Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಚೆಫನ್ಯ 3:3 - ಕನ್ನಡ ಸತ್ಯವೇದವು J.V. (BSI)

3 ಅದರಲ್ಲಿನ ಮುಖ್ಯಾಧಿಕಾರಿಗಳು ಗರ್ಜಿಸುವ ಸಿಂಹಗಳು; ಅದರ ನ್ಯಾಯಾಧಿಪತಿಗಳು ಸಂಜೆಯ ತೋಳಗಳು; ಮರುದಿನ ಕಡಿಯುವದಕ್ಕೆ ಎಲುಬು ಕೂಡಾ ವಿುಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅವರೊಳಗಿನ ಮುಖ್ಯಾಧಿಕಾರಿಗಳು ಗರ್ಜಿಸುವ ಸಿಂಹಗಳು; ಅದರ ನ್ಯಾಯಾಧಿಪತಿಗಳು ಸಂಜೆಯ ತೋಳಗಳು; ಮರುದಿನ ಬೆಳಗ್ಗೆ ಕಡಿಯುವುದಕ್ಕೆ ಎಲುಬು ಸಹಾ ಬಿಡದ ಕ್ರೂರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಅದರ ಪ್ರಮುಖರು ಗರ್ಜಿಸುವ ಸಿಂಹಗಳು. ಅದರ ನ್ಯಾಯಾಧಿಪತಿಗಳು ಹಸಿದ ತೋಳಗಳು. ಕಡಿಯುವುದಕ್ಕೆ ಎಲುಬನ್ನು ಕೂಡ ಮರುದಿನದವರೆಗೆ ಉಳಿಸವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಜೆರುಸಲೇಮಿನ ನಾಯಕರು ಗರ್ಜಿಸುವ ಸಿಂಹದಂತೆ ಇದ್ದಾರೆ, ಅವರ ನ್ಯಾಯಾಧಿಪತಿಗಳು ರಾತ್ರಿ ಕಾಲದಲ್ಲಿ ಕುರಿಗಳ ಮೇಲೆ ಬೀಳುವ ಹಸಿದ ತೋಳಗಳಂತಿದ್ದಾರೆ. ಬೆಳಗಾಗಲು, ಏನೂ ಉಳಿಯುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಅವಳ ಪ್ರಮುಖರು ಗರ್ಜಿಸುವ ಸಿಂಹಗಳು. ಅವಳ ನ್ಯಾಯಾಧಿಪತಿಗಳು ಸಂಜೆಯ ತೋಳಗಳು. ಕಡಿಯುವುದಕ್ಕೆ ಎಲುಬನ್ನು ಕೂಡ ಮರುದಿನದವರೆಗೆ ಉಳಿಸವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಚೆಫನ್ಯ 3:3
15 ತಿಳಿವುಗಳ ಹೋಲಿಕೆ  

ಅವರ ಕುದುರೆಗಳು ಚಿರತೆಗಳಿಗಿಂತ ವೇಗವಾಗಿವೆ, ಸಂಜೆಯ ತೋಳಗಳಿಗಿಂತ ಚುರುಕಾಗಿವೆ; ಅವರ ಸವಾರರು ಕುದುರೆಗಳನ್ನು ಕುಣಿದಾಡಿಸುವರು; ದೂರದಿಂದ ಹತ್ತಿಕೊಂಡು ಬರುವರು; ಕೊಳ್ಳೆಗೆ ಆತುರಪಡುವ ಹದ್ದಿನಂತೆ ಹಾರಾಡುವರು.


ಆದಕಾರಣ ಅಡವಿಯ ಸಿಂಹವು ಅವರನ್ನು ಕೊಲ್ಲುವದು, ಕಾಡಿನ ತೋಳವು ಕೊಳ್ಳೆಮಾಡುವದು, ಚಿರತೆಯು ಅವರ ಪಟ್ಟಣಗಳಿಗೆ ಹೊಂಚುಹಾಕಿ ಅಲ್ಲಿಂದ ಹೊರಡುವ ಪ್ರತಿಯೊಬ್ಬನನ್ನೂ ಸೀಳುವದು; ಅವರ ಅಪರಾಧಗಳು ಬಹಳ, ಅವರ ದ್ರೋಹಗಳು ಅಪಾರ.


ಇಗೋ, ಇಸ್ರಾಯೇಲಿನ ಪ್ರಭುಗಳು ತಮ್ಮ ತಮ್ಮ ಶಕ್ತ್ಯನುಸಾರ ನಿನ್ನಲ್ಲಿ ರಕ್ತಸುರಿಸುತ್ತಲೇ ಇದ್ದಾರೆ.


ಆದರೆ ನಿರ್ದೋಷಿಗಳ ರಕ್ತವನ್ನು ಸುರಿಸುವದು, ದೋಚಿಕೊಳ್ಳುವದು, ಹಿಂಸಿಸುವದು, ಜಜ್ಜುವದು, ಇವುಗಳನ್ನು ಮಾಡುವದರಲ್ಲಿಯೇ ನಿನ್ನ ದೃಷ್ಟಿಯೂ ನಿನ್ನ ಮನಸ್ಸೂ ನೆಲೆಗೊಂಡಿವೆ.


ನಿನ್ನ ಅಧಿಕಾರಿಗಳು ದ್ರೋಹಿಗಳೂ ಕಳ್ಳರ ಗೆಳೆಯರೂ ಆಗಿದ್ದಾರೆ; ಪ್ರತಿಯೊಬ್ಬನೂ ಕಾಣಿಕೆಗಳನ್ನು ಆಶಿಸಿ ಲಂಚಗಳನ್ನು ಹುಡುಕುವನು; ಅನಾಥರಿಗೆ ನ್ಯಾಯತೀರಿಸರು; ವಿಧವೆಯರ ವ್ಯಾಜ್ಯವು ಅವರ ಮನಸ್ಸಿಗೆ ಬಾರದು.


ಬಡವರಾದ ಪ್ರಜೆಗಳನ್ನು ಆಳುವ ದುಷ್ಟರಾಜನು ಗರ್ಜಿಸುವ ಸಿಂಹ, ಹುಡುಕಾಡುವ ಕರಡಿ.


ಸಿಂಹದಂತೆ ಗರ್ಜಿಸುತ್ತಾರೆ, ಪ್ರಾಯದ ಸಿಂಹಗಳ ಹಾಗೆ ಆರ್ಭಟಿಸುತ್ತಾರೆ, ಗುರುಗುಟ್ಟುತ್ತಾ ಬೇಟೆಹಿಡಿದು ಹೊತ್ತುಕೊಂಡು ಹೋಗುತ್ತಾರೆ, ರಕ್ಷಿಸುವವರು ಯಾರೂ ಇಲ್ಲ.


ನನ್ನ ಒಡಂಬಡಿಕೆಯನ್ನು ಮೀರಿದ ಯೆಹೂದದ ಪ್ರಧಾನರು, ಯೆರೂಸಲೇವಿುನ ಪ್ರಧಾನರು, ಕಂಚುಕಿಗಳು, ಯಾಜಕರು, ಕರುವಿನ ಹೋಳುಗಳ ನಡುವೆ ಹಾದುಹೋದ ದೇಶದ ಸಕಲ ಜನರು,


ನೀವು ಕತ್ತಿಯಲ್ಲೇ ನಿರತರಾಗಿದ್ದೀರಿ, ದುರಾಚಾರನಡಿಸುತ್ತೀರಿ, ನಿಮ್ಮಲ್ಲಿ ಪ್ರತಿಯೊಬ್ಬನು ತನ್ನ ತನ್ನ ನೆರೆಯವನ ಹೆಂಡತಿಯನ್ನು ಕೆಡಿಸುತ್ತಾನೆ; ನಿಮ್ಮಂಥವರು ದೇಶವನ್ನು ಅನುಭವಿಸಬಹುದೋ?


ಪ್ರವಾದಿಗಳು ಭ್ರಷ್ಟರು, ಯಾಜಕರೂ ಭ್ರಷ್ಟರು! ಹೌದು ನನ್ನ ಆಲಯದಲ್ಲಿಯೇ ಅವರ ಕೆಟ್ಟತನವನ್ನು ಕಂಡಿದ್ದೇನೆ ಎಂದು ಯೆಹೋವನು ಅನ್ನುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು