Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 11:15 - ಕನ್ನಡ ಸತ್ಯವೇದವು J.V. (BSI)

15 ಆಮೇಲೆ ಯೆಹೋವನು ನನಗೆ ಹೀಗೆ ಅಪ್ಪಣೆಮಾಡಿದನು - ನೀನು ಮತ್ತೊಮ್ಮೆ ತಕ್ಕ ಸಲಕರಣೆಗಳನ್ನು ತೆಗೆದುಕೊಂಡು ಮುಕ್ಕಕುರುಬನಂತೆ ನಟಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆ ಮೇಲೆ ಯೆಹೋವನು ನನಗೆ ಹೀಗೆ ಅಪ್ಪಣೆ ಮಾಡಿದನು, “ನೀನು ಮತ್ತೊಮ್ಮೆ ತಕ್ಕ ಸಲಕರಣೆಗಳನ್ನು ತೆಗೆದುಕೊಂಡು ಮೂರ್ಖ ಕುರುಬನಂತೆ ನಟಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಅನಂತರ ಸರ್ವೇಶ್ವರ ನನಗೆ ಹೀಗೆಂದು ಅಪ್ಪಣೆಮಾಡಿದರು: “ಮತ್ತೊಮ್ಮೆ ನೀನು ವೇಷ ಧರಿಸಿಕೊಂಡು ಮಂಕು ಕುರುಬನಂತೆ ನಟಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಆಗ ಯೆಹೋವನು ನನಗೆ ಹೇಳಿದ್ದೇನೆಂದರೆ, “ಒಬ್ಬ ಮೂರ್ಖ ಕುರುಬನು ಉಪಯೋಗಿಸುವ ವಸ್ತುಗಳನ್ನು ತೆಗೆದುಕೊಂಡು ಬಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಯೆಹೋವ ದೇವರು ನನಗೆ, “ಇನ್ನು ಬುದ್ಧಿಹೀನವಾದ ಕುರುಬನ ಆಯುಧಗಳನ್ನು ತೆಗೆದುಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 11:15
10 ತಿಳಿವುಗಳ ಹೋಲಿಕೆ  

ಬುದ್ಧಿಯಿಲ್ಲದವರೇ, ಹೊರಭಾಗವನ್ನು ಮಾಡಿದಾತನು ಒಳಭಾಗವನ್ನೂ ಮಾಡಿದನಲ್ಲವೇ.


ಹುಚ್ಚರೇ, ಕುರುಡರೇ, ಯಾವದು ಹೆಚ್ಚಿನದು? ಚಿನ್ನವೋ, ಚಿನ್ನವನ್ನು ಪಾವನ ಮಾಡುವ ದೇವಾಲಯವೋ?


ಅವರ ಮಾತನ್ನು ಬಿಡಿರಿ; ತಾವೇ ಕುರುಡರು, ಮತ್ತೊಬ್ಬರಿಗೆ ದಾರಿ ತೋರಿಸುವದಕ್ಕೆ ಹೋಗುತ್ತಾರೆ; ಕುರುಡನು ಕುರುಡನಿಗೆ ದಾರಿತೋರಿಸಿದರೆ ಅವರಿಬ್ಬರೂ ಕುಣಿಯಲ್ಲಿ ಬೀಳುವರು ಅಂದನು.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಯಾವ ಸಾಕ್ಷಾತ್ಕಾರವೂ ಇಲ್ಲದೆ ಸ್ವಬುದ್ಧಿಯನ್ನೇ ಅನುಸರಿಸುವ ಮೂರ್ಖ ಪ್ರವಾದಿಗಳ ಗತಿಯು ಏನೆಂದು ಹೇಳಲಿ!


ನಿನ್ನ ಪ್ರವಾದಿಗಳು ಕಂಡುಹೇಳಿದ ಕಣಿಗಳು ವ್ಯರ್ಥ, ನಿಸ್ಸಾರ; ಅವರು ನಿನ್ನ ದೋಷವನ್ನು ಬೈಲಿಗೆ ತಾರದಕಾರಣ ನಿನ್ನ ದುರವಸ್ಥೆಯು ನೀಗಲಿಲ್ಲ; ನಿನ್ನ ವಿಷಯವಾಗಿ ಅವರಿಗೆ ಕಂಡುಬಂದ ವ್ಯರ್ಥ ದೈವೋಕ್ತಿಗಳು ನೀನು ಗಡೀಪಾರಾಗಿ ಒಯ್ಯಲ್ಪಡುವದಕ್ಕೆ ಆಸ್ಪದವಾದವು.


ಮಂದೆಯನ್ನು ಕಾಯದೆ ಬಿಟ್ಟುಬಿಟ್ಟ ತರವಲ್ಲದ ಕುರುಬನ ಗತಿಯನ್ನು ಏನುಹೇಳಲಿ! ಖಡ್ಗವು ಅವನ ತೋಳಿಗೂ ಬಲಗಣ್ಣಿಗೂ ತಾಕುವದು; ಅವನ ತೋಳು ತೀರಾ ಒಣಗಿಹೋಗುವದು, ಅವನ ಬಲಗಣ್ಣು ಪೂರಾ ಮೊಬ್ಬಾಗುವದು.


ನನ್ನ ಕಾವಲಿನ ಕುರಿಗಳನ್ನು ಚದರಿಸಿ ಹಾಳುಮಾಡುವ ಕುರುಬರ ಗತಿಯನ್ನು ಏನೆಂದು ಹೇಳಲಿ ಎಂಬದು ಯೆಹೋವನ ನುಡಿ.


ಯೆಹೋವನು ಈ ಮಾತನ್ನು ನನಗೆ ದಯಪಾಲಿಸಿದನು -


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು