ಜೆಕರ್ಯ 14:5 - ಕನ್ನಡ ಸತ್ಯವೇದವು J.V. (BSI)5 ನೀವು ನನ್ನ ಗುಡ್ಡಗಳ ನಡುವಣ ಆ ಡೊಂಗರದೊಳಕ್ಕೆ ಓಡಿಹೋಗುವಿರಿ; ಏಕಂದರೆ ಆ ಡೊಂಗರವು ಆಚೆಲಿಗೆ ಮುಟ್ಟಿರುವದು; ಯೆಹೂದದ ಅರಸನಾದ ಉಜ್ಜೀಯನ ಕಾಲದಲ್ಲಿ ಭೂಕಂಪದ ಕಡೆಯಿಂದ ನೀವು ಓಡಿಹೋದಂತೆಯೇ ಓಡಿಹೋಗುವಿರಿ; ಆಗ ನನ್ನ ದೇವರಾದ ಯೆಹೋವನು ಸಮಸ್ತ ದೇವದೂತಸಮೇತ ಬರುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ನೀವು ಯೆಹೋವನ ಗುಡ್ಡಗಳ ನಡುವಣ ಆ ಕಣಿವೆಯೊಳಗೆ ಓಡಿಹೋಗುವಿರಿ; ಏಕೆಂದರೆ ಆ ಕಣಿವೆಯು ಆಚೆಲಿನವರೆಗೂ ಮುಟ್ಟಿರುವುದು; ಯೆಹೂದದ ಅರಸನಾದ ಉಜ್ಜೀಯನ ಕಾಲದಲ್ಲಿ ಭೂಕಂಪದ ಕಡೆಯಿಂದ ನೀವು ಓಡಿಹೋದಂತೆಯೇ ಓಡಿಹೋಗುವಿರಿ; ಆಗ ಪರಿಶುದ್ಧ ದೇವರಾದ ಯೆಹೋವನು ಸಮಸ್ತ ದೇವದೂತರ ಸಮೇತ ಬರುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ನೀವು ಆ ಗುಡ್ಡಗಳ ನಡುವೆ ಉಂಟಾಗುವ ಕಣಿವೆಯ ಮೂಲಕ ಪಲಾಯನಗೈಯುವಿರಿ. ಆ ಕಣಿವೆ ಆಚೆಲಿನವರೆಗೆ ಹಬ್ಬಿರುವುದು. ಜುದೇಯದ ಅರಸನಾದ ಉಜ್ಜೀಯನ ಕಾಲದಲ್ಲಿ ಭೂಕಂಪವಾದಾಗ ನೀವು ಮಾಡಿದಂತೆ ಪಲಾಯನ ಗೈಯುವಿರಿ. ಆಗ ನನ್ನ ದೇವರಾದ ಸರ್ವೇಶ್ವರ ತಮ್ಮ ದೂತರ ಸಮೇತ ಬರುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಆ ಬೆಟ್ಟವು ನಿನ್ನ ಹತ್ತಿರಕ್ಕೆ ಬರುತ್ತಿರುವಾಗ ನೀನು ಓಡಿಹೋಗಲು ಪ್ರಯತ್ನಿಸುವೆ. ಯೆಹೂದದ ಅರಸನಾದ ಉಜ್ಜೀಯನ ಕಾಲದಲ್ಲಿ ಆದ ಭೂಕಂಪದ ಸಮಯದಲ್ಲಿ ನೀನು ಹೇಗೆ ಪಲಾಯನ ಮಾಡಿದ್ದಿಯೋ ಅದೇ ರೀತಿಯಲ್ಲಿ ನೀನು ಓಡುವೆ. ಆಗ ನನ್ನ ದೇವರಾದ ಯೆಹೋವನು ತನ್ನ ಎಲ್ಲಾ ಪರಿಶುದ್ಧ ಜನರೊಂದಿಗೆ ಬರುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ನೀವು ಬೆಟ್ಟಗಳ ತಗ್ಗಿಗೆ ಓಡಿಹೋಗುವಿರಿ. ಏಕೆಂದರೆ ಬೆಟ್ಟಗಳ ತಗ್ಗು ಆಚೆಲಿನವರೆಗೂ ಮುಟ್ಟುವುದು. ಯೆಹೂದದ ಅರಸನಾದ ಉಜ್ಜೀಯನ ದಿವಸಗಳಲ್ಲಿ, ನೀವು ಭೂಕಂಪಕ್ಕೆ ಓಡಿ ಹೋದ ಹಾಗೆ, ಓಡಿಹೋಗುವಿರಿ. ನನ್ನ ದೇವರಾದ ಯೆಹೋವ ದೇವರು ಬರುವರು. ನಿಮ್ಮ ಸಂಗಡ ಪರಿಶುದ್ಧರೆಲ್ಲರು ಸಹ ಬರುವರು. ಅಧ್ಯಾಯವನ್ನು ನೋಡಿ |
ತರುವಾಯ ಸಿಂಹಾಸನಗಳನ್ನು ಕಂಡೆನು. ಅವುಗಳ ಮೇಲೆ ಜನರು ಕೂತಿದ್ದರು; ನ್ಯಾಯತೀರಿಸುವ ಅಧಿಕಾರವು ಅವರಿಗೆ ಕೊಡಲ್ಪಟ್ಟಿತು. ಇದಲ್ಲದೆ ಯೇಸುವಿನ ವಿಷಯವಾದ ಸಾಕ್ಷಿಯ ನಿವಿುತ್ತವಾಗಿಯೂ ದೇವರ ವಾಕ್ಯದ ನಿವಿುತ್ತವಾಗಿಯೂ ತಲೆಹೊಯಿಸಿಕೊಂಡವರ ಆತ್ಮಗಳನ್ನೂ ಮೃಗಕ್ಕೂ ಅದರ ವಿಗ್ರಹಕ್ಕೂ ನಮಸ್ಕರಿಸದೆ ತಮ್ಮ ಹಣೆಯ ಮೇಲೆ ಮತ್ತು ಕೈಯ ಮೇಲೆ ಗುರುತುಹಾಕಿಸಿಕೊಳ್ಳದೆ ಇರುವವರನ್ನೂ ಕಂಡೆನು. ಅವರು ಜೀವಿತರಾಗಿ ಎದ್ದು ಸಾವಿರ ವರುಷ ಕ್ರಿಸ್ತನೊಂದಿಗೆ ಆಳಿದರು.