Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 10:6 - ಕನ್ನಡ ಸತ್ಯವೇದವು J.V. (BSI)

6 ನಾನು ಯೆಹೂದ ವಂಶವನ್ನು ಬಲಗೊಳಿಸಿ ಯೋಸೇಫ ವಂಶವನ್ನು ಉದ್ಧರಿಸುವೆನು; ನನ್ನ ಕನಿಕರವು ಅವರ ಮೇಲೆ ಇರುವದರಿಂದ ಅವರನ್ನು ಹಿಂದಕ್ಕೆ ಬರಮಾಡುವೆನು; ಆಗ ನಾನು ಅವರನ್ನು ತಳ್ಳಿಬಿಟ್ಟದ್ದು ಇಲ್ಲದಂತಾಗುವದು; ನಾನು ಅವರ ದೇವರಾದ ಯೆಹೋವನಾಗಿದ್ದೇನಲ್ಲಾ, ಅವರ ಮೊರೆಯನ್ನು ಲಾಲಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ನಾನು ಯೆಹೂದ ವಂಶವನ್ನು ಬಲಗೊಳಿಸಿ ಯೋಸೇಫನ ವಂಶವನ್ನು ಉದ್ಧರಿಸುವೆನು; ನನ್ನ ಕನಿಕರವು ಅವರ ಮೇಲೆ ಇರುವುದರಿಂದ ಅವರನ್ನು ಹಿಂದಕ್ಕೆ ಬರಮಾಡುವೆನು; ಆಗ ನಾನು ಅವರನ್ನು ತಳ್ಳಿಬಿಟ್ಟಿದ್ದು ಇಲ್ಲದಂತಾಗುವುದು; ನಾನು ಅವರ ದೇವರಾದ ಯೆಹೋವನಾಗಿದ್ದೇನಲ್ಲಾ, ಅವರ ಮೊರೆಯನ್ನು ಲಾಲಿಸಿ ಸದುತ್ತರವನ್ನು ನೀಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 “ಬಲಗೊಳಿಸುವೆನು ಯೆಹೂದ್ಯ ಕುಲವನು ಉದ್ಧರಿಸುವೆನು ಜೊಸೇಫನ ವಂಶವನು. ಕನಿಕರಿಸುವೆನು, ಮರಳಿ ಬರಮಾಡುವೆನು ಅವರನು ನಾನು ಕೈಬಿಟ್ಟವರಂತೆ ಇರಲಾರರವರು ಇನ್ನು. ಏಕೆನೆ ನಾನೇ ದೇವ ಸರ್ವೇಶ್ವರ ಅವರಿಗೆ ಕಿವಿಗೊಡುವೆನು ನಾನು ಅವರ ಕರೆಗೆ ಸದುತ್ತರವೀಯುವೆನು ಅವರ ಮೊರೆಗೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಯೆಹೂದ ವಂಶವನ್ನು ನಾನು ಬಲಗೊಳಿಸುವೆನು. ಯೋಸೇಫನ ವಂಶದವರಿಗೆ ಜಯವಾಗುವಂತೆ ಮಾಡುವೆನು. ನಾನು ಅವರನ್ನು ಹಿಂದಕ್ಕೆ ಸುರಕ್ಷಿತವಾಗಿ ಕರೆದುಕೊಂಡು ಬರುವೆನು. ಅವರನ್ನು ಸಂತೈಸುವೆನು. ನಾನು ಎಂದಿಗೂ ಅವರನ್ನು ತೊರೆಯಲಿಲ್ಲವೆಂಬಂತೆ ಇರುವುದು. ನಾನು ಅವರ ದೇವರಾದ ಯೆಹೋವನು. ನಾನೇ ಅವರಿಗೆ ಸಹಾಯ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 “ನಾನು ಯೆಹೂದ ವಂಶವನ್ನು ಬಲಪಡಿಸಿ, ಯೋಸೇಫ ಗೋತ್ರವನ್ನು ರಕ್ಷಿಸುವೆನು. ಅವರನ್ನು ಕನಿಕರಿಸುವುದರಿಂದ ಅವರನ್ನು ತಿರುಗಿ ಬರಮಾಡುವೆನು. ನಾನು ಅವರನ್ನು ತಳ್ಳಿಬಿಡಲಿಲ್ಲವೋ ಎಂಬಂತೆ ಇರುವರು. ಏಕೆಂದರೆ ನಾನೇ ಅವರ ದೇವರಾದ ಯೆಹೋವ ದೇವರಾಗಿದ್ದು, ಅವರಿಗೆ ಉತ್ತರಕೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 10:6
39 ತಿಳಿವುಗಳ ಹೋಲಿಕೆ  

ಆ ಮೂರನೆಯ ಭಾಗದವರನ್ನು ನಾನು ಬೆಂಕಿಗೆ ಹಾಕಿ ಬೆಳ್ಳಿಯಂತೆ ಶೋಧಿಸುವೆನು, ಬಂಗಾರದ ಹಾಗೆ ಶುದ್ಧಿಮಾಡುವೆನು; ಅವರು ನನ್ನ ಹೆಸರೆತ್ತಿ ಪ್ರಾರ್ಥಿಸುವರು, ನಾನು ಆಲಿಸುವೆನು; ನಾನು - ಇವರು ನನ್ನ ಜನರು ಅಂದುಕೊಳ್ಳುವೆನು, ಅವರು - ನಮ್ಮ ದೇವರಾದ ಯೆಹೋವನೇ ಅನ್ನುವರು.


ಅವರು ಯೆಹೋವನಲ್ಲಿ ಬಲಗೊಳ್ಳುವರು, ಆತನ ಹೆಸರಿನಲ್ಲಿ ನಡೆದುಕೊಳ್ಳುವರು; ಇದು ಯೆಹೋವನ ನುಡಿ.


ಆ ಕಾಲದಲ್ಲಿ ಯೆಹೂದವಂಶವು ಇಸ್ರಾಯೇಲ್ ವಂಶದೊಡನೆ ಜೊತೆಯಾಗಿ ನಡೆಯುವದು, ಎರಡೂ ಕಲೆತು ನಾನು ನಿಮ್ಮ ಪಿತೃಗಳಿಗೆ ಬಾಧ್ಯವಾಗಿ ದಯಪಾಲಿಸಿದ ದೇಶಕ್ಕೆ ಬಡಗಣ ಸೀಮೆಯೊಳಗಿಂದ ಬರುವವು.


ಇಂದಿನಿಂದಲೋ ಈ ಜನಶೇಷದವರ ವಿಷಯದಲ್ಲಿ ನಾನು ಪೂರ್ವಕಾಲದಲ್ಲಿ ಇದ್ದಂತೆ ಇರೆನು; ಇದು ಸೇನಾಧೀಶ್ವರ ಯೆಹೋವನ ನುಡಿ.


ಯೆಹೂದ್ಯರೂ ಇಸ್ರಾಯೇಲ್ಯರೂ ಒಟ್ಟುಗೂಡಿ ಒಬ್ಬನನ್ನೇ ಶಿರಸ್ಸನ್ನಾಗಿ ಮಾಡಿಕೊಂಡು ದೇಶದೊಳಗಿಂದ ಹೊರಡುವರು; ಇಜ್ರೇಲಿನ ಸುದಿನವು ಅತಿವಿಶೇಷವಾದದ್ದು.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನಾನು ಇನ್ನೊಂದು ವಿಷಯದಲ್ಲಿ ಇಸ್ರಾಯೇಲ್ ವಂಶದವರ ವಿಜ್ಞಾಪನೆಯನ್ನು ಲಾಲಿಸಿ ನೆರವೇರಿಸುವೆನು; ಅಂದರೆ ಅವರ ಜನಸಂಖ್ಯೆಯನ್ನು ಹಿಂಡಿನೋಪಾದಿಯಲ್ಲಿ ಹೆಚ್ಚಿಸುವೆನು.


ನಾನೇ ನಿನ್ನೊಂದಿಗಿದ್ದೇನೆ; ದಿಗ್ಭ್ರಮೆಗೊಳ್ಳದಿರು, ನಾನೇ ನಿನ್ನ ದೇವರು; ನಾನು ನಿನ್ನನ್ನು ಬಲಪಡಿಸುತ್ತೇನೆ; ಹೌದು, ನಿನಗೆ ಸಹಾಯಕೊಡುತ್ತೇನೆ; ನನ್ನ ಧರ್ಮದ ಬಲಗೈಯನ್ನು ನಿನಗೆ ಆಧಾರಮಾಡುತ್ತೇನೆ.


ಜನಾಂಗಗಳವರು ನೋಡಿ ತಮ್ಮ ಮಹಾಶಕ್ತಿಗೂ ನಾಚಿಕೆಪಡುವರು; ಬಾಯ ಮೇಲೆ ಕೈಯಿಟ್ಟುಕೊಳ್ಳುವರು, ಅವರ ಕಿವಿ ಕೇಳದಿರುವದು.


ಅಲ್ಲದೆ ಸಿಂಹವು ಕಾಡುಮೃಗಗಳನ್ನು, ಪ್ರಾಯದ ಸಿಂಹವು ಕುರಿಹಿಂಡುಗಳನ್ನು ಹಾದುಹೋಗುವಾಗೆಲ್ಲಾ ಅವುಗಳನ್ನು ಯಾರೂ ರಕ್ಷಿಸಲಾರದಂತೆ ತುಳಿದು ಸೀಳಿಹಾಕುವ ಹಾಗೆ ಯಾಕೋಬಿನ ಜನಶೇಷವು ದೇಶದೇಶಗಳೊಳಗೆ ಬಹುಜನಾಂಗಗಳ ಮಧ್ಯದಲ್ಲಿ ನಾಶಕರವಾಗಿರುವದು.


ಚೀಯೋನ್ ನಗರಿಯೇ, ಎದ್ದು ಒಕ್ಕು; ನಾನು ನಿನ್ನ ಕೊಂಬನ್ನು ಕಬ್ಬಿಣವನ್ನಾಗಿಯೂ ನಿನ್ನ ಗೊರಸನ್ನು ತಾಮ್ರವನ್ನಾಗಿಯೂ ಮಾಡುವೆನು; ನೀನು ಬಹು ಜನಾಂಗಗಳನ್ನು ಚೂರುಚೂರಾಗಿ ತುಳಿದುಬಿಡುವಿ; ಅವುಗಳಿಂದ ಹೊಡೆದ ಕೊಳ್ಳೆಯನ್ನು ಕೇವಲ ಯೆಹೋವನದಾಗಿ ಪ್ರತ್ಯೇಕಿಸುವಿ, ಅವುಗಳ ಆಸ್ತಿಯನ್ನು ಲೋಕದ ಕರ್ತನಿಗೆ ಮೀಸಲುಮಾಡುವಿ.


ನಾನು ದೇಶದಲ್ಲಿ ಇಜ್ರೇಲನ್ನು ನನಗಾಗಿ ಬಿತ್ತಿಕೊಳ್ಳುವೆನು; ಲೋರುಹಾಮಳಿಗೆ ವಾತ್ಸಲ್ಯವನ್ನು ತೋರಿಸುವೆನು; ಲೋ ಅವ್ಮಿುಗೆ ನೀನು ನನ್ನ ಪ್ರಜೆಯೇ ಎಂದು ಹೇಳುವೆನು; ಅವರು ನನ್ನನ್ನು ನನ್ನ ದೇವರೇ ಎಂದು ಭಜಿಸುವರು.


ಯೆಹೋವನು ಯಾಕೋಬ್ಯರನ್ನು ಕನಿಕರಿಸಿ ಮತ್ತೆ ಇಸ್ರಾಯೇಲ್ಯರನ್ನು ಆರಿಸಿಕೊಂಡು ಸ್ವದೇಶದಲ್ಲಿ ತಂಗಿಸಬೇಕೆಂದಿದ್ದಾನಷ್ಟೆ; ಪರದೇಶಿಗಳು ಅವರೊಂದಿಗೆ ಕೂಡಿ ಬಂದು ಯಾಕೋಬನ ಮನೆತನಕ್ಕೆ ಸೇರಿಕೊಳ್ಳುವರು.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನನ್ನ ಪವಿತ್ರನಾಮಕ್ಕೆ ಇನ್ನು ಅಪಕೀರ್ತಿ ಬಾರದಂತೆ ನಾನು ಈಗ ಆಗ್ರಹವುಳ್ಳವನಾಗಿ ಯಾಕೋಬ್ಯರ ದುರವಸ್ಥೆಯನ್ನು ತಪ್ಪಿಸಿ ಇಸ್ರಾಯೇಲ್ ವಂಶದವರಿಗೆಲ್ಲಾ ಕೃಪೆತೋರಿಸುವೆನು;


ನರಪುತ್ರನೇ, ನೀನು ಒಂದು ದಂಡವನ್ನು ತೆಗೆದು ಅದರಲ್ಲಿ - ಯೆಹೂದದ್ದು, ಯೆಹೂದಕ್ಕೆ ಸೇರಿದ ಇಸ್ರಾಯೇಲ್ಯರದು ಎಂದು ಬರೆದು ಇನ್ನೊಂದು ದಂಡವನ್ನು ತೆಗೆದು ಅದರಲ್ಲಿ - ಯೋಸೇಫಿನದು, ಎಫ್ರಾಯೀವಿುನದು ಯೋಸೇಫಿಗೆ ಸೇರಿದ ಎಲ್ಲಾ ಇಸ್ರಾಯೇಲ್ಯರದು ಎಂದು ಬರೆ;


ನಿಮ್ಮಲ್ಲಿ ಬಹುಜನರನ್ನೂ ಪಶುಗಳನ್ನೂ ವೃದ್ಧಿಗೊಳಿಸುವೆನು; ಅವು ಹೆಚ್ಚಿ ಅಭಿವೃದ್ಧಿಯಾಗುವವು; ಮೊದಲಿನಂತೆ ನಿಮ್ಮಲ್ಲಿ ನಿವಾಸಿಗಳನ್ನು ತುಂಬಿಸಿ ಮೊದಲಿಗಿಂತ ನಿಮ್ಮನ್ನು ಉತ್ತಮ ಸ್ಥಿತಿಗೆ ತರುವೆನು; ನಾನೇ ಯೆಹೋವನು ಎಂದು ನಿಮಗೆ ದೃಢವಾಗುವದು.


ಯೆಹೋವನು ಇಂತೆನ್ನುತ್ತಾನೆ - ಇಗೋ, ನಾನು ಇಸ್ರಾಯೇಲ್ ವಂಶದವರೊಂದಿಗೂ ಯೆಹೂದ ವಂಶದವರೊಂದಿಗೂ ಹೊಸದಾಗಿರುವ ಒಂದು ಒಡಂಬಡಿಕೆಯನ್ನು ಮಾಡಿಕೊಳ್ಳುವ ದಿನಗಳು ಬರುವವು;


ಯೆಹೋವನು ಇಂತೆನ್ನುತ್ತಾನೆ - ಎಫ್ರಾಯೀಮು ನನಗೆ ಪ್ರಿಯಪುತ್ರನೋ, ಮುದ್ದುಮಗುವೋ, ಏನೋ? ಅವನ ಹೆಸರೆತ್ತಿದಾಗೆಲ್ಲಾ ಅವನನ್ನು ಜ್ಞಾಪಿಸಿಕೊಳ್ಳುತ್ತಲೇ ಬರುತ್ತೇನೆ; ಇದರಿಂದ ನನ್ನ ಕರುಳು ಅವನಿಗಾಗಿ ಮರುಗುತ್ತದಲ್ಲಾ; ಅವನನ್ನು ಕರುಣಿಸೇ ಕರುಣಿಸುವೆನು.


ಯೆಹೋವನು ಇಂತೆನ್ನುತ್ತಾನೆ - ಆ ಕಾಲದಲ್ಲಿ ನಾನು ಇಸ್ರಾಯೇಲಿನ ಸಕಲ ಗೋತ್ರಗಳವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು.


ಯೆಹೋವನು ಹೀಗನ್ನುತ್ತಾನೆ - ಆಹಾ, ನಾನು ಯಾಕೋಬಿನ ಮನೆಗಳ ದುರವಸ್ಥೆಯನ್ನು ತಪ್ಪಿಸಿ ಅದರ ನಿವಾಸಗಳನ್ನು ಕರುಣಿಸುವೆನು; ಪಟ್ಟಣವು ತನ್ನ ಹಾಳುದಿಬ್ಬದ ಮೇಲೆ ಪುನಃ ಕಟ್ಟಲ್ಪಡುವದು, ಅರಮನೆಯು ತಾನಿದ್ದ ಸ್ಥಳದಲ್ಲೇ ನೆಲೆಯಾಗಿರುವದು.


ಅವನ ಕಾಲದಲ್ಲಿ ಯೆಹೂದ್ಯರು ಸುರಕ್ಷಿತರಾಗಿರುವರು, ಇಸ್ರಾಯೇಲ್ಯರು ನೆಮ್ಮದಿಯಾಗಿ ವಾಸಿಸುವರು; ಯೆಹೋವ ಚಿದ್ಕೇನು [ಅಂದರೆ ಯೆಹೋವನೇ ನಮ್ಮ ಸದ್ಧರ್ಮ] ಎಂಬ ಹೆಸರು ಅವನಿಗಾಗುವದು.


ನನ್ನ ಹಸ್ತವು ಅವನ ಮೇಲೆ ಸ್ಥಿರವಾಗಿರುವದು; ನನ್ನ ಭುಜವು ಅವನನ್ನು ಬಲಪಡಿಸುವದು.


ಯೆಹೋವನು ಇಂತೆನ್ನುತ್ತಾನೆ - ಆ ದಿನದಲ್ಲಿ ಕುಂಟುಜನಾಂಗವನ್ನು ಒಟ್ಟುಗೊಡಿಸುವೆನು, ನಾನು ಬಾಧಿಸಿ ತಳ್ಳಿದ ಪ್ರಜೆಯನ್ನು ಸೇರಿಸುವೆನು;


ಯಾಕೋಬನ ವಂಶವು ಅಗ್ನಿ, ಯೋಸೇಫನ ವಂಶವು ಜ್ವಾಲೆ, ಏಸಾವನ ವಂಶವು ಕೂಳೆ; ಆ ಅಗ್ನಿಜ್ವಾಲೆಗಳು ಕೂಳೆಯಲ್ಲಿ ಧಗಧಗಿಸುತ್ತಾ ಅದನ್ನು ನುಂಗಿಬಿಡುವವು; ಏಸಾವನ ವಂಶದವರಲ್ಲಿ ಯಾರೂ ಉಳಿಯರು; ಯೆಹೋವನೇ ಇದನ್ನು ನುಡಿದಿದ್ದಾನೆ.


ಆದರೆ ನಾನು ಯೆಹೂದ ವಂಶದವರಲ್ಲಿ ವಾತ್ಸಲ್ಯವಿಟ್ಟು ಅವರನ್ನು ಉದ್ಧರಿಸುವೆನು; ಬಿಲ್ಲು, ಕತ್ತಿ, ಕಾಳಗ, ಕುದುರೆ, ರಾಹುತ, ಈ ಮೂಲಕದಿಂದಲ್ಲ, ಅವರ ದೇವರಾದ ಯೆಹೋವನ ಬಲದಿಂದಲೇ ಅವರನ್ನು ರಕ್ಷಿಸುವೆನು ಅಂದನು.


ಅವನು ಜನಾಂಗಗಳಿಗೆ ಧ್ವಜವನ್ನೆತ್ತಿ ಇಸ್ರಾಯೇಲ್ಯರಲ್ಲಿ ಸೆರೆಗೆ ಒಯ್ಯಲ್ಪಟ್ಟವರನ್ನೂ ಯೆಹೂದದಿಂದ ಚದರಿದವರನ್ನೂ ಭೂವಿುಯ ಚತುರ್ದಿಕ್ಕುಗಳಿಂದಲೂ ಕೂಡಿಸಿಕೊಳ್ಳುವನು.


ಹೆದರಬೇಡ, ನಿನಗೆ ಅವಮಾನವಾಗುವದಿಲ್ಲ, ನಾಚಿಕೆಪಡದಿರು, ನಿನಗೆ ಆಶಾಭಂಗವಾಗದು; ಯೌವನದಲ್ಲಿ ನಿನಗಾದ ಅವಮಾನವನ್ನು ಮರೆತುಬಿಡುವಿ, ವೈಧವ್ಯದಲ್ಲಿ ನಿನಗೆ ಸಂಭವಿಸಿದ ನಿಂದೆಯು ಇನ್ನು ನಿನ್ನ ನೆನಪಿಗೆ ಬಾರದು.


ತಟ್ಟನೆ ಉಬ್ಬಿ ಹರಿಯುವ ಕೋಪದಿಂದ ಒಂದು ಕ್ಷಣ ಮಾತ್ರ ನನ್ನ ಮುಖವನ್ನು ನಿನಗೆ ಮರೆಮಾಡಿಕೊಂಡಿದ್ದೆನು, ಶಾಶ್ವತ ಕೃಪೆಯಿಂದ ನಿನ್ನನ್ನು ಕರುಣಿಸುವೆನು ಎಂದು ನಿನ್ನ ವಿಮೋಚಕನಾದ ಯೆಹೋವನು ಅನ್ನುತ್ತಾನೆ.


ಹೀಗಿರಲು ಯೆಹೋವನು ಇಂತೆನ್ನುತ್ತಾನೆ - ನಾನು ಕನಿಕರವುಳ್ಳವನಾಗಿ ಯೆರೂಸಲೇವಿುಗೆ ಹಿಂದಿರುಗಿದ್ದೇನೆ; ನನ್ನ ಆಲಯವು ಅಲ್ಲಿ ಕಟ್ಟಲ್ಪಡುವದು; ಯೆರೂಸಲೇವಿುನಲ್ಲಿ ನೂಲು ಎಳೆಯಲ್ಪಡುವದು; ಇದು ಸೇನಾಧೀಶ್ವರ ಯೆಹೋವನ ನುಡಿ.


ಆ ದಿನದಲ್ಲಿ ಅವರ ದೇವರಾದ ಯೆಹೋವನು ಅವರನ್ನು ತನ್ನ ಹಿಂಡಾಗಿರುವ ಜನರೆಂದು ರಕ್ಷಿಸುವನು; ಅವರು ಕಿರೀಟದಲ್ಲಿನ ರತ್ನಗಳಂತೆ ತಮ್ಮ ದೇಶದಲ್ಲಿ ಥಳಥಳಿಸುವರು.


ಅವರ ಸಂತಾನವು ಪೂರ್ವದ ಸ್ಥಿತಿಯನ್ನು ಹೊಂದುವದು, ಅವರ ಸಮಾಜವು ನನ್ನ ಮುಂದೆ ನೆಲೆಯಾಗಿರುವದು, ಅವರನ್ನು ಬಾಧಿಸುವವರನ್ನೆಲ್ಲಾ ದಂಡಿಸುವೆನು.


ಜ್ಞಾನಿಗಳು ಈ ಸಂಗತಿಗಳನ್ನು ಗ್ರಹಿಸುವರು; ವಿವೇಕಿಗಳು ಅವುಗಳನ್ನು ತಿಳಿದುಕೊಳ್ಳುವರು; ಯೆಹೋವನ ಮಾರ್ಗಗಳು ರುಜುವಾದವುಗಳು; ಅವುಗಳಲ್ಲಿ ಸನ್ಮಾರ್ಗಿಗಳು ನಡೆಯುವರು, ದುರ್ಮಾರ್ಗಿಗಳು ಎಡವಿಬೀಳುವರು.


ಹೀಗಿರಲು ಪ್ರಸವವೇದನೆಪಡತಕ್ಕವಳು ಮಗನನ್ನು ಹೆರುವವರೆಗೂ ನನ್ನ ಜನರು ಶತ್ರುವಶವಾಗಿರುವಂತೆ ಮಾಡುವೆನು. ಅನಂತರ ಆ ಮಗನ ಸಹೋದರರಲ್ಲಿ ಉಳಿದವರು ಇಸ್ರಾಯೇಲ್ಯರೊಂದಿಗೆ ಹಿಂದಿರುಗುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು