3 ರೋದಿಸುವ ಕುರುಬರ ಕಡೆಗೆ ಕಿವಿಗೊಡಿರಿ. ಅವರ ನಾಯಕರುಗಳನ್ನು ತೆಗೆದುಕೊಂಡು ಹೋಗಿರುತ್ತಾರೆ. ಪ್ರಾಯದ ಸಿಂಹಗಳ ಗರ್ಜನೆಗೆ ಕಿವಿಗೊಡಿರಿ. ಯೋರ್ದನ್ ಹೊಳೆಯ ಬದಿಯಲ್ಲಿದ್ದ ದಟ್ಟವಾದ ಪೊದರುಗಳೆಲ್ಲಾ ತೆಗೆದುಕೊಂಡು ಹೋಗಲಾಗಿದೆ.
ಆಹಾ, ಒಬ್ಬನು ಸಿಂಹದೋಪಾದಿಯಲ್ಲಿ ಯೋರ್ದನಿನ ದಟ್ಟಡವಿಯಿಂದ [ಕಸ್ದೀಯರಿಗೆ] ನಿತ್ಯನೆಲೆಯಾದ ಗೋಮಾಳಕ್ಕೆ ಏರಿ ಬರುವನು; ಕ್ಷಣಮಾತ್ರದಲ್ಲಿ ನಾನು ಅವರನ್ನು ಅಲ್ಲಿಂದ ಓಡಿಸಿಬಿಡುವೆನು; ನಾನು ಆರಿಸಿಕೊಂಡವನನ್ನೇ ಅದನ್ನು ಕಾಯುವದಕ್ಕೆ ನೇವಿುಸುವೆನು; ನನ್ನ ಸಮಾನನು ಯಾವನು? ನನ್ನನ್ನು ನ್ಯಾಯವಿಚಾರಣೆಗೆ ಯಾವನು ಕರೆದಾನು? ಮಂದೆಯನ್ನು ಕಾಯುವ ಯಾವನು ನನ್ನೆದುರಿಗೆ ನಿಲ್ಲಬಲ್ಲನು?
ಪ್ರವಾದಿಗಳಲ್ಲಿ ನಿಮ್ಮ ಪಿತೃಗಳು ಹಿಂಸೆಪಡಿಸದವರು ಯಾರಿದ್ದಾರೆ? ಅವರು ಆ ನೀತಿ ಸ್ವರೂಪನ ಆಗಮನದ ವಿಷಯದಲ್ಲಿ ಮುಂತಿಳಿಸಿದವರನ್ನು ಕೊಂದರು, ನೀವು ಈಗ ಆತನನ್ನು ಹಿಡುಕೊಟ್ಟು ಕೊಂದವರಾದಿರಿ.
ನೀನು ನನಗೆ ಮಾಡಿದ ನಾನಾ ದುಷ್ಕೃತ್ಯಗಳು ಮುಂದಿನ ಆ ಕಾಲದಲ್ಲಿ ನಿನಗೆ ನಾಚಿಕೆಗೀಡಾಗವು; ಆಗ ಅತಿಗರ್ವದಿಂದ ಮೆರೆಯುವವರನ್ನು ನಿನ್ನೊಳಗಿಂದ ತೊಲಗಿಸಿಬಿಡುವೆನು; ಅಂದಿನಿಂದ ನನ್ನ ಪವಿತ್ರಪರ್ವತದಲ್ಲಿ ಗರ್ವಪಡದೆ ಇರುವಿ.
ಆ ಕೃತ್ಯಗಳಿಗೆ ದೇಶವು ನಡುಗಬೇಕಾಗುವದಲ್ಲವೆ, ಅದರ ನಿವಾಸಿಗಳೆಲ್ಲರೂ ದುಃಖಿಸುವರಲ್ಲವೆ; ದೇಶವೆಲ್ಲಾ ನೈಲ್ ನದಿಯಂತೆ ಉಬ್ಬಿ ಅಲ್ಲಕಲ್ಲೋಲವಾಗುವದು, ಐಗುಪ್ತದ ನದಿಯ ಹಾಗೆಯೇ ಇಳಿದುಹೋಗುವದು.
ಸಮಾರ್ಯದ ನಿವಾಸಿಗಳು ಬೇತಾವೆನಿನ ಬಸವನ ವಿಷಯದಲ್ಲಿ ದಿಗಿಲುಪಡುವರು; ಅದರ ಭಕ್ತಜನರು ಅದಕ್ಕಾಗಿ ಎದೆಬಡಿದುಕೊಳ್ಳುವರು; ಅದರ ಮಹಿಮೆಯು ಅದರಿಂದ ತೊಲಗಿತಲ್ಲಾ ಎಂದು ಅದರ ಪೂಜಾರಿಗಳು ಅದಕ್ಕಾಗಿ ನಡುಗುವರು.
ಆಹಾ, ಒಬ್ಬನು ಸಿಂಹದೋಪಾದಿಯಲ್ಲಿ ಯೊರ್ದನಿನ ದಟ್ಟಡವಿಯಿಂದ [ಎದೋಮ್ಯರಿಗೆ] ನಿತ್ಯನೆಲೆಯಾದ ಗೋಮಾಳಕ್ಕೆ ಏರಿಬರುವನು; ಕ್ಷಣಮಾತ್ರದಲ್ಲಿ ನಾನು ಅವರನ್ನು ಅಲ್ಲಿಂದ ಓಡಿಸಿಬಿಡುವೆನು; ನಾನು ಆರಿಸಿಕೊಂಡವನನ್ನೇ ಅದನ್ನು ಕಾಯುವದಕ್ಕೆ ನೇವಿುಸುವೆನು; ನನ್ನ ಸಮಾನನು ಯಾವನು? ನನ್ನನ್ನು ನ್ಯಾಯವಿಚಾರಣೆಗೆ ಯಾವನು ಕರೆದಾನು? ಮಂದೆಯನ್ನು ಕಾಯುವ ಯಾವನು ನನ್ನೆದುರಿಗೆ ನಿಲ್ಲಬಲ್ಲನು?