ಜೆಕರ್ಯ 14:12 - ಕನ್ನಡ ಸತ್ಯವೇದವು J.V. (BSI)12 ಯೆರೂಸಲೇವಿುನ ಮೇಲೆ ಯುದ್ಧಮಾಡಿದ ಸಕಲ ಜನಾಂಗಗಳಿಗೂ ಯೆಹೋವನು ಈ ವ್ಯಾಧಿಯನ್ನು ತಗಲಿಸುವನು - ಹೆಜ್ಜೆಯ ಮೇಲೆ ನಿಂತ ನಿಂತ ಹಾಗೆಯೇ ಅವರ ಮಾಂಸವು ಕೊಳೆತುಹೋಗುವದು, ಕಣ್ಣು ಗುಣಿಯಲ್ಲೇ ಇಂಗುವದು, ನಾಲಿಗೆಯು ಬಾಯಲ್ಲೇ ಕ್ಷಯಿಸುವದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಯೆರೂಸಲೇಮಿನ ಮೇಲೆ ಯುದ್ಧ ಮಾಡಿದ ಸಕಲ ಜನಾಂಗಗಳಿಗೂ ಯೆಹೋವನು ಈ ವ್ಯಾಧಿಯು ಬರುವಂತೆ ಮಾಡುವನು, ಹೆಜ್ಜೆಯ ಮೇಲೆ ನಿಂತ ಹಾಗೆಯೇ ಅವರ ಮಾಂಸವು ಕೊಳೆತು ಹೋಗುವುದು, ಕಣ್ಣು ಕುಣಿಯಲ್ಲೇ ಇಂಗುವುದು, ನಾಲಿಗೆಯು ಬಾಯಲ್ಲೇ ಕ್ಷಯಿಸುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಜೆರುಸಲೇಮಿನ ಮೇಲೆ ಮುತ್ತಿಗೆ ಹಾಕುವ ಸಕಲ ರಾಷ್ಟ್ರಗಳಿಗೂ ಸರ್ವೇಶ್ವರ ಭಯಂಕರ ವ್ಯಾಧಿಯೊಂದು ತಗಲುವಂತೆ ಮಾಡುವರು. ಜೀವದಿಂದಿರುವಾಗಲೇ ಜನರ ದೇಹ ಕೊಳೆತುಹೋಗುವುದು. ಕಣ್ಣು ಗುಣಿಯಲ್ಲೇ ಇಂಗಿಹೋಗುವುದು. ನಾಲಗೆ ಬಾಯಲ್ಲೇ ಬತ್ತಿಹೋಗುವುದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಆದರೆ ಜೆರುಸಲೇಮಿಗೆ ವಿರುದ್ಧವಾಗಿ ಯುದ್ಧ ಮಾಡಿದ ಜನಾಂಗಗಳನ್ನೆಲ್ಲಾ ಯೆಹೋವನು ಶಿಕ್ಷಿಸುವನು. ಅವರಿಗೆ ಭಯಂಕರ ರೋಗವನ್ನು ಬರಮಾಡುವನು. ಅವರು ಜೀವಂತರಾಗಿರುವಾಗಲೇ ಅವರ ಚರ್ಮವು ಕೊಳೆತುಹೋಗುವದು. ಅವರ ಕಣ್ಣುಗಳು ಅವು ಇರುವಲ್ಲಿಯೇ ಕೊಳೆತುಹೋಗುವವು. ಅವರ ಬಾಯೊಳಗೆ ಅವರ ನಾಲಿಗೆಗಳು ಕೊಳೆತುಹೋಗುವವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಯೆರೂಸಲೇಮಿಗೆ ವಿರೋಧವಾಗಿ ದಂಡು ಕಟ್ಟಿಕೊಂಡಿರುವ ಎಲ್ಲಾ ಜನರನ್ನು ಯೆಹೋವ ದೇವರು ವ್ಯಾಧಿಯಿಂದ ಬಾಧಿಸುವರು. ಹೀಗೆಯೇ, ಅವರು ನಿಂತಿರುವಾಗ, ಅವರ ಮಾಂಸವು ಕ್ಷಯಿಸಿ ಹೋಗುವುವು. ಅವರ ಕಣ್ಣುಗಳು ಕುಣಿಗಳಲ್ಲಿ ಇಂಗಿ ಹೋಗುವುವು. ಅವರ ನಾಲಿಗೆ ಅವರ ಬಾಯಲ್ಲಿ ಕ್ಷಯಿಸಿ ಹೋಗುವುದು. ಅಧ್ಯಾಯವನ್ನು ನೋಡಿ |