Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಚೆಫನ್ಯ 3:6 - ಕನ್ನಡ ಸತ್ಯವೇದವು J.V. (BSI)

6 [ಯೆಹೋವನು ಇಂತೆನ್ನುತ್ತಾನೆ - ] ನಾನು ಜನಾಂಗಗಳನ್ನು ಧ್ವಂಸಪಡಿಸಿದ್ದೇನೆ, ಅವುಗಳ ಕೊತ್ತಲಗಳು ಪಾಳುಬಿದ್ದವು, ಅವುಗಳ ಬೀದಿಗಳನ್ನು ಹಾಳುಮಾಡಿದ್ದೇನೆ, ಯಾರೂ ಹಾದುಹೋಗರು; ಅವುಗಳ ಪಟ್ಟಣಗಳು ನಾಶವಾದವು, ಜನರೇ ಇಲ್ಲ, ನಿರ್ನಿವಾಸವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಯೆಹೋವನು ಇಂತೆನ್ನುತ್ತಾನೆ, “ನಾನು ಜನಾಂಗಗಳನ್ನು ಧ್ವಂಸಪಡಿಸಿದ್ದೇನೆ, ಅವುಗಳ ಕೋಟೆ ಕೊತ್ತಲುಗಳು ಪಾಳು ಬಿದ್ದವು; ಅವುಗಳ ಬೀದಿಗಳನ್ನು ಹಾಳುಮಾಡಿದ್ದೇನೆ; ಯಾರೂ ಹಾದುಹೋಗರು; ಅವುಗಳ ಪಟ್ಟಣಗಳು ನಾಶವಾದವು, ಜನರೇ ಇಲ್ಲ, ನಿರ್ನಾಮವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಸರ್ವೇಶ್ವರ ಇಂತೆನ್ನುತ್ತಾರೆ: “ನಾನು ರಾಷ್ಟ್ರಗಳನ್ನು ಧ್ವಂಸಮಾಡಿದ್ದೇನೆ. ಅವುಗಳ ಕೋಟೆಕೊತ್ತಲಗಳು ಪಾಳುಬಿದ್ದಿವೆ. ಅವುಗಳ ಹಾದಿಬೀದಿಗಳನ್ನು ನಿರ್ಜನವಾಗಿಸಿದ್ದೇನೆ. ಯಾರೂ ಅವುಗಳಲ್ಲಿ ಹಾದುಹೋಗುವಂತಿಲ್ಲ. ಅವರ ಪಟ್ಟಣಗಳು ನಾಶವಾಗಿವೆ; ನಿರ್ನಿವಾಸವಾಗಿ ಶೂನ್ಯವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ದೇವರು ಹೀಗೆನ್ನುತ್ತಾನೆ, “ನಾನು ಇಡೀ ಜನಾಂಗಗಳನ್ನು ನಾಶಮಾಡಿದ್ದೇನೆ. ಅವರ ಬುರುಜುಗಳನ್ನು ನಾಶಮಾಡಿ, ಅವರ ರಸ್ತೆಗಳಲ್ಲಿ ಯಾರೂ ನಡೆಯದ ಹಾಗೆ ಮಾಡಿರುತ್ತೇನೆ. ಅವರ ನಗರಗಳು ನಿರ್ಜನವಾಗಿವೆ. ಯಾರೂ ಅಲ್ಲಿ ವಾಸಮಾಡುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 “ನಾನು ಜನಾಂಗಗಳನ್ನು ಕಡಿದು ಬಿಟ್ಟಿದ್ದೇನೆ. ಅವುಗಳ ಗೋಪುರಗಳು ಹಾಳಾಗಿವೆ. ಅವುಗಳ ಬೀದಿಗಳನ್ನು ಯಾರೂ ಹಾದುಹೋಗದ ಹಾಗೆ ಹಾಳುಮಾಡಿದ್ದೆನೆ. ಅವುಗಳ ಪಟ್ಟಣಗಳು ನಾಶವಾದವು. ಹೀಗೆ ಅಲ್ಲಿ ಯಾವನೂ ಇರುವುದಿಲ್ಲ; ಯಾವ ಮನುಷ್ಯನೂ ಅಲ್ಲಿ ವಾಸಿಸುವುದೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಚೆಫನ್ಯ 3:6
19 ತಿಳಿವುಗಳ ಹೋಲಿಕೆ  

ಅವರು ಕೆಟ್ಟ ವಿಷಯಗಳನ್ನು ಆಶಿಸಿದಂತೆ ನಾವು ಆಶಿಸುವವರಾಗಬಾರದೆಂಬದಕ್ಕಾಗಿ ಈ ಸಂಗತಿಗಳು ನಮಗೆ ನಿದರ್ಶನಗಳಾಗಿವೆ.


ಅವರಿಗೆ ಸಂಭವಿಸಿದ ಈ ಸಂಗತಿಗಳು ನಿದರ್ಶನರೂಪವಾಗಿವೆ; ಮತ್ತು ಯುಗಾಂತ್ಯಕ್ಕೆ ಬಂದಿರುವವರಾದ ನಮಗೆ ಬುದ್ಧಿವಾದಗಳಾಗಿ ಬರೆದವೆ.


ಅಯ್ಯೋ, ಕರಾವಳಿಯಲ್ಲಿ ವಾಸಿಸುವ ಕೆರೇತ್ಯ ಜನಾಂಗವೇ, ನಿನ್ನ ಗತಿಯನ್ನು ಏನು ಹೇಳಲಿ! ಕಾನಾನೇ, ಫಿಲಿಷ್ಟಿಯ ದೇಶವೇ, ಯೆಹೋವನ ನುಡಿಯು ನಿನಗೆ ವಿರುದ್ಧವಾಗಿದೆ; ನಿನ್ನಲ್ಲಿ ನಿವಾಸಿಯೇ ನಿಲ್ಲದಂತೆ ನಿನ್ನನ್ನು ನಾಶಮಾಡುವೆನು.


ಅವರು ನೋಡದ ಎಲ್ಲಾ ಜನಾಂಗಗಳ ಮಧ್ಯಕ್ಕೆ ಅವರನ್ನು ತೂರಿಬಿಡುವೆನು. ಯೆಹೋವನ ಈ ಮಾತಿನಂತೆ ಅವರು ಚದರಿದ ಮೇಲೆ ದೇಶವು ಹಾಳಾಯಿತು, ಅದರಲ್ಲಿ ಯಾರೂ ಹೋಗುತ್ತಿರಲಿಲ್ಲ, ಬರುತ್ತಿರಲಿಲ್ಲ; ಆ ರಮ್ಯದೇಶವನ್ನು ಹಾಳುಗತಿಗೆ ತಂದರಷ್ಟೆ.


ಆಗ ಯೆಹೋವನ ದೂತನು ಹೊರಟುಬಂದು ಅಶ್ಶೂರ್ಯರ ಪಾಳೆಯದಲ್ಲಿ ಲಕ್ಷದ ಎಂಭತ್ತೈದು ಸಾವಿರ ಮಂದಿ ಸೈನಿಕರನ್ನು ಸಂಹರಿಸಿದನು. ಬೆಳಿಗ್ಗೆ ಎದ್ದು ನೋಡುವಲ್ಲಿ ಅವರೆಲ್ಲಾ ಹೆಣಗಳಾಗಿದ್ದರು.


ನಿಮ್ಮ ಪಟ್ಟಣಗಳನ್ನು ಹಾಳುಮಾಡುವೆನು. ನಿಮ್ಮ ದೇವಸ್ಥಾನಗಳನ್ನು ನಾಶಮಾಡುವೆನು; ನೀವು ಸಮರ್ಪಿಸುವ ಸುಗಂಧದ್ರವ್ಯಗಳ ಸುವಾಸನೆಯನ್ನು ನಾನು ಮೂಸಿನೋಡುವದಿಲ್ಲ.


ನೋಡಿರಿ, ನಿಮ್ಮ ಆಲಯವು ನಿಮಗೆ ಬರೀದಾಗಿ ಬಿಟ್ಟದೆ.


ಅದಕ್ಕೆ ನಾನು - ಕರ್ತನೇ, ಇದು ಎಂದಿನ ತನಕ? ಎಂದು ಕೇಳಲು ಆತನು - ಯೆಹೋವನು ಜನರನ್ನು ದೂರ ತೊಲಗಿಸಿ


ಇದೇ ಲೋಕದಲ್ಲೆಲ್ಲಾ ನೆರವೇರಬೇಕಾದ ನನ್ನ ಉದ್ದೇಶ, ಇದೇ ಜನಾಂಗಗಳ ಮೇಲೆಲ್ಲಾ ಚಾಚಿದ ನನ್ನ ಕೈ.


ಯಾರೂ ದಾಟದ ಹಾಗೆ ದೇಶವು ಹಾಳಾಗಿ ಕಾಡಿನಂತೆ ಸುಟ್ಟುಹೋದದ್ದು ಏಕೆ? ಈ ವಿಚಾರವನ್ನು ಗ್ರಹಿಸತಕ್ಕ ಜ್ಞಾನಿಯು ಯಾರು? ಅದನ್ನು ಯೆಹೋವನ ಬಾಯಿಂದಲೇ ಕೇಳಿ ತಿಳಿಸಬಲ್ಲವನು ಯಾರು?


ನಾನು ಯೊರ್ದನಿನಿಂದ ಪಶ್ಚಿಮ ಮಹಾಸಾಗರದವರೆಗೂ ಇರುವ ಜನಾಂಗಗಳಲ್ಲಿ ಸಂಹೃತರಾದವರ ಮತ್ತು ಉಳಿದಿರುವವರ ದೇಶವನ್ನು ನಿಮಗೆ ಸ್ವಾಸ್ತ್ಯವಾಗಿ ಕೊಟ್ಟಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು