Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 14:14 - ಕನ್ನಡ ಸತ್ಯವೇದವು J.V. (BSI)

14 ಯೆಹೂದವೂ ಯೆರೂಸಲೇವಿುನ ಪರವಾಗಿ ಯುದ್ಧಮಾಡುವದು; ಸುತ್ತಣ ಸಕಲ ಜನಾಂಗಗಳ ಆಸ್ತಿಯು ಅಂದರೆ ಬೆಳ್ಳಿಬಂಗಾರಬಟ್ಟೆಗಳು ರಾಶಿರಾಶಿಯಾಗಿ ಬಾಚಲ್ಪಡುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಯೆಹೂದವೂ ಯೆರೂಸಲೇಮಿನ ಪರವಾಗಿ ಯುದ್ಧಮಾಡುವುದು; ಸುತ್ತಣ ಸಕಲ ಜನಾಂಗಗಳ ಆಸ್ತಿಯು ಅಂದರೆ ಬೆಳ್ಳಿ, ಬಂಗಾರ ಮತ್ತು ಬಟ್ಟೆಗಳು ರಾಶಿರಾಶಿಯಾಗಿ ಕೂಡಿಸಲ್ಪಡುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಜುದೇಯವು ಜೆರುಸಲೇಮಿನ ಪರವಾಗಿ ಯುದ್ಧಮಾಡುವುದು. ಸುತ್ತಮುತ್ತಲಿನ ರಾಷ್ಟ್ರಗಳ ಆಸ್ತಿಯನ್ನೆಲ್ಲಾ - ಬೆಳ್ಳಿಬಂಗಾರ, ಬಟ್ಟೆಬರೆಗಳನ್ನೆಲ್ಲಾ - ರಾಶಿರಾಶಿಯಾಗಿ ದೋಚಿಕೊಳ್ಳಲಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಯೆಹೂದವೂ ಸಹ ಯೆರೂಸಲೇಮಿನಲ್ಲಿ ಯುದ್ಧಮಾಡುವುದು. ಸುತ್ತಲಿರುವ ಎಲ್ಲಾ ಜನಾಂಗಗಳ ಸಂಪತ್ತು, ಚಿನ್ನ, ಬೆಳ್ಳಿ ವಸ್ತ್ರಗಳು ಬಹು ಹೇರಳವಾಗಿ ಕೂಡಿಸಲಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 14:14
10 ತಿಳಿವುಗಳ ಹೋಲಿಕೆ  

ಅವಳ ವ್ಯಾಪಾರವೂ ಆದಾಯವೂ ಅವಳಿಗೆ ನಿಧಿನಿಕ್ಷೇಪವಾಗದೆ ಯೆಹೋವನಿಗೇ ಮೀಸಲಾಗುವದು; ಆ ವ್ಯಾಪಾರವು ಯೆಹೋವನ ಸನ್ನಿಧಾನದಲ್ಲಿ ವಾಸಿಸುವವರಿಗೆ ಬೇಕಾದಷ್ಟು ಅನ್ನವನ್ನೂ ಶ್ರೇಷ್ಠವಾದ ಉಡುಪನ್ನೂ ಒದಗಿಸಲು ಅನುಕೂಲಿಸುವದು.


ಆಹಾ! ನಾನು ಯೆರೂಸಲೇಮನ್ನು ಸುತ್ತಣ ಸಕಲ ಜನಾಂಗಗಳಿಗೆ ಅಮಲೇರಿಸಿ ಓಲಾಡಿಸುವ ಬೋಗುಣಿಯನ್ನಾಗಿ ಮಾಡುವೆನು; ಯೆರೂಸಲೇವಿುಗೆ ಮುತ್ತಿಗೆಹಾಕುವಾಗ ಯೆಹೂದಕ್ಕೆ ಇಕ್ಕಟ್ಟಾಗುವದು.


ಆಹಾ, [ಚೀಯೋನೇ!] ಯೆಹೋವನು ನೇವಿುಸಿದ ದಿನವು ಬರುತ್ತಿದೆ; ಸೂರೆಯಾದ ನಿನ್ನ ಆಸ್ತಿಯು ಆಗ ನಿನ್ನ ಮಧ್ಯದಲ್ಲಿ ಹಂಚಿಕೆಯಾಗುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು