Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 1:5 - ಕನ್ನಡ ಸತ್ಯವೇದವು J.V. (BSI)

5 ನಿಮ್ಮ ಪಿತೃಗಳು ಎಲ್ಲಿ? ಪ್ರವಾದಿಗಳು ನಿತ್ಯಜೀವಿಗಳೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 “ನಿಮ್ಮ ಪೂರ್ವಿಕರು ಎಲ್ಲಿ? ಪ್ರವಾದಿಗಳು ಸದಾಕಾಲ ನಿತ್ಯನಿರಂತರವಾಗಿ ಇರುವರೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ನಿಮ್ಮ ಪಿತೃಗಳು ಈಗಲೂ ಇದ್ದಾರೆಯೇ? ಪ್ರವಾದಿಗಳು ಸದಾಕಾಲ ಇರುವರೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಯೆಹೋವನು ಹೀಗೆನ್ನುತ್ತಾನೆ: “ನಿಮ್ಮ ಪೂರ್ವಿಕರು ದಾಟಿಹೋದರು. ಆ ಪ್ರವಾದಿಗಳು ನಿತ್ಯಕಾಲಕ್ಕೂ ಜೀವಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ನಿಮ್ಮ ಪಿತೃಗಳೋ, ಅವರು ಎಲ್ಲಿ? ಪ್ರವಾದಿಗಳು, ಅವರು ನಿತ್ಯವಾಗಿ ಬದುಕುತ್ತಾರೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 1:5
16 ತಿಳಿವುಗಳ ಹೋಲಿಕೆ  

ಇದಲ್ಲದೆ ಆ ದಿನಗಳಲ್ಲಿ ದಿನ್ನೆ ಕಂಡರೆ ಭಯ, ದಾರಿಯಲ್ಲಿ ಅಪಾಯ; ಬಾದಾವಿುಯ ಮರವು ಹೂಬಿಡುವದು; ವಿುಡತೆಯು ಕೂಡ ಭಾರವಾಗುವದು; ಆಶೆಯು ಕುಂದುವದು, ಮನುಷ್ಯನು ತನ್ನ ನಿತ್ಯ ಗೃಹಕ್ಕೆ ಹೊರಡುವದಕ್ಕಿದ್ದಾನಲ್ಲಾ; ಗೋಳಾಟದವರು ಬೀದಿಯಲ್ಲಿ ತಿರುಗುವರು.


ಮಣ್ಣು ಭೂವಿುಗೆ ಸೇರಿ ಇದ್ದ ಹಾಗಾಗುವದು; ಆತ್ಮವು ತನ್ನನ್ನು ದಯಪಾಲಿಸಿದ ದೇವರ ಬಳಿಗೆ ಸೇರುವದು; ಇಷ್ಟರೊಳಗಾಗಿ [ನಿನ್ನ ಸೃಷ್ಟಿಕರ್ತನನ್ನು ಸ್ಮರಿಸದಿರಬೇಡ.]


ಒಂದೇ ಸಾರಿ ಸಾಯುವದೂ ಆಮೇಲೆ ನ್ಯಾಯತೀರ್ಪೂ ಮನುಷ್ಯರಿಗೆ ಹೇಗೆ ನೇಮಕವಾಗಿದೆಯೋ ಹಾಗೆಯೇ ಕ್ರಿಸ್ತನು ಸಹ ಬಹುಜನರ ಪಾಪಗಳನ್ನು ಹೊತ್ತುಕೊಳ್ಳುವದಕ್ಕೋಸ್ಕರ ಒಂದೇ ಸಾರಿ ಸಮರ್ಪಿತನಾದನು,


ದಾವೀದನಾದರೋ ತನ್ನ ಸಕಾಲದವರಿಗೆ ಸೇವೆಮಾಡಿದನಂತರ ದೈವಸಂಕಲ್ಪದಿಂದ ನಿದ್ದೆಹೋಗಿ ತನ್ನ ಪಿತೃಗಳ ಬಳಿಯಲ್ಲಿ ಇಡಲ್ಪಟ್ಟು ಕೊಳೆಯುವ ಅವಸ್ಥೆಯನ್ನು ಅನುಭವಿಸಿದನು.


ಅದಕ್ಕೆ ಯೆಹೂದ್ಯರು - ನೀನು ದೆವ್ವಹಿಡಿದವನೆಂದು ಈಗ ನಮಗೆ ತಿಳಿಯಿತು; ಅಬ್ರಹಾಮನು ಸತ್ತನು. ಪ್ರವಾದಿಗಳೂ ಸತ್ತರು; ಆದರೆ ನೀನು - ನನ್ನ ವಾಕ್ಯವನ್ನು ಕೈಕೊಂಡು ನಡೆಯುವವನು ಎಂದಿಗೂ ಸಾವನ್ನು ಅನುಭವಿಸುವದಿಲ್ಲವೆಂದು ಹೇಳುತ್ತೀ.


ಒಂದು ತಲಾಂತರವು ಗತಿಸುವದು, ಇನ್ನೊಂದು ತಲಾಂತರವು ಬರುವದು. ಭೂವಿುಯಾದರೋ ಶಾಶ್ವತವಾಗಿ ನಿಲ್ಲುವದು.


ನಮ್ಮ ಆಯುಷ್ಕಾಲವು ಎಪ್ಪತ್ತು ವರುಷ; ಬಲ ಹೆಚ್ಚಿದರೆ ಎಂಭತ್ತು. ಕಷ್ಟಸಂಕಟಗಳೇ ಅದರ ಆಡಂಬರ ಅದು ಬೇಗನೆ ಗತಿಸಿಹೋಗುತ್ತದೆ; ನಾವು ಹಾರಿ ಹೋಗುತ್ತೇವೆ.


ನೀನು ಇನ್ನೊಂದು ಸುರಳಿಯನ್ನು ತೆಗೆದುಕೊಂಡು ಯೆಹೂದದ ಅರಸನಾದ ಯೆಹೋಯಾಕೀಮನು ಸುಟ್ಟ ಮೊದಲನೆಯ ಸುರಳಿಯಲ್ಲಿದ್ದ ಪೂರ್ವದ ಆ ಮಾತುಗಳನ್ನೆಲ್ಲಾ ಪುನಃ ಬರೆಯಿಸು.


ನಮ್ಮ ಪಿತೃಗಳು ಪಾಪಮಾಡಿ ಇಲ್ಲದೆ ಹೋದರು; ಅವರ ದೋಷಫಲವನ್ನು ನಾವು ಅನುಭವಿಸಬೇಕಾಯಿತು.


ಸಮುವೇಲನು ಮೃತಿಹೊಂದಿದನು. ಇಸ್ರಾಯೇಲ್ಯರೆಲ್ಲರೂ ಕೂಡಿ ಬಂದು ಅವನಿಗೋಸ್ಕರ ಗೋಳಾಡುತ್ತಾ ಅವನ ಶವವನ್ನು ರಾಮದಲ್ಲಿದ್ದ ಅವನ ಮನೆಯ ನಿವೇಶನದಲ್ಲಿ ಸಮಾಧಿಮಾಡಿದರು. ದಾವೀದನು ಹೊರಟು ಪಾರಾನ್ ಅರಣ್ಯಕ್ಕೆ ಹೋದನು.


ಎಲೀಷನು ಮರಣಕರ ರೋಗದಲ್ಲಿ ಬಿದ್ದನು. ಇಸ್ರಾಯೇಲ್ಯರ ಅರಸನಾದ ಯೋವಾಷನು ಇದನ್ನು ಕೇಳಿ ಅವನ ಬಳಿಗೆ ಹೋಗಿ - ನನ್ನ ತಂದೆಯೇ, ನನ್ನ ತಂದೆಯೇ, ಇಸ್ರಾಯೇಲ್ಯರಿಗೆ ರಥರಥಾಶ್ವಬಲಗಳಾಗಿದ್ದವನೇ ಎಂದು ಕೂಗುತ್ತಾ ಅವನ ಮುಖದ ಮೇಲೆ ಬಿದ್ದು ಬಹಳವಾಗಿ ಅತ್ತನು.


ಎಲೀಷನು ಮೃತಿಹೊಂದಲು ಅವನ ಶವವನ್ನು ಸಮಾಧಿಮಾಡಿದರು. ಮೋವಾಬ್ಯರು ಪ್ರತಿವರುಷದ ಪ್ರಾರಂಭದಲ್ಲಿ ಸುಲಿಗೆ ಮಾಡುವದಕ್ಕೋಸ್ಕರ ಗುಂಪು ಗುಂಪಾಗಿ ಬರುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು