Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 14:16 - ಕನ್ನಡ ಸತ್ಯವೇದವು J.V. (BSI)

16 ಅನಂತರ ಯೆರೂಸಲೇವಿುನ ಮೇಲೆ ಬಿದ್ದ ಸಕಲ ಜನಾಂಗಗಳಲ್ಲಿ ಉಳಿದವರೆಲ್ಲರೂ ಸೇನಾಧೀಶ್ವರ ಯೆಹೋವನೆಂಬ ರಾಜಾಧಿರಾಜನನ್ನು ಆರಾಧಿಸುವದಕ್ಕೂ ಪರ್ಣಶಾಲೆಗಳ ಹಬ್ಬವನ್ನು ಆಚರಿಸುವದಕ್ಕೂ ಪ್ರತಿವರುಷವು ಹೊರಟುಬರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಅನಂತರ ಯೆರೂಸಲೇಮಿನ ಮೇಲೆ ಬಿದ್ದ ಸಕಲ ಜನಾಂಗಗಳಲ್ಲಿ ಉಳಿದವರೆಲ್ಲರೂ ಸೇನಾಧೀಶ್ವರ ಯೆಹೋವನೆಂಬ ರಾಜಾಧಿರಾಜನನ್ನು ಆರಾಧಿಸುವುದಕ್ಕೂ, ಪರ್ಣಶಾಲೆಗಳ ಹಬ್ಬವನ್ನು ಆಚರಿಸುವುದಕ್ಕೂ ಪ್ರತಿವರ್ಷವೂ ಹೊರಟುಬರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಅನಂತರ ಜೆರುಸಲೇಮಿಗೆ ಮುತ್ತಿಗೆ ಹಾಕಿದ ರಾಷ್ಟ್ರಗಳಲ್ಲಿ ಅಳಿದುಳಿದವರೆಲ್ಲರು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯನ್ನು ರಾಜಾಧಿರಾಜನೆಂದು ಆರಾಧಿಸುವುದಕ್ಕೂ ಪರ್ಣಕುಟೀರಗಳ ಹಬ್ಬವನ್ನು ಆಚರಿಸುವುದಕ್ಕೂ ಪ್ರತಿವರ್ಷ ಅಲ್ಲಿಗೆ ಬರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಜೆರುಸಲೇಮಿನೊಂದಿಗೆ ಯುದ್ಧಮಾಡಲು ಬಂದವರಲ್ಲಿ ಕೆಲವರು ಸಾಯದೆ ಉಳಿಯುವರು. ಅವರೆಲ್ಲರು ಪ್ರತಿವರ್ಷ ಅರಸನೂ ಸರ್ವಶಕ್ತನೂ ಆಗಿರುವ ಯೆಹೋವನನ್ನು ಆರಾಧಿಸಲು ಜೆರುಸಲೇಮಿಗೆ ಬರುವರು. ಪರ್ಣಶಾಲೆಗಳ ಹಬ್ಬವನ್ನು ಆಚರಿಸಲು ಬರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಯೆರೂಸಲೇಮಿಗೆ ವಿರೋಧವಾಗಿ ಬಂದ ಎಲ್ಲಾ ಜನಾಂಗಗಳಲ್ಲಿ ಉಳಿದವರೆಲ್ಲಾ ವರ್ಷ ವರ್ಷಕ್ಕೆ ಅರಸನಾದ ಸೇನಾಧೀಶ್ವರ ಯೆಹೋವ ದೇವರನ್ನು ಆರಾಧಿಸುವುದಕ್ಕೂ, ಗುಡಾರಗಳ ಹಬ್ಬವನ್ನು ಆಚರಿಸುವುದಕ್ಕೂ ಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 14:16
42 ತಿಳಿವುಗಳ ಹೋಲಿಕೆ  

ಪ್ರತಿಯೊಂದು ಅಮಾವಾಸ್ಯೆಯಲ್ಲಿಯೂ ಒಂದೊಂದು ಸಬ್ಬತ್ ದಿನದಲ್ಲಿಯೂ ಸಕಲ ನರಜನ್ಮದವರೂ ನನ್ನ ಸನ್ನಿಧಿಯಲ್ಲಿ ಎರಗುವದಕ್ಕೆ ಬರುವರು; ಇದು ಯೆಹೋವನ ನುಡಿ.


ಆದರೂ ಯೆಹೋವನ ನಾಮವನ್ನು ಹೇಳಿಕೊಳ್ಳುವವರೆಲ್ಲರಿಗೆ ರಕ್ಷಣೆಯಾಗುವದು; ಯೆಹೋವನು ತಿಳಿಸಿದಂತೆ ಚೀಯೋನ್‍ಪರ್ವತದಲ್ಲಿಯೂ ಯೆರೂಸಲೇವಿುನಲ್ಲಿಯೂ ಅನೇಕರು ಉಳಿದಿರುವರು; ಯೆಹೋವನು ಕರೆಯುವ ಜನಶೇಷದಲ್ಲಿ ಅವರು ಸೇರಿದವರಾಗಿರುವರು.


ಆತನ ತೊಡೆಯ ಮೇಲಣ ವಸ್ತ್ರದಲ್ಲಿ - ರಾಜಾಧಿರಾಜನೂ ಕರ್ತರ ಕರ್ತನೂ ಎಂಬ ಹೆಸರು ಬರೆದದೆ.


ಅದೇ ಗಳಿಗೆಯಲ್ಲಿ ಮಹಾಭೂಕಂಪವುಂಟಾಗಿ ಆ ಪಟ್ಟಣದ ಹತ್ತರಲ್ಲೊಂದಂಶವು ಬಿದ್ದುಹೋಯಿತು; ಆ ಭೂಕಂಪದಿಂದ ಏಳು ಸಾವಿರ ಮಂದಿ ಸತ್ತುಹೋದರು. ಉಳಿದವರು ಭಯಗ್ರಸ್ತರಾಗಿ ಪರಲೋಕ ದೇವರನ್ನು ಘನಪಡಿಸಿದರು.


ಆಮೇಲೆ ಇಸ್ರಾಯೇಲ್ ಜನವೆಲ್ಲಾ ರಕ್ಷಣೆಹೊಂದುವದು. ಇದಕ್ಕೆ ಆಧಾರವಾಗಿ ಶಾಸ್ತ್ರದಲ್ಲಿ - ಬಿಡಿಸುವವನು ಚೀಯೋನಿನೊಳಗಿಂದ ಹೊರಟು ಬಂದು ಯಾಕೋಬನಲ್ಲಿರುವ ಭಕ್ತಿಹೀನತೆಯನ್ನು ನಿವಾರಣೆಮಾಡುವನು.


ಕಣಕದಲ್ಲಿ ಮೊದಲನೆಯ ಉರುಳಿ ನೈವೇದ್ಯವಾದ ಮೇಲೆ ಕಣಕವೆಲ್ಲಾ ನೈವೇದ್ಯವಾದ ಹಾಗಾಯಿತು; ಬೇರು ದೇವರದಾಗಿದ್ದ ಮೇಲೆ ಕೊಂಬೆಗಳೂ ದೇವರವು.


ಅದರಂತೆ ಈಗಿನ ಕಾಲದಲ್ಲಿಯೂ ದೇವರು ಕೃಪೆಯಿಂದ ಆದುಕೊಂಡವರಾದ ಕೆಲವರು ಉಳಿದಿದ್ದಾರೆ.


ಮನುಷ್ಯಜಾತಿಯ ಉಳಿದ ಜನಗಳೂ ಅಂದರೆ ದೇವಜನರೆನಿಸಿಕೊಳ್ಳುವ ಸಕಲ ಜನಾಂಗಗಳೂ ಕರ್ತನನ್ನು ಹುಡುಕುವವರಾಗಿರಬೇಕೆಂದು


ಪರ್ಣಶಾಲೆಗಳ ಹಬ್ಬವೆಂಬ ಯೆಹೂದ್ಯರದೊಂದು ಜಾತ್ರೆಯು ಸಮೀಪವಾದಾಗ


ಅದಕ್ಕೆ ನತಾನಯೇಲನು - ಗುರುವೇ, ನೀನು ದೇವಕುಮಾರನು ಸರಿ; ನೀನೇ ಇಸ್ರಾಯೇಲಿನ ಅರಸನು ಅಂದನು.


ಕರ್ತನ ಹೆಸರಿನಲ್ಲಿ ಬರುವ ಅರಸನಿಗೆ ಆಶೀರ್ವಾದ, ಪರಲೋಕದಲ್ಲಿ ಮಂಗಳ, ಮೇಲಣಲೋಕಗಳಲ್ಲಿ ಮಹಿಮೆ ಎಂದು ಮಹಾ ಶಬ್ದದಿಂದ ದೇವರನ್ನು ಕೊಂಡಾಡುವದಕ್ಕೆ ತೊಡಗಿದರು.


ಒಬ್ಬನು ಹರಕೆ ಹೊತ್ತು ತನ್ನ ಹಿಂಡಿನಲ್ಲಿ ಗಂಡುಪಶುವಿದ್ದರೂ ಕಳಂಕವಾದ ಪಶುವನ್ನು ಯೆಹೋವನಿಗೆ ಯಜ್ಞಮಾಡಿದರೆ ಆ ಮೋಸಗಾರನಿಗೆ ಶಾಪವು ತಗಲಲಿ; ನಾನು ರಾಜಾಧಿರಾಜ, ನನ್ನ ನಾಮವು ಅನ್ಯಜನಾಂಗಗಳ ಭಯಭಕ್ತಿಗೆ ಈಡಾಗಿದೆ; ಇದು ಸೇನಾಧೀಶ್ವರ ಯೆಹೋವನ ನುಡಿ.


ಅವರು ಸವಿಯುವ ರಕ್ತವನ್ನು ಬಾಯೊಳಗಿಂದ ತೆಗೆದುಬಿಡುವೆನು; ಅವರು ಕಚ್ಚುವ ಅಸಹ್ಯಪದಾರ್ಥಗಳನ್ನು ಹಲ್ಲುಗಳ ಮಧ್ಯದಿಂದ ಕಿತ್ತುಹಾಕುವೆನು; ಅವರೂ ಇಸ್ರಾಯೇಲಿನ ದೇವರಿಗೆ ಶೇಷಜನವಾಗಿ ನಿಲ್ಲುವರು; ಯೆಹೂದದಲ್ಲಿ ಕುಲಪಾಲಕನಂತಿರುವರು; ಎಕ್ರೋನಿನವರು ಯೆಬೂಸಿಯರ ಹಾಗಿರುವರು.


ನೀನು ಐಗುಪ್ತದೇಶದಲ್ಲಿದ್ದಂದಿನಿಂದ ನಾನೇ ಯೆಹೋವನೆಂಬ ನಿನ್ನ ದೇವರಾಗಿದ್ದೇನೆ; ಜಾತ್ರೆಯ ಕಾಲದಲ್ಲಿ ವನವಾಸಮಾಡುವಂತೆ ಗುಡಾರಗಳಲ್ಲಿ ವಾಸಿಸುವ ಗತಿಗೆ ನಿನ್ನನ್ನು ಪುನಃ ತರುವೆನು.


ನಾನು ಅದರ ಪ್ರಧಾನರು, ಮಂತ್ರಿಗಳು, ಅಧಿಪತಿಗಳು, ಅಧಿಕಾರಿಗಳು, ಬಲಿಷ್ಠರು, ಇವರೆಲ್ಲರಿಗೂ ತಲೆಗೇರ ಕುಡಿಸುವೆನು; ಅವರು ಎಂದಿಗೂ ಎಚ್ಚರಗೊಳ್ಳದೆ ದೀರ್ಘನಿದ್ರೆಮಾಡುವರು ಎಂದು ಸೇನಾಧೀಶ್ವರನಾದ ಯೆಹೋವನಾಮಧೇಯದ ರಾಜಾಧಿರಾಜನು ಅನ್ನುತ್ತಾನೆ.


ಸುಟ್ಟುಹೋದ ಅದರ ಪಟ್ಟಣಗಳಿಂದ ಹೊಗೆ ಎದ್ದಿದೆ; ಅದರ ಯುವಕ ಶ್ರೇಷ್ಠರು ಹತರಾಗುವದಕ್ಕೆ ಇಳಿದುಹೋಗಿದ್ದಾರೆ. ಇದು ಸೇನಾಧೀಶ್ವರನಾದ ಯೆಹೋವನೆಂಬ ನಾಮವುಳ್ಳ ರಾಜಾಧಿರಾಜನ ನುಡಿ.


ಸೇನಾಧೀಶ್ವರನಾದ ಯೆಹೋವನೆಂಬ ನಾಮವುಳ್ಳ ರಾಜಾಧಿರಾಜನು ಇಂತೆನ್ನುತ್ತಾನೆ - ನನ್ನ ಜೀವದಾಣೆ, ಇಗೋ, ಪರ್ವತಗಳನ್ನು ಮೀರುವ ತಾಬೋರ್ ಬೆಟ್ಟದಂತೆಯೂ ಸಮುದ್ರದಿಂದೆದ್ದಿರುವ ಕರ್ಮೆಲ್ ಗುಡ್ಡದ ಹಾಗೂ ಉನ್ನತನಾದವನೊಬ್ಬನು ಬರುವನು.


ಆಗ ನಾನು - ಅಯ್ಯೋ, ನನ್ನ ಗತಿಯನ್ನು ಏನು ಹೇಳಲಿ! ನಾಶವಾದೆನಲ್ಲಾ; ನಾನು ಹೊಲಸು ತುಟಿಯವನು, ಹೊಲಸು ತುಟಿಯವರ ಮಧ್ಯದಲ್ಲಿ ವಾಸಿಸುವವನು; ಇಂಥ ನನ್ನ ಕಣ್ಣುಗಳು ರಾಜಾಧಿರಾಜನನ್ನು, ಸೇನಾಧೀಶ್ವರನಾದ ಯೆಹೋವನನ್ನು ಕಂಡವು ಎಂದು ಕೂಗಿಕೊಳ್ಳಲು


ಇದಲ್ಲದೆ ಶಾಸ್ತ್ರದಲ್ಲಿ ಬರೆದಿರುವಂತೆ ಅವರು ಪರ್ಣಶಾಲೆಗಳ ಜಾತ್ರೆಯನ್ನು ಆಚರಿಸಿ ದಿನಕ್ಕೆ ಇಷ್ಟಿಷ್ಟೆಂಬ ವಿಧಿಗನುಸಾರವಾಗಿ ಪ್ರತಿದಿನವೂ ಸರ್ವಾಂಗಹೋಮಗಳನ್ನರ್ಪಿಸಿದರು.


ಯೆಹೋವನ ಯಜ್ಞವೇದಿಯ ಮೇಲೆ ಮೋಶೆಯ ಆಜ್ಞೆಯಂತೆ ಸಬ್ಬತ್ ದಿವಸ, ಅಮಾವಾಸ್ಯೆ ಇವುಗಳಲ್ಲಿಯೂ ಹುಳಿಯಿಲ್ಲದ ರೊಟ್ಟಿಗಳ ಜಾತ್ರೆ, ಪಂಚಾಶತ್ತಮದಿನದ ಜಾತ್ರೆ, ಪರ್ಣಶಾಲೆಗಳ ಜಾತ್ರೆ ಎಂಬೀ ಮೂರು ವಾರ್ಷಿಕಜಾತ್ರೆಗಳಲ್ಲಿಯೂ ಆಯಾ ದಿವಸಗಳಿಗೆ ನೇಮಕವಾದ ಸರ್ವಾಂಗಹೋಮಗಳನ್ನು ಸಮರ್ಪಿಸುತ್ತಿದ್ದನು.


ಸರ್ವಭೂನಿವಾಸಿಗಳು ನಿನಗೆ ಎರಗಿ ಭಜಿಸುತ್ತಾ ನಿನ್ನ ನಾಮವನ್ನು ಕೀರ್ತಿಸುವರು ಎಂದು ಬಿನ್ನೈಸಿರಿ. ಸೆಲಾ.


ಆ ಕಾಲದಲ್ಲಿ ಉನ್ನತರಾದ ನುಣುಪಿನ ಮೈಯವರೂ ಸರ್ವದಾ ಭಯಂಕರರೂ ಮಹಾಬಲದಿಂದ [ಶತ್ರುಗಳನ್ನು] ತುಳಿಯುವವರೂ ನದಿಗಳಿಂದ ವಿಂಗಡವಾಗಿರುವ ದೇಶದ ನಿವಾಸಿಗಳೂ ಆದ ಜನಾಂಗದವರು ಸೇನಾಧೀಶ್ವರನಾದ ಯೆಹೋವನ ನಾಮಮಹತ್ತಿರುವ ಚೀಯೋನ್ ಪರ್ವತಕ್ಕೆ ಆತನಿಗೋಸ್ಕರ ಕಾಣಿಕೆಯನ್ನು ತರುವರು.


ಮತ್ತು ಯೆಹೋವನು ತನ್ನನ್ನು ಐಗುಪ್ತ್ಯರಿಗೆ ತಿಳಿಯಪಡಿಸಲು ಅವರು ಆ ದಿನದಲ್ಲಿ ಯೆಹೋವನನ್ನು ತಿಳಿದುಕೊಳ್ಳುವರು; ಹೌದು, ಯಜ್ಞನೈವೇದ್ಯಗಳ ಸೇವೆಯನ್ನಾಚರಿಸಿ ಯೆಹೋವನಿಗೆ ಹರಕೆಮಾಡಿಕೊಂಡು ಅದನ್ನು ನೆರವೇರಿಸುವರು.


ಆ ದಿನದಲ್ಲಿ ದೊಡ್ಡ ಕೊಂಬನ್ನೂದಲು ಅಶ್ಶೂರ ದೇಶದಲ್ಲಿ ಹಾಳಾದವರೂ ಐಗುಪ್ತ ಸೀಮೆಯಲ್ಲಿನ ದೇಶಭ್ರಷ್ಟರಾದವರೂ ಬಂದು ಪರಿಶುದ್ಧಪರ್ವತದ ಯೆರೂಸಲೇವಿುನಲ್ಲಿ ಯೆಹೋವನ ಮುಂದೆ ಅಡ್ಡಬೀಳುವರು.


ಹೊರಟುಬಂದ ಬಹು ದೇಶಗಳವರು - ಬನ್ನಿರಿ, ಯೆಹೋವನ ಪರ್ವತಕ್ಕೆ, ಯಾಕೋಬ್ಯರ ದೇವರ ಮಂದಿರಕ್ಕೆ ಹೋಗೋಣ! ಆತನು ತನ್ನ ಮಾರ್ಗಗಳ ವಿಷಯವಾಗಿ ನಮಗೆ ಬೋಧನೆಮಾಡುವನು, ನಾವು ಆತನ ದಾರಿಗಳಲ್ಲಿ ನಡೆಯುವೆವು ಎಂದು ಹೇಳುವರು. ಏಕಂದರೆ ಚೀಯೋನಿನಿಂದ ಧರ್ಮೋಪದೇಶವೂ ಯೆರೂಸಲೇವಿುನಿಂದ ಯೆಹೋವನ ವಾಕ್ಯವೂ ಹೊರಡುವವು.


ಯೆಹೋವನು ಭೂಲೋಕಕ್ಕೆಲ್ಲಾ ರಾಜನಾಗಿರುವನು; ಆ ದಿನದಲ್ಲಿ ಯೆಹೋವನೊಬ್ಬನೇ ದೇವರೆಂದೂ ಆತನ ಹೆಸರೊಂದೇ ಸ್ತುತ್ಯವೆಂದೂ ಎಲ್ಲರಿಗೂ ತಿಳಿದಿರುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು