Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 11:7 - ಕನ್ನಡ ಸತ್ಯವೇದವು J.V. (BSI)

7 ಆಗ ನಾನು ದೀನಾವಸ್ಥೆಯಲ್ಲಿದ್ದ ಆ ಕೊಯ್ಗುರಿಗಳ ಮಂದೆಯನ್ನು ಮೇಯಿಸಿದೆನು. ಎರಡು ಕೋಲುಗಳನ್ನು ತೆಗೆದುಕೊಂಡು ಒಂದಕ್ಕೆ ಕನಿಕರವೆಂತಲೂ ಇನ್ನೊಂದಕ್ಕೆ ಒಗ್ಗಟ್ಟೆಂತಲೂ ಹೆಸರಿಟ್ಟು ಅವುಗಳಿಂದ ಮಂದೆಯನ್ನು ಮೇಯಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆಗ ನಾನು ದೀನಾವಸ್ಥೆಯಲ್ಲಿದ್ದ ಆ ಕೊಯ್ಗುರಿಗಳ ಮಂದೆಯನ್ನು ಮೇಯಿಸಿದೆನು. ಎರಡು ಕೋಲುಗಳನ್ನು ತೆಗೆದುಕೊಂಡು ಒಂದಕ್ಕೆ “ಕೃಪೆ” ಎಂತಲೂ ಇನ್ನೊಂದಕ್ಕೆ, “ಒಗ್ಗಟ್ಟು” ಎಂತಲೂ ಹೆಸರಿಟ್ಟು ಅವುಗಳಿಂದ ಮಂದೆಯನ್ನು ಮೇಯಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಆಗ ನಾನು ಕೊಯ್ಗುರಿಗಳನ್ನು ವ್ಯಾಪಾರ ಮಾಡುವವರಿಗೋಸ್ಕರ ಆ ಮಂದೆಗೆ ಕುರಿಗಾಹಿ ಆದೆ. ಎರಡು ಕುರಿಗೋಲುಗಳನ್ನು ಕೈಗೆ ತೆಗೆದುಕೊಂಡು ಒಂದಕ್ಕೆ ‘ಕೃಪೆ’ ಎಂದೂ ಮತ್ತೊಂದಕ್ಕೆ ‘ಐಕ್ಯ’ ಎಂದೂ ಹೆಸರಿಟ್ಟು ಆ ಮಂದೆಯನ್ನು ಮೇಯಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಕೊಲ್ಲುವದಕ್ಕಾಗಿ ಬೆಳೆಸುವ ಕುರಿಗಳನ್ನು ನಾನು ಪರಾಮರಿಸಿದೆನು. ನನಗೆ ಎರಡು ಕೋಲುಗಳು ದೊರೆತವು. ಒಂದು ಕೋಲನ್ನು ದಯೆ ಎಂದೂ ಇನ್ನೊಂದನ್ನು ಒಗ್ಗಟ್ಟು ಎಂಬ ಹೆಸರಿನಿಂದಲೂ ಕರೆದೆನು. ಆ ಬಳಿಕ ಕುರಿಗಳನ್ನು ಪರಾಮರಿಸ ತೊಡಗಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಆಗ ಹತ್ಯೆಗಾಗಿ ಗುರುತಿಸಲಾಗಿರುವ ಮಂದೆಯನ್ನು, ವಿಶೇಷವಾಗಿ ಬಡವಾದ ಮಂದೆಯನ್ನು ಮೇಯಿಸಿದೆನು. ನಾನು ಎರಡು ಕೋಲುಗಳನ್ನು ತೆಗೆದುಕೊಂಡೆನು. ಒಂದಕ್ಕೆ “ಕೃಪೆ” ಎಂದೂ ಮತ್ತೊಂದಕ್ಕೆ “ಐಕ್ಯ” ಎಂದು ಹೆಸರಿಟ್ಟೆನು. ಹೀಗೆ ಮಂದೆಯನ್ನು ಮೇಯಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 11:7
25 ತಿಳಿವುಗಳ ಹೋಲಿಕೆ  

ಕೂಡಲೆ ಯೆಹೂದಕ್ಕೂ ಇಸ್ರಾಯೇಲಿಗೂ ಇದ್ದ ಸಹೋದರಭಾವವನ್ನು ಭಂಗಪಡಿಸಬೇಕೆಂದು ಒಗ್ಗಟ್ಟೆಂಬ ನನ್ನ ಎರಡನೆಯ ಕೋಲನ್ನು ಕತ್ತರಿಸಿಬಿಟ್ಟೆನು.


ನನ್ನ ದೇವರಾದ ಯೆಹೋವನು ಹೀಗೆ ಅಪ್ಪಣೆಕೊಟ್ಟನು - ಕೊಯ್ಗುರಿಗಳ ಮಂದೆಯನ್ನು ಕಾಯಿ;


ಬಡವರಿಗೋಸ್ಕರ ನ್ಯಾಯವಾಗಿ ತೀರ್ಪುಮಾಡುವನು, ಲೋಕದ ದೀನರಿಗೋಸ್ಕರ ಧರ್ಮವಾಗಿ ನಿರ್ಣಯಿಸುವನು; ಲೋಕವನ್ನು ತನ್ನ ಬಾಯ ದಂಡದಿಂದ ದಂಡಿಸುವನು, ದುಷ್ಟರನ್ನು ತನ್ನ ಬಾಯುಸುರಿನಿಂದ ಕೊಲ್ಲುವನು.


ದೀನದರಿದ್ರಜನವನ್ನು ನಿನ್ನಲ್ಲಿ ಉಳಿಸುವೆನು; ಅವರು ಯೆಹೋವನ ನಾಮವನ್ನು ಆಶ್ರಯಿಸಿಕೊಳ್ಳುವರು.


ಕರ್ತನಾದ ಯೆಹೋವನ ಆತ್ಮವು ನನ್ನ ಮೇಲೆ ಅದೆ, ಆತನು ನನ್ನನ್ನು ಬಡವರಿಗೆ ಶುಭವರ್ತಮಾನವನ್ನು ಸಾರುವದಕ್ಕೆ ಅಭಿಷೇಕಿಸಿದನು; ಮನಮುರಿದವರನ್ನು ಕಟ್ಟಿ ವಾಸಿಮಾಡುವದಕ್ಕೂ ಸೆರೆಯವರಿಗೆ ಬಿಡುಗಡೆಯಾಗುವದನ್ನು, ಬಂದಿಗಳಿಗೆ [ಕದ] ತೆರೆಯುವದನ್ನು ಪ್ರಸಿದ್ಧಿಪಡಿಸುವದಕ್ಕೂ


ನನ್ನ ಪ್ರಿಯ ಸಹೋದರರೇ, ಕೇಳಿರಿ, ದೇವರು ಲೌಕಿಕ ವಿಷಯದಲ್ಲಿ ಬಡವರಾಗಿರುವವರನ್ನು ಆದುಕೊಂಡು ಅವರು ನಂಬಿಕೆಯಲ್ಲಿ ಐಶ್ವರ್ಯವಂತರಾಗಿಯೂ ತನ್ನನ್ನು ಪ್ರೀತಿಸುವವರಿಗೆ ತಾನು ವಾಗ್ದಾನಮಾಡಿದ ರಾಜ್ಯಕ್ಕೆ ಬಾಧ್ಯರಾಗಿಯೂ ಇರಬೇಕೆಂದು ನೇವಿುಸಲಿಲ್ಲವೋ?


ಇದಲ್ಲದೆ ಈ ಹಟ್ಟಿಗೆ ಸೇರದಿರುವ ಇನ್ನು ಬೇರೆ ಕುರಿಗಳು ನನಗೆ ಅವೆ, ಅವುಗಳನ್ನೂ ನಾನು ತರಬೇಕು; ಅವು ನನ್ನ ಸ್ವರಕ್ಕೆ ಕಿವಿಗೊಡುವವು; ಆಗ ಒಂದೇ ಹಿಂಡು ಆಗುವದು, ಒಬ್ಬನೇ ಕುರುಬನಿರುವನು.


ದಾವೀದನೇ ಆತನನ್ನು ಒಡೆಯನೆಂದು ಹೇಳಿರುವಲ್ಲಿ ಆತನು ಅವನಿಗೆ ಮಗನಾಗುವದು ಹೇಗೆ? ಎಂದು ಕೇಳಿದನು.


ನಾನು ಕಾರ್ಗತ್ತಲಿನ ಕಣಿವೆಯಲ್ಲಿ ನಡೆಯುವಾಗಲೂ ನೀನು ಹತ್ತಿರವಿರುವದರಿಂದ ಕೇಡಿಗೆ ಹೆದರೆನು; ನಿನ್ನ ದೊಣ್ಣೆಯೂ ನಿನ್ನ ಕೋಲೂ ನನಗೆ ಧೈರ್ಯ ಕೊಡುತ್ತವೆ.


ನೀನು ಕೋಲುಹಿಡಿದು ನನ್ನ ಬಳಿಗೆ ಬರುವದೇನು? ನಾನು ನಾಯಿಯೋ ಎಂದು ಹೇಳಿ ಅವನನ್ನು ತನ್ನ ದೇವರ ಹೆಸರಿನಲ್ಲಿ ಶಪಿಸಿ -


ತನ್ನ ಕೋಲನ್ನು ತೆಗೆದುಕೊಂಡು ಹೊರಟು ಹಳ್ಳದಲ್ಲಿ ಐದು ನುಣುಪುಕಲ್ಲುಗಳನ್ನು ಆರಿಸಿಕೊಂಡು ಅವುಗಳನ್ನು ಕುರುಬರ ಪದ್ಧತಿಯಂತೆ ತನಗಿರುವ ಸೊಂಟಚೀಲದಲ್ಲಿ ಹಾಕಿ ಕೈಯಲ್ಲಿ ಕವಣೆಯನ್ನು ಹಿಡಿದು ಫಿಲಿಷ್ಟಿಯನ ಬಳಿಗೆ ಹೋದನು.


ದನಗಳೇಯಾಗಲಿ ಆಡುಕುರಿಗಳೇಯಾಗಲಿ ಒಡೆಯನು ಲೆಕ್ಕಿಸಿದ ಎಲ್ಲಾ ಪಶುಗಳಲ್ಲಿ ಪ್ರತಿ ಹತ್ತನೆಯದು ಯೆಹೋವನಿಗೆ ಮೀಸಲಾಗಿರಬೇಕು.


ನನ್ನ ಜೀವಮಾನದಲ್ಲೆಲ್ಲಾ ಯೆಹೋವನ ಮನೆಯಲ್ಲಿ ವಾಸಮಾಡುತ್ತಾ ಆತನ ಪ್ರಸನ್ನತೆಯನ್ನು ನೋಡುವದಕ್ಕೂ ಆತನ ಮಂದಿರದಲ್ಲಿ ಧ್ಯಾನಮಾಡುವದಕ್ಕೂ ನನಗೆ ಅಪ್ಪಣೆಯಾಗಬೇಕೆಂಬ ಒಂದೇ ವರವನ್ನು ಯೆಹೋವನಿಂದ ಕೇಳಿಕೊಂಡು ಅದನ್ನೇ ಎದುರುನೋಡುತ್ತಿರುವೆನು.


ನಮ್ಮ ಯೆಹೋವದೇವರ ಪ್ರಸನ್ನತೆಯು ನಮ್ಮ ಮೇಲೆ ಇರಲಿ. ನಾವು ಕೈಹಾಕಿದ ಕೆಲಸವನ್ನು ನಮಗೆ ಸಫಲಪಡಿಸು; ನಾವು ಕೈಹಾಕಿದ ಕೆಲಸವನ್ನು ಸಫಲಪಡಿಸು.


ಆದರೆ ಏನೂ ಇಲ್ಲದ ಕೆಲವು ಬಡ ಜನರನ್ನು ಯೆಹೂದ ದೇಶದಲ್ಲಿ ಬಿಟ್ಟು ಆಗಲೇ ಅವರಿಗೆ ಹೊಲತೋಟಗಳನ್ನು ಕೊಟ್ಟನು.


ಆತನು ಕುರುಬನಂತೆ ತನ್ನ ಮಂದೆಯನ್ನು ಮೇಯಿಸುವನು, ಮರಿಗಳನ್ನು ಕೈಯಿಂದ ಕೂಡಿಸಿ ಎದೆಗೆತ್ತಿಕೊಳ್ಳುವನು. ಹಾಲುಕುಡಿಸುವ ಕುರಿಗಳನ್ನು ಮೆಲ್ಲಗೆ ನಡಿಸುವನು ಎಂದು ಸಾರು.


ಫಲವತ್ತಾದ ಭೂವಿುಯ ಮಧ್ಯದಲ್ಲಿನ ಕಾಡಿನೊಳಗೆ ಪ್ರತ್ಯೇಕವಾಗಿ ತಂಗುವ ನಿನ್ನ ಜನರನ್ನು, ನಿನ್ನ ಸ್ವಾಸ್ತ್ಯವಾದ ಹಿಂಡನ್ನು ನಿನ್ನ ಕೋಲಿನಿಂದ ಮೇಯಿಸು; ಪೂರ್ವಕಾಲದಂತೆ ಬಾಷಾನಿನಲ್ಲಿಯೂ ಗಿಲ್ಯಾದಿನಲ್ಲಿಯೂ ಮೇಯಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು