Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 12:3 - ಕನ್ನಡ ಸತ್ಯವೇದವು J.V. (BSI)

3 ಆ ದಿನದಲ್ಲಿ ನಾನು ಯೆರೂಸಲೇಮನ್ನು ಸಮಸ್ತಜನಗಳಿಗೂ ಭಾರೀ ಬಂಡೆಯನ್ನಾಗಿ ಮಾಡುವೆನು; ಅದನ್ನೆತ್ತುವವರೆಲ್ಲರಿಗೂ ಕಡುಗಾಯವಾಗುವದು; ಲೋಕದ ಸಕಲ ರಾಜ್ಯಗಳು ಅದನ್ನೆತ್ತಿಹಾಕಲು ಕೂಡಿಬರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆ ದಿನದಲ್ಲಿ ನಾನು ಯೆರೂಸಲೇಮನ್ನು ಸಮಸ್ತ ಜನಗಳಿಗೂ, ಭಾರೀ ಬಂಡೆಯನ್ನಾಗಿ ಮಾಡುವೆನು; ಅದನ್ನು ಎತ್ತುವವರೆಲ್ಲರು ಜಜ್ಜಲ್ಪಡುವರು; ಲೋಕದ ಸಕಲ ರಾಜ್ಯಗಳು ಅದನ್ನೆತ್ತಿ ಹಾಕಲು ಕೂಡಿಬರುವವು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಆ ದಿನದಂದು ಜೆರುಸಲೇಮನ್ನು ಭಾರಿ ಬಂಡೆಯನ್ನಾಗಿ ಮಾಡುವೆನು. ಅದನ್ನು ಎತ್ತಲು ಯತ್ನಿಸುವವರೆಲ್ಲರಿಗೂ ತೀವ್ರ ಗಾಯವಾಗುವುದು. ವಿಶ್ವದ ರಾಷ್ಟ್ರಗಳು ಅದನ್ನು ಎತ್ತಿಹಾಕಲು ಕೂಡಿಬರುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಆದರೆ ನಾನು ಜೆರುಸಲೇಮನ್ನು ಒಂದು ಭಾರವಾದ ಬಂಡೆ ಕಲ್ಲಿನಂತೆ ಮಾಡುವೆನು. ಅದನ್ನು ತೆಗೆಯಲು ಯತ್ನಿಸುವವನು ಗಾಯಗೊಳ್ಳುವನು. ಆದರೂ ಲೋಕದ ಎಲ್ಲಾ ದೇಶಗಳವರು ಜೆರುಸಲೇಮಿಗೆ ವಿರುದ್ಧವಾಗಿ ಯುದ್ಧಕ್ಕೆ ಬರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆ ದಿವಸದಲ್ಲಿ, ಅವಳ ವಿರೋಧವಾಗಿ ಭೂಮಿಯ ಜನಾಂಗಗಳೆಲ್ಲಾ ಒಟ್ಟುಗೂಡಿಕೊಳ್ಳುವಾಗ, ನಾನು ಯೆರೂಸಲೇಮನ್ನು ಎಲ್ಲಾ ಜನರಿಗೆ ಚಲಿಸಲಾಗದ ಕಲ್ಲಾಗಿ ಮಾಡುತ್ತೇನೆ. ಅದನ್ನು ತೆಗೆದುಹಾಕಲು ಪ್ರಯತ್ನಿಸುವವರೆಲ್ಲರು ತಮ್ಮನ್ನು ತಾವೇ ಗಾಯಗೊಳಿಸಿಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 12:3
31 ತಿಳಿವುಗಳ ಹೋಲಿಕೆ  

ಈ ಕಲ್ಲಿನ ಮೇಲೆ ಬೀಳುವವನು ತುಂಡುತುಂಡಾಗುವನು; ಇದು ಯಾರ ಮೇಲೆ ಬೀಳುತ್ತದೋ ಅವನನ್ನು ಪುಡಿಪುಡಿಮಾಡುವದು ಎಂದು ಹೇಳಿದನು.


ಈ ಕಲ್ಲಿನ ಮೇಲೆ ಬೀಳುವ ಪ್ರತಿಯೊಬ್ಬನು ತುಂಡು ತುಂಡಾಗುವನು; ಇದು ಯಾರ ಮೇಲೆ ಬೀಳುವದೋ ಅವನನ್ನು ಪುಡಿ ಪುಡಿ ಮಾಡುವದು ಅಂದನು.


ಆ ದಿನದಲ್ಲಿ ಬೆಳಕಿರದು, ಜ್ಯೋತಿಗಳು ಉಡುಗಿಹೋಗುವವು, ಇಂಥಾ ದಿನವು ಒಂದೇ,


ಆ ದಿನದಲ್ಲಿ ಪಾಪವನ್ನೂ ಅಶುಚಿಯನ್ನೂ ಪರಿಹರಿಸತಕ್ಕ ಒಂದು ಬುಗ್ಗೆಯು ದಾವೀದ ವಂಶದವರಿಗೂ ಯೆರೂಸಲೇವಿುನವರಿಗೂ ತೆರೆದಿರುವದು.


ಮೆಗಿದ್ದೋವಿನ ತಗ್ಗಿನೊಳಗೆ ಹದದ್‍ರಿಮ್ಮೋನಿನಲ್ಲಿ ಗೋಳಾಟವಾಗುವಂತೆ ಯೆರೂಸಲೇವಿುನಲ್ಲಿ ಆ ದಿನ ದೊಡ್ಡ ಗೋಳಾಟವಾಗುವದು.


ಇವು ಮಹತ್ಕಾರ್ಯಗಳನ್ನು ಮಾಡುವ ದೆವ್ವಗಳು; ಭೂಲೋಕದಲ್ಲೆಲ್ಲಿಯೂ ಇರುವ ರಾಜರ ಬಳಿಗೆ ಹೋಗಿ ಸರ್ವಶಕ್ತನಾದ ದೇವರ ಮಹಾದಿನದಲ್ಲಾಗುವ ಯುದ್ಧಕ್ಕೆ ಅವರನ್ನು ಕೂಡಿಸುವವು.


ಆ ದಿನದಲ್ಲಿ ಯೆಹೋವನು ಉಂಟುಮಾಡುವ ದೊಡ್ಡ ಗಲಿಬಿಲಿಯು ಅವರಲ್ಲಿ ಹರಡುವದು; ಒಬ್ಬರ ಕೈಯನ್ನೊಬ್ಬರು ತಡೆಹಿಡಿಯುವರು, ಒಬ್ಬರ ಮೇಲೊಬ್ಬರು ಕೈಯೆತ್ತುವರು.


ಆ ದಿನದಲ್ಲಿ ನಾನು ಯೆಹೂದದ ಕುಲಪತಿಗಳನ್ನು ಸೌದೆಯ ಮಧ್ಯದಲ್ಲಿನ ಅಗ್ಗಿಷ್ಟಿಕೆಯನ್ನಾಗಿಯೂ ಸಿವುಡುಗಳ ನಡುವಣ ಪಂಜನ್ನಾಗಿಯೂ ಮಾಡುವೆನು; ಅವರು ಸುತ್ತಣ ಜನಾಂಗಗಳನ್ನೆಲ್ಲಾ ಎಡಬಲಗಳಲ್ಲಿ ನುಂಗಿಬಿಡುವರು; ಯೆರೂಸಲೇವಿುನವರು ತಮ್ಮ ಸ್ಥಳವಾದ ಯೆರೂಸಲೇವಿುನಲ್ಲಿಯೇ ಇನ್ನು ವಾಸಿಸುವರು.


ಯೆಹೋವನು ಇಂತೆನ್ನುತ್ತಾನೆ - ಆ ದಿನದಲ್ಲಿ ನಾನು ಎಲ್ಲಾ ಕುದುರೆಗಳಿಗೆ ತಬ್ಬಿಬ್ಬನ್ನು ಉಂಟುಮಾಡುವೆನು, ಸವಾರರನ್ನು ಭ್ರಮೆಗೊಳಿಸುವೆನು; ಯೆಹೂದವಂಶವನ್ನು ಕಟಾಕ್ಷಿಸಿ ಜನಾಂಗಗಳ ಅಶ್ವಗಳನ್ನೆಲ್ಲಾ ಕುರುಡು ಮಾಡುವೆನು.


ರಾಜ್ಯಗಳ ಸಿಂಹಾಸನವನ್ನು ಕೆಡವಿ ಜನಾಂಗಗಳ ಸಂಸ್ಥಾನಬಲವನ್ನು ಧ್ವಂಸ ಮಾಡಿ ರಥಗಳನ್ನೂ ರಥಾರೂಢರನ್ನೂ ದೊಬ್ಬಿಬಿಡುವೆನು; ಕುದುರೆಗಳೂ ರಾಹುತರೂ ಬಿದ್ದು ಹೋಗುವರು, ಪ್ರತಿಯೊಬ್ಬನು ತನ್ನ ಕಡೆಯವನ ಕತ್ತಿಯಿಂದ ಹತನಾಗುವನು.


ಆಹಾ, ಆ ಕಾಲದಲ್ಲಿ ನಿನ್ನನ್ನು ಬಾಧಿಸುವವರಿಗೆ ತಕ್ಕದ್ದನ್ನು ಮಾಡುವೆನು; ನಿನ್ನಲ್ಲಿ ಕುಂಟುವವರನ್ನು ಉದ್ಧರಿಸುವೆನು, ಚದರಿಸಲ್ಪಟ್ಟವರನ್ನು ಕೂಡಿಸುವೆನು; ಅಂತು ಲೋಕದಲ್ಲೆಲ್ಲಾ ಅವಮಾನಪಟ್ಟವರಿಗೆ ಸ್ತೋತ್ರಕೀರ್ತಿಗಳನ್ನು ಉಂಟುಮಾಡುವೆನು.


ನೀನು ಮನುಷ್ಯರ ರಕ್ತವನ್ನು ಸುರಿಸಿ ದೇಶವನ್ನೂ ಪುರವನ್ನೂ ಅವುಗಳ ನಿವಾಸಿಗಳೆಲ್ಲರನ್ನೂ ಹಿಂಸಿಸಿದ ಕಾರಣ ಲೆಬನೋನಿಗೆ ಆದಂಥ ಹಿಂಸೆಗೆ ನೀನೂ ಒಳಗಾಗುವಿ, ಮೃಗಪಶುಗಳ ನಾಶನವು ನಿನ್ನನ್ನೂ ಹೆದರಿಸುವದು.


ಅವಿಧೇಯಜನಾಂಗಗಳಿಗೆ ಉಗ್ರಕೋಪದಿಂದ ಮುಯ್ಯಿತೀರಿಸುವೆನು.


ಅಲ್ಲದೆ ಸಿಂಹವು ಕಾಡುಮೃಗಗಳನ್ನು, ಪ್ರಾಯದ ಸಿಂಹವು ಕುರಿಹಿಂಡುಗಳನ್ನು ಹಾದುಹೋಗುವಾಗೆಲ್ಲಾ ಅವುಗಳನ್ನು ಯಾರೂ ರಕ್ಷಿಸಲಾರದಂತೆ ತುಳಿದು ಸೀಳಿಹಾಕುವ ಹಾಗೆ ಯಾಕೋಬಿನ ಜನಶೇಷವು ದೇಶದೇಶಗಳೊಳಗೆ ಬಹುಜನಾಂಗಗಳ ಮಧ್ಯದಲ್ಲಿ ನಾಶಕರವಾಗಿರುವದು.


ಯಾಕೋಬನ ವಂಶವು ಅಗ್ನಿ, ಯೋಸೇಫನ ವಂಶವು ಜ್ವಾಲೆ, ಏಸಾವನ ವಂಶವು ಕೂಳೆ; ಆ ಅಗ್ನಿಜ್ವಾಲೆಗಳು ಕೂಳೆಯಲ್ಲಿ ಧಗಧಗಿಸುತ್ತಾ ಅದನ್ನು ನುಂಗಿಬಿಡುವವು; ಏಸಾವನ ವಂಶದವರಲ್ಲಿ ಯಾರೂ ಉಳಿಯರು; ಯೆಹೋವನೇ ಇದನ್ನು ನುಡಿದಿದ್ದಾನೆ.


ನಿನ್ನನ್ನು ಸೇವಿಸಲೊಲ್ಲದ ಜನಾಂಗ ರಾಜ್ಯಗಳು ನಾಶವಾಗುವವು; ಹೌದು, ಆ ಜನಾಂಗಗಳು ಹಾಳೇ ಹಾಳಾಗಿ ಹೋಗುವವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು