; ಸಿಂಹಾಸನದಲ್ಲಿ ಕೂತಿರುವಾತನು ಗುಡಾರದಂತೆ ಅವರನ್ನು ಆವರಿಸುವನು.


ಇದಲ್ಲದೆ ಪಿಲಾತನು ಒಂದು ವಿಳಾಸವನ್ನು ಬರೆದು ಆತನ ಶಿಲುಬೆಯ ಮೇಲ್ಗಡೆ ಹಚ್ಚಿಸಿದನು. ಅದೇನಂದರೆ - ನಜರೇತಿನ ಯೇಸು, ಯೆಹೂದ್ಯರ ಅರಸನು ಎಂಬದೇ.


ಚೀಯೋನ್ ನಗರಿಯೇ, ಹೆದರಬೇಡ; ಇಗೋ, ನಿನ್ನ ಅರಸನು ಕತ್ತೆಮರಿಯ ಮೇಲೆ ಕೂತುಕೊಂಡು ಬರುತ್ತಾನೆ ಎಂಬ ಶಾಸ್ತ್ರದ ಮಾತು ನೆರವೇರಿತು.


ಚೀಯೋನ್ ನಗರಿಯೇ, ಬಹು ಸಂತೋಷಪಡು; ಯೆರೂಸಲೇಮ್ ಪುರಿಯೇ, ಹರ್ಷಧ್ವನಿಗೈ! ನೋಡು, ನಿನ್ನ ಅರಸು ನಿನ್ನ ಬಳಿಗೆ ಬರುತ್ತಾನೆ; ಆತನು ನ್ಯಾಯವಂತನು, ಸುರಕ್ಷಿತನು; ಶಾಂತಗುಣವುಳ್ಳವನಾಗಿಯೂ ಕತ್ತೆಯನ್ನು, ಹೌದು, ಪ್ರಾಯದ ಕತ್ತೆಮರಿಯನ್ನು ಹತ್ತಿದವನಾಗಿಯೂ ಬರುತ್ತಾನೆ.


ನಿನ್ನ ದೇವರಾದ ಯೆಹೋವನು ನಿನ್ನ ಮಧ್ಯದಲ್ಲಿ ಶೂರನಾಗಿದ್ದಾನೆ, ನಿನ್ನನ್ನು ರಕ್ಷಿಸುವನು; ನಿನ್ನಲ್ಲಿ ಉಲ್ಲಾಸಿಸೇ ಉಲ್ಲಾಸಿಸುವನು; ತನ್ನ ಪ್ರೀತಿಯಲ್ಲಿ ಮುಣುಗಿ ಮೌನವಾಗಿರುವನು; ನಿನ್ನಲ್ಲಿ ಆನಂದಿಸಿ ಹರ್ಷಧ್ವನಿಗೈಯುವನು ಎಂದು ಹೇಳೋಣವಾಗುವದು.


ನೀನು ಮನುಷ್ಯರ ರಕ್ತವನ್ನು ಸುರಿಸಿ ದೇಶವನ್ನೂ ಪುರವನ್ನೂ ಅವುಗಳ ನಿವಾಸಿಗಳೆಲ್ಲರನ್ನೂ ಹಿಂಸಿಸಿದ ಕಾರಣ ಲೆಬನೋನಿಗೆ ಆದಂಥ ಹಿಂಸೆಗೆ ನೀನೂ ಒಳಗಾಗುವಿ, ಮೃಗಪಶುಗಳ ನಾಶನವು ನಿನ್ನನ್ನೂ ಹೆದರಿಸುವದು.


ನಿನ್ನ ದೇವರಾದ ಯೆಹೋವನು ಎಲ್ಲಿ ಎಂದು ನನ್ನನ್ನು ಜರೆದ ಶತ್ರುಗಳು ಇದನ್ನು ನೋಡುವಾಗ ನಾಚಿಕೆಯು ಅವರನ್ನು ಕವಿದುಕೊಳ್ಳುವದು; ನಾನು ಅವರನ್ನು ಕಣ್ಣಾರೆ ನೋಡುವೆನು. ಈಗಲೇ ಬೀದಿಗಳ ಕೆಸರಂತೆ ತುಳಿತಕ್ಕೀಡಾಗುವರು.


ಹೀಗೆ ನಾನು ನನ್ನ ಪರಿಶುದ್ಧ ಪರ್ವತವಾದ ಚೀಯೋನಿನಲ್ಲಿ ನೆಲೆಯಾಗಿ ನಿಮ್ಮ ದೇವರಾದ ಯೆಹೋವನಾಗಿದ್ದೇನೆ ಎಂದು ನಿಮಗೆ ದೃಢವಾಗುವದು; ಆಗ ಯೆರೂಸಲೇಮು ಪವಿತ್ರವಾಗಿರುವದು; ಮ್ಲೇಚ್ಫರು ಇನ್ನು ಅದನ್ನು ಹಾದುಹೋಗರು.


ಪಟ್ಟಣದ ಸುತ್ತಳತೆಯು ಹದಿನೆಂಟು ಸಾವಿರ ಮೊಳ; ಅದನ್ನು ನಿರ್ಮಿಸಿದಂದಿನಿಂದ ಆ ಪಟ್ಟಣಕ್ಕೆ ಯೆಹೋವನ ನೆಲೆ ಎಂಬ ಹೆಸರಾಗುವದು.


ನಾನೂ ಯೆರೂಸಲೇಮನ್ನು ದೃಷ್ಟಿಸುತ್ತಾ ಉಲ್ಲಾಸಿಸುವೆನು, ಅದರ ಜನರನ್ನು ಈಕ್ಷಿಸುತ್ತಾ ಹರ್ಷಗೊಳ್ಳುವೆನು. ರೋದನಶಬ್ದವೂ ಪ್ರಲಾಪಧ್ವನಿಯೂ ಅಲ್ಲಿ ಇನ್ನು ಕೇಳಿಸವು.


ಧರ್ಮವೇ ನಿನಗೆ ಆಧಾರ; ನೀನು ಹಿಂಸೆಗೆ ದೂರವಾಗಿರುವಿ, ನಿನಗೆ ಹೆದರಿಕೆ ಇರುವದಿಲ್ಲ, ನಾಶನವು ದೂರವಾಗಿರುವದು, ನಿನ್ನ ಹತ್ತಿರಕ್ಕೆಬಾರದು.


ಮರಣವನ್ನು ಶಾಶ್ವತವಾಗಿ ನಿರ್ನಾಮ ಮಾಡುವನು; ಕರ್ತನಾದ ಯೆಹೋವನು ಎಲ್ಲರ ಮುಖದಲ್ಲಿನ ಕಣ್ಣೀರನ್ನು ಒರಸಿಬಿಡುವನು; ತನ್ನ ಪ್ರಜೆಯ ಅವಮಾನವನ್ನು ಭೂಮಂಡಲದಿಂದಲೇ ತೊಲಗಿಸುವನು; ಯೆಹೋವನೇ ಇದನ್ನು ನುಡಿದಿದ್ದಾನೆ.


ಆಕೆಯು ಗರ್ಭಿಣಿಯಾಗಿ ಗಂಡುಮಗುವನ್ನು ಹೆತ್ತು ದೇವರು ನನಗಿದ್ದ ಅವಮಾನವನ್ನು ಪರಿಹರಿಸಿದ್ದಾನೆ ಅಂದಳು.


ಆತನ ತೊಡೆಯ ಮೇಲಣ ವಸ್ತ್ರದಲ್ಲಿ - ರಾಜಾಧಿರಾಜನೂ ಕರ್ತರ ಕರ್ತನೂ ಎಂಬ ಹೆಸರು ಬರೆದದೆ.


ನೀನು ಬಹು ಜನಾಂಗಗಳನ್ನು ಕೊಳ್ಳೆಹೊಡೆದು ಮನುಷ್ಯರ ರಕ್ತವನ್ನು ಸುರಿಸಿ ದೇಶವನ್ನೂ ಪುರವನ್ನೂ ಅವುಗಳ ನಿವಾಸಿಗಳೆಲ್ಲರನ್ನೂ ಹಿಂಸಿಸಿದ ಕಾರಣ ಜನಾಂಗಗಳಲ್ಲಿ ಉಳಿದವರೆಲ್ಲರು ನಿನ್ನನ್ನು ಕೊಳ್ಳೆಹೊಡೆಯುವರು.


ಯೆಹೋವನು ವಿಮೋಚಿಸಿದವರು ಹಿಂದಿರುಗಿ ಶಾಶ್ವತಸಂತೋಷವೆಂಬ ಕಿರೀಟವನ್ನು ಧರಿಸಿಕೊಂಡು ಉತ್ಸಾಹಧ್ವನಿಯೊಡನೆ ಚೀಯೋನಿಗೆ ಸೇರುವರು; ಹರ್ಷಾನಂದಗಳನ್ನು ಅನುಭವಿಸುವರು, ಮೊರೆಯೂ ಕರಕರೆಯೂ ತೊಲಗಿಹೋಗುವವು.


ನನ್ನಷ್ಟಕ್ಕೆ ನಾನೇ ಏನೂ ಮಾಡಲಾರೆನು; ತಂದೆ ಹೇಳಿದ್ದನ್ನು ಕೇಳಿ ನ್ಯಾಯತೀರಿಸುತ್ತೇನೆ; ಮತ್ತು ಸ್ವಂತ ಚಿತ್ತ ನೆರವೇರಬೇಕೆಂದು ಅಪೇಕ್ಷಿಸದೆ ನನ್ನನ್ನು ಕಳುಹಿಸಿದಾತನ ಚಿತ್ತ ನೆರವೇರಬೇಕೆಂದು ಅಪೇಕ್ಷಿಸುವದರಿಂದ ನಾನು ಮಾಡುವ ತೀರ್ಪು ನ್ಯಾಯವಾಗಿದೆ.


ಪರಲೋಕವೇ, ಆನಂದಪಡು; ದೇವಜನರೇ, ಅಪೊಸ್ತಲರೇ, ಪ್ರವಾದಿಗಳೇ, ಇವಳು ನಿಮಗೆ ಅನ್ಯಾಯಮಾಡಿದ್ದಕ್ಕಾಗಿ ದೇವರು ಇವಳಿಗೆ ಪ್ರತಿದಂಡನೆಯನ್ನು ಮಾಡಿದ್ದರಿಂದ ಆನಂದಪಡಿರಿ ಎಂದು ಆ ಶಬ್ದ ಹೇಳಿತು.


ಯೆಹೋವನ ಭಯ ಪರಿಶುದ್ಧವಾಗಿದೆ; ಅದು ಶಾಶ್ವತವಾದದ್ದೇ. ಯೆಹೋವನ ವಿಧಿಗಳು ಯಥಾರ್ಥವಾದವುಗಳು; ಅವು ಕೇವಲ ನ್ಯಾಯವಾಗಿವೆ.


ಚೀಯೋನಿನ ನಿವಾಸಿಗಳೇ, ಕೂಗಿರಿ, ಉತ್ಸಾಹ ಧ್ವನಿಮಾಡಿರಿ; ಇಸ್ರಾಯೇಲ್ಯರ ಸದಮಲಸ್ವಾವಿುಯು ನಿಮ್ಮ ಮಧ್ಯದಲ್ಲಿ ಮಹತ್ತಾಗಿದ್ದಾನಷ್ಟೆ ಎಂಬದೇ.


ನೀನು - ಇವೆರಡು ಜನಾಂಗಗಳೂ ಇವೆರಡು ದೇಶಗಳೂ ನನ್ನ ವಶವಾಗುವವು, ನಾವು ಅವುಗಳನ್ನು ಅನುಭವಿಸುವೆವು ಅಂದುಕೊಂಡು ಅಲ್ಲಿ ನನ್ನ ಸಾನ್ನಿಧ್ಯವನ್ನು ಅಲಕ್ಷ್ಯ ಮಾಡಿದ್ದರಿಂದ ನನ್ನ ಜೀವದಾಣೆ,


ಇಸ್ರಾಯೇಲ್ಯರು ತಮ್ಮ ಸೃಷ್ಟಿಕರ್ತನಲ್ಲಿ ಹೆಚ್ಚಳಪಡಲಿ; ಚೀಯೋನಿನವರು ತಮ್ಮ ರಾಜನಲ್ಲಿ ಹರ್ಷಿಸಲಿ.


ಯೆರೂಸಲೇವಿುನ ಹಾಳುಪ್ರದೇಶಗಳೇ, ತಟ್ಟನೆ ಜಯಘೋಷಮಾಡಿ ಒಟ್ಟಿಗೆ ಹರ್ಷಧ್ವನಿಗೈಯಿರಿ! ಯೆಹೋವನು ಯೆರೂಸಲೇಮನ್ನು ವಿಮೋಚಿಸಿ ತನ್ನ ಜನರನ್ನು ಸಂತೈಸಿದ್ದಾನೆ.


ಆಹಾ, ನನ್ನ ಪ್ರಜೆಯೆಂಬಾಕೆಯು - ಯೆಹೋವನು ಚೀಯೋನಿನಲ್ಲಿಲ್ಲವೋ, ಅದರ ರಾಜನು ಅಲ್ಲಿ ವಾಸವಾಗಿಲ್ಲವೋ ಎಂದು ಮೊರೆಯಿಡುವ ಶಬ್ದವು ದೂರದೇಶದಿಂದ ಕೇಳಿಸುತ್ತದೆ. [ಅದಕ್ಕೆ ಯೆಹೋವನು - ] ಇವರು ತಮ್ಮ ವಿಗ್ರಹಗಳಿಂದಲೂ ಅನ್ಯದೇವತೆಗಳ ಶೂನ್ಯರೂಪಗಳಿಂದಲೂ ಏಕೆ ನನ್ನನ್ನು ಕೆಣಕಿದ್ದಾರೆ [ಅನ್ನುತ್ತಾನೆ].


ಮ್ಲೇಚ್ಫರ ಧಿಕ್ಕಾರವನ್ನು ಇನ್ನು ನಿನ್ನ ಕಿವಿಗೆ ಬೀಳಿಸೆನು; ನೀನು ಜನಾಂಗಗಳಿಂದ ಇನ್ನು ಅವಮಾನವನ್ನು ಅನುಭವಿಸದಿರುವಿ; ನಿನ್ನ ಪ್ರಜೆಯು ಮುಗ್ಗರಿಸುವದಕ್ಕೆ ಇನ್ನು ನೀನು ಕಾರಣನಾಗುವದಿಲ್ಲ; ಇದು ಕರ್ತನಾದ ಯೆಹೋವನ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು