Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 1:2 - ಕನ್ನಡ ಸತ್ಯವೇದವು J.V. (BSI)

2 ಯೆಹೋವನು ನಿಮ್ಮ ಪಿತೃಗಳ ಮೇಲೆ ಬಹುಕೋಪಗೊಂಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅದೇನೆಂದರೆ, “ಯೆಹೋವನು ನಿಮ್ಮ ಪೂರ್ವಿಕರ ಮೇಲೆ ಬಹು ಕೋಪಗೊಂಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಸರ್ವೇಶ್ವರ ನಿಮ್ಮ ಪಿತೃಗಳ ಮೇಲೆ ಬಹಳ ಸಿಟ್ಟುಗೊಂಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ನಿಮ್ಮ ಪೂರ್ವಿಕರ ಮೇಲೆ ಯೆಹೋವನು ಬಹಳವಾಗಿ ಕೋಪಗೊಂಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 “ಯೆಹೋವ ದೇವರು ನಿಮ್ಮ ಪಿತೃಗಳ ಮೇಲೆ ಬಹು ಕೋಪಗೊಂಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 1:2
24 ತಿಳಿವುಗಳ ಹೋಲಿಕೆ  

ಆದಕಾರಣ ನನ್ನ ಉಗ್ರರೋಷಾಗ್ನಿಯು ಸುರಿದು ಯೆಹೂದದ ಊರುಗಳಲ್ಲಿಯೂ ಯೆರೂಸಲೇವಿುನ ಬೀದಿಗಳಲ್ಲಿಯೂ ಧಗಧಗಿಸಿತು; ಅವು ಈಗಲೂ ಹಾಳುಹಾಳಾಗಿವೆ.


ಆದಕಾರಣ ನಾನು ನನ್ನ ಕೋಪವನ್ನು ಅವರ ಮೇಲೆ ಸುರಿಸಿ ನನ್ನ ರೋಷಾಗ್ನಿಯಿಂದ ಅವರನ್ನು ಧ್ವಂಸಮಾಡಿ ಅವರ ದುರ್ನಡತೆಯನ್ನು ಅವರ ತಲೆಗೇ ಕಟ್ಟಿದ್ದೇನೆ; ಇದು ಕರ್ತನಾದ ಯೆಹೋವನ ನುಡಿ.


ನಮ್ಮ ಪಿತೃಗಳು ಪಾಪಮಾಡಿ ಇಲ್ಲದೆ ಹೋದರು; ಅವರ ದೋಷಫಲವನ್ನು ನಾವು ಅನುಭವಿಸಬೇಕಾಯಿತು.


ಪ್ರವಾದಿಗಳಲ್ಲಿ ನಿಮ್ಮ ಪಿತೃಗಳು ಹಿಂಸೆಪಡಿಸದವರು ಯಾರಿದ್ದಾರೆ? ಅವರು ಆ ನೀತಿ ಸ್ವರೂಪನ ಆಗಮನದ ವಿಷಯದಲ್ಲಿ ಮುಂತಿಳಿಸಿದವರನ್ನು ಕೊಂದರು, ನೀವು ಈಗ ಆತನನ್ನು ಹಿಡುಕೊಟ್ಟು ಕೊಂದವರಾದಿರಿ.


ದೇವರೇ, ಕೋಪದಿಂದ ನಮ್ಮನ್ನು ತಳ್ಳಿಕೆಡವಿ ಬಿಟ್ಟಿದ್ದೀ; ನಮ್ಮನ್ನು ಎತ್ತಿ ನಿಲ್ಲಿಸು.


ನಮ್ಮ ದುಷ್ಕರ್ಮಮಹಾಪರಾಧಗಳ ನಿವಿುತ್ತವಾಗಿ ಇಷ್ಟೆಲ್ಲಾ ಕೇಡು ಬಂದರೂ ನಮ್ಮ ದೇವರಾದ ನೀನು ನಮ್ಮ ಪಾಪಗಳಿಗೆ ತಕ್ಕಂತೆ ನಮ್ಮನ್ನು ದಂಡಿಸದೆ ನಮ್ಮಲ್ಲಿ ಇಷ್ಟು ಮಂದಿಯನ್ನು ಉಳಿಸಿದಿ;


ಆದರೂ ಮನಸ್ಸೆಯ ದುಷ್ಕೃತ್ಯಗಳ ದೆಸೆಯಿಂದ ಯೆಹೂದ್ಯರ ಮೇಲಿದ್ದ ಯೆಹೋವನ ಉಗ್ರಕೋಪವು ಇಳಿಯಲಿಲ್ಲ.


ನಾನು ಈ ದೇಶವನ್ನೂ ನಿವಾಸಿಗಳನ್ನೂ ಶಾಪ ವಿಸ್ಮಯಗಳಿಗೆ ಗುರಿಮಾಡುವೆನೆಂಬದನ್ನು ನೀನು ಕೇಳಿದಾಗ ದುಃಖಪಟ್ಟು ನನ್ನ ಮುಂದೆ ತಗ್ಗಿಸಿಕೊಂಡದ್ದರಿಂದಲೂ ಬಟ್ಟೆಗಳನ್ನು ಹರಿದುಕೊಂಡು ಕಣ್ಣೀರು ಸುರಿಸಿದ್ದರಿಂದಲೂ ನಿನ್ನನ್ನು ಲಕ್ಷಿಸಿದೆನು.


ಆದಕಾರಣ ನಾನೂ ಕೋಪೋದ್ರೇಕದಿಂದ ವರ್ತಿಸುವೆನು, ಕಟಾಕ್ಷಿಸೆನು, ಉಳಿಸೆನು; ಅವರು ಕೂಗಿಕೊಳ್ಳುವ ಮಹಾಶಬ್ದವು ನನ್ನ ಕಿವಿಗೆ ಬಿದ್ದರೂ ಲಾಲಿಸೆನು.


ನೆಮ್ಮದಿಯಾಗಿರುವ ಜನಾಂಗಗಳ ಮೇಲೆ ನನಗೆ ಬಲು ಸಿಟ್ಟೇರಿದೆ; ನಾನು [ಯೆರೂಸಲೇವಿುನ ಮೇಲೆ] ಸ್ವಲ್ಪ ಮಾತ್ರ ಸಿಟ್ಟುಗೊಂಡು ಮಾಡಿಸಬೇಕೆಂದಿದ್ದ ಕೇಡಿಗಿಂತ ಅವು ಹೆಚ್ಚಾಗಿ ಮಾಡಿದವಷ್ಟೆ.


ಅವರು ಅದನ್ನು ಸೇರಿ ಅನುಭವಿಸಿದರೂ ನಿನ್ನ ಮಾತಿಗೆ ಕಿವಿಗೊಡಲಿಲ್ಲ, ನಿನ್ನ ಧರ್ಮಾನುಸಾರ ನಡೆಯಲಿಲ್ಲ; ನೀನು ಆಜ್ಞಾಪಿಸಿದವುಗಳಲ್ಲೆಲ್ಲಾ ಒಂದನ್ನೂ ಮಾಡಲಿಲ್ಲ. ಆದಕಾರಣ ನೀನು ಈ ಕೇಡನ್ನೆಲ್ಲಾ ಅವರ ಮೇಲೆ ಬರಮಾಡಿದ್ದೀ.


ಧರ್ಮೋಪದೇಶವನ್ನೂ ಸೇನಾಧೀಶ್ವರ ಯೆಹೋವನು ಪೂರ್ವಕಾಲದ ಪ್ರವಾದಿಗಳ ಮೂಲಕ ತನ್ನ ಆತ್ಮನಿಂದ ಹೇಳಿಸಿದ ಮಾತುಗಳನ್ನೂ ಕೇಳಬಾರದೆಂದು ತಮ್ಮ ಹೃದಯಗಳನ್ನು ವಜ್ರದಷ್ಟು ಕಠಿನಪಡಿಸಿಕೊಂಡರು; ಆದಕಾರಣ ಸೇನಾಧೀಶ್ವರ ಯೆಹೋವನಿಂದ ಅತಿರೌದ್ರವು ಅವರ ಮೇಲೆ ಬಿತ್ತು.


ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ನಿಮ್ಮ ಪಿತೃಗಳು ನನಗೆ ಸಿಟ್ಟೆಬ್ಬಿಸಿದಾಗ ನಿಮಗೆ ಕೇಡು ಮಾಡಬೇಕೆಂದು ನಾನು ನಿಷ್ಕರುಣಿಯಾಗಿ ಸಂಕಲ್ಪಿಸಿದಂತೆ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು