Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಚೆಫನ್ಯ 3:7 - ಕನ್ನಡ ಸತ್ಯವೇದವು J.V. (BSI)

7 [ಇದರಿಂದ, ಯೆರೂಸಲೇಮೇ,] ನೀನು ನನಗೆ ನಿಶ್ಚಯವಾಗಿ ಭಯಪಡುವಿ, ಶಿಕ್ಷಣೆಗೆ ಒಳಪಡುವಿ, ನಿನ್ನ ನಿವಾಸವು ನಾಶವಾಗದು, ನಾನು ನಿನಗೆ ವಿಧಿಸಿದ್ದೊಂದೂ [ತಗಲದು] ಎಂದು ಅಂದುಕೊಂಡೆನು; ಅವರಾದರೋ ಆತುರಗೊಂಡು ತಮ್ಮ ನಡತೆಯನ್ನೆಲ್ಲಾ ಕೆಡಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಇದರಿಂದ ಯೆರೂಸಲೇಮೇ, ನೀನು ನನಗೆ ನಿಶ್ಚಯವಾಗಿ ಭಯಪಡುವಿ, ಶಿಕ್ಷಣಕ್ಕೆ ಒಳಪಡುವಿ, ನಿನ್ನ ನಿವಾಸವು ನಾಶವಾಗದು, ನಾನು ನಿನಗೆ ವಿಧಿಸಿದ್ದೊಂದೂ ತಗಲದು” ಎಂದು ಅಂದುಕೊಂಡೆನು; ಅವರಾದರೋ ಆತುರಗೊಂಡು ತಮ್ಮ ನಡತೆಯನ್ನೆಲ್ಲಾ ಕೆಡಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಇದರಿಂದಲಾದರೂ ಜೆರುಸಲೇಮ್ ನಗರ ನನಗೆ ಭಯಪಡುವುದು, ನಾನು ಕಲಿಸಿದ ಪಾಠವನ್ನು ಎಂದಿಗೂ ಮರೆಯದು’ ಎಂದುಕೊಂಡೆ. ಆದರೆ ಅದರ ನಿವಾಸಿಗಳು ತಮ್ಮ ನಡತೆಯನ್ನು ಕೆಡಿಸಿಕೊಳ್ಳಲು ಮತ್ತಷ್ಟು ಕಾತರರಾದರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ನೀವು ಇದರಿಂದ ಪಾಠ ಕಲಿಯಬೇಕೆಂದು ಇದನ್ನೆಲ್ಲಾ ಹೇಳುತ್ತಿದ್ದೇನೆ. ನೀವು ನನ್ನನ್ನು ಗೌರವಿಸಿ ನನಗೆ ಭಯಪಡಬೇಕೆಂದು ನಾನು ಈ ವಿಷಯಗಳನ್ನು ತಿಳಿಸುತ್ತಿದ್ದೇನೆ. ನೀವು ಹೀಗೆ ಮಾಡುವುದಾದರೆ ನಿನ್ನ ಮನೆಯು ನಾಶವಾಗದು. ನೀವು ನನ್ನ ನಿಯಮಗಳನ್ನು ಅನುಸರಿಸುವದಾದರೆ ನಾನು ಆಲೋಚಿಸಿರುವ ಪ್ರಕಾರ ನಿಮ್ಮನ್ನು ಶಿಕ್ಷಿಸುವದಿಲ್ಲ.” ಆದರೆ ಆ ದುಷ್ಟ ಜನರು ತಮ್ಮ ಮಾರ್ಗವನ್ನು ಬಿಡದೆ ದುಷ್ಟತನದಲ್ಲಿಯೇ ಮುಂದುವರಿಯುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ‘ನಿಶ್ಚಯವಾಗಿ ನೀನು ನನಗೆ ಭಯಪಟ್ಟು ಶಿಕ್ಷಣವನ್ನು ಹೊಂದುವೆ,’ ಹೀಗೆ ನಾನು ಅವರಿಗೆ ಶಿಕ್ಷೆ ವಿಧಿಸಿದರೂ ಅವರ ನಿವಾಸವು ನಾಶವಾಗುವುದಿಲ್ಲ. ಆದರೆ ಅವರು ಬೇಗನೆ ಎದ್ದು ತಮ್ಮ ನಡತೆಯನ್ನೆಲ್ಲಾ ಕೆಡಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಚೆಫನ್ಯ 3:7
25 ತಿಳಿವುಗಳ ಹೋಲಿಕೆ  

ಪೂರ್ವದಲ್ಲಿ ಗಿಬ್ಯದವರು ಕೆಡಿಸಿಕೊಂಡಂತೆ ಎಫ್ರಾಯೀಮ್ಯರು ತಮ್ಮನ್ನು ತೀರಾ ಕೆಡಿಸಿಕೊಂಡಿದ್ದಾರೆ; ದೇವರು ಅವರ ಅಧರ್ಮವನ್ನು ಜ್ಞಾಪಕಕ್ಕೆ ತಂದುಕೊಂಡು ಅವರ ಪಾಪಗಳಿಗೆ ಪ್ರತಿದಂಡನೆಮಾಡುವನು.


ಒಂದು ವೇಳೆ ಯೆಹೂದ ವಂಶದವರು ನಾನು ಅವರಿಗೆ ಮಾಡಬೇಕೆಂದಿರುವ ಕೇಡನ್ನು ಕೇಳಿ ತಮ್ಮ ತಮ್ಮ ದುರ್ಮಾರ್ಗಗಳಿಂದ ಹಿಂದಿರುಗಿಯಾರು; ಹಿಂದಿರುಗಿದರೆ ಅವರ ಪಾಪಾಪರಾಧಗಳನ್ನು ಕ್ಷವಿುಸಿಬಿಡುವೆನು.


ಅದು ದೈವೋಕ್ತಿಗೆ ಕಿವಿಗೊಡಲಿಲ್ಲ, ಶಿಕ್ಷಣೆಗೆ ಒಳಪಡಲಿಲ್ಲ, ಯೆಹೋವನಲ್ಲಿ ಭರವಸವಿಡಲಿಲ್ಲ, ತನ್ನ ದೇವರ ಸನ್ನಿಧಿಗೆ ಸಮೀಪಿಸಲಿಲ್ಲ.


ಆತನು ನಿಮಗೆ ಹೇಳಿಕಳುಹಿಸಿದ ಮಾತೇನಂದರೆ - ನೀವೆಲ್ಲರು ನಿಮ್ಮ ನಿಮ್ಮ ದುರ್ಮಾರ್ಗದಿಂದಲೂ ದುಷ್ಕೃತ್ಯಗಳಿಂದಲೂ ಹಿಂದಿರುಗಿರಿ, ನಿಮಗೆ ಶಾಶ್ವತ ಸ್ವಾಸ್ತ್ಯವಾಗಿರಲಿ ಎಂದು ಯೆಹೋವನು ಪುರಾತನ ಕಾಲದಲ್ಲಿ ನಿಮಗೂ ನಿಮ್ಮ ಪಿತೃಗಳಿಗೂ ಅನುಗ್ರಹಿಸಿದ ದೇಶದೊಳಗೆ ನೆಲೆಗೊಳ್ಳಿರಿ;


ನಾನು ನಿಮ್ಮನ್ನು ಈ ಸ್ಥಳದಲ್ಲಿ, ನಾನೇ ನಿಮ್ಮ ಪಿತೃಗಳಿಗೆ ಶಾಶ್ವತವಾಗಿ ದಯಪಾಲಿಸಿದ ಈ ದೇಶದಲ್ಲಿ ನೆಲೆಗೊಳಿಸುವೆನು.


ಕರ್ತನು ತನ್ನ ವಾಗ್ದಾನವನ್ನು ನೆರವೇರಿಸುವದಕ್ಕೆ ತಡಮಾಡುತ್ತಾನೆಂಬದಾಗಿ ಕೆಲವರು ಅರ್ಥಮಾಡಿಕೊಳ್ಳುವ ಪ್ರಕಾರ ಆತನು ತಡಮಾಡುವವನಲ್ಲ. ಯಾವನಾದರೂ ನಾಶವಾಗುವದರಲ್ಲಿ ಆತನು ಇಷ್ಟಪಡದೆ ಎಲ್ಲರೂ ತನ್ನ ಕಡೆಗೆ ತಿರುಗಿಕೊಳ್ಳಬೇಕೆಂದು ಅಪೇಕ್ಷಿಸುವವನಾಗಿದ್ದು ನಿಮ್ಮ ವಿಷಯದಲ್ಲಿ ದೀರ್ಘಶಾಂತಿಯುಳ್ಳವನಾಗಿದ್ದಾನೆ.


ಯೆರೆಮೀಯನು ಚಿದ್ಕೀಯನಿಗೆ - ಸೇನಾಧೀಶ್ವರ ಸ್ವಾವಿುಯೂ ಇಸ್ರಾಯೇಲ್ಯರ ದೇವರೂ ಆದ ಯೆಹೋವನು ಇಂತೆನ್ನುತ್ತಾನೆ - ನೀನು ಬಾಬೆಲಿನ ಅರಸನ ಸರದಾರರನ್ನು ಮರೆಹೊಕ್ಕರೆ ನಿನ್ನ ಪ್ರಾಣವುಳಿಯುವದು, ಈ ಪಟ್ಟಣವೂ ಬೆಂಕಿಯಿಂದ ಸುಡದು, ನೀನೂ ನಿನ್ನ ಮನೆತನದವರೂ ಬದುಕುವಿರಿ;


ನಾನು ಕಿವಿಗೊಟ್ಟು ಕೇಳುವಾಗ ಅವರು ಯಥಾರ್ಥವಾಗಿ ಮಾತಾಡಿಕೊಳ್ಳುತ್ತಿರಲಿಲ್ಲ; ಯಾವನೂ ತನ್ನ ಅಧರ್ಮದ ವಿಷಯವಾಗಿ ಪಶ್ಚಾತ್ತಾಪಪಟ್ಟು - ಆಹಾ, ನಾನು ಎಂಥಾ ಕೆಲಸ ಮಾಡಿದೆ ಎಂದು ಕೊಳ್ಳುತ್ತಿರಲಿಲ್ಲ; ಯುದ್ಧದಲ್ಲಿ ರಭಸವಾಗಿ ಓಡುವ ಕುದುರೆಯಂತೆ ಪ್ರತಿಯೊಬ್ಬನೂ ತನ್ನ ತನ್ನ ಮಾರ್ಗಕ್ಕೇ ತ್ವರೆಪಡುತ್ತಾನೆ.


ನಿಜವಾಗಿ ಇವರು ನನ್ನ ಜನರು, ನನ್ನ ಮಕ್ಕಳು, ಮೋಸ ಮಾಡಲಾರರು ಎಂದು ಆತನು ಅಂದುಕೊಂಡು ಅವರಿಗೆ ರಕ್ಷಕನಾದನು.


ನನ್ನ ತೋಟದಲ್ಲಿ ಹಿಂದೆ ನಾನು ಮಾಡಿದ್ದಕ್ಕಿಂತಲೂ ಇನ್ನೇನು ಮಾಡಬೇಕಾಗಿತ್ತು? ಅದು [ಒಳ್ಳೇ] ದ್ರಾಕ್ಷೆಯನ್ನು ಕೊಡುವದೆಂದು ನಾನು ನಿರೀಕ್ಷಿಸುತ್ತಿರಲು ಏಕೆ ಹೊಲಸುಹಣ್ಣನ್ನು ಬಿಟ್ಟಿತು?


ಆದದರಿಂದ ಆತನು ಅಶ್ಶೂರದ ಅರಸನ ಸೈನ್ಯಾಧಿಪತಿಗಳನ್ನು ಅವರ ಮೇಲೆ ಬರಮಾಡಿದನು. ಅವರು ಮನಸ್ಸೆಯನ್ನು ಹಿಡಿದು ಅವನಿಗೆ ಕೊಂಡಿಗಳನ್ನು ಸಿಕ್ಕಿಸಿ ಬೇಡಿಹಾಕಿ ಬಾಬೆಲಿಗೆ ಒಯ್ದರು.


ನೀವು ಸ್ತ್ರೀ ಪುರುಷರ ರೂಪವನ್ನಾಗಲಿ


ದೇವರು ಲೋಕವನ್ನು ನೋಡಿದಾಗ ಅದು ಕೆಟ್ಟುಹೋಗಿತ್ತು; ಭೂನಿವಾಸಿಗಳೆಲ್ಲರೂ ತಮ್ಮ ನಡವಳಿಕೆಯನ್ನು ಕೆಡಿಸಿಕೊಂಡಿದ್ದರು.


ಶುದ್ಧ ಹೃದಯ ಒಳ್ಳೇಮನಸ್ಸಾಕ್ಷಿ ನಿಷ್ಕಪಟವಾದ ನಂಬಿಕೆ ಎಂಬಿವುಗಳಿಂದ ಹುಟ್ಟಿದ ಪ್ರೀತಿಯೇ ದೇವವಾಕ್ಯೋಪದೇಶದ ಗುರಿಯಾಗಿದೆ.


ಇದಲ್ಲದೆ ಶಿಕ್ಷಣವನ್ನು ಕೇಳುವಂತೆ ಅವರ ಕಿವಿಯನ್ನು ತೆರೆದು ಅಧರ್ಮವನ್ನು ಬಿಟ್ಟುಬಿಡಬೇಕೆಂದು ಅವರಿಗೆ ಆಜ್ಞಾಪಿಸುವನು.


[ಯೆಹೋವನು] - ನಿನ್ನನ್ನು ಉಪದೇಶಿಸಿ ನಡೆಯಬೇಕಾದ ಮಾರ್ಗವನ್ನು ತಿಳಿಸುವೆನು; ನಿನ್ನನ್ನು ಕಟಾಕ್ಷಿಸಿ ಆಲೋಚನೆ ಹೇಳುವೆನು [ಅನ್ನುತ್ತಾನಲ್ಲಾ].


ಬುದ್ಧಿವಾದವನ್ನು ಕೇಳು, ಉಪದೇಶವನ್ನಾಲಿಸು, ಮುಂದೆ ಜ್ಞಾನಿಯಾಗುವಿ.


ಯೆರೂಸಲೇಮೇ, ನಾನು ನಿನ್ನನ್ನು ಅಗಲಿ ನಾಶಪಡಿಸಿ ನಿವಾಸಿಗಳಿಲ್ಲದ ದೇಶವನ್ನಾಗಿ ಮಾಡದಂತೆ ಶಿಕ್ಷಣವನ್ನು ಹೊಂದು.


ಅವರಾದರೋ ಕಿವಿಗೊಟ್ಟು ಕೇಳಲಿಲ್ಲ, ಕೇಳಲಿಕ್ಕೂ ಉಪದೇಶ ಹೊಂದಲಿಕ್ಕೂ ಒಪ್ಪಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು