Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 11:6 - ಕನ್ನಡ ಸತ್ಯವೇದವು J.V. (BSI)

6 (ಯೆಹೋವನು ಇಂತೆನ್ನುತ್ತಾನೆ - ನಾನು ಲೋಕನಿವಾಸಿಗಳನ್ನು ಇನ್ನು ಕರುಣಿಸೆನು; ಇಗೋ, ಪ್ರತಿಯೊಬ್ಬನನ್ನು ತನ್ನ ತನ್ನ ನೆರೆಯವನ ಕೈಗೂ ಅರಸನ ಕೈಗೂ ಒಪ್ಪಿಸುವೆನು; ಆ ಬಲಿಷ್ಠರು ಲೋಕವನ್ನು ಪುಡಿಪುಡಿಮಾಡುವರು; ಅವರ ಕೈಗೆ ಸಿಕ್ಕಿದವರನ್ನು ಉದ್ಧರಿಸೆನು).

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಯೆಹೋವನು ಇಂತೆನ್ನುತ್ತಾನೆ, “ನಾನು ಲೋಕನಿವಾಸಿಗಳನ್ನು ಇನ್ನು ಕರುಣಿಸೆನು; ಇಗೋ, ಪ್ರತಿಯೊಬ್ಬನನ್ನು ಅವನವನ ನೆರೆಯವನ ಕೈಗೂ, ಅರಸನ ಕೈಗೂ ಒಪ್ಪಿಸುವೆನು; ಆ ಬಲಿಷ್ಠರು ಲೋಕವನ್ನು ಪುಡಿಪುಡಿಮಾಡುವರು; ಅವರ ಕೈಗೆ ಸಿಕ್ಕಿದವರನ್ನು ಉದ್ಧರಿಸೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಸರ್ವೇಶ್ವರಸ್ವಾಮಿಯ ನುಡಿಯಿದು: “ಈ ಲೋಕನಿವಾಸಿಗಳಿಗೆ ನಾನು ಕರುಣೆತೋರಿಸೆನು. ಪ್ರತಿಯೊಬ್ಬನನ್ನು ತನ್ನ ತನ್ನ ನೆರೆಯವನ ಕೈಗೂ ಅರಸನ ಕೈಗೂ ಒಪ್ಪಿಸಿಬಿಡುವೆನು. ಆ ಬಲಿಷ್ಠರು ಲೋಕವನ್ನು ಧ್ವಂಸಮಾಡುವರು. ಅವರ ಕೈಗೆ ಸಿಕ್ಕದವರನ್ನು ನಾನು ರಕ್ಷಿಸೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಈ ದೇಶದಲ್ಲಿ ವಾಸಿಸುವ ಜನರ ಬಗ್ಗೆ ನಾನು ದುಃಖಿಸುವುದಿಲ್ಲ.” ಇದು ಯೆಹೋವನ ನುಡಿ. “ನೋಡಿರಿ, ಪ್ರತಿಯೊಬ್ಬನೂ ತನ್ನ ಅರಸನಿಂದಲೂ ನೆರೆಯವರಿಂದಲೂ ಹಾಳುಮಾಡಲ್ಪಡುವಂತೆ ನಾನು ಮಾಡುವೆನು. ಅವರ ದೇಶವನ್ನು ಹಾಳುಮಾಡುವಂತೆ ಅವರನ್ನು ಬಿಡುವೆನು. ಅವರನ್ನು ನಿಲ್ಲಿಸುವುದಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಏಕೆಂದರೆ ನಾನು ದೇಶದ ನಿವಾಸಿಗಳನ್ನು ಇನ್ನು ಕನಿಕರಿಸುವುದೇ ಇಲ್ಲ,” ಎಂದು ಯೆಹೋವ ದೇವರು ಹೇಳುತ್ತಾರೆ. “ಆದರೆ ನಾನು ಒಬ್ಬೊಬ್ಬನನ್ನು ಅವನವನ ನೆರೆಯವನ ಕೈಗೂ, ಅವನ ಅರಸನ ಕೈಗೂ ಒಪ್ಪಿಸುವೆನು. ಅವರು ದೇಶವನ್ನು ಧ್ವಂಸಮಾಡುವರು. ಅವರ ಕೈಯೊಳಗಿಂದ ನಾನು ಅವರನ್ನು ತಪ್ಪಿಸುವುದಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 11:6
37 ತಿಳಿವುಗಳ ಹೋಲಿಕೆ  

ಹಿರಿಕಿರಿಯರಾದ ಸಮಸ್ತರನ್ನು ಒಬ್ಬರಿಗೊಬ್ಬರು ಬಡಿದಾಡುವಂತೆ ಮಾಡುವೆನು; ನಾನು ಅವರನ್ನು ಉಳಿಸೆನು, ಕನಿಕರಿಸೆನು, ಕರುಣಿಸೆನು, ನಾಶಮಾಡದೆ ಬಿಡೆನು; ಇದು ಯೆಹೋವನ ನುಡಿ.


ಅರಸನು ಸಿಟ್ಟುಗೊಂಡು ತನ್ನ ದಂಡುಗಳನ್ನು ಕಳುಹಿಸಿ ಆ ಕೊಲೆಗಾರರನ್ನು ನಾಶಮಾಡಿ ಅವರ ಪಟ್ಟಣವನ್ನು ಸುಟ್ಟುಬಿಟ್ಟನು.


ಅಲ್ಲದೆ ಸಿಂಹವು ಕಾಡುಮೃಗಗಳನ್ನು, ಪ್ರಾಯದ ಸಿಂಹವು ಕುರಿಹಿಂಡುಗಳನ್ನು ಹಾದುಹೋಗುವಾಗೆಲ್ಲಾ ಅವುಗಳನ್ನು ಯಾರೂ ರಕ್ಷಿಸಲಾರದಂತೆ ತುಳಿದು ಸೀಳಿಹಾಕುವ ಹಾಗೆ ಯಾಕೋಬಿನ ಜನಶೇಷವು ದೇಶದೇಶಗಳೊಳಗೆ ಬಹುಜನಾಂಗಗಳ ಮಧ್ಯದಲ್ಲಿ ನಾಶಕರವಾಗಿರುವದು.


ದೇವರನ್ನು ಬಿಟ್ಟವರೇ, ಇದನ್ನು ಮನಸ್ಸಿಗೆ ತಂದುಕೊಳ್ಳಿರಿ; ಇಲ್ಲವಾದರೆ ನಿಮ್ಮನ್ನು ಹರಿದುಬಿಟ್ಟೇನು. ನಿಮ್ಮನ್ನು ತಪ್ಪಿಸುವವರು ಯಾರೂ ಇರುವದಿಲ್ಲ.


ಕರುಣೆತೋರಿಸದೆ ಇರುವವನಿಗೆ ನ್ಯಾಯತೀರ್ಮಾನದಲ್ಲಿ ಕರುಣೆಯು ತೋರಿಸಲ್ಪಡುವದಿಲ್ಲ. ಕರುಣೆಯು ನ್ಯಾಯತೀರ್ಮಾನವನ್ನು ಗೆದ್ದು ಹಿಗ್ಗುತ್ತದೆ.


ಈ ಅತ್ಯಂತ ವಿಶೇಷ ರಕ್ಷಣೆಯನ್ನು ನಾವು ಅಲಕ್ಷ್ಯಮಾಡಿದರೆ ತಪ್ಪಿಸಿಕೊಳ್ಳುವದು ಹೇಗೆ? ಇದು ಕರ್ತನಿಂದ ಮೊದಲು ಹೇಳಲ್ಪಟ್ಟಿತು; ಆತನಿಂದ ಕೇಳಿದವರು ಇದನ್ನು ನಮಗೆ ಸ್ಥಿರಪಡಿಸಿದರು;


ಅನ್ಯಜನರಿಗೆ ರಕ್ಷಣೆಯಾಗುವಂತೆ ಸುವಾರ್ತೆಯನ್ನು ಹೇಳುವ ನಮಗೆ ಅಡ್ಡಿಮಾಡುತ್ತಾರೆ; ಹೀಗೆ ತಮ್ಮ ಪಾಪಕೃತ್ಯಗಳನ್ನು ಎಲ್ಲಾ ಕಾಲಗಳಲ್ಲಿಯೂ ಪರಿಪೂರ್ಣಮಾಡುವದಕ್ಕೆ ಹೋಗುತ್ತಾರೆ. ಆದರೆ ದೇವರ ಕೋಪವು ಅವರ ಮೇಲೆ ಸಂಪೂರ್ಣವಾಗುತ್ತಾ ಬಂತು.


ಅದಕ್ಕೆ ಅವರು - ಅವನನ್ನು ಕೊಲ್ಲಿಸು, ಕೊಲ್ಲಿಸು, ಶಿಲುಬೆಗೆ ಹಾಕಿಸು ಎಂದು ಕೂಗಿದರು. ಪಿಲಾತನು - ನಿಮ್ಮ ಅರಸನನ್ನು ಶಿಲುಬೆಗೆ ಹಾಕಿಸಲೋ? ಅಂದದ್ದಕ್ಕೆ ಮಹಾಯಾಜಕರು - ಕೈಸರನೇ ಹೊರತು ನಮಗೆ ಬೇರೆ ಅರಸನಿಲ್ಲ ಎಂದು ಉತ್ತರಕೊಟ್ಟರು.


ಆಗ ಅನೇಕರು ಹಿಂಜರಿದು ಒಬ್ಬರನ್ನೊಬ್ಬರು ಹಿಡುಕೊಡುವರು; ಒಬ್ಬರ ಮೇಲೊಬ್ಬರು ದ್ವೇಷ ಮಾಡುವರು.


ಇದಲ್ಲದೆ ಅಣ್ಣನು ತಮ್ಮನನ್ನು, ತಂದೆಯು ಮಗನನ್ನು, ಮರಣಕ್ಕೆ ಒಪ್ಪಿಸುವರು; ಮಕ್ಕಳು ಹೆತ್ತವರ ಮೇಲೆ ತಿರುಗಿಬಿದ್ದು ಅವರನ್ನು ಕೊಲ್ಲಿಸುವರು.


ಅವನು ತಂದೆಗಳ ಮನಸ್ಸನ್ನು ಮಕ್ಕಳ ಕಡೆಗೂ ಮಕ್ಕಳ ಮನಸ್ಸನ್ನು ತಂದೆಗಳ ಕಡೆಗೂ ತಿರುಗಿಸುವನು.


ಆ ದಿನದಲ್ಲಿ ಯೆಹೋವನು ಉಂಟುಮಾಡುವ ದೊಡ್ಡ ಗಲಿಬಿಲಿಯು ಅವರಲ್ಲಿ ಹರಡುವದು; ಒಬ್ಬರ ಕೈಯನ್ನೊಬ್ಬರು ತಡೆಹಿಡಿಯುವರು, ಒಬ್ಬರ ಮೇಲೊಬ್ಬರು ಕೈಯೆತ್ತುವರು.


ಕೂಡಲೆ ಯೆಹೂದಕ್ಕೂ ಇಸ್ರಾಯೇಲಿಗೂ ಇದ್ದ ಸಹೋದರಭಾವವನ್ನು ಭಂಗಪಡಿಸಬೇಕೆಂದು ಒಗ್ಗಟ್ಟೆಂಬ ನನ್ನ ಎರಡನೆಯ ಕೋಲನ್ನು ಕತ್ತರಿಸಿಬಿಟ್ಟೆನು.


ಆಗ ನಾನು - ನಿಮ್ಮನ್ನು ಮೇಯಿಸೆನು; ಸಾಯುವದು ಸಾಯಲಿ, ಹಾಳಾಗುವದು ಹಾಳಾಗಲಿ, ಉಳಿದವುಗಳು ಒಂದರ ಮಾಂಸವನ್ನೊಂದು ತಿನ್ನಲಿ ಅಂದುಕೊಂಡು


ಕೊಂಡುಕೊಳ್ಳುವವರು ಅವುಗಳನ್ನು ಕೊಯ್ದರೂ ನಿರ್ದೋಷಿಗಳೆನಿಸಿಕೊಳ್ಳುವರು; ಮಾರುವವರು - ಯೆಹೋವನಿಗೆ ಸ್ತೋತ್ರವಾಗಲಿ, ಧನವಂತರಾದೆವು ಅಂದುಕೊಳ್ಳುವರು; ಆ ಮಂದೆಯ ಕುರುಬರಾದರೂ ಅವುಗಳನ್ನು ಕರುಣಿಸರಲ್ಲಾ.


ಆ ಕಾಲಕ್ಕೆ ಮುಂಚೆ ಮನುಷ್ಯನಿಗಾಗಲಿ ಪಶುವಿಗಾಗಲಿ ದುಡಿತದಿಂದ ಏನೂ ಜೀವನವಾಗುತ್ತಿರಲಿಲ್ಲ; ಹೋಗಿಬರುವವರಿಗೆ ಶತ್ರುಗಳ ದೆಸೆಯಿಂದ ಭಯವಿಲ್ಲದೆ ಇರಲಿಲ್ಲ; ಒಬ್ಬರನ್ನೊಬ್ಬರು ಎದುರಿಸುವಂತೆ ಎಲ್ಲರನ್ನೂ ಪ್ರೇರಿಸುತ್ತಿದ್ದೆನು.


ರಾಜ್ಯಗಳ ಸಿಂಹಾಸನವನ್ನು ಕೆಡವಿ ಜನಾಂಗಗಳ ಸಂಸ್ಥಾನಬಲವನ್ನು ಧ್ವಂಸ ಮಾಡಿ ರಥಗಳನ್ನೂ ರಥಾರೂಢರನ್ನೂ ದೊಬ್ಬಿಬಿಡುವೆನು; ಕುದುರೆಗಳೂ ರಾಹುತರೂ ಬಿದ್ದು ಹೋಗುವರು, ಪ್ರತಿಯೊಬ್ಬನು ತನ್ನ ಕಡೆಯವನ ಕತ್ತಿಯಿಂದ ಹತನಾಗುವನು.


ನೀನು ಉಂಡರೂ ನಿನಗೆ ತೃಪ್ತಿಯಾಗದು; ಹಸಿವೆಯು ನಿನ್ನೊಳಗೆ ಇದ್ದೇ ಇರುವದು; ನೀನು [ನಿನ್ನವರನ್ನು] ಕಳುಹಿಸಿಬಿಟ್ಟರೂ ಅವರನ್ನು ಪಾರುಮಾಡಲಾರಿ; ಪಾರುಮಾಡಿದವರನ್ನೂ ಕತ್ತಿಗೆ ತುತ್ತನ್ನಾಗಿ ಮಾಡುವೆನು.


ಈಗ ಅವಳ ವಿುಂಡರ ಕಣ್ಣೆದುರಿಗೆ ಅವಳ ನಾಚಿಕೆಗೇಡಿತನವನ್ನು ಬೈಲಿಗೆ ತರುವೆನು; ಅವಳನ್ನು ನನ್ನ ಕೈಯಿಂದ ಯಾರೂ ಬಿಡಿಸರು.


ಅವಳು ಪುನಃ ಗರ್ಭಿಣಿಯಾಗಿ ಹೆಣ್ಣುಮಗುವನ್ನು ಹೆತ್ತಾಗ ಯೆಹೋವನು ಹೋಶೇಯನನ್ನು ಕುರಿತು - ಈ ಮಗುವಿಗೆ ಲೋರುಹಾಮ ಎಂಬ ಹೆಸರಿಡು; ಏಕಂದರೆ ನಾನು ಇಸ್ರಾಯೇಲ್ ವಂಶದವರಲ್ಲಿ ಇನ್ನು ವಾತ್ಸಲ್ಯವಿಡುವದಿಲ್ಲ, ಅವರನ್ನು ಎಷ್ಟು ಮಾತ್ರವೂ ಕ್ಷವಿುಸುವದಿಲ್ಲ.


ನಾನಂತು ಅವರನ್ನು ಕಟಾಕ್ಷಿಸೆನು, ಉಳಿಸೆನು, ಅವರ ದುರ್ನಡತೆಯನ್ನು ಅವರ ತಲೆಗೆ ಕಟ್ಟುವೆನು ಎಂದು ಹೇಳಿದನು.


ಆದಕಾರಣ ನಾನೂ ಕೋಪೋದ್ರೇಕದಿಂದ ವರ್ತಿಸುವೆನು, ಕಟಾಕ್ಷಿಸೆನು, ಉಳಿಸೆನು; ಅವರು ಕೂಗಿಕೊಳ್ಳುವ ಮಹಾಶಬ್ದವು ನನ್ನ ಕಿವಿಗೆ ಬಿದ್ದರೂ ಲಾಲಿಸೆನು.


ಅಲ್ಲಿನ ರೆಂಬೆಗಳು ಒಣಗಿ ಮುರಿದುಹೋಗುವವು, ಹೆಂಗಸರು ಬಂದು ಬೆಂಕಿ ಹಚ್ಚಿ ಉರಿಸುವರು; ಆ ಪ್ರಜೆಯು ಬುದ್ಧಿಹೀನವಾದದ್ದೇ ಸರಿ; ಆದಕಾರಣ ಸೃಷ್ಟಿಸಿದಾತನು ಅದನ್ನು ಕರುಣಿಸನು, ನಿರ್ಮಿಸಿದಾತನು ಅದಕ್ಕೆ ದಯೆತೋರಿಸನು.


ಪ್ರಜೆಗಳು ಪರಸ್ಪರ ವಿರೋಧಿಗಳಾಗಿ ಒಬ್ಬರನ್ನೊಬ್ಬರು ಹಿಂಸಿಸುವರು; ಹುಡುಗನು ಮುದುಕನ ಮೇಲೆಯೂ ನೀಚನು ಘನವಂತನ ಮೇಲೆಯೂ ಸೊಕ್ಕೇರಿ ನಡೆಯುವರು.


ಯುವಕವೃದ್ಧರು ಬೀದಿಗಳಲ್ಲಿ ನೆಲದ ಮೇಲೆ ಬಿದ್ದಿರುತ್ತಾರೆ, ನನ್ನ ತರುಣೀ ತರುಣರು ಖಡ್ಗದಿಂದ ಹತರಾಗಿದ್ದಾರೆ; ನೀನು ಕೋಪತೀರಿಸಿಕೊಳ್ಳುವ ದಿನದಲ್ಲಿ ಅವರನ್ನು ಕೊಂದುಹಾಕಿದಿ, ಕನಿಕರಿಸದೆ ಹತಿಸಿದಿ.


ದಾಸರು ನಮಗೆ ದಣಿಗಳಾದರು, ಅವರ ಕೈಯಿಂದ ನಮ್ಮನ್ನು ಬಿಡಿಸುವವರೇ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು