Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 12:2 - ಕನ್ನಡ ಸತ್ಯವೇದವು J.V. (BSI)

2 ಆಹಾ! ನಾನು ಯೆರೂಸಲೇಮನ್ನು ಸುತ್ತಣ ಸಕಲ ಜನಾಂಗಗಳಿಗೆ ಅಮಲೇರಿಸಿ ಓಲಾಡಿಸುವ ಬೋಗುಣಿಯನ್ನಾಗಿ ಮಾಡುವೆನು; ಯೆರೂಸಲೇವಿುಗೆ ಮುತ್ತಿಗೆಹಾಕುವಾಗ ಯೆಹೂದಕ್ಕೆ ಇಕ್ಕಟ್ಟಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ಆಹಾ! ನಾನು ಯೆರೂಸಲೇಮನ್ನು ಸುತ್ತಣ ಸಕಲ ಜನಾಂಗಗಳಿಗೆ ಅಮಲೇರಿಸಿ ಓಲಾಡಿಸುವ ಬೋಗುಣಿಯನ್ನಾಗಿ ಮಾಡುವೆನು; ಯೆರೂಸಲೇಮಿಗೆ ಮುತ್ತಿಗೆಹಾಕುವಾಗ ಯೆಹೂದಕ್ಕೂ ಇಕ್ಕಟ್ಟಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 “ನಾನು ಜೆರುಸಲೇಮನ್ನು ಮದ್ಯದ ಬುಡ್ಡಿಯನ್ನಾಗಿ ಮಾಡುವೆನು. ಅದರ ಸುತ್ತಮುತ್ತಲಿರುವ ರಾಷ್ಟ್ರಗಳು ಆ ಬುಡ್ಡಿಯಿಂದ ಕುಡಿದು ಮತ್ತರಾಗಿ, ಅತ್ತಿತ್ತ ಓಲಾಡುವರು. ಜೆರುಸಲೇಮಿಗೆ ಅವರು ಮುತ್ತಿಗೆ ಹಾಕುವಾಗ ಜುದೇಯವೆಲ್ಲವೂ ಇಕ್ಕಟ್ಟಿಗೆ ಒಳಗಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 “ನಾನು ಜೆರುಸಲೇಮಿನ ಸುತ್ತಮುತ್ತಲಿರುವ ರಾಷ್ಟ್ರಗಳಿಗೆ ಆಕೆಯನ್ನು ಒಂದು ವಿಷದ ಲೋಟವನ್ನಾಗಿ ಮಾಡುತ್ತೇನೆ. ಆ ರಾಜ್ಯಗಳು ಆ ಪಟ್ಟಣದ ಮೇಲೆ ಬೀಳುವವು. ಆಗ ಇಡೀ ಯೆಹೂದವು ಉರುಲಿನೊಳಗೆ ಬೀಳುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 “ನಾನು ಯೆರೂಸಲೇಮನ್ನು ಸುತ್ತಲಿರುವ ಎಲ್ಲಾ ಜನರಿಗೆ ಅಮಲೇರಿಸಿ ಓಲಾಡಿಸುವ ಪಾತ್ರೆಯಾಗಿ ಮಾಡುತ್ತೇನೆ. ಯೆರೂಸಲೇಮಿಗೂ, ಯೆಹೂದಕ್ಕೂ ವಿರೋಧವಾಗಿ ಮುತ್ತಿಗೆ ಹಾಕುವಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 12:2
15 ತಿಳಿವುಗಳ ಹೋಲಿಕೆ  

ಯೆಹೂದವೂ ಯೆರೂಸಲೇವಿುನ ಪರವಾಗಿ ಯುದ್ಧಮಾಡುವದು; ಸುತ್ತಣ ಸಕಲ ಜನಾಂಗಗಳ ಆಸ್ತಿಯು ಅಂದರೆ ಬೆಳ್ಳಿಬಂಗಾರಬಟ್ಟೆಗಳು ರಾಶಿರಾಶಿಯಾಗಿ ಬಾಚಲ್ಪಡುವವು.


ಯೆಹೋವನ ಕೈಯಲ್ಲಿ ಪಾತ್ರೆಯದೆ; ಅದು ಔಷಧಿವಿುಶ್ರವಾಗಿ ಉಕ್ಕುವ ದ್ರಾಕ್ಷಾರಸದಿಂದ ತುಂಬಿದೆ. ಅದರಿಂದ ಹೊಯ್ದು ಹಂಚುತ್ತಾನೆ. ಲೋಕದ ದುಷ್ಟರೆಲ್ಲರೂ ಅದರೊಳಗಿನ ಮಡ್ಡಿಯನ್ನು ಸಹ ಕುಡಿದು ಮುಗಿಸಬೇಕು.


ಯೆಹೋವನು ತನ್ನ ರೋಷವನ್ನು ತುಂಬಿಕೊಟ್ಟ ಪಾತ್ರೆಯಿಂದ ಕುಡಿದ ಯೆರೂಸಲೇಮೇ, ಎಚ್ಚತ್ತುಕೋ, ಎಚ್ಚತ್ತುಕೋ, ಎದ್ದು ನಿಲ್ಲು! ಭ್ರಮಣಗೊಳಿಸುವ ಆ ಪಾನದ ಪಾತ್ರೆಯಲ್ಲಿ ಒಂದು ತೊಟ್ಟನ್ನೂ ಉಳಿಸದೆ ಕುಡಿದು ಬಿಟ್ಟಿದ್ದೀ.


ಇತರರಿಗೆ ಅವಳು ಮಾಡಿದ ಪ್ರಕಾರ ಅವಳಿಗೆ ಮಾಡಿರಿ; ಅವಳ ಕೃತ್ಯಗಳಿಗೆ ಸರಿಯಾಗಿ ಅವಳಿಗೆ ಎರಡರಷ್ಟು ಕೊಡಿರಿ; ಅವಳು ಕಲಸಿದ ಪಾತ್ರೆಯಲ್ಲಿ ಅವಳಿಗೆ ಎರಡರಷ್ಟು ಕಲಸಿಕೊಡಿರಿ.


ಮಹಾ ಪಟ್ಟಣವು ಮೂರು ಭಾಗವಾಯಿತು; ಜನಾಂಗಗಳ ಪಟ್ಟಣಗಳು ಬಿದ್ದವು. ಇದಲ್ಲದೆ ದೇವರು ದೊಡ್ಡ ಬಾಬೆಲನ್ನು ಜ್ಞಾಪಿಸಿಕೊಂಡು ತನ್ನ ಉಗ್ರಕೋಪವೆಂಬ ದ್ರಾಕ್ಷಾರಸದ ಪಾತ್ರೆಯನ್ನು ಅವಳಿಗೆ ಕುಡಿಯಲು ಕೊಟ್ಟನು.


ಅವನು ಸಹ ದೇವರ ಕೋಪವೆಂಬ ಪಾತ್ರೆಯಲ್ಲಿ ಏನೂ ಬೆರಸದೆ ಹಾಕಿದ ದೇವರ ರೌದ್ರವೆಂಬ ದ್ರಾಕ್ಷಾರಸವನ್ನು ಕುಡಿಯುವನು; ಪರಿಶುದ್ಧ ದೇವದೂತರ ಮುಂದೆಯೂ ಯಜ್ಞದ ಕುರಿಯಾದಾತನ ಮುಂದೆಯೂ ಬೆಂಕಿಯಿಂದಲೂ ಗಂಧಕದಿಂದಲೂ ಯಾತನೆಪಡುವನು.


ನೀನು ಮಾನವನ್ನಲ್ಲ, ಅವಮಾನವನ್ನು ತುಂಬಾ ಅನುಭವಿಸುವಿ; ನೀನೂ ಕುಡಿ, ನಿನ್ನ ಸುನ್ನತಿಹೀನತೆಯನ್ನು ಹೊರಪಡಿಸಿಕೋ; ಯೆಹೋವನ ಬಲಗೈಯಲ್ಲಿನ ಪಾತ್ರೆಯು ನಿನ್ನ ಪಾಲಿಗೂ ಬರುವದು; ಕೇವಲ ಅವಮಾನವು ನಿನ್ನ ಮಾನವನ್ನು ಮುತ್ತಿಬಿಡುವದು.


ನಾನು ಅದರ ಪ್ರಧಾನರು, ಮಂತ್ರಿಗಳು, ಅಧಿಪತಿಗಳು, ಅಧಿಕಾರಿಗಳು, ಬಲಿಷ್ಠರು, ಇವರೆಲ್ಲರಿಗೂ ತಲೆಗೇರ ಕುಡಿಸುವೆನು; ಅವರು ಎಂದಿಗೂ ಎಚ್ಚರಗೊಳ್ಳದೆ ದೀರ್ಘನಿದ್ರೆಮಾಡುವರು ಎಂದು ಸೇನಾಧೀಶ್ವರನಾದ ಯೆಹೋವನಾಮಧೇಯದ ರಾಜಾಧಿರಾಜನು ಅನ್ನುತ್ತಾನೆ.


ಬಾಬೆಲು ಯೆಹೋವನ ಕೈಯಲ್ಲಿನ ಹೊನ್ನಿನ ಪಾತ್ರೆ; ಲೋಕದವರೆಲ್ಲರೂ ಅದರಲ್ಲಿ ಕುಡಿದು ಮತ್ತರಾದರು; ಜನಾಂಗಗಳು ಅದರಲ್ಲಿನ ದ್ರಾಕ್ಷಾರಸವನ್ನು ಕುಡಿದು ಹುಚ್ಚಾದವು.


ಯೆಹೋವನು ಇಂತೆನ್ನುತ್ತಾನೆ - ಪಾತ್ರೆಯಲ್ಲಿ ಕುಡಿಯುವದು ಯಾರ ಪಾಲಿಗೆ ಬರಲಿಲ್ಲವೋ ಅವರೇ ಖಂಡಿತ ಕುಡಿಯಬೇಕಾಗಿರುವಲ್ಲಿ ನೀನು ಅದಕ್ಕೆ ತಪ್ಪಿಸಿಕೊಂಡೀಯಾ? ಆಗುವುದೇ ಇಲ್ಲ, ನೀನು ಕುಡಿಯಲೇ ಕುಡಿಯುವಿ.


ಆಗ ನಾನು ಯೆಹೋವನ ಕೈಯಿಂದ ಆ ಪಾತ್ರೆಯನ್ನು ತೆಗೆದುಕೊಂಡು ಯೆಹೋವನು ಯಾವ ಜನಾಂಗಗಳ ಬಳಿಗೆ ನನ್ನನ್ನು ಕಳುಹಿಸಿದನೋ ಆ ಸಕಲ ಜನಾಂಗಗಳು ಅದರಲ್ಲಿ ಕುಡಿಯುವಂತೆ ಮಾಡಿದೆನು.


ಇಸ್ರಾಯೇಲ್ಯರ ದೇವರಾದ ಯೆಹೋವನು ನನಗೆ - ರೋಷರೂಪಮದ್ಯದ ಈ ಪಾತ್ರೆಯನ್ನು ನೀನು ನನ್ನ ಕೈಯಿಂದ ತೆಗೆದುಕೊಂಡು ಯಾವ ಜನಾಂಗಗಳ ಬಳಿಗೆ ನಿನ್ನನ್ನು ಕಳುಹಿಸುತ್ತೇನೋ ಆ ಸಕಲ ಜನಾಂಗಗಳು ಇದರಲ್ಲಿ ಕುಡಿಯುವಂತೆ ಮಾಡು.


[ಆ ಕಾಲದಲ್ಲಿ ಜನರು ಹೀಗನ್ನುವರು - ] ಸುಮ್ಮನೆ ಕೂತಿರುವದೇಕೆ? ಕೂಡಿಕೊಳ್ಳಿರಿ, ಕೋಟೆಕೊತ್ತಲಗಳ ಪಟ್ಟಣಗಳಲ್ಲಿ ಸೇರಿ ಅಲ್ಲೇ ನಾಶವಾಗೋಣ; ನಾವು ನಮ್ಮ ದೇವರಾದ ಯೆಹೋವನಿಗೆ ಪಾಪಮಾಡಿದ್ದರಿಂದ ಆತನು ನಮ್ಮನ್ನು ನಾಶನಕ್ಕೆ ಗುರಿಮಾಡಿ ಕಹಿಯಾದ ನೀರನ್ನು ಕುಡಿಸಿದ್ದಾನಷ್ಟೆ.


ನಾನು ಸಕಲ ಜನಾಂಗಗಳನ್ನು ಯೆರೂಸಲೇವಿುಗೆ ವಿರುದ್ಧವಾಗಿ ಕೂಡಿಸುವೆನು; ಅವು ಪಟ್ಟಣವನ್ನು ಆಕ್ರವಿುಸಿಕೊಂಡು ಮನೆಗಳನ್ನು ಸೂರೆಮಾಡಿ ಹೆಂಗಸರನ್ನು ಕೆಡಿಸುವವು; ಪಟ್ಟಣದ ಅರವಾಸಿ ಜನರು ಸೆರೆಗೆ ಹೋಗುವರು, ವಿುಕ್ಕವರೋ ಪಟ್ಟಣದಲ್ಲೇ ಉಳಿಯುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು