Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಚೆಫನ್ಯ 3:9 - ಕನ್ನಡ ಸತ್ಯವೇದವು J.V. (BSI)

9 ಆಗ ಎಲ್ಲರು ಒಂದೇ ಮನಸ್ಸಿನಿಂದ ಯೆಹೋವನನ್ನು ಸೇವಿಸಿ ಆತನ ಹೆಸರನ್ನೆತ್ತಿ ಪ್ರಾರ್ಥಿಸುವಂತೆ ಜನಾಂಗಗಳವರ ತುಟಿಗಳನ್ನು ಮಾರ್ಪಡಿಸಿ ಶುದ್ಧಿಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 “ಆಗ ಎಲ್ಲರೂ ಒಂದೇ ಮನಸ್ಸಿನಿಂದ ಯೆಹೋವನನ್ನು ಸೇವಿಸಿ ಆತನ ಹೆಸರನ್ನೆತ್ತಿ ಪ್ರಾರ್ಥಿಸುವಂತೆ ಜನಾಂಗಗಳವರ ತುಟಿಗಳನ್ನು ಮಾರ್ಪಡಿಸಿ ಶುದ್ಧಿಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 “ಆಗ ಎಲ್ಲರೂ ಒಮ್ಮನಸ್ಸಿನಿಂದ ನನ್ನನ್ನು ಪೂಜಿಸಿ ನನ್ನ ಹೆಸರೆತ್ತಿ ಪ್ರಾರ್ಥಿಸುವಂತೆ ಜನಾಂಗಗಳ ಬಾಯನ್ನು ಪರಿವರ್ತಿಸಿ ಶುದ್ಧೀಕರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಆಗ ನಾನು ಇತರ ಜನಾಂಗಗಳವರ ಭಾಷೆಯನ್ನು ಬದಲಾಯಿಸಿ ದೇವರಾದ ಯೆಹೋವನ ನಾಮವನ್ನು ಉಚ್ಚರಿಸುವಂತೆ ಮಾಡುವೆನು. ಅವರೆಲ್ಲರೂ ನನ್ನನ್ನು ಆರಾಧಿಸುವರು. ಒಟ್ಟಾಗಿ ಸೇರಿ ಒಂದೇ ಜನಾಂಗವಾಗಿ ನನ್ನನ್ನು ಆರಾಧಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 “ಆಗ ನಾನು ಜನರ ತುಟಿಗಳನ್ನು ಶುದ್ಧೀಕರಿಸುವೆನು. ಅವರೆಲ್ಲರೂ ಯೆಹೋವ ದೇವರ ಹೆಸರಿನಿಂದ ಮೊರೆಯಿಡುವರು. ಏಕಮನಸ್ಸಿನಿಂದ ಆತನಿಗೆ ಸೇವೆಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಚೆಫನ್ಯ 3:9
21 ತಿಳಿವುಗಳ ಹೋಲಿಕೆ  

ಲೋಕದವರೆಲ್ಲರಿಗೂ ಒಂದೇ ಭಾಷೆ ಇತ್ತು. ಭಾಷಾಭೇದವೇನೂ ಇರಲಿಲ್ಲ.


ಆ ದಿನದಲ್ಲಿ ಸೇನಾಧೀಶ್ವರನಾದ ಯೆಹೋವನ ಭಕ್ತರೆಂದು ಪ್ರಮಾಣಮಾಡಿ ಕಾನಾನಿನ ಭಾಷೆಯನ್ನಾಡುವವರಿಂದ ತುಂಬಿದ ಐದು ಪಟ್ಟಣಗಳು ಐಗುಪ್ತದೇಶದಲ್ಲಿರುವವು; ಇವುಗಳಲ್ಲಿ ಒಂದರ ಹೆಸರು ನಾಶಪುರ.


ಭೂಮಂಡಲದವರೆಲ್ಲರು ಎಚ್ಚರಗೊಂಡು ಯೆಹೋವನ ಕಡೆಗೆ ತಿರುಗಿಕೊಳ್ಳುವರು; [ಯೆಹೋವನೇ,] ಎಲ್ಲಾ ಜನಾಂಗಗಳವರು ನಿನಗೆ ಅಡ್ಡಬೀಳುವರು.


ಆ ಕಾಲದಲ್ಲಿ ಬಹು ಜನಾಂಗಗಳು ಯೆಹೋವನಾದ ನನ್ನನ್ನು ಆಶ್ರಯಿಸಿಕೊಂಡು ನನ್ನ ಜನವಾಗುವವು; ನಾನು ನಿನ್ನ ಮಧ್ಯದಲ್ಲಿ ವಾಸಿಸುವೆನು; ಆಗ ಸೇನಾಧೀಶ್ವರ ಯೆಹೋವನೇ ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾನೆಂಬದು ನಿನಗೆ ಗೊತ್ತಾಗುವದು.


ಸಮುದ್ರದಲ್ಲಿ ನೀರು ಹೇಗೋ ಹಾಗೆಯೇ ಭೂವಿುಯಲ್ಲಿ ಯೆಹೋವನ ಮಹಿಮೆಯ ಜ್ಞಾನವು ತುಂಬಿಕೊಂಡಿರುವದು.


ನಿಮ್ಮ ಬಾಯೊಳಗಿಂದ ಯಾವ ಕೆಟ್ಟ ಮಾತೂ ಹೊರಡಬಾರದು; ಭಕ್ತಿಯನ್ನು ವೃದ್ಧಿಮಾಡುವಂಥ ಕಾಲೋಚಿತವಾದ ಮಾತು ಇದ್ದರೆ ಕೇಳುವವರ ಹಿತಕ್ಕಾಗಿ ಅದನ್ನು ಆಡಿರಿ.


ಒಳ್ಳೆಯವನು ತನ್ನ ಒಳ್ಳೆಯ ಬೊಕ್ಕಸದೊಳಗಿಂದ ಒಳ್ಳೆಯ ವಸ್ತುಗಳನ್ನು ತೆಗೆಯುತ್ತಾನೆ; ಕೆಟ್ಟವನು ಕೆಟ್ಟ ಬೊಕ್ಕಸದೊಳಗಿಂದ ಕೆಟ್ಟ ವಸ್ತುಗಳನ್ನು ತೆಗೆಯುತ್ತಾನೆ.


ಯೆಹೋವನು ಭೂಲೋಕಕ್ಕೆಲ್ಲಾ ರಾಜನಾಗಿರುವನು; ಆ ದಿನದಲ್ಲಿ ಯೆಹೋವನೊಬ್ಬನೇ ದೇವರೆಂದೂ ಆತನ ಹೆಸರೊಂದೇ ಸ್ತುತ್ಯವೆಂದೂ ಎಲ್ಲರಿಗೂ ತಿಳಿದಿರುವದು.


ಏಳನೆಯ ದೇವದೂತನು ತುತೂರಿಯನ್ನೂದಿದನು. ಆಗ ಪರಲೋಕದಲ್ಲಿ ಮಹಾ ಶಬ್ದಗಳುಂಟಾಗಿ - ಲೋಕದ ರಾಜ್ಯಾಧಿಕಾರವು ನಮ್ಮ ಕರ್ತನಿಗೂ ಆತನು ಅಭಿಷೇಕಿಸಿದವನಿಗೂ ಉಂಟಾಯಿತು; ಆತನು ಯುಗಯುಗಾಂತರಗಳಲ್ಲಿಯೂ ರಾಜ್ಯವನ್ನಾಳುವನು ಎಂದು ಹೇಳಿದವು.


ಯೆಹೋವನು ಅವರಿಗೆ ಭಯಂಕರವಾಗುವನು; ಲೋಕದ ದೇವರುಗಳನ್ನೆಲ್ಲಾ ಕ್ಷಯಿಸಿಬಿಡುವನು; ಸಮಸ್ತ ಜನರು, ಅಂದರೆ ಸಮುದ್ರ ಪ್ರಾಂತದ ನಿವಾಸಿಗಳಾದ ಸಕಲ ಜನಾಂಗಗಳವರು ತಮ್ಮ ತಮ್ಮ ಸ್ಥಳಗಳಲ್ಲೇ ಆತನನ್ನು ಆರಾಧಿಸುವರು.


(ಯೆಹೋವನೇ, ನನ್ನ ಬಲವೇ, ಬಲವಾದ ನನ್ನ ದುರ್ಗವೇ, ಇಕ್ಕಟ್ಟಿನ ದಿನದಲ್ಲಿ ನನ್ನ ಆಶ್ರಯವೇ, ಲೋಕದ ಕಟ್ಟಕಡೆಯಿಂದ ಜನಾಂಗಗಳು ನಿನ್ನ ಬಳಿಗೆ ಸೇರಿ - ನಮ್ಮ ಪಿತೃಗಳು ಶುದ್ಧ ಸುಳ್ಳನ್ನು, ಮಾಯವನ್ನು, ಪ್ರಯೋಜನವಿಲ್ಲದವುಗಳನ್ನು ಪಾರಂಪರ್ಯವಾಗಿ ಹೊಂದಿದ್ದಾರೆ ಎಂದು ಅರಿಕೆ ಮಾಡುವರು.


ಯೆಹೋವನ ನಾಮವು ಮೂಡಣಿಂದ ಪಡುವಣವರೆಗೂ ಸ್ತುತಿಹೊಂದಲಿ.


ತರುವಾಯ ಸೇತನು ಸಹ ಮಗನನ್ನು ಪಡೆದು ಅವನಿಗೆ ಎನೋಷ್ ಎಂಬ ಹೆಸರಿಟ್ಟನು; ಆ ಕಾಲದಲ್ಲಿ ಯೆಹೋವ ಎಂಬ ಹೆಸರನ್ನು ಹೇಳಿಕೊಂಡು ಆರಾಧಿಸುವದಕ್ಕೆ ಪ್ರಾರಂಭವಾಯಿತು.


ಯೆಹೋವನು ಮನುಷ್ಯರ ಬಾಯ ಯೋಗ್ಯಫಲವಾಗಿರುವ ಸ್ತೋತ್ರವನ್ನು ಉಂಟುಮಾಡುವವನಾಗಿ - ದೂರದವನಿಗೂ ಸಮೀಪದವನಿಗೂ ಕ್ಷೇಮವಿರಲಿ, ಸುಕ್ಷೇಮವಿರಲಿ, ನಾನು ಅವರನ್ನು ಸ್ವಸ್ಥಮಾಡುವೆನು ಎಂದು ಹೇಳುತ್ತಾನೆ.


ಆಮೇಲೆ ಅವು ನಿನ್ನ ಕೈಯಲ್ಲಿ ಒಂದಾಗುವಂತೆ ಅವೆರಡನ್ನೂ ಒಂದಕ್ಕೊಂದು ಉದ್ದವಾಗಿ ಸೇರಿಸಿ ಹಿಡಿ.


ನನ್ನ ಬಾಯಿಗೆ ಮುಟ್ಟಿಸಿ - ಇಗೋ, ಇದು ನಿನ್ನ ತುಟಿಗಳಿಗೆ ತಗಲಿತು; ನಿನ್ನ ದೋಷವು ನೀಗಿತು, ನಿನ್ನ ಪಾಪಕ್ಕೆ ಪ್ರಾಯಶ್ಚಿತ್ತವಾಯಿತು ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು