ಜೆಕರ್ಯ 1:12 - ಕನ್ನಡ ಸತ್ಯವೇದವು J.V. (BSI)12 ಇದನ್ನು ಕೇಳಿ ಯೆಹೋವನ ದೂತನು - ಸೇನಾಧೀಶ್ವರ ಯೆಹೋವನೇ, ನೀನು ಎಪ್ಪತ್ತು ವರುಷಗಳಿಂದ ರೋಷಗೊಂಡಿರುವ ಯೆರೂಸಲೇಮು ಮೊದಲಾದ ಯೆಹೂದದ ಪಟ್ಟಣಗಳನ್ನು ಎಷ್ಟು ಕಾಲ ಕರುಣಿಸದೆ ಇರುವಿ ಎಂದು ಬಿನ್ನವಿಸಲು ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಇದನ್ನು ಕೇಳಿ ಯೆಹೋವನ ದೂತನು, “ಸೇನಾಧೀಶ್ವರನಾದ ಯೆಹೋವನೇ, ನೀನು ಎಪ್ಪತ್ತು ವರ್ಷಗಳಿಂದ ರೋಷಗೊಂಡಿರುವ ಯೆರೂಸಲೇಮ್ ಮೊದಲಾದ ಯೆಹೂದದ ಪಟ್ಟಣಗಳನ್ನು ಎಷ್ಟು ಕಾಲ ಕರುಣಿಸದೆ ಇರುವಿ” ಎಂದು ಬಿನ್ನವಿಸಲು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಆಗ ದೇವದೂತನು: “ಸೇನಾಧಿಶ್ವರ ಸರ್ವೇಶ್ವರಾ, ಕಳೆದ ಎಪ್ಪತ್ತು ವರ್ಷಗಳಿಂದ ನೀವು ಕೋಪದಿಂದಿರುವಿರಿ, ಏಕೆ? ಇನ್ನೆಷ್ಟು ಕಾಲ ಜೆರುಸಲೇಮಿಗೂ ಜುದೇಯದ ಇತರ ಪಟ್ಟಣಗಳಿಗೂ ಕರುಣೆತೋರಿಸದೆ ಇರುವಿರಿ?” ಎಂದು ಕೇಳಿದ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಆಗ ಯೆಹೋವನ ದೂತನು, “ಯೆಹೋವನೇ, ಜೆರುಸಲೇಮನ್ನೂ ಯೆಹೂದದ ಇತರ ನಗರಗಳನ್ನೂ ಸಂತೈಸಲು ಇನ್ನೆಷ್ಟು ಕಾಲಬೇಕು? ಈ ಪಟ್ಟಣಗಳ ಮೇಲೆ ಈಗಾಗಲೇ ಎಪ್ಪತ್ತು ವರ್ಷಗಳ ಕಾಲ ನಿನ್ನ ಕೋಪವನ್ನು ಪ್ರದರ್ಶಿಸಿರುವೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಆಗ ಯೆಹೋವ ದೇವರ ದೂತನು ಉತ್ತರಕೊಟ್ಟು: “ಸರ್ವಶಕ್ತರಾದ ಯೆಹೋವ ದೇವರೇ, ನೀವು ಯೆರೂಸಲೇಮನ್ನೂ, ಯೆಹೂದದ ಪಟ್ಟಣಗಳನ್ನೂ ಎಷ್ಟರವರೆಗೆ ಕನಿಕರಿಸದೆ ಇರುವಿರಿ? ಅವುಗಳ ಮೇಲೆ ಈ ಎಪ್ಪತ್ತು ವರ್ಷಗಳು ಸಿಟ್ಟು ಮಾಡಿದ್ದೀರಲ್ಲವೋ?” ಎಂದನು. ಅಧ್ಯಾಯವನ್ನು ನೋಡಿ |