ಜೆಕರ್ಯ 12:8 - ಕನ್ನಡ ಸತ್ಯವೇದವು J.V. (BSI)8 ಆ ದಿನದಲ್ಲಿ ಯೆಹೋವನು ಯೆರೂಸಲೇವಿುನವರನ್ನು ಸುತ್ತಲು ಕಾಪಾಡುವನು; ಅವರೊಳಗೆ ಈಗಿನ ಕುಂಟನು ಆ ದಿನದಲ್ಲಿ ದಾವೀದನಂತಿರುವನು; ದಾವೀದ ವಂಶವು ದೇವರಂತೆ, ಯೆಹೋವನ ದೂತನ ಹಾಗೆ ಅವರಿಗೆ ಮುಂದಾಳಾಗುವದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಆ ದಿನದಲ್ಲಿ ಯೆಹೋವನು ಯೆರೂಸಲೇಮಿನವರನ್ನು ಸುತ್ತಲು ಕಾಪಾಡುವನು; ಅವರೊಳಗೆ ಈಗಿನ ಕುಂಟನು ಆ ದಿನದಲ್ಲಿ ದಾವೀದನಂತಿರುವನು; ದಾವೀದ ವಂಶವು ದೇವರಂತೆ, ಯೆಹೋವನ ದೂತನ ಹಾಗೆ ಅವರಿಗೆ ಮುಂದಾಳಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಅಂದು, ಸರ್ವೇಶ್ವರ ಜೆರುಸಲೇಮಿನ ನಿವಾಸಿಗಳನ್ನು ಕೋಟೆಯಂತೆ ಕಾಪಾಡುವರು. ಈ ಕಾರಣ, ಅವರಲ್ಲಿ ದುರ್ಬಲನು ದಾವೀದನಂತೆ ಬಲಾಢ್ಯನಾಗುವನು. ದಾವೀದನವಂಶ ದೇವದೂತರಂತೆ, ಹೌದು, ದೇವರಂತೆ, ಅವರಿಗೆ ಮುಂದಾಳಾಗುವುದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಜೆರುಸಲೇಮಿನಲ್ಲಿ ವಾಸಿಸುವ ಜನರನ್ನು ಯೆಹೋವನು ಕಾಪಾಡುತ್ತಾನೆ. ಬಲಹೀನ ಮನುಷ್ಯನೂ ದಾವೀದನಂತೆ ಶೂರನಾಗುವನು. ದಾವೀದನ ಸಂತತಿಯ ಜನರು ದೇವರುಗಳಂತಿದ್ದು ದೇವರ ಸ್ವಂತ ದೂತರಂತೆ ತಮ್ಮ ಜನರನ್ನು ನಡಿಸುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಆ ದಿನದಲ್ಲಿ ಯೆಹೋವ ದೇವರು ಯೆರೂಸಲೇಮಿನ ನಿವಾಸಿಗಳನ್ನು ಕಾಪಾಡುವರು. ಆ ದಿವಸಗಳಲ್ಲಿ ಅವರಲ್ಲಿ ಅತ್ಯಂತ ಬಲಹೀನನು ದಾವೀದನಂತೆ ಬಲಾಢ್ಯನಾಗುವನು. ದಾವೀದನ ವಂಶವು ದೇವರ ಹಾಗೆಯೂ, ಮುಂದಾಳಾಗಿ ಯೆಹೋವ ದೇವರ ದೂತನ ಹಾಗೆಯೂ ಇರುವುದು. ಅಧ್ಯಾಯವನ್ನು ನೋಡಿ |
ಯೆಹೋವನು ನನಗೆ ಹೀಗೆ ಹೇಳಿದ್ದಾನೆ - ಸಿಂಹವು, ಪ್ರಾಯದ ಸಿಂಹವು, ಬೇಟೆಯ ಮೇಲೆ ಬಿದ್ದು ಗುರುಗುಟ್ಟುತ್ತಿರುವಾಗ ಕಾವಲುಗಾರನ ಕೂಗನ್ನು ಕೇಳಿ ಬಹುಮಂದಿ ಕುರುಬರು ಅದಕ್ಕೆ ವಿರುದ್ಧವಾಗಿ ಕೂಡಿ ಬಂದರೂ ಅದು ಅವರ ಕೂಗಾಟಕ್ಕೆ ಹೆದರದೆ ಅವರ ಗದ್ದಲದಿಂದ ಹೇಗೆ ಧೈರ್ಯಗುಂದುವದಿಲ್ಲವೋ ಹಾಗೆಯೇ ಸೇನಾಧೀಶ್ವರನಾದ ಯೆಹೋವನು ಯುದ್ಧಮಾಡಲು ಚೀಯೋನ್ ಪರ್ವತದ ಶಿಖರದ ಮೇಲೆ ಇಳಿಯುವನು.