ಜೆಕರ್ಯ 1:14 - ಕನ್ನಡ ಸತ್ಯವೇದವು J.V. (BSI)14 ಆಗ ಆ ದೂತನು ನನಗೆ ಈ ಅಪ್ಪಣೆಮಾಡಿದನು - ನೀನು ಹೀಗೆ ಸಾರು - ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ಯೆರೂಸಲೇವಿುಗೂ ಚೀಯೋನಿಗೂ ಅವಮಾನವಾಯಿತಲ್ಲಾ ಎಂದು ಬಹಳವಾಗಿ ಕುದಿಯುತ್ತೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಆಗ ಆ ದೂತನು ನನಗೆ ಈ ಅಪ್ಪಣೆ ಮಾಡಿದನು, “ನೀನು ಹೀಗೆ ಸಾರಿ ಹೇಳಬೇಕು, ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, ‘ಯೆರೂಸಲೇಮಿಗೂ, ಚೀಯೋನಿಗೂ ಅವಮಾನವಾಯಿತಲ್ಲಾ’ ಎಂದು ಬಹಳವಾಗಿ ಅಸಮಾಧಾನಗೊಂಡಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಮತ್ತು ಆ ದೂತ ಹೀಗೆಂದು ನನಗೆ ಅಪ್ಪಣೆಮಾಡಿದ: “ಇದನ್ನು ನೀನು ಸಾರಿ ಹೇಳಬೇಕು. ಸೇನಾಧೀಶ್ವರ ಸರ್ವೇಶ್ವರ ಇಂತೆನ್ನುತ್ತಾರೆ - ಜೆರುಸಲೇಮಿನ ಹಾಗೂ ಸಿಯೋನಿನ ಮೇಲೆ ನನಗೆ ತುಂಬ ಅಭಿಮಾನವಿದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಆಗ ಆ ದೂತನು ಜನರಿಗೆ ತಿಳಿಸಲು ಈ ವಿಷಯವನ್ನು ನನಗೆ ಹೇಳಿದನು: ಸರ್ವಶಕ್ತನಾದ ಯೆಹೋವನು ಹೀಗೆನ್ನುತ್ತಾನೆ, “ಜೆರುಸಲೇಮಿನ ಮೇಲೆಯೂ ಚೀಯೋನಿನ ಮೇಲೆಯೂ ನನಗೆ ಆಳವಾದ ಪ್ರೀತಿಯಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ನನ್ನ ಸಂಗಡ ಮಾತನಾಡಿದ ದೂತನು ನನಗೆ, “ಇದನ್ನು ಸಾರಿ ಹೇಳು: ಸರ್ವಶಕ್ತರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ: ನಾನು ಯೆರೂಸಲೇಮಿಗಾಗಿಯೂ, ಚೀಯೋನಿಗಾಗಿಯೂ ಮಹಾ ರೋಷವುಳ್ಳವನಾಗಿದ್ದೇನೆ. ಅಧ್ಯಾಯವನ್ನು ನೋಡಿ |