Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಚೆಫನ್ಯ 3:4 - ಕನ್ನಡ ಸತ್ಯವೇದವು J.V. (BSI)

4 ಅದರ ಪ್ರವಾದಿಗಳು ಬಡಾಯಿಗಾರರು, ದ್ರೋಹಿಗಳು; ಅದರ ಯಾಜಕರು ಪವಿತ್ರಾಲಯವನ್ನು ಹೊಲೆಗೆಡಿಸಿದ್ದಾರೆ, ಧರ್ಮವಿಧಿಗಳನ್ನು ಭಂಗಮಾಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಅಲ್ಲಿರುವ ಪ್ರವಾದಿಗಳು ಬಡಾಯಿ ಕೊಚ್ಚಿಕೊಳ್ಳುವವರು, ವಿಶ್ವಾಸ ದ್ರೋಹಿಗಳು; ಅದರ ಯಾಜಕರು ಪವಿತ್ರಾಲಯವನ್ನು ಹೊಲೆಗೆಡಿಸಿದ್ದಾರೆ, ಧರ್ಮವಿಧಿಗಳನ್ನು ಭಂಗಮಾಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಅದರ ಪ್ರವಾದಿಗಳು ಬಡಾಯಿಕೊಚ್ಚುವವರು, ವಿಶ್ವಾಸದ್ರೋಹಿಗಳು. ಅದರ ಯಾಜಕರು ಪವಿತ್ರವಾದುದನ್ನು ಹೊಲೆಗೆಡಿಸುವಂಥವರು, ಧರ್ಮವಿಧಿಗಳನ್ನು ಭಂಗಪಡಿಸುವಂಥವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಅವರ ಪ್ರವಾದಿಗಳು ಬಡಾಯಿಗಾರರೂ ದ್ರೋಹಿಗಳೂ ಆಗಿದ್ದಾರೆ. ಅವರು ಯಾವಾಗಲೂ ಇನ್ನೂಇನ್ನೂ ಹೆಚ್ಚಾಗಿ ದೊರಕುವಂತೆ ಪ್ರಯತ್ನಿಸಿರುತ್ತಾರೆ. ಅವರ ಯಾಜಕರು ಪವಿತ್ರ ವಸ್ತುಗಳನ್ನು ಸಾಧಾರಣ ವಸ್ತುಗಳನ್ನಾಗಿ ಉಪಯೋಗಿಸಿದ್ದಾರೆ. ದೇವರ ನಿಯಮಗಳನ್ನು ನಿರ್ಲಕ್ಷಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಅವಳ ಪ್ರವಾದಿಗಳು ಬಡಾಯಿ ಕೊಚ್ಚಿಕೊಳ್ಳುವವರೂ ವಿಶ್ವಾಸದ್ರೋಹಿಗಳೂ ಆಗಿದ್ದಾರೆ. ಅವಳ ಯಾಜಕರು ಪರಿಶುದ್ಧ ಸ್ಥಳವನ್ನು ಅಪವಿತ್ರಮಾಡುತ್ತಾರೆ, ದೈವನಿಯಮವನ್ನು ಭಂಗಪಡಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಚೆಫನ್ಯ 3:4
33 ತಿಳಿವುಗಳ ಹೋಲಿಕೆ  

ಅಲ್ಲಿನ ಯಾಜಕರು ನನ್ನ ವಿಧಿಗಳನ್ನು ಭಂಗಮಾಡಿದ್ದಾರೆ, ನನ್ನ ಪರಿಶುದ್ಧವಸ್ತುಗಳನ್ನು ಹೊಲೆಮಾಡಿದ್ದಾರೆ; ಮೀಸಲಾದದ್ದಕ್ಕೂ ಮೀಸಲಲ್ಲದ್ದಕ್ಕೂ ಭೇದವೆಣಿಸಲಿಲ್ಲ, ಶುದ್ಧಾಶುದ್ಧವಿವೇಚನೆಯನ್ನು ಬೋಧಿಸಲಿಲ್ಲ; ನಾನು ನೇವಿುಸಿದ ಸಬ್ಬತ್ ದಿನಗಳಿಗೆ ವಿಮುಖರಾಗಿದ್ದಾರೆ; ಇದರಿಂದ ನಾನು ಅವರ ಮಧ್ಯದಲ್ಲಿ ಅಪಕೀರ್ತಿಗೆ ಗುರಿಯಾಗಿದ್ದೇನೆ.


ನೀವೋ ದಾರಿತಪ್ಪಿದ್ದೀರಿ; ನಿಮ್ಮ ಧರ್ಮೋಪದೇಶದಿಂದ ಬಹು ಜನರನ್ನು ಮುಗ್ಗರಿಸುವ ಹಾಗೆ ಮಾಡಿದ್ದೀರಿ; ಲೇವಿಯ ಒಡಂಬಡಿಕೆಯನ್ನು ಭಂಗಪಡಿಸಿದ್ದೀರಿ, ಇದು ಸೇನಾಧೀಶ್ವರ ಯೆಹೋವನ ನುಡಿ.


ದಂಡನೆಯ ದಿನಗಳು ಹತ್ತರಿಸಿವೆ, ಮುಯ್ಯಿತೀರಿಸುವ ದಿವಸಗಳು ಸಮೀಪಿಸಿವೆ; ಇಸ್ರಾಯೇಲಿನ ಅನುಭವಕ್ಕೆ ಬಂದೇ ಬರುವವು; [ಇಸ್ರಾಯೇಲೇ,] ನಿನ್ನ ಅಧರ್ಮವು ಬಹಳವಾಗಿರುವದರಿಂದಲೂ ವಿರೋಧವು ಹೆಚ್ಚಾಗಿರುವದರಿಂದಲೂ ಪ್ರವಾದಿಯು ಮೂರ್ಖನು, ದೇವರಾತ್ಮಾವಿಷ್ಟನು ಹುಚ್ಚನು [ಅಂದುಕೊಳ್ಳುತ್ತಿ].


ನಿನ್ನ ಪ್ರವಾದಿಗಳು ಕಂಡುಹೇಳಿದ ಕಣಿಗಳು ವ್ಯರ್ಥ, ನಿಸ್ಸಾರ; ಅವರು ನಿನ್ನ ದೋಷವನ್ನು ಬೈಲಿಗೆ ತಾರದಕಾರಣ ನಿನ್ನ ದುರವಸ್ಥೆಯು ನೀಗಲಿಲ್ಲ; ನಿನ್ನ ವಿಷಯವಾಗಿ ಅವರಿಗೆ ಕಂಡುಬಂದ ವ್ಯರ್ಥ ದೈವೋಕ್ತಿಗಳು ನೀನು ಗಡೀಪಾರಾಗಿ ಒಯ್ಯಲ್ಪಡುವದಕ್ಕೆ ಆಸ್ಪದವಾದವು.


ಪ್ರವಾದಿಗಳು ಸುಳ್ಳಾಗಿ ಪ್ರವಾದಿಸುತ್ತಾರೆ, ಯಾಜಕರು ಅವರಿಂದ ಅಧಿಕಾರ ಹೊಂದಿ ದೊರೆತನ ಮಾಡುತ್ತಾರೆ, ನನ್ನ ಜನರು ಇದನ್ನೇ ಪ್ರೀತಿಸುತ್ತಾರೆ; ಕಟ್ಟಕಡೆಗೆ ನೀವು ಏನು ಮಾಡುವಿರಿ?


(ಘನಹೊಂದಿದ ಹಿರಿಯನೇ ತಲೆ; ಸುಳ್ಳುಬೋಧನೆ ಮಾಡುವ ಪ್ರವಾದಿಯೇ ಬಾಲ).


ಆಗ ಮೃಗವು ಸೆರೆಸಿಕ್ಕಿತು; ಇದಲ್ಲದೆ ಮೃಗದ ಮುಂದೆ ಮಹತ್ಕಾರ್ಯಗಳನ್ನು ಮಾಡಿ ಮೃಗದ ಗುರುತು ಹಾಕಿಸಿಕೊಂಡವರನ್ನೂ ಅದರ ವಿಗ್ರಹಕ್ಕೆ ನಮಸ್ಕರಿಸಿದವರನ್ನೂ ಮರುಳುಗೊಳಿಸಿದ ಆ ಸುಳ್ಳುಪ್ರವಾದಿಯೂ ಅದರ ಜೊತೆಯಲ್ಲಿ ಸೆರೆಸಿಕ್ಕಿದನು. ಇವರಿಬ್ಬರೂ ಜೀವಸಹಿತವಾಗಿ ಗಂಧಕದಿಂದ ಉರಿಯುವ ಬೆಂಕಿಯ ಕೆರೆಯಲ್ಲಿ ಹಾಕಲ್ಪಟ್ಟರು;


ಪ್ರಿಯರೇ, ಅನೇಕ ಮಂದಿ ಸುಳ್ಳು ಪ್ರವಾದಿಗಳು ಲೋಕದೊಳಗೆ ಬಂದಿರುವದರಿಂದ ನೀವು ಆತ್ಮದ ಎಲ್ಲಾ ನುಡಿಗಳನ್ನು ನಂಬದೆ ಆಯಾ ನುಡಿಗಳು ದೇವರಿಂದ ಪ್ರೇರಿತವಾದವುಗಳೋ ಅಲ್ಲವೋ ಎಂದು ಅವುಗಳನ್ನು ಪರೀಕ್ಷಿಸಬೇಕು.


ಆದರೆ ಅಂಥವರು ಸುಳ್ಳು ಅಪೊಸ್ತಲರೂ ಮೋಸಗಾರರಾದ ಕೆಲಸದವರೂ ಕ್ರಿಸ್ತನ ಅಪೊಸ್ತಲರಾಗಿ ಕಾಣಿಸುವದಕ್ಕೆ ವೇಷ ಹಾಕಿಕೊಳ್ಳುವವರೂ ಆಗಿದ್ದಾರೆ.


ಸುಳ್ಳುಪ್ರವಾದಿಗಳ ವಿಷಯದಲ್ಲಿ ಎಚ್ಚರವಾಗಿರ್ರಿ. ಅವರು ಕುರೀವೇಷ ಹಾಕಿಕೊಂಡು ನಿಮ್ಮ ಬಳಿಗೆ ಬರುತ್ತಾರೆ; ಆದರೆ ಒಳಗೆ ನೋಡಿದರೆ ಅವರು ಹಿಡುಕೊಂಡು ಹೋಗುವ ತೋಳಗಳೇ.


ಗಾಳಿಯನ್ನೂ ಮೋಸವನ್ನೂ ಹಿಂಬಾಲಿಸುವ ಸುಳ್ಳುಗಾರನೊಬ್ಬನು - ನಾನು ದ್ರಾಕ್ಷಾರಸಮದ್ಯಗಳ ವಿಷಯವಾಗಿ ನಿನಗೆ ಪ್ರವಾದನೆಮಾಡುವೆನು ಎಂದು ಹೇಳಿದರೆ ಈ ಜನರು ಅಂಥವನನ್ನು ಪ್ರವಾದಿಯನ್ನಾಗಿ ಸ್ವೀಕರಿಸಿಕೊಳ್ಳುವರು.


ಆಹಾ, ಸುಳ್ಳು ಕನಸುಗಳನ್ನು ಪ್ರಕಟಿಸಿ ವಿವರಿಸಿ ತಮ್ಮ ಸುಳ್ಳು ಮಾತುಗಳಿಂದಲೂ ಕೊಚ್ಚಾಟದಿಂದಲೂ ನನ್ನ ಜನರಿಗೆ ದಾರಿತಪ್ಪಿಸುವ ಪ್ರವಾದಿಗಳನ್ನು ಎದುರಿಸುವವನಾಗಿದ್ದೇನೆ; ನಾನು ಅವರನ್ನು ಕಳುಹಿಸಲಿಲ್ಲ, ಆಜ್ಞಾಪಿಸಲಿಲ್ಲ; ಅವರಿಂದ ಈ ಜನರಿಗೆ ಯಾವ ಪ್ರಯೋಜನವೂ ಆಗುವದಿಲ್ಲ. ಇದು ಯೆಹೋವನ ನುಡಿ.


ಅವರ ಜ್ಞಾನವು ಎಷ್ಟರದು? ಆದದರಿಂದ ನಾನು ಇವರ ಹೆಂಡರನ್ನು ಅನ್ಯರಿಗೂ ಇವರ ಹೊಲಗದ್ದೆಗಳನ್ನು ಆಕ್ರವಿುಸುವವರಿಗೂ ಕೊಟ್ಟುಬಿಡುವೆನು; ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲರೂ ಬಾಚಿಕೊಳ್ಳುತ್ತಲೇ ಇದ್ದಾರೆ; ಪ್ರವಾದಿಗಳು ಮೊದಲಾಗಿ ಯಾಜಕರವರೆಗೆ ಸಕಲರೂ ಮೋಸಮಾಡುತ್ತಾರೆ.


ಬಹುವೃದ್ಧನಾದ ಏಲಿಯು ತನ್ನ ಮಕ್ಕಳು ಎಲ್ಲಾ ಇಸ್ರಾಯೇಲ್ಯರಲ್ಲಿ ನಡಿಸುತ್ತಿರುವದನ್ನೂ ಅವರು ದೇವದರ್ಶನದ ಗುಡಾರದ ಬಾಗಲಿನಲ್ಲಿ ಸೇವೆಮಾಡುವ ಸ್ತ್ರೀಯರೊಡನೆ ಸಂಗವಿುಸುತ್ತಿರುವದನ್ನೂ ಕೇಳಿ ಅವರಿಗೆ -


ಮತ್ತು ಅವರು ಬಾಳ್‍ಬೆರೀತಿನ ದೇವಸ್ಥಾನದಿಂದ ಎಪ್ಪತ್ತು ರೂಪಾಯಿಗಳನ್ನು ಅವನಿಗೆ ಕೊಟ್ಟರು. ಅವನು ಈ ಹಣದಿಂದ ಕೆಲವು ಮಂದಿ ಕಾಕಪೋಕರನ್ನು ಕೂಡಿಸಿ


ನನ್ನ ಒಡಂಬಡಿಕೆಯನ್ನು ಮೀರಿದ ಯೆಹೂದದ ಪ್ರಧಾನರು, ಯೆರೂಸಲೇವಿುನ ಪ್ರಧಾನರು, ಕಂಚುಕಿಗಳು, ಯಾಜಕರು, ಕರುವಿನ ಹೋಳುಗಳ ನಡುವೆ ಹಾದುಹೋದ ದೇಶದ ಸಕಲ ಜನರು,


ಮೀಸಲಾದದ್ದಕ್ಕೂ ಮೀಸಲಲ್ಲದ್ದಕ್ಕೂ ಭೇದವನ್ನು ನನ್ನ ಜನರಿಗೆ ತೋರಿಸಿ ಶುದ್ಧಾಶುದ್ಧವಿವೇಚನೆಯನ್ನು ಅವರಿಗೆ ಬೋಧಿಸಲಿ.


ನನ್ನ ನಾಮವನ್ನು ಧಿಕ್ಕರಿಸುವ ಯಾಜಕರೇ, ಮಗನು ತಂದೆಗೆ ಮಾನಸಲ್ಲಿಸುತ್ತಾನಲ್ಲಾ, ಆಳು ಧಣಿಗೆ ಭಯಭಕ್ತಿತೋರಿಸುತ್ತಾನಷ್ಟೆ; ನಾನು ತಂದೆಯಾಗಿರಲು ನನಗೆ ಸಲ್ಲುವ ಮಾನವೆಲ್ಲಿ; ಧಣಿಯಾಗಿರಲು ನನಗೆ ತೋರಿಸುವ ಭಯಭಕ್ತಿಯೆಲ್ಲಿ ಎಂದು ಸೇನಾಧೀಶ್ವರ ಯೆಹೋವನು ನಿಮಗೇ ನುಡಿಯುತ್ತಾನೆ. ಆದರೆ ನೀವು - ಯಾವ ವಿಷಯದಲ್ಲಿ ನಿನ್ನ ನಾಮವನ್ನು ಧಿಕ್ಕರಿಸಿದ್ದೇವೆ ಅನ್ನುತ್ತೀರಿ.


ಜ್ಞಾನಾನುಸಾರವಾಗಿ ಮಾತಾಡುವದು ಯಾಜಕನ ತುಟಿಗಳ ಧರ್ಮವಷ್ಟೆ; ಅವನು ಸೇನಾಧೀಶ್ವರ ಯೆಹೋವನ ದೂತನಾಗಿರುವ ಕಾರಣ ಜನರು ಅವನ ಬಾಯಿಂದ ಧರ್ಮೋಪದೇಶವನ್ನು ಕೇಳಿಕೊಳ್ಳತಕ್ಕದ್ದು .


ಇಗೋ, ಇಸ್ರಾಯೇಲಿನ ಪ್ರಭುಗಳು ತಮ್ಮ ತಮ್ಮ ಶಕ್ತ್ಯನುಸಾರ ನಿನ್ನಲ್ಲಿ ರಕ್ತಸುರಿಸುತ್ತಲೇ ಇದ್ದಾರೆ.


ಮುಖಂಡರು ಲಂಚಕ್ಕೆ ನ್ಯಾಯತೀರಿಸುತ್ತಾರೆ, ಯಾಜಕರು ಸಂಬಳಕ್ಕಾಗಿ ಉಪದೇಶಿಸುತ್ತಾರೆ, ಪ್ರವಾದಿಗಳು ಹಣಕ್ಕೋಸ್ಕರ ಕಣಿಹೇಳುತ್ತಾರೆ; ಆದರೂ ಯೆಹೋವನ ಮೇಲೆ ಭಾರಹಾಕಿ - ಯೆಹೋವನು ನಮ್ಮ ಮಧ್ಯದಲ್ಲಿ ಇದ್ದಾನಲ್ಲಾ, ನಮಗೆ ಯಾವ ಕೇಡೂ ಸಂಭವಿಸದು ಅಂದುಕೊಳ್ಳುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು