Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 12:12 - ಕನ್ನಡ ಸತ್ಯವೇದವು J.V. (BSI)

12 ದೇಶವೆಲ್ಲಾ ಗೋಳಾಡುವದು, ಒಂದೊಂದು ಕುಟುಂಬವು ಬೇರೆ ಬೇರೆ ಗೋಳಾಡುವದು; ದಾವೀದ ವಂಶದ ಕುಟುಂಬವು ಬೇರೆ, ಅದರಲ್ಲಿ ಹೆಂಗಸರು ಗಂಡಸರು ಬೇರೆ ಬೇರೆ; ನಾತಾನ ವಂಶದ ಕುಟುಂಬವು ಬೇರೆ, ಅದರಲ್ಲಿ ಹೆಂಗಸರು, ಗಂಡಸರು ಬೇರೆ ಬೇರೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ದೇಶವೆಲ್ಲಾ ಗೋಳಾಡುವುದು, ಒಂದೊಂದು ಕುಟುಂಬವು ಬೇರೆ ಬೇರೆಯಾಗಿ ಗೋಳಾಡುವುದು; ದಾವೀದ ವಂಶದ ಕುಟುಂಬವು ಬೇರೆ, ಅದರಲ್ಲಿ ಹೆಂಗಸರು, ಗಂಡಸರು ಬೇರೆ ಬೇರೆ; ನಾತಾನ ವಂಶದ ಕುಟುಂಬವು ಬೇರೆ, ಅದರಲ್ಲಿ ಹೆಂಗಸರು ಗಂಡಸರು ಬೇರೆ ಬೇರೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ನಾಡೆಲ್ಲ ಗೋಳಾಡುವುದು, ಒಂದೊಂದು ಕುಟುಂಬವೂ ಪ್ರತ್ಯೇಕವಾಗಿ ಗೋಳಾಡುವುದು. “ದಾವೀದ ವಂಶದ ಕುಟುಂಬವೇ ಬೇರೆಯಾಗಿ, ಅದರಲ್ಲಿನ ಗಂಡಸರು ಹೆಂಗಸರು ಬೇರೆಬೇರೆಯಾಗಿ; ನಾತಾನ ವಂಶದ ಕುಟುಂಬವೇ ಬೇರೆಯಾಗಿ, ಅದರಲ್ಲಿನ ಗಂಡಸರು ಹೆಂಗಸರು ಬೇರೆಬೇರೆಯಾಗಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಪ್ರತಿಯೊಂದು ಕುಟುಂಬವೂ ರೋಧಿಸುವದು. ದಾವೀದನ ಕುಲದವರೂ ಗೋಳಾಡುವರು. ಅವರ ಹೆಂಡತಿಯರೂ ಗೋಳಾಡುವರು. ನಾತಾನಿನ ಕುಟುಂಬದವರೂ ಗೋಳಾಡುವರು; ಅವರ ಹೆಂಡತಿಯರೂ ಗೋಳಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ದೇಶವು ಗೋತ್ರ ಗೋತ್ರಗಳ ಪ್ರಕಾರ ಪ್ರತ್ಯೇಕವಾಗಿ ಗೋಳಾಡುವುದು. ದಾವೀದನ ಮನೆಯ ಕುಲವು ಪ್ರತ್ಯೇಕ, ಅವರ ಹೆಂಡತಿಯರು ಪ್ರತ್ಯೇಕ; ನಾತಾನನ ಮನೆತನದ ಕುಲವು ಪ್ರತ್ಯೇಕ, ಅವರ ಹೆಂಡತಿಯರು ಪ್ರತ್ಯೇಕ;

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 12:12
17 ತಿಳಿವುಗಳ ಹೋಲಿಕೆ  

ಇಗೋ ಮೇಘಗಳೊಂದಿಗೆ ಬರುತ್ತಾನೆ; ಎಲ್ಲರ ಕಣ್ಣುಗಳು ಆತನನ್ನು ಕಾಣುವವು; ಆತನನ್ನು ಇರಿದವರು ಸಹ ಕಾಣುವರು; ಭೂವಿುಯಲ್ಲಿರುವ ಎಲ್ಲಾ ಕುಲದವರು ಆತನನ್ನು ನೋಡಿ ಎದೆಬಡುಕೊಳ್ಳುವರು. ಹೌದು, ಹಾಗೆಯೇ ಆಗುವದು. ಆಮೆನ್.


ಇವನು ಮೆಲೆಯಾನ ಮಗನು; ಇವನು ಮೆನ್ನನ ಮಗನು; ಇವನು ಮತ್ತಾಥನ ಮಗನು; ಇವನು ನಾತಾನನ ಮಗನು; ಇವನು ದಾವೀದನ ಮಗನು;


ಆಗ ಮನುಷ್ಯಕುಮಾರನನ್ನು ಸೂಚಿಸುವ ಗುರುತು ಆಕಾಶದಲ್ಲಿ ಕಾಣಬರುವದು. ಆಗ ಭೂಲೋಕದಲ್ಲಿರುವ ಎಲ್ಲಾ ಕುಲದವರು ಎದೆಬಡಕೊಳ್ಳುವರು, ಮತ್ತು ಮನುಷ್ಯಕುಮಾರನು ಬಲದಿಂದಲೂ ಬಹು ಮಹಿಮೆಯಿಂದಲೂ ಆಕಾಶದ ಮೇಘಗಳ ಮೇಲೆ ಬರುವದನ್ನು ಕಾಣುವರು.


ಆಗ - ನಾವು ಬಹು ವರುಷಗಳಿಂದ ಮಾಡಿಕೊಂಡು ಬಂದಂತೆ ಮುಂದೆಯೂ ಐದನೆಯ ತಿಂಗಳಲ್ಲಿ ಉಪವಾಸಮಾಡಿ ಅಳಬೇಕೋ ಎಂದು ಪ್ರವಾದಿಗಳ ಮತ್ತು ಸೇನಾಧೀಶ್ವರ ಯೆಹೋವನ ಆಲಯದ ಯಾಜಕರ ಹತ್ತಿರ ವಿಚಾರಿಸಿಕೊಂಡು ಬನ್ನಿರಿ ಎಂಬದಾಗಿ ಅವರಿಗೆ ಅಪ್ಪಣೆಕೊಟ್ಟಿದ್ದರು.


ಅಲ್ಲಿ ಅವನಿಗೆ ಹುಟ್ಟಿದವರ ಹೆಸರುಗಳು - ಶಮ್ಮೂವ, ಶೋಬಾಬ್,


ಪ್ರಾರ್ಥನೆಗೆ ಮನಸ್ಸು ಕೊಡುವದಕ್ಕಾಗಿ ನೀವು ಪರಸ್ಪರ ಸಮ್ಮತಿಯಿಂದ ಸ್ವಲ್ಪಕಾಲ ದಂಪತಿ ಧರ್ಮವನ್ನು ಬಿಟ್ಟು ಅಗಲಿರಬಹುದೇ ಹೊರತು ಅನ್ಯಥಾ ಹಾಗೆ ಮಾಡಬಾರದು; ಆಮೇಲೆ ಸೈತಾನನು ನಿಮಗೆ ದಮೆಯಿಲ್ಲದಿರುವದನ್ನು ನೋಡಿ ನಿಮಗೆ ದುಷ್ಪ್ರೇರಣೆಮಾಡದಂತೆ ತಿರಿಗಿ ಕೂಡಿಕೊಳ್ಳಿರಿ.


ಜನರನ್ನು ಒಟ್ಟಿಗೆ ಬರಮಾಡಿರಿ, ಕೂಟವನ್ನು ಏರ್ಪಡಿಸಿರಿ, ವೃದ್ಧರನ್ನು ಕೂಡಿಸಿರಿ, ಮಕ್ಕಳನ್ನೂ ಮೊಲೆಕೂಸುಗಳನ್ನೂ ಸೇರಿಸಿರಿ; ವಧೂವರರೂ ತಮ್ಮ ಕಲ್ಯಾಣಗೃಹದಿಂದ ಹೊರಟುಬರಲಿ.


ಎಫ್ರಾಯೀಮು ಹೀಗೆ ಪ್ರಲಾಪಿಸಿಕೊಳ್ಳುವದನ್ನು ಕೇಳೇ ಕೇಳಿದ್ದೇನೆ - ನೀನು ನನ್ನನ್ನು ಶಿಕ್ಷಿಸಿದ್ದೀ, ಪಳಗದ ಹೋರಿಯಂತೆ ಶಿಕ್ಷೆಯನ್ನು ಅನುಭವಿಸಿದೆನು; ನನ್ನನ್ನು ತಿರುಗಿಸು, ನೀನು ತಿರುಗಿಸಿದ ಹಾಗೆ ತಿರುಗುವೆನು; ನೀನು ನನ್ನ ದೇವರಾದ ಯೆಹೋವನಲ್ಲವೆ.


ರಾಜನಿಗೂ ರಾಜಮಾತೆಗೂ - ನೆಲದಲ್ಲಿ ಕೂತುಕೊಳ್ಳಿರಿ, ನಿಮ್ಮ ಅಂದದ ಕಿರೀಟವು ನಿಮ್ಮ ತಲೆಯಿಂದ ಕೆಳಗೆ ಬಿದ್ದಿದೆ ಎಂದು ಹೇಳಿರಿ.


ಇದಕ್ಕಾಗಿ ಭೂಲೋಕವು ಪ್ರಲಾಪಿಸುವದು, ಮೇಲೆ ಆಕಾಶವು ಕಪ್ಪಾಗುವದು; ನಾನು ನುಡಿದಿದ್ದೇನೆ, ಪಶ್ಚಾತ್ತಾಪಪಡೆನು; ಉದ್ದೇಶಿಸಿದ್ದೇನೆ, ಹಿಂದೆಗೆಯೆನು.


ಆಹಾ, ಬೋಳುಗುಡ್ಡಗಳಲ್ಲಿ ಒಂದು ಶಬ್ದ! ತಾವು ಡೊಂಕುದಾರಿಯನ್ನು ಹಿಡಿದು ತಮ್ಮ ದೇವರಾದ ಯೆಹೋವನನ್ನು ಮರೆತು ಬಿಟ್ಟಿದ್ದೇವೆಂದು ಇಸ್ರಾಯೇಲ್ಯರು ಕಣ್ಣೀರು ಸುರಿಸಿ ದೇವರ ಕೃಪೆಯನ್ನು ಬೇಡುತ್ತಿದ್ದಾರಲ್ಲಾ.


ಯೆಹೋವನು ನಾತಾನನನ್ನು ದಾವೀದನ ಬಳಿಗೆ ಕಳುಹಿಸಿದನು. ಅವನು ಇವನ ಹತ್ತಿರ ಬಂದು ಹೇಳಿದ್ದೇನಂದರೆ - ಒಂದು ಊರಲ್ಲಿ ಇಬ್ಬರು ಮನುಷ್ಯರಿದ್ದರು; ಒಬ್ಬನು ಐಶ್ವರ್ಯವಂತನು, ಇನ್ನೊಬ್ಬನು ಬಡವನು.


ಆ ರಾತ್ರಿಯಲ್ಲಿ ಫರೋಹನೂ ಅವನ ಪರಿವಾರದವರೂ ಐಗುಪ್ತ್ಯರೆಲ್ಲರೂ ಎದ್ದು ನೋಡಲಾಗಿ ಶವವಿಲ್ಲದ ಮನೆ ಒಂದೂ ಇರಲಿಲ್ಲವಾದದರಿಂದ ಐಗುಪ್ತದೇಶದಲ್ಲಿ ದೊಡ್ಡ ಗೋಳಾಟವುಂಟಾಯಿತು.


ಮೆಗಿದ್ದೋವಿನ ತಗ್ಗಿನೊಳಗೆ ಹದದ್‍ರಿಮ್ಮೋನಿನಲ್ಲಿ ಗೋಳಾಟವಾಗುವಂತೆ ಯೆರೂಸಲೇವಿುನಲ್ಲಿ ಆ ದಿನ ದೊಡ್ಡ ಗೋಳಾಟವಾಗುವದು.


ಲೇವಿ ವಂಶದ ಕುಟುಂಬವು ಬೇರೆ, ಅದರಲ್ಲಿ ಹೆಂಗಸರು ಗಂಡಸರು ಬೇರೆ ಬೇರೆ; ಶಿಮ್ಮಿಯ ಸಂತಾನದ ಕುಟುಂಬವು ಬೇರೆ, ಅದರಲ್ಲಿ ಹೆಂಗಸರು ಗಂಡಸರು ಬೇರೆ ಬೇರೆ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು