Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 13:7 - ಕನ್ನಡ ಸತ್ಯವೇದವು J.V. (BSI)

7 ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ಖಡ್ಗವೇ, ನಾನು ನೇವಿುಸಿದ ಕುರುಬನೂ ನನ್ನ ಸಂಗಡಿಗನೂ ಆಗಿರುವವನಿಗೆ ವಿರುದ್ಧವಾಗಿ ಎಚ್ಚರಗೊಳ್ಳು; ಕುರುಬನನ್ನು ಹೊಡೆ, ಕುರಿಗಳು ಚದರಿಹೋಗುವವು; ಮರಿಗಳ ಮೇಲೂ ಕೈಮಾಡಬೇಕೆಂದಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಖಡ್ಗವೇ, ನಾನು ನೇಮಿಸಿದ ಕುರುಬನೂ, ನನ್ನ ಸಂಗಡಿಗನೂ ಆಗಿರುವವನ ವಿರುದ್ಧ ಎಚ್ಚರಗೊಳ್ಳು; ಕುರುಬನನ್ನು ಹೊಡೆ, ಕುರಿಗಳು ಚದುರಿಹೋಗುವವು; ಮರಿಗಳ ಮೇಲೂ ಕೈಮಾಡಬೇಕೆಂದಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಸೇನಾಧೀಶ್ವರ ಸರ್ವೇಶ್ವರ ಇಂತೆನ್ನುತ್ತಾರೆ: “ನನ್ನ ಕುರಿಗಾಹಿಗೆ ವಿರುದ್ಧವಾಗಿ, ನನ್ನಾಸಂಗಡಿಗನಿಗೆದುರಾಗಿ, ಓ ಖಡ್ಗವೇ, ಎಚ್ಚರಗೊಳ್ಳು; ಕೊಲ್ಲು ಕುರಿಗಾಹಿಯನು. ಆಗ ಚದರುವುವು ಕುರಿಗಳು, ಕೈಮಾಡಲಿರುವೆ ಮರಿಗಳ ಮೇಲೂ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ: “ಖಡ್ಗವೇ, ಕುರುಬನನ್ನು ಹೊಡೆ. ನನ್ನ ಸ್ನೇಹಿತನಿಗೆ ಹೊಡೆ. ಕುರುಬನನ್ನು ಹೊಡೆ. ಆಗ ಕುರಿಗಳು ಚದರಿಹೋಗುವವು. ಮತ್ತು ನಾನು ಆ ಚಿಕ್ಕವುಗಳನ್ನು ಶಿಕ್ಷಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 “ಖಡ್ಗವೇ, ನನ್ನ ಕುರುಬನಿಗೆ ವಿರೋಧವಾಗಿ, ನನ್ನ ಸಂಗಡಿಗನಾದ ಮನುಷ್ಯನಿಗೆ ವಿರೋಧವಾಗಿ ಎಚ್ಚರವಾಗು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ. “ಕುರುಬನನ್ನು ಹೊಡೆ, ಆಗ ಕುರಿಗಳು ಚದರಿಹೋಗುವುವು. ಚಿಕ್ಕವುಗಳ ಮೇಲೆ ನನ್ನ ಕೈಯನ್ನು ತಿರುಗಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 13:7
76 ತಿಳಿವುಗಳ ಹೋಲಿಕೆ  

ಆಗ ಯೇಸು ಅವರಿಗೆ - ನೀವೆಲ್ಲರೂ ದಿಗಿಲು ಪಟ್ಟು ಹಿಂಜರಿಯುವಿರಿ. ಕುರುಬನನ್ನು ಹೊಡೆಯುವೆನು, ಕುರಿಗಳು ಚದರಿಹೋಗುವವು ಎಂದು ಬರೆದದೆಯಲ್ಲಾ.


ಆಗ ಯೇಸು, ಅವರಿಗೆ - ನೀವೆಲ್ಲರೂ ಈ ರಾತ್ರಿ ನನ್ನ ವಿಷಯದಲ್ಲಿ ದಿಗಿಲುಪಟ್ಟು ಹಿಂಜರಿಯುವಿರಿ. ಕುರುಬನನ್ನು ಹೊಡೆಯುವೆನು; ಹಿಂಡಿನ ಕುರಿಗಳು ಚದರಿಹೋಗುವವು ಎಂದು ಬರೆದದೆಯಲ್ಲಾ.


ಆತನು ಕುರುಬನಂತೆ ತನ್ನ ಮಂದೆಯನ್ನು ಮೇಯಿಸುವನು, ಮರಿಗಳನ್ನು ಕೈಯಿಂದ ಕೂಡಿಸಿ ಎದೆಗೆತ್ತಿಕೊಳ್ಳುವನು. ಹಾಲುಕುಡಿಸುವ ಕುರಿಗಳನ್ನು ಮೆಲ್ಲಗೆ ನಡಿಸುವನು ಎಂದು ಸಾರು.


ನೋಡಿರಿ, ನಿಮ್ಮಲ್ಲಿ ಒಬ್ಬೊಬ್ಬನು ತನ್ನತನ್ನ ಸ್ಥಳಕ್ಕೆ ಚದರಿಹೋಗಿ ನನ್ನನ್ನು ಒಂಟಿಗನಾಗಿ ಬಿಡುವ ಕಾಲ ಬರುವದು, ಈಗ ಬಂದಿದೆ. ಆದರೆ ನಾನು ಒಂಟಿಗನಲ್ಲ, ತಂದೆಯು ನನ್ನ ಸಂಗಡ ಇದ್ದಾನೆ.


ಆಗ ಶಿಷ್ಯರೆಲ್ಲರೂ ಆತನನ್ನು ಬಿಟ್ಟು ಓಡಿಹೋದರು.


ನನ್ನ ಸೇವಕನಾದ ದಾವೀದನು ಅವರಿಗೆ ರಾಜನಾಗಿರುವನು; ಅವರೆಲ್ಲರಿಗೂ ಒಬ್ಬನೇ ಪಾಲಕನಿರುವನು; ಅವರು ನನ್ನ ನಿಯಮಗಳನ್ನು ಅನುಸರಿಸಿ ನನ್ನ ವಿಧಿಗಳನ್ನು ಕೈಕೊಂಡು ಆಚರಿಸುವರು.


ಆಗ ನಾನು ದೀನಾವಸ್ಥೆಯಲ್ಲಿದ್ದ ಆ ಕೊಯ್ಗುರಿಗಳ ಮಂದೆಯನ್ನು ಮೇಯಿಸಿದೆನು. ಎರಡು ಕೋಲುಗಳನ್ನು ತೆಗೆದುಕೊಂಡು ಒಂದಕ್ಕೆ ಕನಿಕರವೆಂತಲೂ ಇನ್ನೊಂದಕ್ಕೆ ಒಗ್ಗಟ್ಟೆಂತಲೂ ಹೆಸರಿಟ್ಟು ಅವುಗಳಿಂದ ಮಂದೆಯನ್ನು ಮೇಯಿಸಿದೆನು.


ಎಫ್ರಾತದ ಬೇತ್ಲೆಹೇಮೇ, ನೀನು ಯೆಹೂದದ ಗ್ರಾಮಗಳಲ್ಲಿ ಚಿಕ್ಕದ್ದಾಗಿದ್ದರೂ ಇಸ್ರಾಯೇಲನ್ನು ಆಳತಕ್ಕವನು ನಿನ್ನೊಳಗಿಂದ ನನಗಾಗಿ ಹೊರಡುವನು; ಆತನ ಹೊರಡೋಣದ ಮೂಲವು ಪುರಾತನವೂ ಅನಾದಿಯೂ ಆದದ್ದು.


ನಾನು ಆದಿಯೂ ಅಂತವೂ ವರ್ತಮಾನ ಭೂತ ಭವಿಷ್ಯತ್ಕಾಲಗಳಲ್ಲಿರುವವನೂ ಸರ್ವಶಕ್ತನೂ ಆಗಿದ್ದೇನೆ ಎಂದು ದೇವರಾದ ಕರ್ತನು ಹೇಳುತ್ತಾನೆ.


ಅಯ್ಯೋ, ಯೆಹೋವನ ಖಡ್ಗವೇ, ಇನ್ನೆಷ್ಟರವರೆಗೆ ವಿಶ್ರಾಂತಿಗೊಳ್ಳದೆ ಇರುವಿ? ನಿನ್ನನ್ನು ಒರೆಯಲ್ಲಿ ಅಣಗಿಕೋ! ಶಾಂತಿಗೊಳ್ಳು, ಸುಮ್ಮನಿರು!


ಹಿರೀ ಕುರುಬನು ಪ್ರತ್ಯಕ್ಷನಾಗುವಾಗ ನೀವು ದೇವಪ್ರಭಾವವೆಂಬ ಎಂದಿಗೂ ಬಾಡದ ಜಯಮಾಲೆಯನ್ನು ಹೊಂದುವಿರಿ.


ಕ್ರಿಸ್ತನು ಸಹ ನೀತಿವಂತನಾಗಿದ್ದು ಅನೀತಿವಂತರಿಗೋಸ್ಕರ ಪ್ರಾಣಕೊಟ್ಟು ನಮ್ಮನ್ನು ದೇವರ ಬಳಿಗೆ ಸೇರಿಸುವದಕ್ಕಾಗಿ ಒಂದೇ ಸಾರಿ ಪಾಪನಿವಾರಣಕ್ಕೋಸ್ಕರ ಬಾಧೆಪಟ್ಟು ಸತ್ತನು. ಆತನು ಶರೀರಸಂಬಂಧದಲ್ಲಿ ಕೊಲ್ಲಲ್ಪಟ್ಟನು, ಆತ್ಮಸಂಬಂಧದಲ್ಲಿ ತಿರಿಗಿ ಬದುಕುವವನಾದನು.


ಶಾಶ್ವತವಾದ ಒಡಂಬಡಿಕೆಯನ್ನು ನಿಶ್ಚಯಪಡಿಸುವದಕ್ಕಾಗಿ ತನ್ನ ರಕ್ತವನ್ನು ಸುರಿಸಿಕೊಂಡು ಸಭೆಯೆಂಬ ಹಿಂಡಿಗೆ ಮಹಾಪಾಲಕನಾಗಿರುವ ನಮ್ಮ ಕರ್ತನಾದ ಯೇಸುವನ್ನು ಸತ್ತವರೊಳಗಿಂದ ಬರಮಾಡಿದ ಶಾಂತಿದಾಯಕನಾದ ದೇವರು,


ನಾವು ಆತನಲ್ಲಿ ದೇವರಿಗೆ ಸಮರ್ಪಕರಾದ ನೀತಿಸ್ವರೂಪಿಗಳಾಗುವಂತೆ ದೇವರು ಪಾಪಜ್ಞಾನವಿಲ್ಲದ ಆತನನ್ನು ನಮಗೋಸ್ಕರ ಪಾಪ ಸ್ವರೂಪಿಯಾಗ ಮಾಡಿದನು.


ದೇವರು ಆತನನ್ನು ನಮ್ಮ ಅಪರಾಧಗಳ ನಿವಿುತ್ತ ಮರಣಕ್ಕೆ ಒಪ್ಪಿಸಿಕೊಟ್ಟು ನಮಗೆ ನೀತಿವಂತರೆಂಬ ನಿರ್ಣಯವು ಉಂಟಾಗುವ ನಿವಿುತ್ತ ಜೀವದಿಂದ ಎಬ್ಬಿಸಿದನು.


ನಾನೂ ತಂದೆಯೂ ಒಂದಾಗಿದ್ದೇವೆ ಅಂದನು.


ನನ್ನ ತಂದೆಯು ಎಲ್ಲವನ್ನೂ ನನಗೆ ಒಪ್ಪಿಸಿದ್ದಾನೆ. ತಂದೆಯೇ ಹೊರತು ಇನ್ನಾವನೂ ಮಗನನ್ನು ತಿಳಿದವನಲ್ಲ; ಮಗನೇ ಹೊರತು ಇನ್ನಾವನೂ ತಂದೆಯನ್ನು ತಿಳಿದವನಲ್ಲ; ಮತ್ತು ಮಗನು ತಂದೆಯನ್ನು ಯಾರಿಗೆ ಪ್ರಕಟಿಸುವದಕ್ಕೆ ಮನಸ್ಸುಳ್ಳವನಾಗಿದ್ದಾನೋ ಅವನೂ ಆತನನ್ನು ತಿಳಿದವನಾಗಿದ್ದಾನೆ.


ನನ್ನ ದೇವರಾದ ಯೆಹೋವನು ಹೀಗೆ ಅಪ್ಪಣೆಕೊಟ್ಟನು - ಕೊಯ್ಗುರಿಗಳ ಮಂದೆಯನ್ನು ಕಾಯಿ;


ಆತನು ಯೆಹೋವನ ಬಲವನ್ನೂ ತನ್ನ ದೇವರಾದ ಯೆಹೋವನ ನಾಮದ ಮಹಿಮೆಯನ್ನೂ ಹೊಂದಿದವನಾಗಿ ನಿಂತು ತನ್ನ ಹಿಂಡನ್ನು ಮೇಯಿಸುವನು; ಆ ಹಿಂಡು ನೆಮ್ಮದಿಯಾಗಿ ನೆಲೆಗೊಂಡಿರುವದು; ಆತನು ಭೂವಿುಯ ಕಟ್ಟಕಡೆಯವರೆಗೂ ಪ್ರಬಲನಾಗಿರುವನು.


ತಂದೆಗೆ ಇರುವದೆಲ್ಲಾ ನನ್ನದು; ಆದದರಿಂದಲೇ ನನ್ನದರೊಳಗಿಂದ ತೆಗೆದುಕೊಂಡು ನಿಮಗೆ ತಿಳಿಸುವನೆಂದು ಹೇಳಿದೆನು.


ಯೇಸು ಅವನಿಗೆ - ಯಾರಾದರೂ ನನ್ನನ್ನು ಪ್ರೀತಿಸುವವನಾದರೆ ನನ್ನ ಮಾತನ್ನು ಕೈಕೊಂಡು ನಡೆಯುವನು; ಅವನನ್ನು ನನ್ನ ತಂದೆಯು ಪ್ರೀತಿಸುವನು, ಮತ್ತು ನಾವಿಬ್ಬರೂ ಅವನ ಬಳಿಗೆ ಬಂದು ಅವನ ಬಳಿಯಲ್ಲಿ ಬಿಡಾರವನ್ನು ಮಾಡಿಕೊಳ್ಳುವೆವು.


ನಿಮ್ಮ ಹೃದಯವು ಕಳವಳಗೊಳ್ಳದೆ ಇರಲಿ; ದೇವರನ್ನು ನಂಬಿರಿ, ನನ್ನನ್ನೂ ನಂಬಿರಿ.


ಮಾಡಿದರೆ ನನ್ನ ಮಾತನ್ನು ನಂಬದೆ ಇದ್ದರೂ ಆ ಕ್ರಿಯೆಗಳ ಸಾಕ್ಷಿಯನ್ನಾದರೂ ನಂಬಿರಿ; ಆಗ ನನ್ನಲ್ಲಿ ತಂದೆಯು ಇದ್ದಾನೆಂತಲೂ ತಂದೆಯಲ್ಲಿ ನಾನು ಇದ್ದೇನೆಂತಲೂ ನೀವು ತಿಳುಕೊಂಡು ಮನನಮಾಡಿಕೊಳ್ಳುವಿರಿ ಅಂದನು.


ಯೇಸು - ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಅಬ್ರಹಾಮನು ಹುಟ್ಟುವದಕ್ಕಿಂತ ಮುಂಚಿನಿಂದಲೂ ನಾನು ಇದ್ದೇನೆ ಅಂದನು.


ಎಲ್ಲರು ತನಗೆ ಮಾನ ಕೊಡುವ ಪ್ರಕಾರವೇ ಮಗನಿಗೂ ಮಾನ ಕೊಡಬೇಕೆಂದು ತಂದೆಯು ಇಚ್ಫೈಸುತ್ತಾನೆ. ಮಗನಿಗೆ ಮಾನಕೊಡದವನು ಅವನನ್ನು ಕಳುಹಿಸಿದ ತಂದೆಗೂ ಮಾನಕೊಡದವನಾಗಿದ್ದಾನೆ.


ಮತ್ತು ಈ ಚಿಕ್ಕವರಲ್ಲಿ ಒಬ್ಬನಿಗೆ ಯೇಸುವಿನ ಶಿಷ್ಯನೆಂದು ಯಾವನಾದರೂ ಒಂದು ತಂಬಿಗೆ ತಣ್ಣೀರನ್ನಾದರೂ ಕುಡಿಯುವದಕ್ಕೆ ಕೊಟ್ಟರೆ ಬರತಕ್ಕ ಪ್ರತಿಫಲವು ಅವನಿಗೆ ತಪ್ಪುವದೇ ಇಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ ಅಂದನು.


ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಮಗನನ್ನು ಹಡೆಯುವಳು; ಆತನಿಗೆ ಇಮ್ಮಾನುವೇಲ್ ಎಂದು ಹೆಸರಿಡುವರು ಎಂಬದು. ದೇವರು ನಮ್ಮ ಕೂಡ ಇದ್ದಾನೆಂದು ಈ ಹೆಸರಿನ ಅರ್ಥ.


ನರಪುತ್ರನೇ, ನೀನು ದೈವಸಂಕಲ್ಪವನ್ನು ಪ್ರಕಟಿಸುತ್ತಾ ಹೀಗೆ ನುಡಿ - ಅಮ್ಮೋನ್ಯರ ವಿಷಯದಲ್ಲಿಯೂ ಅವರು ಮಾಡುವ ದೂಷಣೆಯ ವಿಷಯದಲ್ಲಿಯೂ ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಆಹಾ, ಖಡ್ಗ, ಖಡ್ಗ, ಸಂಹರಿಸುವದಕ್ಕೆ ಹಿರಿದಿದೆ, ವಿುಂಚುವಂತೆ ತೀರಾತಿಕ್ಕಿದೆ;


ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ವರದ ಮಗನು ನಮಗೆ ದೊರೆತನು; ಆಡಳಿತವು ಅವನ ಬಾಹುವಿನ ಮೇಲಿರುವದು; ಅದ್ಭುತಸ್ವರೂಪನು, ಆಲೋಚನಾಕರ್ತನು, ಪರಾಕ್ರವಿುಯಾದ ದೇವರು, ನಿತ್ಯನಾದ ತಂದೆ, ಸಮಾಧಾನದ ಪ್ರಭು ಎಂಬವು ಅವನ ಹೆಸರು.


ಯೆಹೋವನಿಗೂ ಆತನು ಅಭಿಷೇಕಿಸಿದವನಿಗೂ ವಿರೋಧವಾಗಿ ಭೂಪತಿಗಳು ಸನ್ನದ್ಧರಾಗಿ ನಿಂತಿದ್ದಾರೆ, ಅಧಿಕಾರಿಗಳು ಒಟ್ಟಾಗಿ ಸೇರಿ ಆಲೋಚಿಸುತ್ತಿದ್ದಾರೆ.


ಆಗ ಸಿಂಹಾಸನದ ಮೇಲೆ ಕೂತಿದ್ದವನು - ಎಲ್ಲಾ ನೆರವೇರಿತು; ನಾನೇ ಆದಿಯೂ ಅಂತವೂ ಪ್ರಾರಂಭವೂ ಸಮಾಪ್ತಿಯೂ ಆಗಿದ್ದೇನೆ. ದಾಹವುಳ್ಳವನಿಗೆ ಜೀವಜಲದ ಬುಗ್ಗೆಯಲ್ಲಿ ಕ್ರಯವಿಲ್ಲದೆ ಕುಡಿಯುವದಕ್ಕೆ ಕೊಡುವೆನು.


ಜಗದುತ್ಪತ್ತಿಗೆ ಮೊದಲೇ ಕೊಯ್ಯಲ್ಪಟ್ಟ ಕುರಿಯಾದಾತನ ಬಳಿಯಲ್ಲಿರುವ ಜೀವಬಾಧ್ಯರ ಪಟ್ಟಿಯಲ್ಲಿ ಯಾರಾರ ಹೆಸರುಗಳು ಬರೆದಿರುವದಿಲ್ಲವೋ ಆ ಭೂನಿವಾಸಿಗಳೆಲ್ಲರೂ ಅದಕ್ಕೆ ನಮಸ್ಕಾರ ಮಾಡುವರು.


ಅವಳ ಮಕ್ಕಳನ್ನು ಕೊಂದೇ ಕೊಲ್ಲುವೆನು; ಆಗ ನಾನು ಮನುಷ್ಯರ ಅಂತರಿಂದ್ರಿಯವನ್ನೂ ಹೃದಯವನ್ನೂ ಪರೀಕ್ಷಿಸುವವನಾಗಿದ್ದೇನೆಂಬದು ಎಲ್ಲಾ ಸಭೆಗಳಿಗೆ ಗೊತ್ತಾಗುವದು. ನಿಮ್ಮಲ್ಲಿ ಪ್ರತಿಯೊಬ್ಬನಿಗೆ ಅವನವನ ಕೃತ್ಯಗಳಿಗೆ ತಕ್ಕ ಹಾಗೆ ಪ್ರತಿಫಲ ಕೊಡುವೆನು.


ನಾನು ಆತನನ್ನು ಕಂಡಾಗ ಸತ್ತವನ ಹಾಗೆ ಆತನ ಪಾದಗಳ ಮುಂದೆ ಬಿದ್ದೆನು. ಆತನು ತನ್ನ ಬಲಗೈಯನ್ನು ನನ್ನ ಮೇಲಿಟ್ಟು - ಹೆದರಬೇಡ, ನಾನು ಮೊದಲನೆಯವನೂ ಕಡೆಯವನೂ ಸದಾ ಜೀವಿಸುವವನೂ ಆಗಿದ್ದೇನೆ.


ಅದು - ನೀನು ನೋಡುವದನ್ನು ಪುಸ್ತಕದಲ್ಲಿ ಬರೆದು ಎಫೆಸ, ಸ್ಮುರ್ನ, ಪೆರ್ಗಮ, ಥುವತೈರ, ಸಾರ್ದಿಸ್, ಫಿಲದೆಲ್ಫಿಯ, ಲವೊದಿಕೀಯ ಎಂಬೀ ಏಳು ಪಟ್ಟಣಗಳ ಸಭೆಗಳಿಗೆ ಕಳುಹಿಸಬೇಕೆಂದು ನುಡಿಯಿತು.


ಆತನು ನಮ್ಮ ಪಾಪಗಳನ್ನು ನಿವಾರಣಮಾಡುವ ಯಜ್ಞವಾಗಿದ್ದಾನೆ; ನಮ್ಮ ಪಾಪಗಳನ್ನು ಮಾತ್ರವಲ್ಲದೆ ಸಮಸ್ತ ಲೋಕದ ಪಾಪಗಳನ್ನು ಸಹ ನಿವಾರಣಮಾಡುತ್ತಾನೆ.


ಆತನು ದೇವಸ್ವರೂಪನಾಗಿದ್ದರೂ ದೇವರಿಗೆ ಸರಿಸಮಾನನಾಗಿರುವದೆಂಬ ಅಮೂಲ್ಯ ಪದವಿಯನ್ನು ಬಿಡಲೊಲ್ಲೆನು ಎಂದೆಣಿಸದೆ


ಅಬ್ರಹಾಮನಿಗೆ ಉಂಟಾದ ಆಶೀರ್ವಾದವು ಕ್ರಿಸ್ತ ಯೇಸುವಿನಲ್ಲಿ ಅನ್ಯಜನರಿಗೆ ಉಂಟಾಗುವಂತೆಯೂ ದೇವರು ವಾಗ್ದಾನಮಾಡಿದ ಆತ್ಮನು ನಮಗೆ ನಂಬಿಕೆಯ ಮೂಲಕ ದೊರಕುವಂತೆಯೂ


ಸ್ವಂತ ಮಗನನ್ನು ಉಳಿಸಿಕೊಳ್ಳದೆ ಆತನನ್ನು ನಮ್ಮೆಲ್ಲರಿಗೋಸ್ಕರ ಒಪ್ಪಿಸಿಕೊಟ್ಟನಲ್ಲಾ; ಮಗನನ್ನು ಕೊಟ್ಟ ಮೇಲೆ ಸಮಸ್ತವನ್ನೂ ನಮಗೆ ದಯಪಾಲಿಸದೆ ಇರುವನೇ?


ಆ ಯೇಸು ದೇವರ ಸ್ಥಿರಸಂಕಲ್ಪಕ್ಕೂ ಭವಿಷ್ಯದ್‍ಜ್ಞಾನಕ್ಕೂ ಅನುಸಾರವಾಗಿ ಒಪ್ಪಿಸಲ್ಪಟ್ಟಿರಲು ನೀವು ಅನ್ಯಜನರ ಕೈಯಿಂದ ಆತನನ್ನು ಶಿಲುಬೆಗೆ ಹಾಕಿಸಿ ಕೊಂದಿರಿ.


ಮರುದಿನ ಯೋಹಾನನು ತನ್ನ ಕಡೆಗೆ ಬರುವ ಯೇಸುವನ್ನು ನೋಡಿ - ಅಗೋ [ಯಜ್ಞಕ್ಕೆ] ದೇವರು ನೇವಿುಸಿದ ಕುರಿ, ಲೋಕದ ಪಾಪವನ್ನು ನಿವಾರಣೆ ಮಾಡುವವನು.


ಅವನು ಈ ಚಿಕ್ಕವರಲ್ಲಿ ಒಬ್ಬನಿಗೆ ತೊಡಕನ್ನೊಡ್ಡುವದಕ್ಕಿಂತ ತನ್ನ ಕುತ್ತಿಗೆಗೆ ಬೀಸುವ ಕಲ್ಲನ್ನು ಕಟ್ಟಿಸಿಕೊಂಡು ಸಮುದ್ರದಲ್ಲಿ ಹಾಕಿಸಿಕೊಳ್ಳುವದೇ ಲೇಸು.


ಚಿಕ್ಕ ಹಿಂಡೇ, ಹೆದರಬೇಡ; ಆ ರಾಜ್ಯವನ್ನು ನಿಮಗೆ ದಯಪಾಲಿಸುವದಕ್ಕೆ ನಿಮ್ಮ ತಂದೆಯು ಸಂತೋಷವುಳ್ಳವನಾಗಿದ್ದಾನೆ.


ಆದರೆ ಪ್ರವಾದಿಗಳು ಬರೆದ ವಚನಗಳು ನೆರವೇರುವಂತೆ ಇದೆಲ್ಲಾ ಆಯಿತು ಎಂದು ಹೇಳಿದನು. ಆಗ ಶಿಷ್ಯರೆಲ್ಲರೂ ಆತನನ್ನು ಬಿಟ್ಟು ಓಡಿಹೋದರು.


ಹಾಗೆಯೇ ಈ ಚಿಕ್ಕವರಲ್ಲಿ ಒಬ್ಬನಾದರೂ ಕೆಟ್ಟುಹೋಗುವದು ಪರಲೋಕದಲ್ಲಿರುವ ನಿಮ್ಮ ತಂದೆಯ ಚಿತ್ತವಲ್ಲ.


ಈ ಚಿಕ್ಕವರಲ್ಲಿ ಒಬ್ಬನನ್ನಾದರೂ ತಾತ್ಸಾರಮಾಡಬಾರದು ನೋಡಿರಿ; ಪರಲೋಕದಲ್ಲಿ ಅವರ ದೂತರು ಪರಲೋಕದಲ್ಲಿರುವ ನನ್ನ ತಂದೆಯ ಮುಖವನ್ನು ಯಾವಾಗಲೂ ನೋಡುತ್ತಲಿದ್ದಾರೆ ಎಂದು ನಿಮಗೆ ಹೇಳುತ್ತೇನೆ.


ಆಗಲೇ ಮುರಿದುಹೋಯಿತು; ಇದರಿಂದ ಆ ದೀನವಾದ ಮಂದೆಯಲ್ಲಿ ನನ್ನನ್ನು ಲಕ್ಷಿಸುತ್ತಿದ್ದ ಕುರಿಗಳು ಇದು ಯೆಹೋವನ ನುಡಿ ಎಂದು ತಿಳುಕೊಂಡವು.


ಆ ದಿನದಲ್ಲಿ ಯೆಹೋವನು ಕಠಿನವೂ ಮಹತ್ತೂ ಬಲವೂ ಆಗಿರುವ ತನ್ನ ಖಡ್ಗದಿಂದ ವೇಗವಾಗಿ ಓಡುವ ಸರ್ಪ, ಡೊಂಕಾಗಿ ಹರಿಯುವ ಸರ್ಪ, ಈ ಎರಡು ಹೆಬ್ಬಾವುಗಳನ್ನು ಹೊಡೆದು ಮಹಾ ನದಿಯಲ್ಲಿನ ಘಟಸರ್ಪವನ್ನೂ ಕೊಂದುಹಾಕುವನು.


ನಿನ್ನ ಮೇಲೆ ಕೈಮಾಡಿ ಪುಟಹಾಕಿ ನಿನ್ನ ಕಲ್ಮಷವನ್ನು ಸಂಪೂರ್ಣವಾಗಿ ಹೋಗಲಾಡಿಸಿ ನಿನ್ನ ಕಂದುಕಸರನ್ನೆಲ್ಲಾ ತೆಗೆದು ಬಿಡುವೆನು.


ಪ್ರಳಯವು ಬಂತು, ಪೂರ್ಣಪ್ರಳಯವು ಬಂತು, ನಿನ್ನನ್ನು ಚಚ್ಚುವದಕ್ಕೆ ಚಚ್ಚರಗೊಂಡಿದೆ, ಇಗೋ ಬಂದೇ ಬಂತು!


ಯೆಹೋವನು ಇಂತೆನ್ನುತ್ತಾನೆ - ಆಹಾ, ನಾನು ನಿನಗೆ ವಿರುದ್ಧನಾಗಿದ್ದೇನೆ, ನನ್ನ ಖಡ್ಗವನ್ನು ಒರೆಯಿಂದ ಹಿರಿದು ನಿನ್ನಲ್ಲಿನ ಶಿಷ್ಟರನ್ನೂ ದುಷ್ಟರನ್ನೂ ಸಂಹರಿಸಿಬಿಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು