Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 12:11 - ಕನ್ನಡ ಸತ್ಯವೇದವು J.V. (BSI)

11 ಮೆಗಿದ್ದೋವಿನ ತಗ್ಗಿನೊಳಗೆ ಹದದ್‍ರಿಮ್ಮೋನಿನಲ್ಲಿ ಗೋಳಾಟವಾಗುವಂತೆ ಯೆರೂಸಲೇವಿುನಲ್ಲಿ ಆ ದಿನ ದೊಡ್ಡ ಗೋಳಾಟವಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಮೆಗಿದ್ದೋವಿನ ತಗ್ಗಿನೊಳಗೆ ಹದದ್ ರಿಮ್ಮೋನಿನಲ್ಲಿ ಗೋಳಾಟವಾಗುವಂತೆ ಯೆರೂಸಲೇಮಿನಲ್ಲಿ ಆ ದಿನ ದೊಡ್ಡ ಗೋಳಾಟವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಮೆಗಿದ್ದೋವಿನ ಕಣಿವೆಯಲ್ಲಿ ಆದಂತೆ, ಹದಾಧ್ - ರೀಮೋನ್‍ನಲ್ಲಿ ನಡೆದಂತೆ ಜೆರುಸಲೇಮಿನಲ್ಲಿ ಆ ದಿನದಂದು ದೊಡ್ಡ ಗೋಳಾಟವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಜೆರುಸಲೇಮಿನಲ್ಲಿ ಅತೀವ ಗೋಳಾಟದ ಮತ್ತು ದುಃಖದ ಕಾಲ ಬರುವದು. ಅದು ಮೆಗಿದ್ದೋ ತಗ್ಗಿನಲ್ಲಿ ಹದದ್ ರಿಮ್ಮೋನನು ಸತ್ತಾಗ ಜನರು ಗೋಳಾಡಿದ ಸಮಯದಂತೆ ಇರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಆ ದಿವಸದಲ್ಲಿ ಯೆರೂಸಲೇಮಿನಲ್ಲಿ ದೊಡ್ಡ ಗೋಳಾಟವಿರುವುದು. ಮೆಗಿದ್ದೋವಿನ ತಗ್ಗಿನಲ್ಲಾದ ಹದದ್ ರಿಮ್ಮೋನಿನ ಗೋಳಾಟದ ಹಾಗೆಯೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 12:11
7 ತಿಳಿವುಗಳ ಹೋಲಿಕೆ  

ಸೇವಕರು ಅವನನ್ನು ಯುದ್ಧ ರಥದಿಂದಿಳಿಸಿ ಅವನ ಎರಡನೆಯ ರಥದಲ್ಲಿ ಮಲಗಿಸಿ ಯೆರೂಸಲೇವಿುಗೆ ತೆಗೆದುಕೊಂಡು ಹೋಗಲು ಅಲ್ಲಿ ಸತ್ತನು. ಅವನ ಶವವನ್ನು ಅವನ ಪೂರ್ವಿಕರ ಶ್ಮಶಾನದಲ್ಲಿ ಸಮಾಧಿಮಾಡಿದರು. ಎಲ್ಲಾ ಯೆಹೂದ್ಯರೂ ಯೆರೂಸಲೇವಿುನವರೂ ಯೋಷೀಯನ ವಿಷಯವಾಗಿ ಗೋಳಾಡಿದರು.


ಅವನ ಕಾಲದಲ್ಲಿ ಐಗುಪ್ತದ ಅರಸನಾದ ಫರೋಹ ನೆಕೋ ಎಂಬವನು ಅಶ್ಶೂರದ ಅರಸನಿಗೆ ವಿರೋಧವಾಗಿ ಯುದ್ಧಮಾಡುವದಕ್ಕೋಸ್ಕರ ಯೂಫ್ರೇಟೀಸ್ ನದಿಯ ಬಳಿಗೆ ಹೋದನು. ಅವನು ಅಲ್ಲಿಗೆ ಹೋಗುತ್ತಿರುವಾಗ ಯೋಷೀಯನು ಮೆಗಿದ್ದೋವಿನಲ್ಲಿ ಅವನನ್ನು ಎದುರುಗೊಂಡು ಕೂಡಲೆ ಅವನಿಂದ ಹತನಾದನು.


ಆಗ ಮನುಷ್ಯಕುಮಾರನನ್ನು ಸೂಚಿಸುವ ಗುರುತು ಆಕಾಶದಲ್ಲಿ ಕಾಣಬರುವದು. ಆಗ ಭೂಲೋಕದಲ್ಲಿರುವ ಎಲ್ಲಾ ಕುಲದವರು ಎದೆಬಡಕೊಳ್ಳುವರು, ಮತ್ತು ಮನುಷ್ಯಕುಮಾರನು ಬಲದಿಂದಲೂ ಬಹು ಮಹಿಮೆಯಿಂದಲೂ ಆಕಾಶದ ಮೇಘಗಳ ಮೇಲೆ ಬರುವದನ್ನು ಕಾಣುವರು.


ಇಗೋ ಮೇಘಗಳೊಂದಿಗೆ ಬರುತ್ತಾನೆ; ಎಲ್ಲರ ಕಣ್ಣುಗಳು ಆತನನ್ನು ಕಾಣುವವು; ಆತನನ್ನು ಇರಿದವರು ಸಹ ಕಾಣುವರು; ಭೂವಿುಯಲ್ಲಿರುವ ಎಲ್ಲಾ ಕುಲದವರು ಆತನನ್ನು ನೋಡಿ ಎದೆಬಡುಕೊಳ್ಳುವರು. ಹೌದು, ಹಾಗೆಯೇ ಆಗುವದು. ಆಮೆನ್.


ಆ ದೆವ್ವಗಳು ಭೂರಾಜರನ್ನು ಇಬ್ರಿಯ ಭಾಷೆಯಲ್ಲಿ ಹರ್ಮಗೆದೋನ್ ಎಂಬ ಹೆಸರುಳ್ಳ ಸ್ಥಳಕ್ಕೆ ಕೂಡಿಸಿದವು.


ದೇಶವೆಲ್ಲಾ ಗೋಳಾಡುವದು, ಒಂದೊಂದು ಕುಟುಂಬವು ಬೇರೆ ಬೇರೆ ಗೋಳಾಡುವದು; ದಾವೀದ ವಂಶದ ಕುಟುಂಬವು ಬೇರೆ, ಅದರಲ್ಲಿ ಹೆಂಗಸರು ಗಂಡಸರು ಬೇರೆ ಬೇರೆ; ನಾತಾನ ವಂಶದ ಕುಟುಂಬವು ಬೇರೆ, ಅದರಲ್ಲಿ ಹೆಂಗಸರು, ಗಂಡಸರು ಬೇರೆ ಬೇರೆ;


ಆದರೆ ಯೋಷೀಯನು ಅವನನ್ನು ಬಿಟ್ಟು ಹಿಂದಿರುಗಲಿಲ್ಲ. ದೇವೋಕ್ತಿಯಾಗಿದ್ದ ನೆಕೋವಿನ ಮಾತಿಗೆ ಕಿವಿಗೊಡದೆ ವೇಷಹಾಕಿಕೊಂಡು ಅವನೊಡನೆ ಕಾದುವದಕ್ಕೆ ಮೆಗಿದ್ದೋ ಬೈಲಿಗೆ ಹೋದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು