Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 11:1 - ಕನ್ನಡ ಸತ್ಯವೇದವು J.V. (BSI)

1 ಲೆಬನೋನೇ, ನಿನ್ನ ಬಾಗಿಲುಗಳನ್ನು ತೆರೆ, ಬೆಂಕಿಯು ನಿನ್ನ ದೇವದಾರುಗಳನ್ನು ನುಂಗಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಲೆಬನೋನೇ, ನಿನ್ನ ಬಾಗಿಲುಗಳನ್ನು ತೆರೆ, ಬೆಂಕಿಯು ನಿನ್ನ ದೇವದಾರುಗಳನ್ನು ನುಂಗಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ತೆರೆ, ಲೆಬನೋನೇ ನಿನ್ನ ಪುರದ್ವಾರಗಳನು ದಹಿಸಿಬಿಡಲಿ ಅಗ್ನಿ ನಿನ್ನ ದೇವದಾರುಗಳನು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಲೆಬನೋನೇ, ನೀನು ನಿನ್ನ ದ್ವಾರಗಳನ್ನು ತೆರೆ. ಆಗ ಬೆಂಕಿಯು ಒಳಬಂದು ನಿನ್ನ ದೇವದಾರು ಮರಗಳನ್ನೆಲ್ಲಾ ಸುಟ್ಟು ಹಾಕುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಲೆಬನೋನೇ, ಬೆಂಕಿ ನಿನ್ನ ದೇವದಾರುಗಳನ್ನು ನುಂಗುವ ಹಾಗೆ, ನಿನ್ನ ಬಾಗಿಲುಗಳನ್ನು ತೆರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 11:1
14 ತಿಳಿವುಗಳ ಹೋಲಿಕೆ  

ಲೆಬನೋನಿನಲ್ಲಿ ವಾಸಿಸುವವಳೇ, ದೇವದಾರುಗಳಲ್ಲಿ ಗೂಡುಮಾಡಿಕೊಂಡಿರುವವಳೇ, ಪ್ರಸವವೇದನೆಯಂತಿರುವ ಸಂಕಟವು ನಿನಗೆ ಸಂಭವಿಸುವಾಗ ನಿನ್ನ ಸ್ಥಿತಿಯು ಎಷ್ಟೋ ದುಃಖಕರವಾಗಿರುವದು!


ನಾನು ಅವರನ್ನು ಐಗುಪ್ತ ದೇಶದೊಳಗಿಂದ ಹಿಂದಕ್ಕೆ ಕರತರುವೆನು; ಅಶ್ಶೂರದಿಂದ ಕೂಡಿಸುವೆನು; ಗಿಲ್ಯಾದುಲೆಬನೋನುಗಳ ಪ್ರಾಂತಕ್ಕೆ ಬರಮಾಡುವೆನು; ಅವರಿಗೆ ಸಾಕಾದಷ್ಟು ಸ್ಥಳ ಸಿಕ್ಕದು.


ಮಲೆನಾಡಿಗೆ ಹೋಗಿ ಮರವನ್ನು ತಂದು ನನ್ನ ಆಲಯವನ್ನು ಕಟ್ಟಿರಿ; ನಾನು ಅದಕ್ಕೆ ಮೆಚ್ಚಿ ನನ್ನ ಪ್ರಭಾವವನ್ನು ಅಲ್ಲಿ ಪ್ರಕಾಶಗೊಳಿಸುವೆನು; ಇದು ಯೆಹೋವನ ನುಡಿ.


ನೀನು ಮನುಷ್ಯರ ರಕ್ತವನ್ನು ಸುರಿಸಿ ದೇಶವನ್ನೂ ಪುರವನ್ನೂ ಅವುಗಳ ನಿವಾಸಿಗಳೆಲ್ಲರನ್ನೂ ಹಿಂಸಿಸಿದ ಕಾರಣ ಲೆಬನೋನಿಗೆ ಆದಂಥ ಹಿಂಸೆಗೆ ನೀನೂ ಒಳಗಾಗುವಿ, ಮೃಗಪಶುಗಳ ನಾಶನವು ನಿನ್ನನ್ನೂ ಹೆದರಿಸುವದು.


ನೀನು ಬಹು ಜನಾಂಗಗಳನ್ನು ಕೊಳ್ಳೆಹೊಡೆದು ಮನುಷ್ಯರ ರಕ್ತವನ್ನು ಸುರಿಸಿ ದೇಶವನ್ನೂ ಪುರವನ್ನೂ ಅವುಗಳ ನಿವಾಸಿಗಳೆಲ್ಲರನ್ನೂ ಹಿಂಸಿಸಿದ ಕಾರಣ ಜನಾಂಗಗಳಲ್ಲಿ ಉಳಿದವರೆಲ್ಲರು ನಿನ್ನನ್ನು ಕೊಳ್ಳೆಹೊಡೆಯುವರು.


ನನ್ನ ಕೋಪಾಗ್ನಿ ಪ್ರಜ್ವಲಿಸುತ್ತದೆ; ಅದು ಪಾತಾಳದವರೆಗೂ ವ್ಯಾಪಿಸಿ ಬೆಳೆ ಸಹಿತವಾಗಿ ಭೂವಿುಯನ್ನೂ ಬುಡಸಹಿತವಾಗಿ ಬೆಟ್ಟಗಳನ್ನೂ ದಹಿಸಿಬಿಡುವದು.


ಆಹಾ, ತಿಲಕವೋ ದೇವದಾರುವೋ ಒಂದು ವೃಕ್ಷವು ಲೆಬನೋನಿನಲ್ಲಿತ್ತು; ಅದರ ರೆಂಬೆಗಳು ಅಂದ, ಅದರ ನೆರಳು ದಟ್ಟ, ಅದರ ಎತ್ತರವು ಬಹಳ, ಅದರ ತುದಿಯು ಮೇಘಚುಂಬಿತ.


ತುರಾಯಿ ಮರವೇ, ಗೋಳಾಡು! ದೇವದಾರು ಬಿದ್ದಿದೆ, ಶ್ರೇಷ್ಠವೃಕ್ಷಗಳು ನಾಶವಾಗಿವೆ. ಬಾಷಾನಿನ ಅಲ್ಲೋನ್ ಮರಗಳೇ, ಕಿರಚಿರಿ! ನುಗ್ಗಲಾಗದ ವನವು ಉರುಳಿದೆ.


ಆ ದಿನದಲ್ಲಿ ನಾನು ಯೆಹೂದದ ಕುಲಪತಿಗಳನ್ನು ಸೌದೆಯ ಮಧ್ಯದಲ್ಲಿನ ಅಗ್ಗಿಷ್ಟಿಕೆಯನ್ನಾಗಿಯೂ ಸಿವುಡುಗಳ ನಡುವಣ ಪಂಜನ್ನಾಗಿಯೂ ಮಾಡುವೆನು; ಅವರು ಸುತ್ತಣ ಜನಾಂಗಗಳನ್ನೆಲ್ಲಾ ಎಡಬಲಗಳಲ್ಲಿ ನುಂಗಿಬಿಡುವರು; ಯೆರೂಸಲೇವಿುನವರು ತಮ್ಮ ಸ್ಥಳವಾದ ಯೆರೂಸಲೇವಿುನಲ್ಲಿಯೇ ಇನ್ನು ವಾಸಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು