Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 1:13 - ಕನ್ನಡ ಸತ್ಯವೇದವು J.V. (BSI)

13 ನನಗೆ ವಿವರಿಸುವ ದೂತನಿಗೆ ಯೆಹೋವನು ಕರುಣೆಯ ಒಳ್ಳೆಯ ಮಾತುಗಳಿಂದ ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನನ್ನೊಂದಿಗೆ ಮಾತನಾಡಿದ ದೂತನಿಗೆ, ಯೆಹೋವನು ಕರುಣೆ ಹಾಗೂ ಒಳ್ಳೆಯ ಮಾತುಗಳಿಂದ ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಆಗ ಸೂತ್ರಧಾರಿಯಾದ ದೂತನಿಗೆ ಸರ್ವೇಶ್ವರ ಕರುಣೆಯಿಂದ ಸದುತ್ತರ ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಆಗ ನನ್ನೊಡನೆ ಮಾತಾಡುತ್ತಿದ್ದ ದೇವದೂತನಿಗೆ ಯೆಹೋವನು ಉತ್ತರಿಸಿ ಅವನನ್ನು ಒಳ್ಳೆಯ ಆದರಣೆಯ ಮಾತುಗಳಿಂದ ಸಂತೈಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಆಗ ಯೆಹೋವ ದೇವರು ನನ್ನ ಸಂಗಡ ಮಾತನಾಡಿದ ದೂತನಿಗೆ ಒಳ್ಳೆಯ ಮಾತುಗಳಿಂದಲೂ, ಆದರಣೆಯ ಮಾತುಗಳಿಂದಲೂ ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 1:13
14 ತಿಳಿವುಗಳ ಹೋಲಿಕೆ  

ಯೆಹೋವನು ಇಂತೆನ್ನುತ್ತಾನೆ - ಬಾಬೆಲ್ ರಾಜ್ಯವು ಎಪ್ಪತ್ತು ವರುಷ ಪ್ರಬಲಿಸಿದ ಮೇಲೆ ನಾನು ನಿಮ್ಮನ್ನು ಕಟಾಕ್ಷಿಸಿ ಈ ಸ್ಥಳಕ್ಕೆ ತಿರಿಗಿ ಬರಮಾಡುವೆನೆಂಬ ನನ್ನ ಶುಭವಾಕ್ಯವನ್ನು ನಿಮಗಾಗಿ ನೆರವೇರಿಸುವೆನು.


ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ನಾಲ್ಕನೆಯ ತಿಂಗಳಿನ ಉಪವಾಸ, ಐದನೆಯ ತಿಂಗಳಿನ ಉಪವಾಸ, ಏಳನೆಯ ತಿಂಗಳಿನ ಉಪವಾಸ, ಹತ್ತನೆಯ ತಿಂಗಳಿನ ಉಪವಾಸ, ಇವು ಯೆಹೂದ ವಂಶಕ್ಕೆ ವಿಶೇಷವಾದ ಹಬ್ಬಗಳಾಗಿ ಹರ್ಷೋಲ್ಲಾಸಗಳನ್ನುಂಟುಮಾಡುವವು; ಹೀಗಿರಲು ಸತ್ಯವನ್ನೂ ಸಮಾಧಾನವನ್ನೂ ಪ್ರೀತಿಸಿರಿ.


ಅನಂತರ ವಿವರಿಸುವ ದೇವದೂತನು ಮತ್ತೆ ಬಂದು ನಿದ್ರೆಹತ್ತಿದವನ ಹಾಗಿದ್ದ ನನ್ನನ್ನು ಎಚ್ಚರಗೊಳಿಸಿ ಏನು ನೋಡುತ್ತೀ ಎಂದು ಕೇಳಲು ನಾನು -


ನನಗೆ [ಕನಸಿನ ಅರ್ಥವನ್ನು] ವಿವರಿಸುವ ದೇವದೂತನನ್ನು - ಸ್ವಾಮೀ, ಇವರು ಯಾರು ಎಂದು ನಾನು ಕೇಳಲು ಅವನು ನನಗೆ - ಇವರು ಇಂಥವರೆಂದು ನಿನಗೆ ತೋರಿಸುವೆನು ಎಂಬದಾಗಿ ಹೇಳಿದನು.


ಅವರ ಮಾರ್ಗಗಳನ್ನು ನೋಡಿದ್ದೇನೆ, ಅವರನ್ನು ಸ್ವಸ್ಥಮಾಡಿ ನಡಿಸುತ್ತಾ ಅವರಿಗೆ, ಅವರಲ್ಲಿಯೂ ದುಃಖಿತರಿಗೆ, ಆದರಣೆಯನ್ನು ಪ್ರತಿಫಲವಾಗಿ ಕೊಡುವೆನು.


ಇವರಲ್ಲಿ ಒಬ್ಬನು - ಈ ಅಪೂರ್ವಕಾರ್ಯಗಳು ಕೊನೆಗಾಣುವದಕ್ಕೆ ಎಷ್ಟು ಕಾಲ ಹಿಡಿಯುವದು ಎಂದು ನದಿಯ ನೀರಿನ ಮೇಲೆ ನಾರಿನ ಹೊದಿಕೆಯನ್ನು ಹೊದ್ದು ನಿಂತಿದ್ದ ಪುರುಷನನ್ನು ಕೇಳಲು ಆ ಪುರುಷನು ಎಡಬಲಕೈಗಳನ್ನು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು