ಜೆಕರ್ಯ 13:4 - ಕನ್ನಡ ಸತ್ಯವೇದವು J.V. (BSI)4 ಆದಿನದಲ್ಲಿ ಯಾವ ಪ್ರವಾದಿಯೇ ಆಗಲಿ ಪ್ರವಾದನೆ ಮಾಡಬೇಕೆಂದಿರುವಾಗ ತನಗಾದ ದರ್ಶನವನ್ನು ಪ್ರಕಟಿಸಲು ನಾಚಿಕೆಪಡುವನು; ಯಾವನೂ ಮೋಸಕ್ಕಾಗಿ ಕಂಬಳಿಯನ್ನು ಹೊದ್ದುಕೊಳ್ಳನು; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 “ಆ ದಿನದಲ್ಲಿ ಯಾವ ಪ್ರವಾದಿಯೇ ಆಗಲಿ ಪ್ರವಾದನೆ ಮಾಡಬೇಕೆಂದಿರುವಾಗ ತನಗಾದ ದರ್ಶನವನ್ನು ಪ್ರಕಟಿಸಲು ನಾಚಿಕೆಪಡುವನು; ಯಾವನೂ ಮೋಸಕ್ಕಾಗಿ ಕಂಬಳಿಯನ್ನು ಹೊದ್ದುಕೊಳ್ಳನು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಆ ದಿನದಲ್ಲಿ ಯಾವ ಪ್ರವಾದಿಯೂ ತನಗಾಗಿರಬಹುದಾದ ದರ್ಶನಗಳನ್ನು ಪ್ರಕಟಿಸಲು ಹೆಮ್ಮೆಪಡುವುದಿಲ್ಲ. ಪ್ರವಾದಿಯಂತೆ ನಟಿಸುವುದಿಲ್ಲ. ಪ್ರವಾದಿಯ ವೇಷವನ್ನು ಧರಿಸುವುದಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಆ ಸಮಯದಲ್ಲಿ ಪ್ರವಾದಿಗಳು ತಮ್ಮ ದರ್ಶನ, ಪ್ರವಾದನೆಗಳಿಗಾಗಿ ನಾಚಿಕೊಳ್ಳುವರು. ತಾವು ಪ್ರವಾದಿಗಳೆಂದು ತೋರಿಸಿಕೊಳ್ಳಲು ಧರಿಸುವ ಗಡುಸಾದ ಬಟ್ಟೆಗಳನ್ನು ಧರಿಸಿಕೊಳ್ಳುವದಿಲ್ಲ. ಅವರು ಪ್ರವಾದನೆಗಳೆಂದು ಹೇಳುವ ತಮ್ಮ ಸುಳ್ಳುಗಳಿಂದ ಜನರನ್ನು ಮೋಸಪಡಿಸುವದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 “ಆ ದಿವಸದಲ್ಲಿ, ಪ್ರವಾದಿಗಳು ಪ್ರವಾದಿಸುವಾಗ, ಅವರು ತಮ್ಮ ತಮ್ಮ ದರ್ಶನಗಳಿಗೆ ನಾಚಿಕೆಪಡುವರು. ಅವರು ಮೋಸಗೊಳಿಸಲು ಪ್ರವಾದಿಯ ಒರಟಾದ ವಸ್ತ್ರವನ್ನು ಧರಿಸುವುದಿಲ್ಲ. ಅಧ್ಯಾಯವನ್ನು ನೋಡಿ |