Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 1:6 - ಕನ್ನಡ ಸತ್ಯವೇದವು J.V. (BSI)

6 ಆದರೆ ನನ್ನ ಸೇವಕರಾದ ಪ್ರವಾದಿಗಳಿಗೆ ಆಜ್ಞಾಪಿಸಿದ ನನ್ನ ವಾಕ್ಯಗಳೂ ವಿಧಿಗಳೂ ನಿಮ್ಮ ಪಿತೃಗಳನ್ನು ಹಿಂದಟ್ಟಿ ಹಿಡಿದು ನಿತ್ಯವಾಗಿವೆಯಷ್ಟೆ; ಅವರು ತಿರುಗಿಕೊಂಡು - ಸೇನಾಧೀಶ್ವರ ಯೆಹೋವನು ನಮ್ಮ ದುರ್ಮಾರ್ಗ ದುಷ್ಕೃತ್ಯಗಳಿಗೆ ತಕ್ಕ ಹಾಗೆ ನಮಗೆ ಏನು ಮಾಡಬೇಕೆಂದು ಸಂಕಲ್ಪಿಸಿದನೋ ಅದನ್ನು ನಮಗೆ ಮಾಡಿದ್ದಾನಲ್ಲಾ ಅಂದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆದರೆ ನನ್ನ ಸೇವಕರಾದ ಪ್ರವಾದಿಗಳಿಗೆ ಆಜ್ಞಾಪಿಸಿದ ನನ್ನ ವಾಕ್ಯಗಳೂ ಮತ್ತು ವಿಧಿಗಳೂ ನಿಮ್ಮ ಪೂರ್ವಿಕರನ್ನು ಹಿಂದಟ್ಟಿ ಹಿಡಿದು ಶಾಶ್ವತವಾಗಿ ಉಳಿದಿದೆ. ಅವರು ತಿರುಗಿಕೊಂಡು, ಸೇನಾಧೀಶ್ವರ ಯೆಹೋವನಿಗೆ ‘ನಮ್ಮ ದುಷ್ಕೃತ್ಯಗಳಿಗೆ ತಕ್ಕ ಹಾಗೆ ನಮಗೆ ಏನು ಮಾಡಬೇಕೆಂದು ಸಂಕಲ್ಪಿಸಿದನೋ ಅದನ್ನು ನಮಗೆ ಮಾಡಿದ್ದಾನಲ್ಲಾ’” ಅಂದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಆದರೂ ನನ್ನ ದಾಸರಾದ ಪ್ರವಾದಿಗಳಿಗೆ ನಾನು ಕೊಟ್ಟ ಆಜ್ಞೆಗಳು, ವಿಧಿನಿಯಮಗಳು ನಿಮ್ಮ ಪಿತೃಗಳ ಮರಣದ ನಂತರವೂ ಶಾಶ್ವತವಾಗಿ ಉಳಿದಿವೆಯಲ್ಲವೆ? ಅವರು ಪಶ್ಚಾತ್ತಾಪಪಟ್ಟು, ‘ಸೇನಾಧೀಶ್ವರ ಸರ್ವೇಶ್ವರ ನಮ್ಮ ದುರ್ಮಾರ್ಗ ಹಾಗೂ ದುಷ್ಕೃತ್ಯಗಳಿಗೆ ತಕ್ಕಂತೆ ಏನು ಮಾಡಬೇಕೆಂದು ಸಂಕಲ್ಪಿಸಿದ್ದರೋ, ಅದನ್ನು ನಮಗೆ ಮಾಡಿಯೇ ಮಾಡಿದ್ದಾರೆ’ ಎಂದು ಹೇಳಿಕೊಂಡರಲ್ಲವೆ?”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಪ್ರವಾದಿಗಳು ನನ್ನ ಸೇವಕರು. ನಿಮ್ಮ ಪೂರ್ವಿಕರಿಗೆ ನ್ಯಾಯಪ್ರಮಾಣಗಳನ್ನು ಬೋಧಿಸಲು ನಾನು ಅವರನ್ನು ಉಪಯೋಗಿಸಿದೆನು. ನಿಮ್ಮ ಪೂರ್ವಿಕರು ಕಟ್ಟಕಡೆಗೆ ಪಾಠವನ್ನು ಕಲಿತರು. ಅವರು, ‘ಸರ್ವಶಕ್ತನಾದ ಯೆಹೋವನು ತಾನು ಹೇಳಿದ್ದನ್ನು ನೆರವೇರಿಸಿದನು. ನಮ್ಮ ದುಷ್ಕೃತ್ಯಗಳಿಗಾಗಿ ನಮ್ಮನ್ನು ಶಿಕ್ಷಿಸಿದನು’ ಎಂದು ಹೇಳಿದರು ಮತ್ತು ದೇವರ ಕಡೆಗೆ ತಿರುಗಿದರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆದರೆ ನಾನು ನನ್ನ ಸೇವಕರಾದ ಪ್ರವಾದಿಗಳಿಗೆ ಆಜ್ಞಾಪಿಸಿ, ನನ್ನ ವಾಕ್ಯಗಳೂ, ನನ್ನ ನಿಯಮಗಳೂ ನಿಮ್ಮ ಪಿತೃಗಳಿಗೆ ಸೇರಲಿಲ್ಲವೋ? “ಆಗ ಅವರು ತಿರುಗಿಕೊಂಡು, ‘ಸೇನಾಧೀಶ್ವರ ಯೆಹೋವ ದೇವರು ನಮಗೆ ಮಾಡುವುದಕ್ಕೆ ಯೋಚಿಸಿದ ಹಾಗೆಯೇ, ನಮ್ಮ ಮಾರ್ಗಗಳ ಪ್ರಕಾರವಾಗಿಯೂ, ನಮ್ಮ ಕ್ರಿಯೆಗಳ ಪ್ರಕಾರವಾಗಿಯೂ ನಮಗೆ ಮಾಡಿದ್ದಾರೆ,’ ಎಂದು ಹೇಳಿದರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 1:6
46 ತಿಳಿವುಗಳ ಹೋಲಿಕೆ  

ಯೆಹೋವನು ತನ್ನ ಸಂಕಲ್ಪವನ್ನು ಸಿದ್ಧಿಗೆ ತಂದು ತಾನು ಪುರಾತನಕಾಲದಲ್ಲಿ ನುಡಿದ ಮಾತನ್ನು ಈಡೇರಿಸಿದ್ದಾನೆ; ಆತನು ಕರುಣಿಸದೆ [ನಿನ್ನನ್ನು] ಕೆಡವಿ ನಿನ್ನ ವೈರಿಗಳಿಗೆ ಆನಂದವಾಗುವಂತೆ ಮಾಡಿ ನಿನ್ನ ವಿರೋಧಿಗಳ ಕೊಂಬನ್ನು ಎತ್ತಿದ್ದಾನೆ.


ಆದರೆ ನೀವು ನಿಮ್ಮ ದೇವರಾದ ಯೆಹೋವನ ಮಾತಿಗೆ ಕಿವಿಗೊಡದೆ ನಾನು ಈಗ ನಿಮಗೆ ಬೋಧಿಸುವ ಆತನ ಆಜ್ಞಾವಿಧಿಗಳನ್ನು ಅನುಸರಿಸದೆ ಹೋದರೆ ಈ ಅಶುಭಗಳು ನಿಮಗೆ ಪ್ರಾಪ್ತವಾಗುವವು -


ಭೂಮ್ಯಾಕಾಶಗಳು ಅಳಿದುಹೋಗುವವು, ಆದರೆ ನನ್ನ ಮಾತುಗಳು ಅಳಿದು ಹೋಗುವದೇ ಇಲ್ಲ.


ಯೆಹೋವನು ತನ್ನ ಹೃದಯಾಲೋಚನೆಗಳನ್ನು ನಡಿಸಿ ನೆರವೇರಿಸುವ ತನಕ ಆತನ ರೋಷವು ಹಿಂದಿರುಗದು; ಕಟ್ಟಕಡೆಯ ದಿನಗಳಲ್ಲಿ ನೀವು ಇದನ್ನು ಸ್ಪಷ್ಟವಾಗಿ ಗ್ರಹಿಸುವಿರಿ.


ನಮ್ಮನ್ನು ಆಪತ್ತು ಹಿಂದಟ್ಟಿ ಹಿಡಿಯದು, ಎದುರುಬಿದ್ದು ಮುತ್ತದು ಅಂದುಕೊಂಡ ನನ್ನ ಜನರಲ್ಲಿನ ಸಮಸ್ತ ಪಾಪಿಗಳು ಖಡ್ಗ ಹತರಾಗುವರು.


ಖಡ್ಗಕ್ಕೆ ತಪ್ಪಿಸಿಕೊಂಡವರು ಕೊಂಚ ಜನ ಮಾತ್ರವೇ ಆಗಿ ಐಗುಪ್ತದಿಂದ ಯೆಹೂದಕ್ಕೆ ಹಿಂದಿರುಗುವರು; ಆಗ ಐಗುಪ್ತಕ್ಕೆ ಹೋಗಿ ಪ್ರವಾಸಿಸುತ್ತಿರುವ ಯೆಹೂದ ಜನಶೇಷದವರೆಲ್ಲರೂ ನನ್ನ ಮಾತು ಸಾಗತಕ್ಕದ್ದೋ ತಮ್ಮ ಮಾತು ಸಾಗತಕ್ಕದ್ದೋ ಎಂದು ತಿಳಿದುಕೊಳ್ಳುವರು.


ದೇವರು ಮನುಷ್ಯನಂತೆ ಎರಡು ಮಾತಿನವನಲ್ಲ; ಮಾನವನಂತೆ ಮನಸ್ಸನ್ನು ಬೇರೆ ಮಾಡಿಕೊಳ್ಳುವವನಲ್ಲ. ತಾನು ಹೇಳಿದ ಮೇರೆಗೆ ನಡೆಯುವದಿಲ್ಲವೋ; ಮಾತು ಕೊಟ್ಟನಂತರ ನೆರವೇರಿಸುವದಿಲ್ಲವೋ.


ಆದರೆ ಸಹೋದರರೇ, ಆ ದಿನವು ಕಳ್ಳನಂತೆ ನಿಮ್ಮ ಮೇಲೆ ಬರತಕ್ಕದ್ದಲ್ಲ; ನೀವು ಕತ್ತಲೆಯಲ್ಲಿರುವವರಲ್ಲ.


ಆಗ ಶಿಷ್ಟರಿಗೂ ದುಷ್ಟರಿಗೂ ದೇವರನ್ನು ಸೇವಿಸುವವರಿಗೂ ಸೇವಿಸದವರಿಗೂ ಇರುವ ತಾರತಮ್ಯವನ್ನು ಮತ್ತೆ ಕಾಣುವಿರಿ.


ಅವರ ದುಷ್ಟತನವು ಗಿಲ್ಗಾಲಿನಲ್ಲಿ ತುಂಬಿದೆ; ಅಲ್ಲೇ ನನ್ನ ದ್ವೇಷಕ್ಕೆ ಗುರಿಯಾಗಿದ್ದಾರೆ; ಅವರ ದುಷ್ಕೃತ್ಯಗಳ ನಿವಿುತ್ತ ನಾನು ಅವರನ್ನು ನನ್ನ ನಿವಾಸದೊಳಗಿಂದ ಓಡಿಸಿಬಿಡುವೆನು; ಅವರನ್ನು ಇನ್ನು ಪ್ರೀತಿಸೆನು; ಅವರ ಅಧಿಕಾರಿಗಳೆಲ್ಲರೂ ದ್ರೋಹಿಗಳೇ ಸರಿ.


ಆಮೇಲೆ ಅತನು ನನಗೆ ಹೀಗೆ ಹೇಳಿದನು - ನರಪುತ್ರನೇ, ಈ ಎಲುಬುಗಳು ಇಸ್ರಾಯೇಲಿನ ಪೂರ್ಣವಂಶವು; ಇಗೋ, ಆ ವಂಶೀಯರು - ಅಯ್ಯೋ, ನಮ್ಮ ಎಲುಬುಗಳು ಒಣಗಿಹೋದವು, ನಮ್ಮ ನಿರೀಕ್ಷೆಯು ಹಾಳಾಯಿತು; ನಾವು ಬುಡನಾಶವಾದೆವು ಅಂದುಕೊಳ್ಳುತ್ತಿದ್ದಾರೆ.


ನೀವು ನಿಮ್ಮನ್ನು ಹೊಲಸುಮಾಡಿಕೊಂಡಿರುವ ನಿಮ್ಮ ನಡತೆಯನ್ನೂ ನಿಮ್ಮ ಎಲ್ಲಾ ಕಾರ್ಯಗಳನ್ನೂ ಅಲ್ಲಿ ಜ್ಞಾಪಕಕ್ಕೆ ತಂದುಕೊಂಡು ನೀವು ನಡಿಸಿರುವ ಸಕಲ ದುಷ್ಕೃತ್ಯಗಳ ನಿವಿುತ್ತ ನಿಮ್ಮನ್ನು ನೋಡಿ ನೀವೇ ಅಸಹ್ಯಪಡುವಿರಿ.


ಯೆಹೋವನು ನ್ಯಾಯಸ್ವರೂಪನು, ನಾನಾದರೋ ಆತನ ಆಜ್ಞೆಯನ್ನು ಮೀರಿದವಳು; ಜನಾಂಗಗಳೇ, ನೀವೆಲ್ಲರೂ ಕಿವಿಗೊಡಿರಿ, ನನ್ನ ವ್ಯಥೆಯನ್ನು ನೋಡಿರಿ; ನನ್ನ ಯುವತೀ ಯುವಕರು ಸೆರೆ ಹೋಗಿದ್ದಾರಲ್ಲಾ!


ಆದರೆ ನೀವು ನನ್ನನ್ನು ಕೊಂದುಹಾಕಿದ ಪಕ್ಷಕ್ಕೆ ನೀವೂ ಈ ಪಟ್ಟಣವೂ ಇದರ ನಿವಾಸಿಗಳೂ ನಿರ್ದೋಷಿಯ ರಕ್ತವನ್ನು ಸುರಿಸಿದ ಅಪರಾಧಕ್ಕೆ ಪಾತ್ರರಾಗುವಿರಿ ಎಂದು ನಿಶ್ಚಯವಾಗಿ ತಿಳಿದುಕೊಳ್ಳಿರಿ. ಈ ಮಾತುಗಳನ್ನೆಲ್ಲಾ ನಿಮ್ಮ ಕಿವಿಗೆ ಮುಟ್ಟಿಸುವಂತೆ ಯೆಹೋವನು ನನ್ನನ್ನು ಕಳುಹಿಸಿರುವದು ಖಂಡಿತ.


ಯೆಹೂದದವರೇ, ಯೆರೂಸಲೇವಿುನ ನಿವಾಸಿಗಳೇ, ನಿಮ್ಮ ಹೃದಯದ ಮುಂದೊಗಲನ್ನು ತೆಗೆದುಹಾಕಿ ಯೆಹೋವನಿಗಾಗಿ ಸುನ್ನತಿಯಾಗಿರಿ; ಇಲ್ಲವಾದರೆ ನಿಮ್ಮ ದುಷ್ಕೃತ್ಯಗಳ ನಿವಿುತ್ತ ನನ್ನ ರೋಷವು ಜ್ವಾಲೆಯಂತೆ ಹೊರಟು ಯಾರೂ ಆರಿಸಲಾಗದಷ್ಟು ರಭಸವಾಗಿ ಧಗಧಗಿಸುವದು.


ಎಲೈ, ಬಾಯಾರಿದ ಸಕಲ ಜನರೇ, ನೀರಿನ ಬಳಿಗೆ ಬನ್ನಿರಿ, ಹಣವಿಲ್ಲದವನು ಸಹ ಬರಲಿ! ಬನ್ನಿರಿ, ಕೊಂಡುಕೊಳ್ಳಿರಿ, ಉಣ್ಣಿರಿ! ಬಂದು ದ್ರಾಕ್ಷಾರಸವನ್ನೂ ಹಾಲನ್ನೂ ಹಣಕೊಡದೆ ಕ್ರಯವಿಲ್ಲದೆ ತೆಗೆದುಕೊಳ್ಳಿರಿ.


ನನ್ನ ಸೇವಕನ ಮಾತನ್ನು ಸ್ಥಾಪಿಸಿ ನನ್ನ ದೂತರ ಮಂತ್ರಾಲೋಚನೆಯನ್ನು ನೆರವೇರಿಸುವವನಾಗಿದ್ದೇನೆ; ಯೆರೂಸಲೇಮು ಜನನಿವಾಸವಾಗುವದು, ಯೆಹೂದದ ಪಟ್ಟಣಗಳು ತಿರಿಗಿ ಕಟ್ಟಲ್ಪಡುವವು, ಅಲ್ಲಿನ ಹಾಳನ್ನು ಹಸನುಮಾಡುವೆನು ಎಂದು ನಾನು ಮುಂತಿಳಿಸಿ


ದಯವಿಟ್ಟು ನನ್ನ ವಿಚಾರಣೆಗೆ ತಿರುಗಿಕೊಳ್ಳಿರಿ, ಅನ್ಯಾಯವಾಗದಿರಲಿ; ಮತ್ತೆ ವಿಮರ್ಶೆಗೆ ತಿರುಗಿಕೊಳ್ಳಿರಿ. ನನ್ನ ವ್ಯಾಜ್ಯವು ನ್ಯಾಯವಾದದ್ದು.


ನೀವು ನಿಮ್ಮ ದೇವರಾದ ಯೆಹೋವನ ಮಾತಿಗೆ ಕಿವಿಗೊಡದೆಯೂ ಆತನು ನೇವಿುಸಿದ ಆಜ್ಞಾವಿಧಿಗಳನ್ನು ಅನುಸರಿಸದೆಯೂ ಹೋದದರಿಂದ ಈ ಎಲ್ಲಾ ಅಶುಭಗಳು ನಿಮಗೆ ಪ್ರಾಪ್ತವಾಗಿ ನಿಮ್ಮನ್ನು ಹಿಂದಟ್ಟಿ ಹಿಡಿದು ಕಡೆಗೆ ನಾಶಮಾಡುವವು.


ನೀವು ದುರ್ನಡತೆಯುಳ್ಳವರಾಗಿ ಯೆಹೋವನನ್ನು ಬಿಟ್ಟದ್ದರಿಂದ ಆತನು ನಿಮ್ಮ ಎಲ್ಲಾ ಪ್ರಯತ್ನಗಳಲ್ಲಿಯೂ ವಿಪತ್ತು, ಕಳವಳ, ಶಾಪ ಇವುಗಳನ್ನುಂಟುಮಾಡುತ್ತಾ ನಿಮ್ಮನ್ನು ಬೇಗನೆ ನಾಶಮಾಡುವನು.


ಅದಲ್ಲದೆ ನಾನು ಅವರಿಗೆ ಮಾಡ ಯೋಚಿಸಿದಂತೆ ನಿಮಗೇ ಮಾಡುವೆನು.


ಆದರೆ ನೀವು ಹಾಗೆ ಮಾಡದೆಹೋದರೆ ಯೆಹೋವನಿಗೆ ವಿರುದ್ಧವಾಗಿ ಪಾಪಮಾಡಿದವರಾಗುವಿರಿ; ಮತ್ತು ನಿಮ್ಮ ಪಾಪವು ನಿಮ್ಮನ್ನು ಹಿಡಿಯುವ ತನಕ ಹುಡುಕಿಕೊಂಡೇ ಬರುವದು ಎಂದು ತಿಳಿದುಕೊಳ್ಳಿರಿ.


ನಿಮ್ಮ ದೇವರಾದ ಯೆಹೋವನ ಮಾತಿಗೆ ಕಿವಿಗೊಟ್ಟು ನಡೆದರೆ ಈ ಶುಭಗಳೆಲ್ಲಾ ನಿಮಗೆ ಪ್ರಾಪ್ತವಾಗುವವು. ಯಾವವಂದರೆ -


ಬಿಲ್ಲುಗಾರರಲ್ಲಿ ಉಳಿದವರೂ ಕೇದಾರಿನವರ ಶೂರರೂ ವಿರಳರಾಗುವರು; ಇಸ್ರಾಯೇಲ್ಯರ ದೇವರಾದ ಯೆಹೋವನು ಇದನ್ನು ನುಡಿದಿದ್ದಾನೆ ಎಂಬದೇ.


ಹೀಗಿರಲು ಸೇನಾಧೀಶ್ವರನಾದ ಯೆಹೋವನೆಂಬ ದೇವರು ಇಂತೆನ್ನುತ್ತಾನೆ - ನೀವು ಹೀಗೆ ಅಂದುಕೊಂಡದ್ದರಿಂದ ಆಹಾ, ನಾನು ಪ್ರವಾದಿಯ ಬಾಯಲ್ಲಿನ ನನ್ನ ಮಾತುಗಳನ್ನು ಬೆಂಕಿಯನ್ನಾಗಿಯೂ ಈ ಜನರನ್ನು ಸೌದೆಯನ್ನಾಗಿಯೂ ಮಾಡುವೆನು, ಅದು ಅವರನ್ನು ತಿಂದುಬಿಡುವದು.


ಇಗೋ, ಮುತ್ತಿಗೆಯ ದಿಬ್ಬಗಳು, ಪಟ್ಟಣವನ್ನು ಆಕ್ರವಿುಸುವದಕ್ಕೆ ಬಂದಿದ್ದಾರೆ; ಪಟ್ಟಣವು ಖಡ್ಗಕ್ಷಾಮವ್ಯಾಧಿಗಳಿಂದ ಕ್ಷೀಣವಾಗಿ ವಿರೋಧಿಗಳಾದ ಕಸ್ದೀಯರ ಕೈಗೆ ಸಿಕ್ಕಿದೆ; ನೀನು ನುಡಿದದ್ದು ನೆರವೇರಿದೆ, ಇಗೋ, ನೋಡುತ್ತಿದ್ದೀ.


ನೀನು ಇನ್ನೊಂದು ಸುರಳಿಯನ್ನು ತೆಗೆದುಕೊಂಡು ಯೆಹೂದದ ಅರಸನಾದ ಯೆಹೋಯಾಕೀಮನು ಸುಟ್ಟ ಮೊದಲನೆಯ ಸುರಳಿಯಲ್ಲಿದ್ದ ಪೂರ್ವದ ಆ ಮಾತುಗಳನ್ನೆಲ್ಲಾ ಪುನಃ ಬರೆಯಿಸು.


ನೀನು ಹೋಗಿ ಕೂಷ್ಯನಾದ ಎಬೆದ್ಮೆಲೆಕನಿಗೆ ಹೀಗೆ ಹೇಳು - ಇಸ್ರಾಯೇಲ್ಯರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ - ಆಹಾ, ನಾನು ನುಡಿದ ಮೇಲನ್ನಲ್ಲ, ನುಡಿದ ಕೇಡನ್ನೇ ಈ ಪಟ್ಟಣದ ಮೇಲೆ ಬರಮಾಡುವೆನು; ಅದು ಆ ದಿನದಲ್ಲಿ ನಿನ್ನ ಕಣ್ಣೆದುರಿಗೆ ಆಗುವದು.


ನಾನು ನಿಮ್ಮನ್ನು ಈ ಸ್ಥಳದಲ್ಲಿ ದಂಡಿಸುವೆನೆಂಬದಕ್ಕೆ ಒಂದು ಗುರುತು ಕಾಣುವದು; ನನ್ನ ಮಾತುಗಳು ಈಡೇರಿ ನಿಮಗೆ ಕೇಡನ್ನುಂಟುಮಾಡುವವು ಎಂಬದಾಗಿ ಅದರಿಂದಲೇ ನಿಮಗೆ ತಿಳಿದುಬರುವದು;


ಇದೆಲ್ಲಾ ರಾಜನಾದ ನೆಬೂಕದ್ನೆಚ್ಚರನ ಅನುಭವಕ್ಕೆ ಬಂತು.


ಬೆನ್ಯಾಮೀನೇ, ಹಿಂದೆ ನೋಡು! ಖಂಡನೆಯ ದಿನದಲ್ಲಿ ಎಫ್ರಾಯೀಮು ಹಾಳಾಗುವದು; ಇಸ್ರಾಯೇಲ್ ಕುಲಗಳ ಭವಿಷ್ಯತ್ತಿನ ನಿಶ್ಚಯವನ್ನು ತಿಳಿಯಪಡಿಸಿದ್ದೇನೆ.


ದಾರ್ಯಾವೆಷನ ಆಳಿಕೆಯ ಎರಡನೆಯ ವರುಷದ ಹನ್ನೊಂದನೆಯ ತಿಂಗಳಿನ ಅಂದರೆ ಶೆಬಾಟ್ ತಿಂಗಳಿನ ಇಪ್ಪತ್ತನಾಲ್ಕನೆಯ ದಿನದಲ್ಲಿ ಯೆಹೋವನ ವಾಕ್ಯವು ಇದ್ದೋವಿನ ಮೊಮ್ಮಗನೂ ಬೆರೆಕ್ಯನ ಮಗನೂ ಆದ ಜೆಕರ್ಯನೆಂಬ ಪ್ರವಾದಿಗೆ ಕಂಡುಬಂತು.


ನಿನ್ನ ಸಂತಾನದವರು ನಾಲ್ಕನೆಯ ತಲೆಯವರೆಗೂ ಇಸ್ರಾಯೇಲ್‍ಸಿಂಹಾಸನದ ಮೇಲೆ ಕೂತುಕೊಳ್ಳುವರು ಎಂಬದಾಗಿ ಯೆಹೋವನು ಯೇಹುವಿಗೆ ಮುಂತಿಳಿಸಿದ ಮಾತು ನೆರವೇರಿತು.


ಹಾಗೆಯೇ ನನ್ನ ಬಾಯಿಂದ ಹೊರಟ ಮಾತು ನನ್ನ ಇಷ್ಟಾರ್ಥವನ್ನು ನೆರವೇರಿಸಿ ನಾನು ಉದ್ದೇಶಿಸಿದ್ದನ್ನು ಕೈಗೂಡಿಸಿದ ಹೊರತು ನನ್ನ ಕಡೆಗೆ ವ್ಯರ್ಥವಾಗಿ ಹಿಂದಿರುಗುವದಿಲ್ಲ.


ಅದರಂತೆ ಪ್ರವಾದಿಯಾದ ಹನನ್ಯನು ಅದೇ ವರುಷ ಏಳನೆಯ ತಿಂಗಳಲ್ಲಿ ಸತ್ತನು.


ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ - ನಾನು ಯೆರೂಸಲೇವಿುಗೂ ಯೆಹೂದದ ಎಲ್ಲಾ ಊರುಗಳಿಗೂ ಬರಮಾಡಿದ ಕೇಡನ್ನು ನೀವು ನೋಡಿದ್ದೀರಷ್ಟೆ;


ಆದಕಾರಣ ನನ್ನ ಉಗ್ರರೋಷಾಗ್ನಿಯು ಸುರಿದು ಯೆಹೂದದ ಊರುಗಳಲ್ಲಿಯೂ ಯೆರೂಸಲೇವಿುನ ಬೀದಿಗಳಲ್ಲಿಯೂ ಧಗಧಗಿಸಿತು; ಅವು ಈಗಲೂ ಹಾಳುಹಾಳಾಗಿವೆ.


ನಾವು ಅವಿಧೇಯರಾಗಿ ದ್ರೋಹಮಾಡಿದ್ದೇವೆ; ನೀನು ಕ್ಷವಿುಸಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು