Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 11:9 - ಕನ್ನಡ ಸತ್ಯವೇದವು J.V. (BSI)

9 ಆಗ ನಾನು - ನಿಮ್ಮನ್ನು ಮೇಯಿಸೆನು; ಸಾಯುವದು ಸಾಯಲಿ, ಹಾಳಾಗುವದು ಹಾಳಾಗಲಿ, ಉಳಿದವುಗಳು ಒಂದರ ಮಾಂಸವನ್ನೊಂದು ತಿನ್ನಲಿ ಅಂದುಕೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆಗ, “ನಾನು ನಿಮ್ಮನ್ನು ಮೇಯಿಸೆನು; ಸಾಯುವುದು ಸಾಯಲಿ, ಹಾಳಾಗುವುದು ಹಾಳಾಗಲಿ, ಉಳಿದವುಗಳು ಒಂದರ ಮಾಂಸವೊಂದನ್ನು ತಿನ್ನಲಿ ಅಂದುಕೊಂಡೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಆಗ ನಾನು: “ಇನ್ನು ಮೇಲೆ ನಾನು ನಿಮ್ಮನ್ನು ಮೇಯಿಸೆನು. ಸಾಯಬೇಕಾದವು ಸಾಯಲಿ, ಹಾಳಾಗಬೇಕಾದವು ಹಾಳಾಗಿಹೋಗಲಿ, ಉಳಿದವುಗಳು ಒಂದನ್ನೊಂದು ಕಚ್ಚಿ ಕಬಳಿಸಿಬಿಡಲಿ,” ಎಂದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಆಗ ನಾನು, “ಸರಿ, ನಾನು ನಿಮ್ಮನ್ನು ಇನ್ನು ನೋಡಿಕೊಳ್ಳುವದಿಲ್ಲ. ಹೋಗಿಬಿಡುತ್ತೇನೆ” ಅಂದೆನು. ಸಾಯಲು ಮನಸ್ಸುಳ್ಳವುಗಳನ್ನು ಸಾಯಲುಬಿಟ್ಟೆನು. ನಾಶವಾಗಲು ಮನಸ್ಸುಳ್ಳವುಗಳನ್ನು ನಾಶವಾಗಲು ಬಿಟ್ಟೆನು. ಅಳಿಯದೆ ಉಳಿದವುಗಳು ಪರಸ್ಪರ ನಾಶಮಾಡಿಕೊಳ್ಳುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಆಗ ನಾನು, “ನಾನು ನಿಮ್ಮನ್ನು ಮೇಯಿಸುವುದಿಲ್ಲ, ಸಾಯುವಂಥದ್ದು ಸಾಯಲಿ, ಕೆಡುವಂಥದ್ದು ಕೆಡಲಿ, ಮಿಕ್ಕಾದವುಗಳು ಒಂದರ ಮಾಂಸವನ್ನು ಒಂದು ತಿನ್ನಲಿ,” ಎಂದು ಹೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 11:9
22 ತಿಳಿವುಗಳ ಹೋಲಿಕೆ  

ಅವನು ಬಂದು ಐಗುಪ್ತದೇಶವನ್ನು ಹೊಡೆಯುವನು; ಮರಣಕ್ಕೆ ಗೊತ್ತಾದವರು ಮರಣಕ್ಕೆ, ಸೆರೆಗೆ ಗೊತ್ತಾದವರು ಸೆರೆಗೆ, ಖಡ್ಗಕ್ಕೆ ಗೊತ್ತಾದವರು ಖಡ್ಗಕ್ಕೆ ಗುರಿಯಾಗುವರು.


ಅನ್ಯಾಯ ಮಾಡುವವನು ಇನ್ನೂ ಅನ್ಯಾಯಮಾಡಲಿ; ಮೈಲಿಗೆಯಾದವನು ತನ್ನನ್ನು ಇನ್ನೂ ಮೈಲಿಗೆಮಾಡಿಕೊಳ್ಳಲಿ; ನೀತಿವಂತನು ಇನ್ನೂ ನೀತಿಯನ್ನು ಅನುಸರಿಸಲಿ; ಪವಿತ್ರನು ತನ್ನನ್ನು ಇನ್ನೂ ಪವಿತ್ರಮಾಡಿಕೊಳ್ಳಲಿ.


ಯೇಸು ಅವರಿಗೆ - ಇನ್ನು ಸ್ವಲ್ಪ ಕಾಲವೇ ಬೆಳಕು ನಿಮ್ಮಲ್ಲಿ ಇರುತ್ತದೆ; ಕತ್ತಲೆಯು ನಿಮ್ಮನ್ನು ಮುಸುಕಿಕೊಳ್ಳದಂತೆ ಬೆಳಕು ನಿಮಗೆ ಇರುವಾಗಲೇ ಸಂಚಾರಮಾಡಿರಿ. ಕತ್ತಲೆಯಲ್ಲಿ ಸಂಚಾರಮಾಡುವವನಿಗೆ ತಾನು ಎಲ್ಲಿ ಹೋಗುತ್ತೇನೆಂದು ತಿಳಿಯದು.


ಆದದರಿಂದ ನೀವು ನಿಮ್ಮ ಪಾಪಗಳಲ್ಲಿಯೇ ಸಾಯುವಿರೆಂದು ನಿಮಗೆ ಹೇಳಿದೆನು; ನನ್ನನ್ನು ಆತನೆಂದು ನೀವು ನಂಬದೆ ಹೋದರೆ ನಿಮ್ಮ ಪಾಪಗಳಲ್ಲಿಯೇ ಸಾಯುವಿರೆಂದು ಹೇಳಿದನು.


ಯೇಸು ತಿರಿಗಿ ಅವರಿಗೆ - ನಾನು ಹೋಗುತ್ತೇನೆ; ನೀವು ನನ್ನನ್ನು ಹುಡುಕುವಿರಿ; ಮತ್ತು ನಿಮ್ಮ ಪಾಪದಲ್ಲೇ ಸಾಯುವಿರಿ. ನಾನು ಹೋಗುವಲ್ಲಿಗೆ ನೀವು ಬರಲಾರಿರಿ ಅಂದನು.


ಆದದರಿಂದ ದೇವರರಾಜ್ಯವು ನಿಮ್ಮಿಂದ ತೆಗೆಯಲ್ಪಟ್ಟು ಅದರ ಫಲಗಳನ್ನು ಕೊಡುವ ಜನಕ್ಕೆ ಕೊಡಲಾಗುವದು.


ದಾರಿಯಲ್ಲಿ ಒಂದು ಅಂಜೂರದ ಮರವನ್ನು ಕಂಡು ಅದರ ಹತ್ತಿರಕ್ಕೆ ಹೋಗಿ ಅದರಲ್ಲಿ ಬರೀ ಎಲೆಗಳನ್ನೇ ಹೊರತು ಮತ್ತೇನೂ ಕಾಣದೆ ಅದಕ್ಕೆ - ಇನ್ನು ಮೇಲೆ ನಿನ್ನಲ್ಲಿ ಫಲವು ಎಂದೆಂದಿಗೂ ಆಗದೆಹೋಗಲಿ ಎಂದು ಹೇಳಿದನು. ಆ ಕ್ಷಣವೇ ಆ ಅಂಜೂರದ ಮರವು ಒಣಗಿಹೋಯಿತು.


ಅವರ ಮಾತನ್ನು ಬಿಡಿರಿ; ತಾವೇ ಕುರುಡರು, ಮತ್ತೊಬ್ಬರಿಗೆ ದಾರಿ ತೋರಿಸುವದಕ್ಕೆ ಹೋಗುತ್ತಾರೆ; ಕುರುಡನು ಕುರುಡನಿಗೆ ದಾರಿತೋರಿಸಿದರೆ ಅವರಿಬ್ಬರೂ ಕುಣಿಯಲ್ಲಿ ಬೀಳುವರು ಅಂದನು.


ಹೀಗಿರಲು ನಿನ್ನಲ್ಲಿ ತಂದೆಗಳು ಮಕ್ಕಳನ್ನು, ಮಕ್ಕಳು ತಂದೆಗಳನ್ನು, ತಿನ್ನುವರು; ನಾನು ನಿನ್ನನ್ನು ದಂಡಿಸಿ ನಿನ್ನಲ್ಲಿ ಉಳಿದ ಸಮಸ್ತರನ್ನು ಎಲ್ಲಾ ಕಡೆಯ ಗಾಳಿಗೂ ತೂರುವೆನು.


ಇಗೋ, ಖಂಡಿತವಾಗಿ ನಿಮ್ಮನ್ನೂ ನಾನು ನಿಮಗೆ ಮತ್ತು ನಿಮ್ಮ ಪಿತೃಗಳಿಗೆ ದಯಪಾಲಿಸಿದ ಪಟ್ಟಣವನ್ನೂ ಭಾರವೆಂದು ಎತ್ತಿ ನನ್ನೆದುರಿನಿಂದ ಎಸೆದುಬಿಟ್ಟು


ಪ್ರವಾದಿಯಾಗಲಿ ಯಾಜಕನಾಗಲಿ ಈ ಜನರಲ್ಲಿ ಯಾರಾಗಲಿ ಯೆಹೋವನು ದಯಪಾಲಿಸಿರುವ ವಾಕ್ಯಭಾರವೇನು ಎಂದು ನಿನ್ನನ್ನು ಕೇಳಿದರೆ ನೀನು ಅವರಿಗೆ ಹೀಗೆ ಹೇಳು - ಯೆಹೋವನು ಇಂತೆನ್ನುತ್ತಾನೆ - ನೀವೇ ನನ್ನ ಭಾರ, ನಾನು ನಿಮ್ಮನ್ನು ಎಸೆದುಬಿಡುವೆನು.


ಅವರ ಪ್ರಾಣವನ್ನು ಹುಡುಕುವ ಶತ್ರುಗಳು ಅವರನ್ನು ಮುತ್ತಿ ಬಹಳವಾಗಿ ಇರಕಿಸುವಾಗ ಅವರು ತಮ್ಮ ಗಂಡು ಹೆಣ್ಣು ಮಕ್ಕಳ ಮಾಂಸವನ್ನೂ ಇಷ್ಟ ವಿುತ್ರರ ಮಾಂಸವನ್ನೂ ತಿನ್ನುವಂತೆ ಮಾಡುವೆನು. ಇದು ಯೆಹೋವನಾದ ನನ್ನ ನುಡಿ.


ನನ್ನ ಜನರು ಜ್ಞಾನಹೀನರಾಗಿ ಹಾಳಾಗಿದ್ದಾರೆ; ನೀವು ಜ್ಞಾನವನ್ನು ತಳ್ಳಿಬಿಟ್ಟದರಿಂದ ಇನ್ನು ನನಗೆ ಯಾಜಕ ಸೇವೆಮಾಡದಂತೆ ನಾನು ನಿಮ್ಮನ್ನು ತಳ್ಳಿಬಿಡುವೆನು; ನೀವು ನಿಮ್ಮ ದೇವರ ಧರ್ಮೋಪದೇಶವನ್ನು ಮರೆತ ಕಾರಣ ನಾನು ನಿಮ್ಮ ಸಂತತಿಯವರನ್ನು ಮರೆಯುವೆನು.


ದೇಶದೊಳಗೆಲ್ಲಾ ಮೂರರಲ್ಲಿ ಎರಡು ಭಾಗದವರು ಹತರಾಗಿ ಸಾಯುವರು, ಮೂರನೆಯ ಭಾಗದವರು ಅಲ್ಲಿ ಉಳಿಯುವರು; ಇದು ಯೆಹೋವನ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು