Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 1:4 - ಕನ್ನಡ ಸತ್ಯವೇದವು J.V. (BSI)

4 ನಿಮ್ಮ ಪಿತೃಗಳಂತಿರಬೇಡಿರಿ; ಪೂರ್ವಕಾಲದ ಪ್ರವಾದಿಗಳು ಅವರಿಗೆ - ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ನಿಮ್ಮ ದುರ್ಮಾರ್ಗ ದುಷ್ಕೃತ್ಯಗಳಿಂದ ಹಿಂದಿರುಗಿರಿ ಎಂದು ಸಾರಿದರೂ ಅವರು ನನ್ನ ಮಾತನ್ನು ಕಿವಿಗೊಟ್ಟು ಕೇಳಲಿಲ್ಲ; ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನಿಮ್ಮ ಪೂರ್ವಿಕರಂತಿರಬೇಡಿರಿ; ಪೂರ್ವಕಾಲದ ಪ್ರವಾದಿಗಳು ಅವರಿಗೆ, “ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ, ‘ನಿಮ್ಮ ದುರ್ಮಾರ್ಗ, ದುಷ್ಕೃತ್ಯಗಳಿಂದ ಹಿಂದಿರುಗಿರಿ’ ಎಂದು ಸಾರಿದರೂ ಅವರು ನನ್ನ ಮಾತನ್ನು ಕಿವಿಗೊಟ್ಟು ಕೇಳಲಿಲ್ಲ” ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ನಿಮ್ಮ ಪಿತೃಗಳಂತೆ ಆಗಬೇಡಿ. ಅವರಿಗೆ ಪೂರ್ವಕಾಲದ ಪ್ರವಾದಿಗಳು, ‘ಸೇನಾಧೀಶ್ವರ ಸರ್ವೇಶ್ವರ ಇಂತೆನ್ನುತ್ತಾರೆ: ನಿಮ್ಮ ದುರ್ಮಾರ್ಗಗಳನ್ನೂ ದುಷ್ಕೃತ್ಯಗಳನ್ನೂ ಬಿಟ್ಟು ಹಿಂದಿರುಗಿ’ ಎಂದು ಸಾರಿದರು. ಆದರೂ ಅವರು ನನ್ನ ಮಾತನ್ನು ಕಿವಿಗೊಟ್ಟು ಕೇಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಯೆಹೋವನು ಹೀಗೆನ್ನುತ್ತಾನೆ: “ನಿಮ್ಮ ಪೂರ್ವಿಕರಂತೆ ಆಗಬೇಡಿರಿ. ಹಿಂದಿನ ಕಾಲದಲ್ಲಿ ಪ್ರವಾದಿಗಳು ಅವರ ಸಂಗಡ ಮಾತನಾಡಿದರು. ಅವರು, ‘ಸರ್ವಶಕ್ತನಾದ ಯೆಹೋವನು ನಿಮ್ಮ ಕೆಟ್ಟಜೀವಿತವನ್ನು ಬದಲಾಯಿಸಲು ಇಷ್ಟಪಡುತ್ತಾನೆ. ದುಷ್ಕೃತ್ಯಗಳನ್ನು ಮಾಡುವದನ್ನು ನಿಲ್ಲಿಸಿರಿ.’ ಆದರೆ ನಿಮ್ಮ ಪೂರ್ವಿಕರು ನನ್ನ ಮಾತುಗಳನ್ನು ಕೇಳಲಿಲ್ಲ.” ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ನಿಮ್ಮ ಪಿತೃಗಳ ಹಾಗಿರಬೇಡಿರಿ; ಅವರಿಗೆ ಪೂರ್ವದ ಪ್ರವಾದಿಗಳು ಕೂಗಿ, ನಿಮ್ಮ ಕೆಟ್ಟ ಮಾರ್ಗಗಳನ್ನೂ, ನಿಮ್ಮ ಕೆಟ್ಟ ಕ್ರಿಯೆಗಳನ್ನೂ ಬಿಟ್ಟು ತಿರುಗಿರಿ ಎಂದು ಸರ್ವಶಕ್ತರಾದ ಯೆಹೋವ ದೇವರು ಪ್ರಕಟಿಸುತ್ತಾರೆಂದು ಹೇಳಿದರು; ಆದರೆ ಅವರು ಕೇಳಲಿಲ್ಲ. ನನ್ನಲ್ಲಿ ಲಕ್ಷ್ಯವಿಡಲಿಲ್ಲ ಎಂದು ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 1:4
55 ತಿಳಿವುಗಳ ಹೋಲಿಕೆ  

ನನ್ನ ಮಹತ್ಕೃತ್ಯಗಳನ್ನು ಮರೆಯದೆ ನನ್ನಲ್ಲಿಯೇ ಭರವಸವಿಟ್ಟು ನನ್ನ ಆಜ್ಞೆಗಳನ್ನು ಕೈಕೊಂಡಾರು ಎಂಬದೇ.


ನನ್ನ ಜೀವದಾಣೆ, ದುಷ್ಟನ ಸಾವಿನಲ್ಲಿ ನನಗೆ ಲೇಶವಾದರೂ ಸಂತೋಷವಿಲ್ಲ; ಅವನು ತನ್ನ ದುರ್ಮಾರ್ಗವನ್ನು ಬಿಟ್ಟು ಬಾಳುವದೇ ನನಗೆ ಸಂತೋಷ. ಇಸ್ರಾಯೇಲ್ ವಂಶದವರೇ, ನಿಮ್ಮ ದುರ್ಮಾರ್ಗಗಳನ್ನು ಬಿಡಿರಿ, ಬಿಟ್ಟುಬಿಡಿರಿ; ನೀವು ಸಾಯಲೇಕೆ? ಇದು ಕರ್ತನಾದ ಯೇಹೋವನ ನುಡಿ.


ಇದಲ್ಲದೆ ನಾನು ನನ್ನ ಸೇವಕರಾದ ಪ್ರವಾದಿಗಳನ್ನೆಲ್ಲಾ ನಿಮ್ಮ ಬಳಿಗೆ ನಿತ್ಯವೂ ಕಳುಹಿಸುತ್ತಾ - ನೀವೆಲ್ಲರೂ ನಿಮ್ಮ ನಿಮ್ಮ ದುರ್ಮಾರ್ಗಗಳಿಂದ ಹಿಂದಿರುಗಿ ನಿಮ್ಮ ನಡತೆಗಳನ್ನು ಸರಿಪಡಿಸಿಕೊಳ್ಳಿರಿ, ಅನ್ಯದೇವತೆಗಳನ್ನು ಹಿಂಬಾಲಿಸಿ ಸೇವಿಸದಿರಿ; ಹೀಗೆ ಮಾಡಿದರೆ ನಾನು ನಿಮಗೂ ನಿಮ್ಮ ಪಿತೃಗಳಿಗೂ ದಯಪಾಲಿಸಿದ ದೇಶದಲ್ಲಿ ನೀವು ಸುಖವಾಸಿಗಳಾಗಿರುವಿರಿ ಎಂದು ಹೇಳಿಸಿದರೂ ನೀವು ನನ್ನ ಮಾತನ್ನು ಕೇಳಲಿಲ್ಲ, ಕಿವಿಗೊಡಲೂ ಇಲ್ಲ.


ಆದಕಾರಣ ನೀನು ನಿನ್ನ ಜನರಿಗೆ ಹೀಗೆ ಹೇಳು - ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ನನ್ನ ಕಡೆಗೆ ಪುನಃ ತಿರುಗಿರಿ; ಇದು ಸೇನಾಧೀಶ್ವರ ಯೆಹೋವನ ನುಡಿ; ನಾನು ನಿಮ್ಮ ಕಡೆಗೆ ಪುನಃ ತಿರುಗುವೆನು; ಇದು ಸೇನಾಧೀಶ್ವರ ಯೆಹೋವನ ನುಡಿ.


ನಿಮ್ಮ ಹಿರಿಯರು ಕಲಿಸಿಕೊಟ್ಟ ವ್ಯರ್ಥವಾದ ನಡವಳಿಕೆಯಿಂದ ನಿಮಗೆ ಬಿಡುಗಡೆಯಾದದ್ದು ಬೆಳ್ಳಿಬಂಗಾರ ಮೊದಲಾದ ನಶಿಸಿಹೋಗುವ ವಸ್ತುಗಳಿಂದಲ್ಲ,


ಮೊದಲು ದಮಸ್ಕದವರಿಗೆ, ಆಮೇಲೆ ಯೆರೂಸಲೇವಿುನಲ್ಲಿಯೂ ಯೂದಾಯದ ಎಲ್ಲಾ ಸೀಮೆಯಲ್ಲಿಯೂ ಇರುವವರಿಗೆ ಮತ್ತು ಅನ್ಯಜನರಿಗೆ ಸಹ - ನೀವು ದೇವರ ಕಡೆಗೆ ತಿರುಗಿಕೊಳ್ಳಬೇಕೆಂತಲೂ ಮಾನಸಾಂತರಕ್ಕೆ ಯೋಗ್ಯವಾದ ಕೃತ್ಯಗಳನ್ನು ಮಾಡಬೇಕೆಂತಲೂ ಸಾರಿದೆನು.


ಆದದರಿಂದ ದೇವರು ನಿಮ್ಮ ಪಾಪಗಳನ್ನು ಅಳಿಸಿಬಿಡುವ ಹಾಗೆ ನೀವು ಪಶ್ಚಾತ್ತಾಪಪಟ್ಟು ಆತನ ಕಡೆಗೆ ತಿರುಗಿಕೊಳ್ಳಿರಿ. ತಿರುಗಿದರೆ ದೇವರ ಸನ್ನಿಧಾನದಿಂದ ವಿಶ್ರಾಂತಿಕಾಲಗಳು ಒದಗಿ


[ಆಹಾ, ಆ ಕೆಡುಕರು] ಪ್ರವಾದನೆ ಮಾಡಬೇಡಿರಿ; ಇಂಥ ವಿಷಯಗಳಲ್ಲಿ ಪ್ರವಾದನೆಯನ್ನೆತ್ತ ಕೂಡದು; ದೂಷಣೆಗಳು ತೊಲಗುವದೇ ಇಲ್ಲ ಎಂದು ಪ್ರವಾದನೆಮಾಡುತ್ತಾರೆ.


ನ್ಯಾಯವು ಹೊಳೆಯ ಹಾಗೆ ಹರಿಯಲಿ, ಧರ್ಮವು ಮಹಾನದಿಯಂತೆ ಪ್ರವಹಿಸಲಿ.


ಇಸ್ರಾಯೇಲೇ, ನೀನು ಹಿಂದಿರುಗಿ ನಿನ್ನ ದೇವರಾದ ಯೆಹೋವನನ್ನು ಸೇರಿಕೋ; ನಿನ್ನ ಅಪರಾಧದಿಂದಲೇ, ನೀನು ಮುಗ್ಗರಿಸಿ ಬಿದ್ದಿ.


ಯೆಹೋವನ ಹೆಸರಿನಿಂದ ನೀನು ನಮಗೆ ನುಡಿದ ಮಾತನ್ನು ಕೇಳಲೊಲ್ಲೆವು.


ಕೇಳಲೊಲ್ಲದ ನಿಮ್ಮ ಬಳಿಗೆ ನಾನು ಸಾವಕಾಶವಿಲ್ಲದೆ ಕಳುಹಿಸುತ್ತಾ ಬಂದಿರುವ ನನ್ನ ಸೇವಕರಾದ ಪ್ರವಾದಿಗಳ ಮಾತುಗಳನ್ನು ಕೇಳದೆಯೂ ಇದ್ದರೆ -


ಈಗ ನೀನು ಯೆಹೂದ್ಯರಿಗೂ ಯೆರೂಸಲೇವಿುನವರಿಗೂ ಈ ಮಾತನ್ನು ಹೇಳು - ಯೆಹೋವನು ಹೀಗನ್ನುತ್ತಾನೆ - ಆಹಾ, ನಾನು ನಿಮಗೆ ವಿರುದ್ಧವಾಗಿ ಯೋಚಿಸಿ ಕೇಡನ್ನು ಕಲ್ಪಿಸುತ್ತಿದ್ದೇನೆ; ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ತನ್ನ ದುರ್ಮಾರ್ಗದಿಂದ ಹಿಂದಿರುಗಲಿ, ನಡತೆಯನ್ನೂ ಕೃತ್ಯಗಳನ್ನೂ ಸರಿಪಡಿಸಿಕೊಳ್ಳಲಿ.


ನೀನು ಹೋಗಿ ಉತ್ತರದಿಕ್ಕಿಗೆ ಈ ಮಾತುಗಳನ್ನು ಸಾರು - ಯೆಹೋವನು ಹೀಗನ್ನುತ್ತಾನೆ, ಭ್ರಷ್ಟಳಾದ ಇಸ್ರಾಯೇಲೇ, ಹಿಂದಿರುಗು; ನಾನು ಕೋಪ ಮುಖದಿಂದ ನಿನ್ನನ್ನು ನೋಡೆನು, ನಾನು ಕರುಣಾಶಾಲಿ, ನಿತ್ಯಕೋಪಿಯಲ್ಲ.


ಇಸ್ರಾಯೇಲ್ಯರೇ, ನೀವು ಯಾರಿಗೆ ಅಗಾಧ ದ್ರೋಹವನ್ನು ಮಾಡಿದಿರೋ ಆತನ ಕಡೆಗೆ ತಿರಿಗಿಕೊಳ್ಳಿರಿ.


ನೀನು ಅನೇಕವರ್ಷಗಳ ತನಕ ಅವರ ವಿಷಯದಲ್ಲಿ ತಾಳಿಕೊಂಡು ಪ್ರವಾದಿಗಳ ಮುಖಾಂತರ ಮಾತಾಡುತ್ತಿದ್ದ ನಿನ್ನ ಆತ್ಮನಿಂದ ಅವರನ್ನು ಎಷ್ಟು ಎಚ್ಚರಿಸುತ್ತಿದ್ದರೂ ಅವರು ಕಿವಿಗೊಡದೆ ಹೋದ ಮೇಲೆ ನೀನು ಅವರನ್ನು ಅನ್ಯದೇಶಗಳವರ ಕೈಗೆ ಒಪ್ಪಿಸಿಬಿಟ್ಟಿ.


ಆಗ ಅವರು ನಿನಗೆ ಅವಿಧೇಯರಾಗಿ ತಿರುಗಿ ಬಿದ್ದು ನಿನ್ನ ಧರ್ಮೋಪದೇಶವನ್ನು ಉಲ್ಲಂಘಿಸಿ ತಮ್ಮನ್ನು ಎಚ್ಚರಿಸುವದಕ್ಕೂ ನಿನ್ನ ಕಡೆಗೆ ತಿರುಗಿಸುವದಕ್ಕೂ ಪ್ರಯತ್ನಿಸುತ್ತಿದ್ದ ನಿನ್ನ ಪ್ರವಾದಿಗಳನ್ನು ಕೊಂದುಹಾಕಿ ನಿನ್ನನ್ನು ಅಸಡ್ಡೆಮಾಡಿದರು.


ಆದರೂ ನಮ್ಮ ಪಿತೃಗಳು ಗರ್ವಿಗಳಾಗಿ ಹಟಹಿಡಿದು ನಿನ್ನ ಆಜ್ಞೆಗಳಿಗೆ ಅವಿಧೇಯರಾದರು.


ನಾವು ನಮ್ಮ ಪಿತೃಗಳ ಕಾಲದಿಂದ ಇಂದಿನವರೆಗೂ ಮಹಾಪರಾಧಿಗಳೇ. ನಮ್ಮ ಪಾಪಗಳ ದೆಸೆಯಿಂದ ನಾವೂ ನಮ್ಮ ಅರಸರೂ ಯಾಜಕರೂ ಅನ್ಯದೇಶಗಳ ರಾಜರ ಕೈಗೆ ಒಪ್ಪಿಸಲ್ಪಟ್ಟು ಈಗಿರುವಂತೆ ಕತ್ತಿಗೂ ಸೆರೆಗೂ ಸುಲಿಗೆಗೂ ಅಪಮಾನಕ್ಕೂ ಗುರಿಯಾದೆವು.


ನಮ್ಮ ಪೂರ್ವಿಕರು ಈ ಗ್ರಂಥದಲ್ಲಿ ಬರೆದಿರುವ ಯೆಹೋವನ ಆಜ್ಞೆಗಳನ್ನೆಲ್ಲಾ ಕೈಕೊಳ್ಳದೆ ಹೋದದರಿಂದ ಯೆಹೋವನು ತನ್ನ ಮಹಾರೌದ್ರವನ್ನು ನಮ್ಮ ಮೇಲೆ ಸುರಿದಿದ್ದಾನೆ; ಆದದರಿಂದ ನೀವು ನನಗೋಸ್ಕರವೂ ಇಸ್ರಾಯೇಲ್ಯರಲ್ಲಿ ಮತ್ತು ಯೆಹೂದ್ಯರಲ್ಲಿ ಉಳಿದಿರುವವರಿಗೋಸ್ಕರವೂ ಯೆಹೋವನ ಬಳಿಗೆ ಹೋಗಿ ನಮಗೆ ಸಿಕ್ಕಿರುವ ಈ ಗ್ರಂಥದ ವಾಕ್ಯಗಳ ವಿಷಯವಾಗಿ ವಿಚಾರಿಸಿರಿ ಎಂದು ಆಜ್ಞಾಪಿಸಿದನು.


ನಿಮ್ಮ ತಂದೆಗಳೂ ಸಹೋದರರೂ ನಡೆದಂತೆ ನೀವೂ ನಡೆಯಬೇಡಿರಿ. ಅವರು ತಮ್ಮ ಪಿತೃಗಳ ದೇವರಾದ ಯೆಹೋವನಿಗೆ ವಿರೋಧವಾಗಿ ದ್ರೋಹಿಗಳಾದದರಿಂದ ಆತನು ಅವರನ್ನು ನಾಶನಕ್ಕೆ ಒಪ್ಪಿಸಿದನು. ಅದಕ್ಕೆ ನೀವೇ ಸಾಕ್ಷಿಗಳು.


ಯೆಹೋವನು ಹೀಗನ್ನುತ್ತಾನೆ - ಇಸ್ರಾಯೇಲೇ, ನೀನು ಹಿಂದಿರುಗುವಿಯಾದರೆ ನನ್ನ ಬಳಿಗೇ ಬರುವಿ; ನನ್ನ ಕಣ್ಣೆದುರಿನಿಂದ ನಿನ್ನ ಅಸಹ್ಯವಸ್ತುಗಳನ್ನು ತೆಗೆದುಬಿಟ್ಟರೆ ನೀನು ಇನ್ನು ದಿಕ್ಕಾಪಾಲಾಗಿರುವದಿಲ್ಲ;


ಇವರು ನನ್ನ ಆಲೋಚನಾಸಭೆಯಲ್ಲಿ ನಿಂತಿದ್ದರೆ ನನ್ನ ಮಾತುಗಳನ್ನು ನನ್ನ ಜನರ ಕಿವಿಗೆ ಮುಟ್ಟಿಸಿ ಅವರನ್ನು ಅವರ ದುರ್ಮಾರ್ಗದಿಂದಲೂ ದುಷ್ಕೃತ್ಯಗಳಿಂದಲೂ ತಪ್ಪಿಸುತ್ತಿದ್ದರು.


ಆಮೇಲೆ ನಾನು ಅರಣ್ಯದಲ್ಲಿ ಅವರ ಸಂತಾನದವರಿಗೆ - ನೀವು ನಿಮ್ಮ ತಂದೆಗಳ ಆಜ್ಞೆಗಳನ್ನು ಅನುಸರಿಸದೆ ಅವರ ವಿಧಿಗಳನ್ನು ಕೈಕೊಳ್ಳದೆ ಅವರ ಬೊಂಬೆಗಳಿಂದ ನಿಮ್ಮನ್ನು ಹೊಲಸುಮಾಡಿಕೊಳ್ಳದೆ ಇರಬೇಕು;


ಕೊಂಬಿನ ಕೂಗನ್ನು ಕೇಳಿದ ಯಾವನೇ ಆಗಲಿ ಎಚ್ಚರಗೊಳ್ಳದೆ ಬೀಳುವ ಖಡ್ಗಕ್ಕೆ ಸಿಕ್ಕಿ ನಾಶವಾದರೆ ತನ್ನ ಮರಣಕ್ಕೆ ತಾನೇ ಕಾರಣ.


ಯೆರೂಸಲೇಮು ಸುತ್ತಣ ಪಟ್ಟಣಗಳ ಸಮೇತ ಜನಭರಿತವಾಗಿಯೂ ನೆಮ್ಮದಿಯಾಗಿಯೂ ಇದ್ದು ದಕ್ಷಿಣಪ್ರಾಂತದಲ್ಲಿಯೂ ಇಳಕಲಿನ ಪ್ರದೇಶದಲ್ಲಿಯೂ ಪ್ರಜೆಯು ತುಂಬಿದ್ದಾಗ ಆ ಪೂರ್ವಕಾಲದ ಪ್ರವಾದಿಗಳ ಮೂಲಕ ಯೆಹೋವನು ಪ್ರಕಟಿಸಿದ ಮಾತುಗಳನ್ನು ನೀವು ಕೇಳಬಾರದೋ?


ಅರಸನ ಮತ್ತು ಅವನ ಸರದಾರರ ಪತ್ರಗಳನ್ನು ತೆಗೆದುಕೊಂಡುಹೋದ ದೂತರು ಇಸ್ರಾಯೇಲ್ ಯೆಹೂದದೇಶಗಳಲ್ಲೆಲ್ಲಾ ಸಂಚರಿಸಿ ರಾಜಾಜ್ಞೆಯಂತೆ ಪ್ರಕಟಿಸಿದ್ದೇನಂದರೆ - ಇಸ್ರಾಯೇಲ್ಯರೇ, ಅಬ್ರಹಾಮ್ ಇಸಾಕ್ ಇಸ್ರಾಯೇಲರ ದೇವರಾದ ಯೆಹೋವನ ಕಡೆಗೆ ತಿರುಗಿಕೊಳ್ಳಿರಿ. ಆಗ ಆತನೂ ನಿಮ್ಮಲ್ಲಿ ಅಶ್ಶೂರದ ಅರಸನ ಕೈಗೆ ಸಿಕ್ಕದಂತೆ ತಪ್ಪಿಸಿಕೊಂಡು ಉಳಿದವರ ಕಡೆಗೆ ತಿರುಗಿಕೊಳ್ಳುವನು.


ಇದೇ ಯೆಹೋವನ ನುಡಿ - ಭ್ರಷ್ಟರಾದ ಮಕ್ಕಳೇ, ತಿರುಗಿಕೊಳ್ಳಿರಿ, ನಾನು ನಿಮಗೆ ಪತಿ; ಒಂದು ಪಟ್ಟಣಕ್ಕೆ ಒಬ್ಬನಂತೆಯೂ ಗೋತ್ರಕ್ಕೆ ಇಬ್ಬರಂತೆಯೂ ಆರಿಸಿ ಚೀಯೋನಿಗೆ ಕರತರುವೆನು.


ಹೀಗಿರಲು ಸೇನಾಧೀಶ್ವರನಾದ ಯೆಹೋವನ ಈ ನುಡಿಯನ್ನು ಕೇಳಿರಿ - ನೀವು ನನ್ನ ಮಾತುಗಳನ್ನು ಕೇಳದ ಕಾರಣ


ಆದಕಾರಣ ನೀನು ಇಸ್ರಾಯೇಲ್ ವಂಶದವರಿಗೆ ಹೀಗೆ ನುಡಿ - ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನೀವು ನಿಮ್ಮ ಬೊಂಬೆಗಳನ್ನು ತೊರೆದುಬಿಟ್ಟು ಹಿಂದಿರುಗಿರಿ, ನಿಮ್ಮ ಎಲ್ಲಾ ಅಸಹ್ಯವಸ್ತುಗಳ ಕಡೆಗೆ ಬೆನ್ನುಮಾಡಿರಿ.


ನಮ್ಮ ಅರಸರು, ಪ್ರಧಾನರು, ಹಿರಿಯರು, ಸಾಮಾನ್ಯಜನರು, ಇವರಿಗೆಲ್ಲ ನಿನ್ನ ಹೆಸರಿನ ಮೇಲೆ ನುಡಿದ ನಿನ್ನ ಸೇವಕರಾದ ಪ್ರವಾದಿಗಳ ಕಡೆಗೆ ಕಿವಿಗೊಡಲೇ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು