ಜೆಕರ್ಯ 14:17 - ಕನ್ನಡ ಸತ್ಯವೇದವು J.V. (BSI)17 ಲೋಕದ ಸಮಸ್ತ ಕುಲಗಳಲ್ಲಿ ಯಾವ ಕುಲದವರು ಸೇನಾಧೀಶ್ವರ ಯೆಹೋವನೆಂಬ ರಾಜಾಧಿರಾಜನನ್ನು ಆರಾಧಿಸುವದಕ್ಕೆ ಬರುವದಿಲ್ಲವೋ ಅವರಿಗೆ ಮಳೆ ಬರುವದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಲೋಕದ ಸಮಸ್ತ ಕುಲಗಳಲ್ಲಿ ಯಾವ ಕುಲದವರು ಸೇನಾಧೀಶ್ವರನಾದ ಯೆಹೋವನೆಂಬ ರಾಜಾಧಿರಾಜನನ್ನು ಆರಾಧಿಸುವುದಕ್ಕೆ ಯೆರೂಸಲೇಮಿಗೆ ಬರುವುದಿಲ್ಲವೋ ಅವರಿಗೆ ಮಳೆಬರುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಜನಾಂಗಗಳಲ್ಲಿ ಯಾರಾದರೂ ಸೇನಾಧೀಶ್ವರ ಸರ್ವೇಶ್ವರಸ್ವಾಮಿಯನ್ನು ರಾಜಾಧಿರಾಜನೆಂದು ಆರಾಧಿಸಲು ಬರದೆಹೋದರೆ, ಅವರಿಗೆ ಮಳೆಯೇ ಬರದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ರಾಜನೂ ಸರ್ವಶಕ್ತನೂ ಆಗಿರುವ ಯೆಹೋವನನ್ನು ಆರಾಧಿಸಲು ಭೂಲೋಕದ ಕುಟುಂಬಗಳ ಯಾವ ಜನರಾದರೂ ಜೆರುಸಲೇಮಿಗೆ ಹೋಗದಿದ್ದಲ್ಲಿ ಅವರ ರಾಜ್ಯಗಳಲ್ಲಿ ಮಳೆಗೆರೆಯುವದು ನಿಂತುಹೋಗುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಭೂಮಿಯ ಜನಾಂಗಗಳಲ್ಲಿ ಅರಸನಾದ ಸೇನಾಧೀಶ್ವರ ಯೆಹೋವ ದೇವರನ್ನು ಆರಾಧಿಸುವುದಕ್ಕೆ ಯೆರೂಸಲೇಮಿಗೆ ಹೋಗದಿದ್ದರೆ, ಅವರ ಮೇಲೆ ಮಳೆ ಬರುವುದಿಲ್ಲ. ಅಧ್ಯಾಯವನ್ನು ನೋಡಿ |