ಜೆಕರ್ಯ 1:15 - ಕನ್ನಡ ಸತ್ಯವೇದವು J.V. (BSI)15 ನೆಮ್ಮದಿಯಾಗಿರುವ ಜನಾಂಗಗಳ ಮೇಲೆ ನನಗೆ ಬಲು ಸಿಟ್ಟೇರಿದೆ; ನಾನು [ಯೆರೂಸಲೇವಿುನ ಮೇಲೆ] ಸ್ವಲ್ಪ ಮಾತ್ರ ಸಿಟ್ಟುಗೊಂಡು ಮಾಡಿಸಬೇಕೆಂದಿದ್ದ ಕೇಡಿಗಿಂತ ಅವು ಹೆಚ್ಚಾಗಿ ಮಾಡಿದವಷ್ಟೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ನೆಮ್ಮದಿಯಾಗಿರುವ ಜನಾಂಗಗಳ ಮೇಲೆ ನಾನು ಬಹಳ ಕೋಪಗೊಂಡಿದ್ದೇನೆ; ನಾನು ಯೆರೂಸಲೇಮಿನ ಮೇಲೆ ಸ್ವಲ್ಪ ಮಾತ್ರ ಸಿಟ್ಟುಗೊಂಡು ಮಾಡಬೇಕೆಂದಿದ್ದ ಕೇಡಿಗಿಂತ ಅವರೇ ಹೆಚ್ಚಾಗಿ ಕೇಡಿಗೆ ಕೇಡು ಸೇರಿಸಿಕೊಂಡರು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ನೆಮ್ಮದಿಯಿಂದ ಬಾಳುವ ರಾಷ್ಟ್ರಗಳ ಮೇಲೆ ಬಹಳ ಸಿಟ್ಟುಗೊಂಡಿದ್ದೇನೆ. ಏಕೆಂದರೆ, ನಾನು ಜೆರುಸಲೇಮಿನ ವಿರುದ್ಧ ಕಿಂಚಿತ್ತೇ ಕೋಪಗೊಂಡಿದ್ದಾಗ ಅವರು ಕೇಡಿಗೆ ಕೇಡು ಕೂಡಿಸಿಬಿಟ್ಟರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ತಾವು ಸುರಕ್ಷಿತರಾಗಿದ್ದೇವೆ ಎಂದು ನೆನಸುವ ಜನಾಂಗಗಳ ಮೇಲೆ ನಾನು ಕೋಪಗೊಳ್ಳುವೆನು. ನಾನು ಸ್ವಲ್ಪ ಕೋಪಗೊಂಡಿದ್ದರಿಂದ ನನ್ನ ಜನರನ್ನು ಶಿಕ್ಷಿಸಲು ಆ ಜನಾಂಗಗಳನ್ನು ಉಪಯೋಗಿಸಿಕೊಂಡೆನು. ಆದರೆ ಆ ಜನಾಂಗಗಳು ಅತಿಯಾಗಿ ಅವರನ್ನು ಹಾನಿಮಾಡಿದರು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ನಿಶ್ಚಿಂತೆಯುಳ್ಳವರಾಗಿರುವ ಇತರ ರಾಷ್ಟ್ರಗಳ ಮೇಲೆ ನಾನು ಬಹಳ ಕೋಪವಾಗಿದ್ದೇನೆ. ಆದರೆ ಯೆರೂಸಲೇಮಿನ ಮೇಲೆ ನಾನು ಸ್ವಲ್ಪ ಮಾತ್ರ ಸಿಟ್ಟುಗೊಂಡಿರಲು, ಅವರು ಸಂಕಟಕ್ಕೆ ಇನ್ನು ಹೆಚ್ಚು ಕೇಡು ಕೂಡಿಸಿದರು. ಅಧ್ಯಾಯವನ್ನು ನೋಡಿ |