ಜೆಕರ್ಯ 1:3 - ಕನ್ನಡ ಸತ್ಯವೇದವು J.V. (BSI)3 ಆದಕಾರಣ ನೀನು ನಿನ್ನ ಜನರಿಗೆ ಹೀಗೆ ಹೇಳು - ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ನನ್ನ ಕಡೆಗೆ ಪುನಃ ತಿರುಗಿರಿ; ಇದು ಸೇನಾಧೀಶ್ವರ ಯೆಹೋವನ ನುಡಿ; ನಾನು ನಿಮ್ಮ ಕಡೆಗೆ ಪುನಃ ತಿರುಗುವೆನು; ಇದು ಸೇನಾಧೀಶ್ವರ ಯೆಹೋವನ ನುಡಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಆದಕಾರಣ ನೀನು ನಿನ್ನ ಜನರಿಗೆ ಹೀಗೆ ಹೇಳು, ‘ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, ನನ್ನ ಕಡೆಗೆ ಪುನಃ ತಿರುಗಿಕೊಳ್ಳಿರಿ’” ಇದು ಸೇನಾಧೀಶ್ವರನಾದ ಯೆಹೋವನ ನುಡಿ, “ನಾನು ನಿಮ್ಮ ಕಡೆಗೆ ಪುನಃ ತಿರುಗುವೆನು” ಇದು ಸೇನಾಧೀಶ್ವರನಾದ ಯೆಹೋವನ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಎಂದೇ ನೀನು ನನ್ನ ಜನರಿಗೆ ಹೀಗೆಂದು ಹೇಳು: “ಸೇನಾಧೀಶ್ವರ ಸರ್ವೇಶ್ವರ ಇಂತೆನ್ನುತ್ತಾರೆ: ಮರಳಿ ನನಗೆ ಅಭಿಮುಖರಾಗಿರಿ. ಆಗ ನಾನು ನಿಮಗೆ ಮರಳಿ ಅಭಿಮುಖನಾಗುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಆದ್ದರಿಂದ ನಿನ್ನ ಜನರಿಗೆ ನೀನು ಈ ವಿಷಯಗಳನ್ನು ತಿಳಿಸಬೇಕು. ಯೆಹೋವನು ಹೇಳುವುದೇನೆಂದರೆ, “ನನ್ನ ಬಳಿಗೆ ಹಿಂದಿರುಗಿರಿ. ಆಗ ನಾನು ನಿಮ್ಮ ಬಳಿಗೆ ಹಿಂದಿರುಗುವೆನು” ಇದು ಸರ್ವಶಕ್ತನಾದ ಯೆಹೋವನ ಮಾತುಗಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಆದ್ದರಿಂದ ನೀನು ಅವರಿಗೆ ಹೇಳತಕ್ಕದ್ದೇನೆಂದರೆ, ಸರ್ವಶಕ್ತರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ನನ್ನ ಬಳಿಗೆ ತಿರುಗಿಕೊಳ್ಳಿರಿ,’ ಎಂದು ಸರ್ವಶಕ್ತರಾದ ಯೆಹೋವ ದೇವರು ಹೇಳುತ್ತಾರೆ. ಆಗ, ‘ನಾನು ನಿಮ್ಮ ಬಳಿಗೆ ತಿರುಗಿಕೊಳ್ಳುವೆನು,’ ಎಂದು ಸರ್ವಶಕ್ತರಾದ ಯೆಹೋವ ದೇವರು ಹೇಳುತ್ತಾರೆ. ಅಧ್ಯಾಯವನ್ನು ನೋಡಿ |
ಇದಲ್ಲದೆ ನಾನು ನನ್ನ ಸೇವಕರಾದ ಪ್ರವಾದಿಗಳನ್ನೆಲ್ಲಾ ನಿಮ್ಮ ಬಳಿಗೆ ನಿತ್ಯವೂ ಕಳುಹಿಸುತ್ತಾ - ನೀವೆಲ್ಲರೂ ನಿಮ್ಮ ನಿಮ್ಮ ದುರ್ಮಾರ್ಗಗಳಿಂದ ಹಿಂದಿರುಗಿ ನಿಮ್ಮ ನಡತೆಗಳನ್ನು ಸರಿಪಡಿಸಿಕೊಳ್ಳಿರಿ, ಅನ್ಯದೇವತೆಗಳನ್ನು ಹಿಂಬಾಲಿಸಿ ಸೇವಿಸದಿರಿ; ಹೀಗೆ ಮಾಡಿದರೆ ನಾನು ನಿಮಗೂ ನಿಮ್ಮ ಪಿತೃಗಳಿಗೂ ದಯಪಾಲಿಸಿದ ದೇಶದಲ್ಲಿ ನೀವು ಸುಖವಾಸಿಗಳಾಗಿರುವಿರಿ ಎಂದು ಹೇಳಿಸಿದರೂ ನೀವು ನನ್ನ ಮಾತನ್ನು ಕೇಳಲಿಲ್ಲ, ಕಿವಿಗೊಡಲೂ ಇಲ್ಲ.