Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 12:5 - ಕನ್ನಡ ಸತ್ಯವೇದವು J.V. (BSI)

5 ಆಗ ಯೆಹೂದದ ಕುಲಪತಿಗಳು ಮನಸ್ಸಿನೊಳಗೆ - ಯೆರೂಸಲೇವಿುನವರು ತಮ್ಮ ದೇವರೂ ಸೇನಾಧೀಶ್ವರನೂ ಆದ ಯೆಹೋವನಲ್ಲಿ ಬಲಗೊಂಡು ನಮಗೆ ತ್ರಾಣವಾಗಿದ್ದಾರೆ ಅಂದುಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆಗ ಯೆಹೂದದ ಕುಲಪತಿಗಳು ತಮ್ಮ ಮನಸ್ಸಿನೊಳಗೆ, ‘ಯೆರೂಸಲೇಮಿನವರು ತಮ್ಮ ದೇವರಾದ ಸೇನಾಧೀಶ್ವರ ಯೆಹೋವನಲ್ಲಿ ಬಲಗೊಂಡು ನಮಗೆ ತ್ರಾಣವಾಗಿದ್ದಾರೆ’ ಅಂದುಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಆಗ ಜುದೇಯದ ನಾಯಕರೆಲ್ಲ ತಮ್ಮ ತಮ್ಮೊಳಗೇ: ‘ಜೆರುಸಲೇಮಿನ ನಿವಾಸಿಗಳ ಶಕ್ತಿಸಾಮರ್ಥ್ಯ ಸೇನಾಧೀಶ್ವರ ಸರ್ವೇಶ್ವರನಾದ ದೇವರೇ’ ಎಂದುಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಯೆಹೂದದ ಪ್ರಧಾನರು ತಮ್ಮ ಜನರನ್ನು ಹುರಿದುಂಬಿಸುವರು. ‘ಸೇವಾಧೀಶ್ವರನಾದ ಯೆಹೋವನು ನಿಮ್ಮ ದೇವರು. ಆತನೇ ನಮಗೆ ಬಲವನ್ನು ಕೊಡುವಾತನು’ ಎಂದು ಹೇಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಆ ಯೆಹೂದದ ದೊರೆಗಳು ತಮ್ಮ ಹೃದಯದಲ್ಲಿ ಯೆರೂಸಲೇಮಿನ ನಿವಾಸಿಗಳ ಶಕ್ತಿ ಸಾಮರ್ಥ್ಯ, ತಮ್ಮ ಸೇನಾಧೀಶ್ವರ ಯೆಹೋವ ದೇವರಲ್ಲಿಯೇ ಎಂದುಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 12:5
28 ತಿಳಿವುಗಳ ಹೋಲಿಕೆ  

ಅವರು ಯೆಹೋವನಲ್ಲಿ ಬಲಗೊಳ್ಳುವರು, ಆತನ ಹೆಸರಿನಲ್ಲಿ ನಡೆದುಕೊಳ್ಳುವರು; ಇದು ಯೆಹೋವನ ನುಡಿ.


ಯೆಹೋವನು ಚೀಯೋನಿನಿಂದ ಗರ್ಜಿಸುತ್ತಾನೆ, ಯೆರೂಸಲೇವಿುನಿಂದ ದನಿಗೈಯುತ್ತಾನೆ; ಭೂಮ್ಯಾಕಾಶಗಳು ನಡುಗುತ್ತವೆ. ಆದರೆ ಯೆಹೋವನು ತನ್ನ ಜನರಿಗೆ ಆಶ್ರಯವೂ ಇಸ್ರಾಯೇಲ್ಯರಿಗೆ ರಕ್ಷಣದುರ್ಗವೂ ಆಗುವನು.


ನನಗೆ ಶೌರ್ಯವೆಂಬ ನಡುಕಟ್ಟನ್ನು ಬಿಗಿಯುವವನೂ ನನ್ನ ಮಾರ್ಗವನ್ನು ಸರಾಗಮಾಡುವವನೂ ಆತನೇ.


ನನ್ನ ಶರಣನಾದ ಯೆಹೋವನಿಗೆ ಕೊಂಡಾಟವಾಗಲಿ. ಆತನು ನನ್ನ ಕೈಗಳಿಗೆ ಯುದ್ಧವಿದ್ಯೆಯನ್ನೂ ನನ್ನ ಬೆರಳುಗಳಿಗೆ ಕಾಳಗವನ್ನೂ ಕಲಿಸಿದ್ದಾನೆ.


ನೀನು ನನಗೆ ಯುದ್ಧಕ್ಕಾಗಿ ಶೌರ್ಯವೆಂಬ ನಡುಕಟ್ಟನ್ನು ಬಿಗಿದಿದ್ದೀ; ಎದುರಾಳಿಗಳನ್ನು ಕುಗ್ಗಿಸಿ ನನಗೆ ಅಧೀನ ಮಾಡಿದ್ದೀ.


ಆತನೇ ನ್ಯಾಯಾಸನದಲ್ಲಿ ಕುಳಿತವನಿಗೆ ನ್ಯಾಯವಿವೇಚನೆಯಾಗಿಯೂ ಊರಬಾಗಿಲಲ್ಲಿ ಶತ್ರುಗಳನ್ನು ತಳ್ಳಿಬಿಡುವವರಿಗೆ ಶೌರ್ಯವಾಗಿಯೂ ಪರಿಣವಿುಸುವನು.


ಆ ದಿನದಲ್ಲಿ ನಾನು ಯೆಹೂದದ ಕುಲಪತಿಗಳನ್ನು ಸೌದೆಯ ಮಧ್ಯದಲ್ಲಿನ ಅಗ್ಗಿಷ್ಟಿಕೆಯನ್ನಾಗಿಯೂ ಸಿವುಡುಗಳ ನಡುವಣ ಪಂಜನ್ನಾಗಿಯೂ ಮಾಡುವೆನು; ಅವರು ಸುತ್ತಣ ಜನಾಂಗಗಳನ್ನೆಲ್ಲಾ ಎಡಬಲಗಳಲ್ಲಿ ನುಂಗಿಬಿಡುವರು; ಯೆರೂಸಲೇವಿುನವರು ತಮ್ಮ ಸ್ಥಳವಾದ ಯೆರೂಸಲೇವಿುನಲ್ಲಿಯೇ ಇನ್ನು ವಾಸಿಸುವರು.


ನಾನು ಯೆಹೂದ ವಂಶವನ್ನು ಬಲಗೊಳಿಸಿ ಯೋಸೇಫ ವಂಶವನ್ನು ಉದ್ಧರಿಸುವೆನು; ನನ್ನ ಕನಿಕರವು ಅವರ ಮೇಲೆ ಇರುವದರಿಂದ ಅವರನ್ನು ಹಿಂದಕ್ಕೆ ಬರಮಾಡುವೆನು; ಆಗ ನಾನು ಅವರನ್ನು ತಳ್ಳಿಬಿಟ್ಟದ್ದು ಇಲ್ಲದಂತಾಗುವದು; ನಾನು ಅವರ ದೇವರಾದ ಯೆಹೋವನಾಗಿದ್ದೇನಲ್ಲಾ, ಅವರ ಮೊರೆಯನ್ನು ಲಾಲಿಸುವೆನು.


ಆಗ ನಾನು ಯಾಕೋಬನ ಸಂತಾನದವರನ್ನು ತ್ಯಜಿಸಿ ಅಬ್ರಹಾಮ, ಇಸಾಕ, ಯಾಕೋಬ, ಇವರ ಸಂತತಿಯನ್ನು ಆಳತಕ್ಕ ಒಡೆಯರನ್ನು ನನ್ನ ದಾಸನಾದ ದಾವೀದನ ವಂಶದಿಂದ ಆರಿಸದೆ ಆ ವಂಶದವರನ್ನು ನಿರಾಕರಿಸಿಬಿಟ್ಟೇನು. ಅವರನ್ನು ದುರವಸ್ಥೆಯಿಂದ ತಪ್ಪಿಸಿ ಕರುಣಿಸೇ ಕರುಣಿಸುವೆನು.


ಅವರಲ್ಲೇ ಒಬ್ಬನು ಅವರಿಗೆ ಪ್ರಭುವಾಗಿರುವನು, ಅವರ ವಂಶದವನೇ ಅವರನ್ನಾಳುವನು; ನಾನು ಅವನನ್ನು ನನ್ನ ಹತ್ತಿರಕ್ಕೆ ಬರಗೊಡಿಸಲಾಗಿ ಅವನು ನನ್ನ ಸನ್ನಿಧಾನಕ್ಕೆ ಸೇರುವನು; ನನ್ನನ್ನು ಸಮೀಪಿಸುವದಕ್ಕೆ ಯಾರು ಧೈರ್ಯಗೊಂಡಾರು? ಇದು ಯೆಹೋವನ ನುಡಿ.


ತಾಮ್ರಕ್ಕೆ ಬದಲಾಗಿ ಚಿನ್ನವನ್ನು, ಕಬ್ಬಿಣಕ್ಕೆ ಪ್ರತಿಯಾಗಿ ಬೆಳ್ಳಿಯನ್ನು, ಮರವಿದ್ದಲ್ಲಿ ತಾಮ್ರವನ್ನು, ಕಲ್ಲುಗಳ ಸ್ಥಾನದಲ್ಲಿ ಕಬ್ಬಿಣವನ್ನು ಒದಗಿಸುವೆನು; ಸಮಾಧಾನವನ್ನು ನಿನಗೆ ಅಧಿಪತಿಯನ್ನಾಗಿ ಧರ್ಮವನ್ನು ನಿನಗೆ ಅಧಿಕಾರಿಯನ್ನಾಗಿ ನೇವಿುಸುವೆನು.


ಇಗೋ, ಒಬ್ಬ ರಾಜನು ನೀತಿಗನುಸಾರವಾಗಿ ಆಳುವನು, ಅಧಿಪತಿಗಳು ನ್ಯಾಯದಿಂದ ದೊರೆತನ ಮಾಡುವರು.


ಯೆಹೋವನು ನಿಮ್ಮ ಮೇಲೆ ಗಾಢನಿದ್ರೆಯನ್ನು ಬರಮಾಡಿ ಪ್ರವಾದಿಗಳೆಂಬ ಕಣ್ಣುಗಳನ್ನು ಮುಚ್ಚಿ ದಿವ್ಯದರ್ಶಿಗಳೆಂಬ ತಲೆಗಳಿಗೆ ಮುಸುಕು ಹಾಕಿದ್ದಾನಷ್ಟೆ.


ಪೂರ್ವದಲ್ಲಿ ನಿನಗಿದ್ದಂಥ ನ್ಯಾಯಾಧಿಪತಿಗಳನ್ನೂ ಮಂತ್ರಾಲೋಚಕರನ್ನೂ ಪುನಃ ಒದಗಿಸಿಕೊಡುವೆನು; ಆಮೇಲೆ ನೀನು ಧರ್ಮಪುರಿ ಎಂತಲೂ ಸುವ್ರತನಗರಿ ಎಂತಲೂ ಅನ್ನಿಸಿಕೊಳ್ಳುವಿ.


ನಿನ್ನ ಅಧಿಕಾರಿಗಳು ದ್ರೋಹಿಗಳೂ ಕಳ್ಳರ ಗೆಳೆಯರೂ ಆಗಿದ್ದಾರೆ; ಪ್ರತಿಯೊಬ್ಬನೂ ಕಾಣಿಕೆಗಳನ್ನು ಆಶಿಸಿ ಲಂಚಗಳನ್ನು ಹುಡುಕುವನು; ಅನಾಥರಿಗೆ ನ್ಯಾಯತೀರಿಸರು; ವಿಧವೆಯರ ವ್ಯಾಜ್ಯವು ಅವರ ಮನಸ್ಸಿಗೆ ಬಾರದು.


ಸೊದೋವಿುನ ಅಧಿಪತಿಗಳೇ, ಯೆಹೋವನ ಮಾತನ್ನು ಆಲಿಸಿರಿ; ಗೊಮೋರದ ಪ್ರಜೆಗಳೇ, ನಮ್ಮ ದೇವರ ಧರ್ಮೋಪದೇಶವನ್ನು ಕೇಳಿರಿ!


ದೇವರು ನಮಗೆ ಆಶ್ರಯದುರ್ಗವಾಗಿದ್ದಾನೆ; ಆತನು ಇಕ್ಕಟ್ಟಿನಲ್ಲಿ ನಮಗೆ ವಿಶೇಷ ಸಹಾಯಕನು.


ನಾನು ಇಸ್ರಾಯೇಲ್ ನಾಯಕರಲ್ಲಿಯೂ ಸ್ವೇಚ್ಫೆಯಿಂದ ಸೈನ್ಯದಲ್ಲಿ ಸೇರಿದ ಜನರಲ್ಲಿಯೂ ಸಂತೋಷಿಸುತ್ತೇನೆ; ಯೆಹೋವನನ್ನು ಕೊಂಡಾಡಿರಿ.


ಯೆಹೋವನು ಇಂತೆನ್ನುತ್ತಾನೆ - ಆ ದಿನದಲ್ಲಿ ನಾನು ಎಲ್ಲಾ ಕುದುರೆಗಳಿಗೆ ತಬ್ಬಿಬ್ಬನ್ನು ಉಂಟುಮಾಡುವೆನು, ಸವಾರರನ್ನು ಭ್ರಮೆಗೊಳಿಸುವೆನು; ಯೆಹೂದವಂಶವನ್ನು ಕಟಾಕ್ಷಿಸಿ ಜನಾಂಗಗಳ ಅಶ್ವಗಳನ್ನೆಲ್ಲಾ ಕುರುಡು ಮಾಡುವೆನು.


ಯೆಹೂದವೂ ಯೆರೂಸಲೇವಿುನ ಪರವಾಗಿ ಯುದ್ಧಮಾಡುವದು; ಸುತ್ತಣ ಸಕಲ ಜನಾಂಗಗಳ ಆಸ್ತಿಯು ಅಂದರೆ ಬೆಳ್ಳಿಬಂಗಾರಬಟ್ಟೆಗಳು ರಾಶಿರಾಶಿಯಾಗಿ ಬಾಚಲ್ಪಡುವವು.


ಆ ದಿನದಲ್ಲಿ ಸೇನಾಧೀಶ್ವರನಾದ ಯೆಹೋವನೇ ತನ್ನ ಜನರಲ್ಲಿ ಉಳಿದವರಿಗೆ ಅಂದದ ಕಿರೀಟವೂ ಸುಂದರ ಮುಕುಟವೂ ಆಗಿರುವನು;


ಯೆಹೋವನಲ್ಲಿ ಮಾತ್ರ ಸತ್ಯಕಾರ್ಯಗಳೂ ಶಕ್ತಿಯೂ ಉಂಟು; ಆತನ ಮೇಲೆ ಉರಿಗೊಂಡವರೆಲ್ಲರೂ ನಾಚಿಕೆಪಟ್ಟು ಆತನನ್ನು ಮರೆಹೊಗುವರು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು